ಎಜ್ರ 1:4 - ಕನ್ನಡ ಸತ್ಯವೇದವು J.V. (BSI)4 ಸೆರೆಯವರಲ್ಲಿ ಉಳಿದವರು ಯಾವ ಊರುಗಳಲ್ಲಿ ಪ್ರವಾಸಿಗಳಾಗಿರುತ್ತಾರೋ ಆ ಊರುಗಳವರು ಯೆರೂಸಲೇವಿುನ ದೇವಾಲಯಕ್ಕೋಸ್ಕರ ಕಾಣಿಕೆಗಳನ್ನಲ್ಲದೆ ಬೆಳ್ಳಿಬಂಗಾರ, ಸರಕು, ಪಶು ಇವುಗಳನ್ನೂ ಕೊಟ್ಟು ಅವರಿಗೆ ಸಹಾಯಮಾಡಲಿ ಎಂದು ಪ್ರಕಟಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಸೆರೆಯವರಲ್ಲಿ ಉಳಿದವರು ಯಾವ ಊರುಗಳಲ್ಲಿ ಪ್ರವಾಸಿಗಳಾಗಿರುತ್ತಾರೋ ಆ ಊರುಗಳವರು ಯೆರೂಸಲೇಮಿನ ದೇವಾಲಯಕ್ಕೋಸ್ಕರ ಕಾಣಿಕೆಗಳನ್ನಲ್ಲದೆ ಬೆಳ್ಳಿಬಂಗಾರ, ಸರಕು, ಪಶು ಇವುಗಳನ್ನೂ ಕೊಟ್ಟು ಅವರಿಗೆ ಸಹಾಯ ಮಾಡಲಿ” ಎಂದು ಪ್ರಕಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಸೆರೆಯಾಳುಗಳಾಗಿ ಅಳಿದುಳಿದವರು ಯಾವ ಯಾವ ಊರುಗಳಲ್ಲಿ ಪ್ರವಾಸಿಗಳಾಗಿರುತ್ತಾರೋ ಆ ಊರಿನ ಜನರು ಜೆರುಸಲೇಮಿನ ದೇವಾಲಯಕ್ಕಾಗಿ ಕಾಣಿಕೆಗಳನ್ನಲ್ಲದೆ ಬೆಳ್ಳಿಬಂಗಾರ, ಸರಕುಸಾಮಗ್ರಿ, ಪ್ರಾಣಿಪಶು, ಇವುಗಳನ್ನು ಕೊಟ್ಟು ಅವರಿಗೆ ಸಹಾಯ ಮಾಡಲಿ,” ಎಂದು ಪ್ರಚುರಪಡಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆದ್ದರಿಂದ ಯಾವ ಸ್ಥಳದಲ್ಲಿಯಾದರೂ ಇಸ್ರೇಲರಲ್ಲಿ ಉಳಿದವರು ಇದ್ದಲ್ಲಿ ಅಂಥವರಿಗೆ ಆ ಸ್ಥಳದವರು ಸಹಾಯ ಮಾಡಬೇಕು. ಅವರಿಗೆ ಬೆಳ್ಳಿ, ಬಂಗಾರ, ಪಶುಗಳನ್ನು ಮತ್ತು ಇತರ ವಸ್ತುಗಳನ್ನು ಕೊಡಲಿ. ಜೆರುಸಲೇಮಿನಲ್ಲಿನ ದೇವಾಲಯಕ್ಕೆ ಕಾಣಿಕೆಗಳನ್ನು ಕೊಡಲಿ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಯೆಹೂದ್ಯರಲ್ಲಿ ಬದುಕುಳಿದವರು ಈಗ ವಾಸಿಸುತ್ತಿರುವ ಯಾವುದೇ ಪ್ರದೇಶದಲ್ಲಿ, ಜನರು ಅವರಿಗೆ ಬೆಳ್ಳಿ ಮತ್ತು ಬಂಗಾರ, ಸರಕುಗಳು ಮತ್ತು ಪ್ರಾಣಿಪಶುಗಳನ್ನು ಮತ್ತು ಯೆರೂಸಲೇಮಿನ ದೇವಾಲಯಕ್ಕೆ ಉಚಿತ ಕಾಣಿಕೆಗಳನ್ನು ಒದಗಿಸಬೇಕು.’ ” ಅಧ್ಯಾಯವನ್ನು ನೋಡಿ |