Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 10:4 - ಕನ್ನಡ ಸತ್ಯವೇದವು J.V. (BSI)

4 ಏಳು ಕಾರ್ಯವನ್ನು ವಹಿಸತಕ್ಕವನು ನೀನು; ನಾವಾದರೋ ನಿನ್ನ ಸಹಾಯಕರು, ಧೈರ್ಯದಿಂದ ಕೈಹಾಕು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಎದ್ದೇಳು, ಈ ಕಾರ್ಯವನ್ನು ವಹಿಸತಕ್ಕವನು ನೀನು; ನಾವಾದರೋ ನಿನ್ನ ಸಹಾಯಕರು. ಧೈರ್ಯದಿಂದ ಕೈಹಾಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಎದ್ದೇಳು, ಈ ಕಾರ್ಯ ನಿನ್ನಿಂದಾಗಬೇಕು. ನಾವು ನಿನಗೆ ಸಹಾಯಕರಾಗಿ ನಿಲ್ಲುತ್ತೇವೆ. ಧೈರ್ಯದಿಂದ ಮುನ್ನುಗ್ಗು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಎಜ್ರನೇ, ಎದ್ದೇಳು, ಇದು ನಿನ್ನ ಜವಾಬ್ದಾರಿಕೆ. ನಾವು ನಿನ್ನನ್ನು ಬೆಂಬಲಿಸುತ್ತೇವೆ; ಧೈರ್ಯದಿಂದ ಈ ಕೆಲಸವನ್ನು ಪ್ರಾರಂಭಿಸು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನೀನು ಏಳು, ಏಕೆಂದರೆ ಈ ಕಾರ್ಯ ನಿನಗೆ ಸಂಬಂಧಿಸಿದೆ. ನಾವು ನಿನ್ನ ಸಂಗಡ ನಿಲ್ಲುತ್ತೇವೆ. ಧೈರ್ಯದಿಂದ ಅದನ್ನು ಮಾಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 10:4
14 ತಿಳಿವುಗಳ ಹೋಲಿಕೆ  

ಆದದರಿಂದ ನೋಡಿಕೋ; ಯೆಹೋವನು ತನಗೋಸ್ಕರ ಪವಿತ್ರಾಲಯವನ್ನು ಕಟ್ಟಬೇಕೆಂದು ನಿನ್ನನ್ನು ಆರಿಸಿಕೊಂಡಿದ್ದಾನಷ್ಟೆ; ಧೈರ್ಯದಿಂದ ಕೆಲಸಕ್ಕೆ ಕೈಹಚ್ಚು ಎಂಬದೇ.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು; ನೀನು ಸೇರಬೇಕಾದ ಪಾತಾಳದಲ್ಲಿ ಯಾವ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.


ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುತ್ತಿರಬೇಕೆಂತಲೂ ಸತ್ಕಾರ್ಯಮಾಡಬೇಕೆಂತಲೂ ಒಬ್ಬರನ್ನೊಬ್ಬರು ಪ್ರೇರೇಪಿಸೋಣ.


ಆದದರಿಂದ ನೀವು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ನಿಮ್ಮ ದೇವರಾದ ಯೆಹೋವನ ದರ್ಶನವನ್ನು ಬಯಸಿರಿ. ಏಳಿರಿ, ನಿಮ್ಮ ದೇವರಾದ ಯೆಹೋವನ ಪವಿತ್ರಾಲಯವನ್ನು ಕಟ್ಟಿರಿ. ಯೆಹೋವನ ನಿಬಂಧನ ಮಂಜೂಷವನ್ನೂ ದೇವಾರಾಧನಸಾಮಗ್ರಿಗಳನ್ನೂ ಯೆಹೋವನ ಹೆಸರಿಗೋಸ್ಕರ ಕಟ್ಟಲ್ಪಡುವ ಮಂದಿರದಲ್ಲಿ ಇಡಿರಿ ಎಂದು ಹೇಳಿದನು.


ಶಿಲ್ಪಿಗರೂ ಬಡಗಿಯವರೂ ಬಂಗಾರ ಬೆಳ್ಳಿ ತಾಮ್ರ ಕಬ್ಬಿಣಗಳ ಎಲ್ಲಾ ತರದ ಕೆಲಸವನ್ನು ಮಾಡುವದರಲ್ಲಿ ಜಾಣರೂ ನಿನಗಿರುತ್ತಾರೆ; ಅವರನ್ನು ಲೆಕ್ಕಿಸುವದಕ್ಕಾಗುವದಿಲ್ಲ. ಏಳು, ಕೆಲಸಕ್ಕೆ ಕೈಹಾಕು; ಯೆಹೋವನು ನಿನ್ನ ಸಂಗಡ ಇರಲಿ ಎಂದು ಹೇಳಿದನು.


ಒಬ್ಬ ಮನುಷ್ಯಸು ತನ್ನ ಮನೆಯನ್ನು ಬಿಟ್ಟು ಬೇರೊಂದು ದೇಶಕ್ಕೆ ಹೋಗುವಾಗ ತನ್ನ ಆಳುಗಳಿಗೆ ಮನೇ ಆಡಳಿತವನ್ನು ಒಪ್ಪಿಸಿಕೊಟ್ಟು ಒಬ್ಬೊಬ್ಬನಿಗೆ ಅವನವನ ಕೆಲಸವನ್ನು ನೇವಿುಸಿ ಬಾಗಿಲುಕಾಯುವವನನ್ನು ಕರೆದು - ನೀನು ಎಚ್ಚರವಾಗಿರಬೇಕೆಂದು ಅಪ್ಪಣೆ ಕೊಡುವ ಪ್ರಕಾರ [ನಾನು ನಿಮಗೆ ಅಪ್ಪಣೆ ಕೊಡುತ್ತೇನೆ].


ಇಗೋ, ಯಾಜಕರ ಮತ್ತು ಲೇವಿಯರ ವರ್ಗಗಳವರು ದೇವಾಲಯ ಸಂಬಂಧವಾದ ಬೇಕಾದಕೆಲಸವನ್ನು ಮಾಡುವದಕ್ಕೆ ಸಿದ್ಧರಾಗಿದ್ದಾರೆ. ಯಾವ ಕೆಲಸವಿದ್ದರೂ ಎಲ್ಲವನ್ನೂ ಜಾಣತನದಿಂದ ಮಾಡುವದಕ್ಕೆ ಸಿದ್ಧಮನಸ್ಸುಳ್ಳವರು ನಿನ್ನ ಹತ್ತಿರ ಇರುತ್ತಾರೆ. ಅಧಿಪತಿಗಳೂ ಎಲ್ಲಾ ಪ್ರಜೆಗಳೂ ನಿನ್ನ ಆಜ್ಞೆಗೆ ಒಳಗಾಗುವರು ಎಂದು ಹೇಳಿದನು.


ಆಗ ಎಜ್ರನು ಎದ್ದು ಯಾಜಕರ ಮತ್ತು ಲೇವಿಯರ ಮುಖ್ಯಸ್ಥರಿಗೂ ಎಲ್ಲಾ ಇಸ್ರಾಯೇಲ್ಯರಿಗೂ ಈ ಪ್ರಕಾರ ನಡೆಯುವದಾಗಿ ಪ್ರಮಾಣಮಾಡಬೇಕೆಂದು ಹೇಳಲು ಅವರು ಹಾಗೆಯೇ ಪ್ರಮಾಣಮಾಡಿದರು.


ಆಮೇಲೆ ದಾವೀದನು ತನ್ನ ಮಗನಾದ ಸೊಲೊಮೋನನಿಗೆ - ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಕೆಲಸಕ್ಕೆ ಕೈಹಾಕು; ಅಂಜಬೇಡ, ಕಳವಳಗೊಳ್ಳಬೇಡ. ನನ್ನ ದೇವರಾಗಿರುವ ಯೆಹೋವದೇವರು ನಿನ್ನ ಸಂಗಡ ಇರುತ್ತಾನೆ; ಆತನು ತನ್ನ ಆಲಯದ ಎಲ್ಲಾ ಕೆಲಸವು ತೀರುವವರೆಗೂ ನಿನ್ನನ್ನು ಕೈ ಬಿಡುವದಿಲ್ಲ, ತೊರೆಯುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು