Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 10:8 - ಕನ್ನಡ ಸತ್ಯವೇದವು J.V. (BSI)

8 ಪ್ರಭುಗಳ ಮತ್ತು ಹಿರಿಯರ ನಿರ್ಣಯದ ಪ್ರಕಾರ ಮೂರು ದಿವಸಗಳೊಳಗೆ ಬಾರದವನು ತನ್ನ ಎಲ್ಲಾ ಆಸ್ತಿಯನ್ನೂ ಕಳಕೊಂಡು ಸೆರೆಯಿಂದ ಬಂದವರ ಸಭೆಯಿಂದ ಬಹಿಷ್ಕೃತನಾಗುವನು ಎಂದು ಪ್ರಕಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಎಲ್ಲಾ ಮುಖ್ಯಸ್ಥರ ಮತ್ತು ಹಿರಿಯರ ನಿರ್ಣಯದ ಪ್ರಕಾರ ಮೂರು ದಿನಗಳೊಳಗೆ ಬಾರದವನು ತನ್ನ ಎಲ್ಲಾ ಆಸ್ತಿಯನ್ನೂ ಕಳೆದುಕೊಂಡು ಸೆರೆಯಿಂದ ಬಂದವರ ಸಭೆಯಿಂದ ಬಹಿಷ್ಕೃತನಾಗುವನು” ಎಂದು ಪ್ರಕಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಮುಖ್ಯಸ್ಥರ ಮತ್ತು ಹಿರಿಯರ ನಿರ್ಣಯದ ಪ್ರಕಾರ ಮೂರು ದಿವಸಗಳೊಳಗೆ ಬರಬೇಕು; ಬಾರದವನು ತನ್ನ ಎಲ್ಲ ಆಸ್ತಿಪಾಸ್ತಿಯನ್ನೂ ಕಳೆದುಕೊಂಡು ಸೆರೆಯಿಂದ ಬಂದವರ ಸಭೆಯಿಂದ ಬಹಿಷ್ಕೃತನಾಗುವನು,” ಎಂದು ತಿಳಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಮೂರು ದಿನಗಳೊಳಗೆ ಯಾರಾದರೂ ಬಾರದೆ ಹೋದಲ್ಲಿ ಅವರು ತಮ್ಮ ಆಸ್ತಿಯನ್ನು ಕಳೆದುಕೊಳ್ಳುವರು. ಈ ತೀರ್ಮಾನವನ್ನು ಪ್ರಮುಖರೂ ಅಧಿಕಾರಿಗಳೂ ಮಾಡಿದ್ದಾರೆ; ಆ ಮನುಷ್ಯನು ತಾನು ವಾಸಮಾಡುವ ಜನರ ಅನ್ಯೋನ್ಯತೆಯಿಂದ ತೆಗೆಯಲ್ಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಇದಲ್ಲದೆ ಯಾವನಾದರೂ ಪ್ರಧಾನರ, ಹಿರಿಯರ ನಿರ್ಣಯದ ಪ್ರಕಾರ ಮೂರು ದಿವಸದಲ್ಲಿ ಬಾರದೆ ಇದ್ದರೆ, ಅವನ ಆಸ್ತಿಯೆಲ್ಲಾ ದಂಡವಾಗಿ ತೆಗೆದುಕೊಳ್ಳಲಾಗುವುದೆಂದೂ, ಅವನು ಸೆರೆಯಿಂದ ಬಂದವರ ಕೂಟದಿಂದ ಬಹಿಷ್ಕೃತನಾಗುವನು ಎಂದೂ ಪ್ರಕಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 10:8
14 ತಿಳಿವುಗಳ ಹೋಲಿಕೆ  

ನಿನ್ನ ದೇವರ ಧರ್ಮವನ್ನೂ ರಾಜಾಜ್ಞೆಯನ್ನೂ ಕೈಕೊಳ್ಳದವರಿಗೆಲ್ಲಾ ಮರಣದಂಡನೆ, ಗಡಿಪಾರುಮಾಡುವದು, ದಂಡತೆರಿಸುವದು, ಬೇಡಿಹಾಕುವದು ಈ ವಿಧವಾದ ಶಿಕ್ಷೆಯನ್ನು ತಪ್ಪದೆ ವಿಧಿಸಬೇಕು ಎಂಬದೇ.


ಹೊರಗಿನವರನ್ನು ಕುರಿತು ತೀರ್ಪುಮಾಡುವವನು ದೇವರು. ಆ ದುಷ್ಟನನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.


ನಿಮಗೆ ಬಹಿಷ್ಕಾರ ಹಾಕುವರು; ಅದಲ್ಲದೆ ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಯಜ್ಞವನ್ನು ಮಾಡಿದ್ದೇನೆಂದು ನೆನಸುವ ಕಾಲ ಬರುತ್ತದೆ.


ಈ ಮಾತಿಗೆ ಅವರು - ನೀನು ಕೇವಲ ಪಾಪದಲ್ಲಿ ಹುಟ್ಟಿದವನು, ನಮಗೆ ಉಪದೇಶಮಾಡುತ್ತೀಯೋ ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.


ಅವನ ತಂದೆತಾಯಿಗಳು ಯೆಹೂದ್ಯರಿಗೆ ಅಂಜಿದ ಕಾರಣ ಈ ಪ್ರಕಾರ ಹೇಳಿದರು. ಯಾಕಂದರೆ - ಯಾರಾದರೂ ಯೇಸುವನ್ನು ಕ್ರಿಸ್ತನೆಂದು ಒಪ್ಪಿಕೊಂಡು ಹೇಳಿದರೆ ಅಂಥವನಿಗೆ ಬಹಿಷ್ಕಾರಹಾಕಬೇಕೆಂದು ಯೆಹೂದ್ಯರು ಅದಕ್ಕೆ ಮುಂಚೆ ಗೊತ್ತುಮಾಡಿಕೊಂಡಿದ್ದರು.


ಅವನು ಅವರ ಮಾತನ್ನು ಕೇಳದೆ ಹೋದರೆ ಸಭೆಗೆ ಹೇಳು; ಆದರೆ ಸಭೆಯ ಮಾತನ್ನೂ ಕೇಳದೆಹೋದರೆ ಅವನು ನಿನಗೆ ಅಜ್ಞಾನಿಯಂತೆಯೂ ಭ್ರಷ್ಟನಂತೆಯೂ ಇರಲಿ.


ಇಸ್ರಾಯೇಲ್ಯರು ಈ ಧರ್ಮವಿಧಿಯನ್ನು ಕೇಳಿದೊಡನೆ ಎಲ್ಲಾ ವಿುಶ್ರಜಾತಿಯವರನ್ನು ತಮ್ಮ ಮಧ್ಯದಿಂದ ಬೇರ್ಪಡಿಸಿದರು.


ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು ತುಂಡು ತುಂಡು ಮಾಡಿ ಆ ತುಂಡುಗಳನ್ನು ದೂತರ ಮುಖಾಂತರ ಇಸ್ರಾಯೇಲ್ಯರ ಎಲ್ಲಾ ಪ್ರಾಂತಗಳಿಗೆ ಕಳುಹಿಸಿ - ಯಾರು ಸೌಲ ಸಮುವೇಲರನ್ನು ಹಿಂಬಾಲಿಸುವದಿಲ್ಲವೋ ಅವರ ಎತ್ತುಗಳು ಹೀಗೆಯೇ ಕಡಿಯಲ್ಪಡುವವು ಎಂದು ಹೇಳಿಸಿದನು. ಯೆಹೋವನ ಭಯಪ್ರೇರಿತರಾಗಿ ಜನರೆಲ್ಲರೂ ಏಕಮನಸ್ಸಿನಿಂದ ಕೂಡಿ ಬಂದರು.


ಮತ್ತು ಯೆಹೋವನ ಮುಂದೆ ಸಭೆ ನೆರೆದಾಗ ಅದಕ್ಕೆ ಬಾರದೆ ಇದ್ದಂಥ ಇಸ್ರಾಯೇಲ್ಯರು ಯಾರಾರೆಂದು ವಿಚಾರಮಾಡಿದರು. ಯಾಕಂದರೆ ವಿುಚ್ಪೆಯಲ್ಲಿ - ಯೆಹೋವನ ಸನ್ನಿಧಿಗೆ ಬಾರದವರನ್ನು ಕೊಂದೇಹಾಕುವೆವೆಂದು ಆಣೆಯಿಟ್ಟು ಖಂಡಿತ ಪ್ರಮಾಣಮಾಡಿದ್ದರು.


ಎಲ್ಲಾ ಬೆಳ್ಳಿಬಂಗಾರವೂ ತಾಮ್ರ ಕಬ್ಬಿಣಗಳ ಪಾತ್ರೆಗಳೂ ಯೆಹೋವನ ಮೀಸಲಾಗಿದ್ದು ಆತನ ಭಂಡಾರಕ್ಕೆ ಸೇರತಕ್ಕವುಗಳು ಅಂದನು.


ಯಾವನಾದರೂ ಮನುಷ್ಯನನ್ನಾಗಲಿ ಪಶುವನ್ನಾಗಲಿ ಪಿತ್ರಾರ್ಜಿತಭೂವಿುಯನ್ನಾಗಲಿ ಬೇರೆ ಯಾವದನ್ನಾಗಲಿ ಕೇವಲ ಯೆಹೋವನದಾಗಿರುವದಕ್ಕೆ ಹರಕೆಮಾಡಿಕೊಟ್ಟರೆ ಅದನ್ನು ಮಾರಲೂ ಕೂಡದು ಬಿಡಿಸಿಕೊಳ್ಳಲೂ ಕೂಡದು. ಕೇವಲ ಯೆಹೋವನದಾಗಿರುವದಕ್ಕೆ ಸಮರ್ಪಿಸುವಂಥದೆಲ್ಲಾ ಯೆಹೋವನಿಗೆ ಮೀಸಲಾಗಿಯೇ ಇರಬೇಕು.


ತರುವಾಯ ಯೆಹೂದದಲ್ಲಿಯೂ ಯೆರೂಸಲೇವಿುನಲ್ಲಿಯೂ - ಸೆರೆಯಿಂದ ಬಂದವರೆಲ್ಲರೂ ಯೆರೂಸಲೇವಿುನಲ್ಲಿ ಬಂದು ಕೂಡಬೇಕು,


ಆಗ ಮೂರನೆಯ ದಿನದಲ್ಲಿ ಅಂದರೆ ಒಂಭತ್ತನೆಯ ತಿಂಗಳಿನ ಇಪ್ಪತ್ತನೆಯ ದಿನದಲ್ಲಿ ಯೆಹೂದ್ಯರ ಮತ್ತು ಬೆನ್ಯಾಮೀನ್ಯರ ಎಲ್ಲಾ ಪುರುಷರೂ ಯೆರೂಸಲೇವಿುನಲ್ಲಿ ಬಂದು ಕೂಡಿ ಆ ಸಂಗತಿಯ ನಿವಿುತ್ತವಾಗಿಯೂ ದೊಡ್ಡ ಮಳೆಯ ದೆಸೆಯಿಂದಲೂ ನಡುಗುತ್ತಾ ದೇವಾಲಯದ ಬೈಲಿನಲ್ಲಿ ಕೂತುಕೊಂಡರು.


ಮಹಾಯಾಜಕ ಎಲ್ಯಾಷೀಬನ ಮಗನಾದ ಯೋಯಾದನ ಮಕ್ಕಳಲ್ಲೊಬ್ಬನು ಹೊರೋನ್ಯನಾದ ಸನ್ಬಲ್ಲಟನಿಗೆ ಅಳಿಯನಾದದರಿಂದ ಅವನನ್ನು ನನ್ನ ಸನ್ನಿಧಿಯಿಂದ ಓಡಿಸಿಬಿಟ್ಟೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು