Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 2:2 - ಕನ್ನಡ ಸತ್ಯವೇದವು J.V. (BSI)

2 ಯೆರೂಸಲೇವಿುಗೂ ಯೆಹೂದ ಪ್ರಾಂತದ ಸ್ವಂತ ಪಟ್ಟಣಗಳಿಗೂ ಜೆರುಬ್ಬಾಬೆಲ್, ಯೇಷೂವ, ನೆಹೆಮೀಯ, ಸೆರಾಯ, ರೆಗೇಲಾಯ, ಮೊರ್ದೆಕೈ, ಬಿಲ್ಷಾನ್, ವಿುಸ್ಪಾರ್, ಬಿಗ್ವೈ, ರೆಹೂಮ್, ಬಾಣ ಎಂಬ ನಾಯಕರೊಡನೆ ತಿರಿಗಿ ಬಂದವರು ಯಾರಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವರು ಜೆರುಬ್ಬಾಬೆಲ್, ಯೇಷೂವ, ನೆಹೆಮೀಯ, ಸೆರಾಯ, ರೆಗೇಲಾಯ, ಮೊರ್ದೆಕೈ, ಬಿಲ್ಷಾನ್, ಮಿಸ್ಪಾರ್, ಬಿಗ್ವೈ, ರೆಹೂಮ್ ಮತ್ತು ಬಾಣ ಎಂಬ ನಾಯಕರೊಡನೆ ಹಿಂತಿರುಗಿ ಬಂದವರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಜೆರುಬ್ಬಾಬೆಲ್, ಯೇಷೂವ, ನೆಹೆಮೀಯ, ಸೆರಾಯ, ರೆಗೇಲಾಯ, ಮೊರ್ದೆಕೈ, ಬಿಲ್ಷಾನ್, ಮಿಸ್ಪಾರ್, ಬಿಗ್ವೈ, ರೆಹೂಮ್, ಬಾಣ ಎಂಬ ನಾಯಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಜೆರುಬ್ಬಾಬೆಲನೊಂದಿಗೆ ಹಿಂತಿರುಗಿದವರು ಯಾರೆಂದರೆ: ಯೇಷೂವ, ನೆಹೆಮೀಯ, ಸೆರಾಯ, ರೆಗೇಲಾಯ, ಮೊರ್ದೆಕೈ, ಬಿಲ್ಷಾನ್, ಮಿಸ್ಪಾರ್, ಬಿಗ್ವೈ, ರೆಹೂಮ್ ಮತ್ತು ಬಾಣ. ಇಸ್ರೇಲರಲ್ಲಿ ಹಿಂತಿರುಗಿ ಬಂದವರ ಹೆಸರು ಮತ್ತು ಸಂಖ್ಯೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಜೆರುಬ್ಬಾಬೆಲನ ಸಂಗಡ ಹಿಂದಿರುಗಿದವರು ಯಾರೆಂದರೆ: ಯೇಷೂವ, ನೆಹೆಮೀಯ, ಸೆರಾಯ, ರೆಲಾಯ, ಮೊರ್ದೆಕೈ, ಬಿಲ್ಷಾನ್, ಮಿಸ್ಪಾರ್, ಬಿಗ್ವೈ, ರೆಹೂಮ್ ಹಾಗೂ ಬಾಣ. ಇಸ್ರಾಯೇಲ್ ಜನಾಂಗದ ಪುರುಷರ ಸಂಖ್ಯೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 2:2
24 ತಿಳಿವುಗಳ ಹೋಲಿಕೆ  

ಯೆಹೋವನು ಇಂತೆನ್ನುತ್ತಾನೆ - ಜೆರುಬ್ಬಾಬೆಲನೇ, ಈಗ ಧೈರ್ಯವಾಗಿರು; ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವನೇ, ಧೈರ್ಯವಾಗಿರು; ದೇಶೀಯರೇ, ನೀವೆಲ್ಲರೂ ಧೈರ್ಯಗೊಂಡು ಕೆಲಸ ನಡಿಸಿರಿ; ಇದು ಯೆಹೋವನ ನುಡಿ; ನಾನು ನಿಮ್ಮೊಂದಿಗೆ ಇದ್ದೇನೆಂದು ಸೇನಾಧೀಶ್ವರ ಯೆಹೋವನು ನುಡಿಯುತ್ತಾನೆ.


