ಎಜ್ರ 10:14 - ಕನ್ನಡ ಸತ್ಯವೇದವು J.V. (BSI)14 ಆದದರಿಂದ ನಮ್ಮ ಪ್ರಭುಗಳು ಸರ್ವಸಮೂಹಕ್ಕೋಸ್ಕರ ಕಾರ್ಯವನ್ನು ವಹಿಸಿಕೊಳ್ಳಲಿ; ನಮ್ಮ ನಮ್ಮ ಊರುಗಳಲ್ಲಿ ಅನ್ಯಜನರ ಸ್ತ್ರೀಯರನ್ನು ಮದುವೆ ಮಾಡಿಕೊಂಡವರೆಲ್ಲರೂ ನೇವಿುತವಾದ ದಿನದಲ್ಲಿ ತಮ್ಮ ಊರಿನ ಹಿರಿಯರೊಡನೆಯೂ ನ್ಯಾಯಾಧಿಪತಿಗಳೊಡನೆಯೂ ಇಲ್ಲಿಗೆ ಬರಲಿ. ನಮ್ಮ ದೇವರು ಈ ವಿಷಯದಲ್ಲಿ ನಮ್ಮ ಮೇಲೆ ಮಾಡಿಕೊಂಡಿರುವ ಉಗ್ರಕೋಪವು ಹೀಗೆ ಪರಿಹಾರವಾಗಲಿ ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆದುದರಿಂದ ನಮ್ಮ ಹಿರಿಯರು, ನಾಯಕರು ಸರ್ವಸಮೂಹಕ್ಕೋಸ್ಕರ ಕಾರ್ಯವನ್ನು ವಹಿಸಿಕೊಳ್ಳಲಿ; ನಮ್ಮ ನಮ್ಮ ಊರುಗಳಲ್ಲಿ ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರೆಲ್ಲರೂ ನೇಮಿತವಾದ ದಿನದಲ್ಲಿ ತಮ್ಮ ಊರಿನ ಹಿರಿಯರೊಡನೆಯೂ ಮತ್ತು ನ್ಯಾಯಾಧಿಪತಿಗಳೊಡನೆಯೂ ಇಲ್ಲಿಗೆ ಸೇರಿ ಬರಲಿ. ನಮ್ಮ ದೇವರು ಈ ವಿಷಯದಲ್ಲಿ ನಮ್ಮ ಮೇಲೆ ಮಾಡಿಕೊಂಡಿರುವ ಉಗ್ರಕೋಪವು ಹೀಗೆ ಪರಿಹಾರವಾಗಲಿ” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆದುದರಿಂದ ನಮ್ಮ ಮುಂದಾಳುಗಳು ಸರ್ವಸಮೂಹದ ಪರವಾಗಿ ಈ ಕಾರ್ಯವನ್ನು ವಹಿಸಿಕೊಳ್ಳಲಿ; ನಮ್ಮ ನಮ್ಮ ಊರುಗಳಲ್ಲಿ ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರೆಲ್ಲರು, ನೇಮಿತ ದಿನದಲ್ಲಿ, ತಮ್ಮ ಊರಿನ ಹಿರಿಯರೊಡನೆ ಹಾಗು ನ್ಯಾಯಾಧಿಪತಿಗಳೊಡನೆ ಇಲ್ಲಿಗೆ ಬರಲಿ. ನಮ್ಮ ದೇವರು ಈ ವಿಷಯದಲ್ಲಿ ನಮ್ಮ ಬಗ್ಗೆ ತಾಳಿರುವ ಉಗ್ರಕೋಪ ಹೀಗೆ ಪರಿಹಾರವಾಗಲಿ,” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಈ ಕೂಟದಲ್ಲಿ ನಮ್ಮ ಹಿರಿಯರು, ಪ್ರಧಾನರು ಒಂದು ತೀರ್ಮಾನಕ್ಕೆ ಬರಲಿ. ಆಮೇಲೆ ನಮ್ಮನಮ್ಮ ಊರಿನಲ್ಲಿ ಅನ್ಯಸ್ತ್ರೀಯರನ್ನು ಮದುವೆ ಆದವರು ತಮ್ಮ ಪ್ರಧಾನರೊಂದಿಗೆ ಒಂದು ನೇಮಿತ ಸಮಯದಲ್ಲಿ ಇಲ್ಲಿಗೆ ಬರಲಿ. ಆಗ ದೇವರು ನಮ್ಮ ಮೇಲಿರುವ ತನ್ನ ಕೋಪವನ್ನು ನಿವಾರಿಸುವನು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆದಕಾರಣ ದಯಮಾಡಿ ಸಭೆಯ ಎಲ್ಲಾದರಲ್ಲಿ ನಮ್ಮ ಪ್ರಧಾನರು ನಿಲ್ಲಲಿ. ಈ ಕಾರ್ಯದ ನಿಮಿತ್ತ ನಮ್ಮ ದೇವರ ಕಠಿಣ ಕೋಪವು ನಮ್ಮನ್ನು ಬಿಟ್ಟು ಹೋಗುವವರೆಗೆ, ನಮ್ಮ ಪಟ್ಟಣಗಳಲ್ಲಿ ಯಹೂದ್ಯರಲ್ಲದ ಸ್ತ್ರೀಯರನ್ನು ತೆಗೆದುಕೊಂಡವರು, ನೇಮಿಸಿದ ಕಾಲದಲ್ಲಿ ಬಂದು, ಅವರ ಸಂಗಡ ಪ್ರತಿ ಪಟ್ಟಣದ ಹಿರಿಯರೂ, ಅದರ ನ್ಯಾಯಾಧಿಪತಿಗಳೂ ಇರಲಿ,” ಎಂದರು. ಅಧ್ಯಾಯವನ್ನು ನೋಡಿ |
ಕೇವಲ ಯೆಹೋವನಿಗೇ ಆಗಲಿ ಎಂದು ನೀವು ಗೊತ್ತುಮಾಡಿದ್ದರಲ್ಲಿ ಸ್ವಲ್ಪವನ್ನಾದರೂ ತೆಗೆದುಕೊಳ್ಳಬಾರದು. ನೀವು ಹೀಗೆ ನಡೆದು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟು ನಾನು ಈಗ ನಿಮಗೆ ಬೋಧಿಸುವ ಆತನ ಎಲ್ಲಾ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಗೆ ಸರಿಯಾದದ್ದನ್ನು ಮಾಡಿದರೆ ಆತನು ರೋಷಾಗ್ನಿಯನ್ನು ಬಿಟ್ಟು ನಿಮಗೆ ದಯೆಯನ್ನು ತೋರಿಸಿ ನಿಮ್ಮನ್ನು ಕರುಣಿಸಿ ತಾನು ನಿಮ್ಮ ಪಿತೃಗಳಿಗೆ ವಾಗ್ದಾನಮಾಡಿದಂತೆ ನಿಮ್ಮ ಸಂತತಿಯನ್ನು ಹೆಚ್ಚಿಸುವನು.