ಎಜ್ರ 1:3 - ಕನ್ನಡ ಸತ್ಯವೇದವು J.V. (BSI)3 ನಿಮ್ಮಲ್ಲಿ ಯಾರು ಆತನ ಪ್ರಜೆಗಳಾಗಿರುತ್ತಾರೋ ಅವರು ಯೆಹೂದದೇಶದ ಯೆರೂಸಲೇವಿುಗೆ ಹೋಗಿ ಅಲ್ಲಿ ವಾಸಿಸುತ್ತಿರುವ ಇಸ್ರಾಯೇಲ್‍ದೇವರಾದ ಯೆಹೋವನಿಗೋಸ್ಕರ ಆಲಯವನ್ನು ಕಟ್ಟಲಿ; ಅವರ ದೇವರು ಅವರ ಸಂಗಡ ಇರಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನಿಮ್ಮಲ್ಲಿ ಯಾರು ಆತನ ಪ್ರಜೆಗಳಾಗಿರುತ್ತಾರೋ, ಅವರು ಯೆಹೂದ ದೇಶದ ಯೆರೂಸಲೇಮಿಗೆ ಹೋಗಿ ಅಲ್ಲಿ ವಾಸಿಸುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಆಲಯವನ್ನು ಕಟ್ಟಲಿ. ಅವರ ದೇವರು ಅವರ ಸಂಗಡ ಇರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನಿಮ್ಮಲ್ಲಿ ಯಾರು ಅವರ ಪ್ರಜೆಗಳಾಗಿರುತ್ತಾರೋ ಅಂಥವರು ಜುದೇಯ ನಾಡಿನ ಜೆರುಸಲೇಮಿಗೆ ಹೋಗಿ ಅಲ್ಲಿ ವಾಸಿಸುತ್ತಿರುವ ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ, ಒಂದು ದೇವಾಲಯವನ್ನು ಕಟ್ಟಲಿ; ಅವರ ಸಂಗಡ ಅವರ ದೇವರಿರಲಿ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆತನು ಜೆರುಸಲೇಮ್‌ನಲ್ಲಿರುವಾತನೂ ಇಸ್ರೇಲರ ದೇವರೂ ಆಗಿದ್ದಾನೆ. ದೇವಜನರಲ್ಲಿ ಯಾರಾದರೂ ನಿಮ್ಮೊಂದಿಗೆ ವಾಸಿಸುತ್ತಿದ್ದರೆ ದೇವರ ಆಶೀರ್ವಾದವು ಅವರ ಮೇಲಿರಲಿ. ಯೆಹೂದ ಪ್ರಾಂತ್ಯದಲ್ಲಿರುವ ಜೆರುಸಲೇಮಿಗೆ ಹೋಗಲು ಅವರಿಗೆ ಅವಕಾಶಕೊಡಿರಿ. ಅವರು ಹೋಗಿ ಯೆಹೋವನಿಗಾಗಿ ದೇವಾಲಯವನ್ನು ಕಟ್ಟಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನಿಮ್ಮಲ್ಲಿ ಯಾರು ಅವರ ಪ್ರಜೆಗಳಾಗಿರುತ್ತೀರೋ, ಅಂಥವರು ಯೆಹೂದ, ಯೆರೂಸಲೇಮಿಗೆ ಹೋಗಿ, ಅಲ್ಲಿ ವಾಸಿಸುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವ ದೇವರಿಗೆ ಒಂದು ದೇವಾಲಯವನ್ನು ಕಟ್ಟಲಿ, ಅವರ ಸಂಗಡ ಅವರ ದೇವರು ಇರಲಿ! ಅಧ್ಯಾಯವನ್ನು ನೋಡಿ |