ಕೂಡಲೆ ಶೆಯಲ್ತೀಯೇಲನ ಮಗನೂ ಯೆಹೂದ ದೇಶಾಧಿಪತಿಯೂ ಆದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ಸಮಸ್ತಜನಶೇಷ, ಇವೆಲ್ಲರ ಮನಸ್ಸುಗಳನ್ನು ಯೆಹೋವನು ಪ್ರೇರಿಸಲು


ಆಗ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ಸಮಸ್ತಜನಶೇಷ, ಇವರೆಲ್ಲಾ ಯೆಹೋವನೆಂಬ ತಮ್ಮ ದೇವರ ನುಡಿಗೂ ಯೆಹೋವನೆಂಬ ತಮ್ಮ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಯಾದ ಹಗ್ಗಾಯನು ಹೇಳಿದ ಮಾತುಗಳಿಗೂ ಕಿವಿಗೊಟ್ಟು ಯೆಹೋವನಲ್ಲಿ ಭಯಭಕ್ತಿಯುಳ್ಳವರಾದರು.


ಜೆರುಬ್ಬಾಬೆಲ್, ಯೇಷೂವ, ನೆಹೆಮೀಯ, ಅಜರ್ಯ, ರಗಮ್ಯ, ನಹಮಾನೀ, ಮೊರ್ದೆಕೈ, ಬಿಲ್ಷಾನ್, ವಿುಸ್ಪೆರೆತ್, ಬಿಗ್ವೈ, ನೆಹೂಮ್, ಬಾಣ ಎಂಬ ನಾಯಕರೊಡನೆ ತಿರಿಗಿ ಬಂದವರು ಯಾರಂದರೆ -


ಯೆಹೋಶುವನು ದೇವದೂತನ ಮುಂದೆ ಕೊಳೆಬಟ್ಟೆಯಾಗಿ ನಿಂತಿರಲು


ಅನಂತರ ಮಹಾಯಾಜಕನಾದ ಯೆಹೋಶುವನು ಯೆಹೋವನ ದೂತನ ಮುಂದೆ ನಿಂತಿರುವದನ್ನು ಯೆಹೋವನು ನನಗೆ ತೋರಿಸಿದನು; ಸೈತಾನನು ಯೆಹೋಶುವನಿಗೆ ಪ್ರತಿಕಕ್ಷಿಯಾಗಿ ಅವನ ಬಲಗಡೆಯಲ್ಲಿ ನಿಂತಿದ್ದನು.


ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲನಿಗೆ ಹೀಗೆ ನುಡಿ - ನಾನು ಭೂಮ್ಯಾಕಾಶಗಳನ್ನು ಅದುರಿಸಿ


ಶೆಯಲ್ತೀಯೇಲನಿಗೆ ಹುಟ್ಟಿದ ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲ್ ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ಜನಶೇಷ, ಇವರೆಲ್ಲರಿಗೆ ಹೀಗೆ ನುಡಿ -


ಅರಸನಾದ ದಾರ್ಯಾವೆಷನ ಆಳಿಕೆಯ ಎರಡನೆಯ ವರುಷದ ಆರನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ಶೆಯಲ್ತೀಯೇಲನಿಗೆ ಹುಟ್ಟಿದ ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲನಿಗೂ ಯೆಹೋಚಾದಾಕನಿಗೆ ಜನಿಸಿದ ಮಹಾಯಾಜಕನಾದ ಯೆಹೋಶುವನಿಗೂ ಪ್ರವಾದಿಯಾದ ಹಗ್ಗಾಯನ ಮೂಲಕ ಹೇಳಿಕಳುಹಿಸಿದನು -


ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್, ಯೋಚಾದಾಕನ ಮಗನಾದ ಯೇಷೂವ ಇವರು ಯೆರೂಸಲೇವಿುನ ದೇವಾಲಯವನ್ನು ಕಟ್ಟಿಸುವದಕ್ಕೆ ಪ್ರಾರಂಭಿಸಿದರು; ದೇವಪ್ರವಾದಿಗಳು ಅವರೊಡನಿದ್ದು ಅವರಿಗೆ ಸಹಾಯಮಾಡುತ್ತಿದ್ದರು.


ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರೂ ಯೆರೂಸಲೇವಿುಗೆ ವಿರೋಧವಾಗಿ ಮುಂದಿನ ಕಾಗದವನ್ನು ಬರೆದು ಅರ್ತಷಸ್ತನಿಗೆ ಕಳುಹಿಸಿದರು.


ಆಗ ಜೆರುಬ್ಬಾಬೆಲ್, ಯೇಷೂವ ಇವರೂ ಬೇರೆ ಇಸ್ರಾಯೇಲ್ ಗೋತ್ರಪ್ರಧಾನರೂ ಅವರಿಗೆ - ನೀವು ನಮ್ಮ ದೇವರ ಆಲಯವನ್ನು ಕಟ್ಟುವದರಲ್ಲಿ ನಮ್ಮೊಡನೆ ಸೇರಲೇ ಕೂಡದು; ಪಾರಸಿಯ ರಾಜನಾದ ಕೋರೆಷನಿಂದ ನಮಗಾದ ಅಪ್ಪಣೆಯ ಮೇರೆಗೆ ನಾವೇ ಇಸ್ರಾಯೇಲ್‍ದೇವರಾದ ಯೆಹೋವನ ಆಲಯವನ್ನು ಕಟ್ಟುತ್ತೇವೆ ಎಂದು ಉತ್ತರ ಕೊಟ್ಟರು.


ಬೆಳ್ಳಿ ಬಂಗಾರದ ಎಲ್ಲಾ ಸಾಮಾನುಗಳ ಒಟ್ಟು ಸಂಖ್ಯೆಯು ಐದು ಸಾವಿರದ ನಾನೂರು. ಶೆಷ್ಬಚ್ಚರನು ಸೆರೆಯಲ್ಲಿದ್ದವರನ್ನು ಬಾಬೆಲಿನಿಂದ ಯೆರೂಸಲೇವಿುಗೆ ಕರಕೊಂಡು ಬಂದಾಗ ಈ ಎಲ್ಲಾ ಸಾಮಾನುಗಳನ್ನು ತೆಗೆದುಕೊಂಡು ಬಂದನು.


ಸೆರೆಯಿಂದ ತಿರಿಗಿ ಬಂದ [ಯೆಹೂದ] ಸಂಸ್ಥಾನದವರ ಖಾನೇಷುಮಾರಿ. ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಂದ ಬಾಬೆಲಿಗೆ ಸೆರೆಯೊಯ್ಯಲ್ಪಟ್ಟವರಲ್ಲಿ


ಆಗ ದೇವರ ಮನುಷ್ಯನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಸರ್ವಾಂಗಹೋಮಗಳನ್ನು ಸಮರ್ಪಿಸುವದಕ್ಕಾಗಿ ಯೋಚಾದಾಕನ ಮಗನಾದ ಯೇಷೂವನೂ ಯಾಜಕರಾದ ಅವನ ಬಂಧುಗಳೂ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನೂ ಅವನ ಬಂಧುಗಳೂ ಇಸ್ರಾಯೇಲ್‍ದೇವರ ಯಜ್ಞವೇದಿಯನ್ನು ತಿರಿಗಿ ಕಟ್ಟುವದಕ್ಕೆ ಪ್ರಾರಂಭಿಸಿದರು.


ಅಲ್ಲಿಂದ ತೆಗಿಸಿ ಖಜಾನದಾರನಾದ ವಿುತ್ರದಾತನಿಗೆ ಒಪ್ಪಿಸಿದನು; ಇವನು ಅವುಗಳನ್ನು ಯೆಹೂದ ಪ್ರಭುವಾಗಿರುವ ಶೆಷ್ಬಚ್ಚರನಿಗೆ ಲೆಕ್ಕ ಮಾಡಿಕೊಟ್ಟನು.


ಅರ್ತಷಸ್ತನ ಆಳಿಕೆಯಲ್ಲಿ ನನ್ನೊಂದಿಗೆ ಬಾಬೆಲಿನಿಂದ ಹೊರಟ ಗೋತ್ರಪ್ರಧಾನರ ಮತ್ತು ಅವರ ಸಂತಾನದವರ ವಿವರಣೆ -


ಮೋವಾಬ್, ಏಲಾಮ್, ಜತ್ತೂ, ಬಾನೀ, ಬುನ್ನೀ,


ಜೆರುಬ್ಬಾಬೆಲ್, ನೆಹೆಮೀಯ ಇವರ ಕಾಲಗಳಲ್ಲಿ ಎಲ್ಲಾ ಇಸ್ರಾಯೇಲ್ಯರು ಗಾಯಕರಿಗೂ ದ್ವಾರಪಾಲಕರಿಗೂ ದಿನದಿನಕ್ಕೆ ಸಿಕ್ಕತಕ್ಕ ಭಾಗಗಳನ್ನು ಕೊಡುತ್ತಿದ್ದರು. ಇವರು ಅವುಗಳಲ್ಲಿ ದಶಮಾಂಶವನ್ನು ಲೇವಿಯರಿಗೂ ಲೇವಿಯರು ತಮ್ಮದರಲ್ಲಿ ದಶಮಾಂಶವನ್ನು ಆರೋನನ ಮಕ್ಕಳಿಗೂ ಕೊಡುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು