Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 1:2 - ಕನ್ನಡ ಸತ್ಯವೇದವು J.V. (BSI)

2 ಪಾರಸಿಯ ರಾಜನಾದ ಕೋರೆಷನೆಂಬ ನನ್ನ ಮಾತನ್ನು ಕೇಳಿರಿ - ಪರಲೋಕದೇವರಾದ ಯೆಹೋವನು ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನೂ ಕೊಟ್ಟು ತನಗೋಸ್ಕರ ಯೆಹೂದ ದೇಶದ ಯೆರೂಸಲೇವಿುನಲ್ಲಿ ಆಲಯವನ್ನು ಕಟ್ಟಿಸಬೇಕು ಎಂದು ಆಜ್ಞಾಪಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ, ಪತ್ರಗಳಿಂದಲೂ, “ಪರ್ಷಿಯ ರಾಜನಾದ ಕೋರೆಷನೆಂಬ ನನ್ನ ಮಾತನ್ನು ಕೇಳಿರಿ. ಪರಲೋಕದೇವರಾದ ಯೆಹೋವನು ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನೂ ಕೊಟ್ಟು, ತನಗೋಸ್ಕರ ಯೆಹೂದ ದೇಶದ ಯೆರೂಸಲೇಮಿನಲ್ಲಿ ಆಲಯವನ್ನು ಕಟ್ಟಿಸಬೇಕು ಎಂದು ಆಜ್ಞಾಪಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಪರ್ಷಿಯ ರಾಜನಾದ ಸೈರಸೆಂಬ ನನ್ನ ಮಾತನ್ನು ಕೇಳಿರಿ; ಪರಲೋಕ ದೇವರಾದ ಸರ್ವೇಶ್ವರಸ್ವಾಮಿ ಭೂಲೋಕದ ಎಲ್ಲ ರಾಜ್ಯಗಳನ್ನು ನನಗೆ ಕೊಟ್ಟಿದ್ದಾರೆ; ‘ನನಗಾಗಿ ಜುದೇಯ ನಾಡಿನ ಜೆರುಸಲೇಮಿನಲ್ಲಿ ಒಂದು ಆಲಯವನ್ನು ಕಟ್ಟಿಸಬೇಕು’ ಎಂದು ಅವರು ಆಜ್ಞಾಪಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಪರ್ಶಿಯಾದ ರಾಜನಾದ ಸೈರಸನ ಪ್ರಕಟನೆ: “ಪರಲೋಕದ ದೇವರಾದ ಯೆಹೋವನು ಭೂಲೋಕದಲ್ಲಿರುವ ಎಲ್ಲಾ ದೇಶಗಳನ್ನು ನನ್ನ ವಶಕ್ಕೆ ಕೊಟ್ಟಿದ್ದಾನೆ. ಯೆಹೂದ ದೇಶದ ಜೆರುಸಲೇಮ್‌ನಲ್ಲಿ ತನಗೊಂದು ಆಲಯವನ್ನು ಕಟ್ಟಲು ಆತನು ನನ್ನನ್ನು ಆರಿಸಿಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಪಾರಸಿಯ ಅರಸ ಕೋರೆಷನು ಹೀಗೆ ಹೇಳುತ್ತಾನೆ: “ ‘ಪರಲೋಕದ ದೇವರಾದ ಯೆಹೋವ ದೇವರು ಭೂಲೋಕದ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾರೆ ಮತ್ತು ಅವರು ಯೆಹೂದ ದೇಶದ ಯೆರೂಸಲೇಮಿನಲ್ಲಿ ತಮಗೆ ಆಲಯವನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 1:2
34 ತಿಳಿವುಗಳ ಹೋಲಿಕೆ  

ನನ್ನ ಸೇವಕನ ಮಾತನ್ನು ಸ್ಥಾಪಿಸಿ ನನ್ನ ದೂತರ ಮಂತ್ರಾಲೋಚನೆಯನ್ನು ನೆರವೇರಿಸುವವನಾಗಿದ್ದೇನೆ; ಯೆರೂಸಲೇಮು ಜನನಿವಾಸವಾಗುವದು, ಯೆಹೂದದ ಪಟ್ಟಣಗಳು ತಿರಿಗಿ ಕಟ್ಟಲ್ಪಡುವವು, ಅಲ್ಲಿನ ಹಾಳನ್ನು ಹಸನುಮಾಡುವೆನು ಎಂದು ನಾನು ಮುಂತಿಳಿಸಿ


ಪರಲೋಕದೊಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿ; ಆತನ ಆಲಯದ ಪಾತ್ರೆಗಳನ್ನು ಸನ್ನಿಧಿಗೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ ಮತ್ತು ಪತ್ನ್ಯುಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿ ಇಲ್ಲದ ಬೆಳ್ಳಿಬಂಗಾರತಾಮ್ರ ಕಬ್ಬಿಣ ಮರಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ;


ರಾಜ್ಯವು ನಿನ್ನಿಂದ ತೊಲಗಿದೆ, ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡುಮೃಗಗಳೊಂದಿಗೆ ವಾಸಿಸುವಿ, ದನಗಳಂತೆ ಹುಲ್ಲುಮೇಯುವದೇ ನಿನಗೆ ಗತಿಯಾಗುವದು; ಪರಾತ್ಪರನು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬದು ನಿನ್ನ ತಿಳುವಳಿಕೆಗೆ ಬರುವದರೊಳಗೆ ಏಳು ವರುಷ ನಿನಗೆ ಹೀಗೆ ಕಳೆಯುವದು ಎಂದು ಆಕಾಶವಾಣಿಯಾಯಿತು.


ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡುಮೃಗಗಳೊಂದಿಗೆ ವಾಸಿಸುವಿ, ದನಗಳಂತೆ ಹುಲ್ಲು ಮೇಯುವದೇ ನಿನಗೆ ಗತಿಯಾಗುವದು, ಆಕಾಶದ ಇಬ್ಬನಿಯು ನಿನ್ನನ್ನು ತೋಯಿಸುವದು; ಪರಾತ್ಪರನು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬದು ನಿನಗೆ ತಿಳಿದುಬರುವದರೊಳಗೆ ಏಳು ವರುಷ ನಿನಗೆ ಹೀಗೆ ಕಳೆಯುವದು.


ಆದರೆ ರಹಸ್ಯಗಳನ್ನು ವ್ಯಕ್ತಗೊಳಿಸುವ ಒಬ್ಬನಿದ್ದಾನೆ, ಆತನು ದೇವರು, ಪರಲೋಕದಲ್ಲಿದ್ದಾನೆ; ಉತ್ತರಕಾಲದಲ್ಲಿ ನಡೆಯತಕ್ಕದನ್ನು ಆತನೇ ರಾಜನಾದ ನೆಬೂಕದ್ನೆಚ್ಚರನಿಗೆ ತಿಳಿಯಪಡಿಸಿದ್ದಾನೆ. ನಿನ್ನ ಕನಸು, ಹಾಸಿಗೆಯ ಮೇಲೆ ನಿನ್ನ ಮನಸ್ಸಿನಲ್ಲಿ ಬಿದ್ದ ಸ್ವಪ್ನಗಳು ಇವೇ -


ಕಾಲಸಮಯಗಳನ್ನು ಮಾರ್ಪಡಿಸುತ್ತಾನೆ, ರಾಜರನ್ನು ತಳ್ಳುತ್ತಾನೆ, ನಿಲ್ಲಿಸುತ್ತಾನೆ; ಜ್ಞಾನಿಗಳ ಜ್ಞಾನವು, ವಿವೇಕಿಗಳ ವಿವೇಕವು ಆತನ ವರವೇ;


ನೀವು ಅವುಗಳಿಗೆ - ಭೂಮ್ಯಾಕಾಶಗಳನ್ನು ಸೃಷ್ಟಿಸದಿರುವ ದೇವರುಗಳು ಭೂವಿುಯ ಮೇಲಿನಿಂದ, ಆಕಾಶದ ಕೆಳಗಿನಿಂದ, ಅಳಿದುಹೋಗುವವು ಎಂದು ಹೇಳಿರಿ.


ಯೆಹೋವನು ಹೀಗನ್ನುತ್ತಾನೆ - ಆಕಾಶವು ನನಗೆ ಸಿಂಹಾಸನ, ಭೂವಿುಯು ನನಗೆ ಪಾದಪೀಠ. ನೀವು ನನಗೆ ಇನ್ನೆಂಥಾ ಮನೆಯನ್ನು ಕಟ್ಟಿಕೊಡುವಿರಿ? ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಎಂಥದು?


ಭೂಮ್ಯಾಕಾಶಗಳನ್ನುಂಟುಮಾಡಿದ ಇಸ್ರಾಯೇಲ್‍ದೇವರಾದ ಯೆಹೋವನು ತನಗೋಸ್ಕರ ದೇವಾಲಯವನ್ನೂ ರಾಜನಿಗೋಸ್ಕರ ಅರಮನೆಯನ್ನೂ ಕಟ್ಟಿಸತಕ್ಕ ಬುದ್ಧಿ ಜ್ಞಾನವಿವೇಕಗಳುಳ್ಳ ಮಗನನ್ನು ಅರಸನಾದ ದಾವೀದನಿಗೆ ಕೊಟ್ಟದರಿಂದ ಆತನಿಗೆ ಸ್ತೋತ್ರವಾಗಲಿ.


ದೇವರು ನಿಜವಾಗಿ ಭೂಲೋಕದಲ್ಲಿ ವಾಸಿಸುವನೋ? ಆಕಾಶವೂ ಉನ್ನತೋನ್ನತವಾದ ಆಕಾಶವೂ ನಿನ್ನ ವಾಸಕ್ಕೆ ಸಾಲವು; ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ಸಾಕಾದೀತು!


ಆಗ ಯೆಹೂದ ಮತ್ತು ಬೆನ್ಯಾಮೀನ್ ಗೋತ್ರಪ್ರಧಾನರಲ್ಲಿಯೂ ಯಾಜಕರಲ್ಲಿಯೂ ಲೇವಿಯರಲ್ಲಿಯೂ ದೇವಪ್ರೇರಣೆಗೆ ಒಳಗಾದವರೆಲ್ಲರೂ ಯೆರೂಸಲೇವಿುನಲ್ಲಿ ಯೆಹೋವನಿಗೋಸ್ಕರ ಆಲಯಕಟ್ಟುವದಕ್ಕಾಗಿ ಹೊರಟುಹೋದರು.


ಆದರೆ ಪಾರಸಿಯ ರಾಜನಾದ ಕೋರೆಷನಿಂದ ಪಡಕೊಂಡ ಅಪ್ಪಣೆಯ ಮೇರೆಗೆ ಅವರು ಕಲ್ಲುಕುಟಿಗ ಬಡಗಿ ಇವರಿಗೆ ಹಣವನ್ನೂ ಲೆಬನೋನಿನಿಂದ ಸಮುದ್ರಮಾರ್ಗವಾಗಿ ಯೊಪ್ಪಕ್ಕೆ ದೇವದಾರುಮರಗಳನ್ನು ತರತಕ್ಕ ಚೀದೋನ್ಯರು, ತೂರ್ಯರು ಇವರಿಗೆ ಅನ್ನಪಾನಗಳನ್ನೂ ಎಣ್ಣೆಯನ್ನೂ ಕೊಟ್ಟಿದ್ದರು.


ಆಗ ಜೆರುಬ್ಬಾಬೆಲ್, ಯೇಷೂವ ಇವರೂ ಬೇರೆ ಇಸ್ರಾಯೇಲ್ ಗೋತ್ರಪ್ರಧಾನರೂ ಅವರಿಗೆ - ನೀವು ನಮ್ಮ ದೇವರ ಆಲಯವನ್ನು ಕಟ್ಟುವದರಲ್ಲಿ ನಮ್ಮೊಡನೆ ಸೇರಲೇ ಕೂಡದು; ಪಾರಸಿಯ ರಾಜನಾದ ಕೋರೆಷನಿಂದ ನಮಗಾದ ಅಪ್ಪಣೆಯ ಮೇರೆಗೆ ನಾವೇ ಇಸ್ರಾಯೇಲ್‍ದೇವರಾದ ಯೆಹೋವನ ಆಲಯವನ್ನು ಕಟ್ಟುತ್ತೇವೆ ಎಂದು ಉತ್ತರ ಕೊಟ್ಟರು.


ಪರಲೋಕದಲ್ಲಿರುವ ದೇವರಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನ ಕೃಪೆಯು ಶಾಶ್ವತವಾದದ್ದು.


ಮೂಡಲಲ್ಲಿ ಒಬ್ಬನನ್ನು ಎಬ್ಬಿಸಿ ನ್ಯಾಯದ ಸಂಕಲ್ಪಾನುಸಾರವಾಗಿ ತನ್ನ ಪಾದಸನ್ನಿಧಿಗೆ ಕರೆದು ಜನಾಂಗಗಳನ್ನು ಅವನ ವಶಕ್ಕೆ ಕೊಟ್ಟು ಅವನನ್ನು ರಾಜರ ಮೇಲೆ ಆಳಗೊಡಿಸಿ ಅವರ ಕತ್ತಿಯನ್ನು ದೂಳನ್ನಾಗಿಯೂ ಬಿಲ್ಲನ್ನು ಗಾಳಿ ಬಡಿದುಕೊಂಡು ಹೋಗುವ ಒಣಹುಲ್ಲನ್ನಾಗಿಯೂ ಮಾಡಿ


ಮತ್ತು ಕೋರೆಷನ ವಿಷಯವಾಗಿ - ಅವನು ನನ್ನ ಮಂದೆ ಕಾಯುವವನು, ಯೆರೂಸಲೇಮು ಕಟ್ಟಲ್ಪಡಲಿ, ದೇವಸ್ಥಾನದ ಅಸ್ತಿವಾರವು ಹಾಕಲ್ಪಡಲಿ ಎಂದು ಹೇಳಿ ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸತಕ್ಕವನು ಎಂಬದಾಗಿ ಮಾತಾಡುವವನಾಗಿದ್ದೇನೆ.


ಯೆಹೋವನು ಯಾವನ ಕೈಹಿಡಿದು ಯಾವನೆದುರಿಗೆ ಜನಾಂಗಗಳನ್ನು ತುಳಿದು ರಾಜರ ನಡುಕಟ್ಟನ್ನು ಬಿಚ್ಚಿ ಯಾವನ ಮುಂದೆ ಬಾಗಿಲುಹೆಬ್ಬಾಗಿಲುಗಳನ್ನು ತೆರೆದು ಮುಚ್ಚಲೀಸನೋ ತಾನು ಅಭಿಷೇಕಿಸಿದ ಆ ಕೋರೆಷನಿಗೆ ಹೀಗೆನ್ನುತ್ತಾನೆ -


ಆಗ ರಾಜನಾದ ದಾರ್ಯಾವೆಷನು ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ ಕುಲಭಾಷೆಗಳವರಿಗೆ ಈ ಪ್ರಸಿದ್ಧ ಪತ್ರವನ್ನು ಬರೆಯಿಸಿದನು - ನಿಮಗೆ ಸುಖವು ಹೆಚ್ಚೆಚ್ಚಾಗಲಿ!


ಕಡಲನ್ನೂ ಒಣನೆಲವನ್ನೂ ಸೃಷ್ಟಿಸಿದ ಪರಲೋಕದೇವರಾದ ಯೆಹೋವನ ಭಕ್ತನು ಎಂದು ಹೇಳಿದನು.


ಅವನಿಗೆ - ಈ ಸಾಮಾನುಗಳನ್ನು ಯೆರೂಸಲೇವಿುನ ದೇವಾಲಯದಲ್ಲಿಡುವದಕ್ಕೋಸ್ಕರ ತೆಗೆದುಕೊಂಡು ಹೋಗಿ ಆ ದೇವಾಲಯವನ್ನು ತಿರಿಗಿ ಅದರ ಸ್ಥಳದಲ್ಲಿ ಕಟ್ಟಿಸು ಎಂದು ಆಜ್ಞಾಪಿಸಿದನು.


ಅರಸನಾದ ಕೋರೆಷನ ಮೊದಲನೆಯ ವರುಷದಲ್ಲಿ ಅರಸನಾದ ಕೋರೆಷನು ಯೆರೂಸಲೇವಿುನ ದೇವಾಲಯದ ವಿಷಯ ಕೊಟ್ಟ ಅಪ್ಪಣೆ - ಬಲವಾದ ಅಸ್ತಿವಾರವನ್ನು ಹಾಕಿ ಯಜ್ಞಸಮರ್ಪಣೆಗಾಗಿ ಆಲಯವನ್ನು ತಿರಿಗಿ ಕಟ್ಟಬೇಕು. ಅದರ ಎತ್ತರ ಅರುವತ್ತು ಮೊಳವೂ ಅಗಲ ಅರುವತ್ತು ಮೊಳವೂ ಇರಬೇಕು.


ಅವರಾದರೋ ಪರಲೋಕದೇವರಿಗೆ ಸುಗಂಧಹೋಮಗಳನ್ನು ಸಮರ್ಪಿಸಿ ರಾಜನ ಮತ್ತು ರಾಜಪುತ್ರರ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥನೆ ಮಾಡಲಿ.


ರಾಜಾಧಿರಾಜನಾದ ಅರ್ತಷಸ್ತನು ಯಾಜಕನೂ ಪರಲೋಕದೇವರ ಧರ್ಮಶಾಸ್ತ್ರದಲ್ಲಿ ಪ್ರವೀಣನೂ ಆದ ಎಜ್ರನಿಗೆ ಇತ್ಯಾದಿ.


ನಾನು ಈ ವರ್ತಮಾನವನ್ನು ಕೇಳಿದಾಗ ನೆಲದ ಮೇಲೆ ಕೂತುಕೊಂಡು ಅತ್ತೆನು; ಕೆಲವು ದಿವಸಗಳವರೆಗೂ ಶೋಕಿಸುತ್ತಾ ಉಪವಾಸವಾಗಿದ್ದು ಪರಲೋಕ ದೇವರ ಮುಂದೆ ವಿಜ್ಞಾಪನೆ ಮಾಡುತ್ತಾ ಇದ್ದೆನು.


ಆ ವಿಜ್ಞಾಪನೆಗಳಲ್ಲಿ ನಾನು - ಯೆಹೋವನೇ, ಮಹೋನ್ನತನೂ ಭಯಂಕರನೂ ಆಗಿರುವ ಪರಲೋಕದೇವರೇ, ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ಕೃಪಾವಾಗ್ದಾನಗಳನ್ನು ನೆರವೇರಿಸುವವನೇ,


ನಿನ್ನ ಪ್ರಜೆಯ ದ್ರೋಹವನ್ನು ಕ್ಷವಿುಸಿದ್ದೀ; ಅವರ ಎಲ್ಲಾ ಪಾಪಗಳನ್ನು ಅಳಿಸಿಬಿಟ್ಟಿದ್ದೀ. ಸೆಲಾ.


ರಾಜನ ಸಂಕಲ್ಪಗಳು ಯೆಹೋವನ ಕೈಯಲ್ಲಿ ನೀರಿನ ಕಾಲುವೆಗಳಂತೆ ಇವೆ; ತನಗೆ ಬೇಕಾದ ಕಡೆಗೆ ತಿರುಗಿಸುತ್ತಾನೆ.


ನಾನೇ ಕೈ ನೀಡಿ ನನ್ನ ಮಹಾ ಶಕ್ತಿಯಿಂದ ಲೋಕವನ್ನೂ ಭೂವಿುಯನ್ನೂ ಅದರ ಮಾನವರನ್ನೂ ಪಶುಗಳನ್ನೂ ಸೃಷ್ಟಿಸಿದ್ದೇನೆ;


ಯೆಹೋವನು ಇಂತೆನ್ನುತ್ತಾನೆ - ಬಾಬೆಲ್ ರಾಜ್ಯವು ಎಪ್ಪತ್ತು ವರುಷ ಪ್ರಬಲಿಸಿದ ಮೇಲೆ ನಾನು ನಿಮ್ಮನ್ನು ಕಟಾಕ್ಷಿಸಿ ಈ ಸ್ಥಳಕ್ಕೆ ತಿರಿಗಿ ಬರಮಾಡುವೆನೆಂಬ ನನ್ನ ಶುಭವಾಕ್ಯವನ್ನು ನಿಮಗಾಗಿ ನೆರವೇರಿಸುವೆನು.


ದಾನಿಯೇಲನು ರಾಜನಾದ ಕೋರೆಷನ ಆಳಿಕೆಯ ಮೊದಲನೆಯ ವರುಷದ ತನಕ ಸನ್ನಿಧಿಸೇವಕನಾಗಿಯೇ ಇದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು