Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 2:70 - ಕನ್ನಡ ಸತ್ಯವೇದವು J.V. (BSI)

70 ಯಾಜಕ, ಲೇವಿಯ, ಗಾಯಕ, ದ್ವಾರಪಾಲಕ, ದೇವಸ್ಥಾನದಾಸ ಇವರೂ ಸಾಧಾರಣ ಜನರಲ್ಲಿ ಕೆಲವರೂ ತಮತಮಗೆ ನೇಮಕವಾದ ಪಟ್ಟಣಗಳಲ್ಲಿ ವಾಸಿಸಿದರು; ಬೇರೆ ಎಲ್ಲಾ ಇಸ್ರಾಯೇಲ್ಯರು ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

70 ದೇವಸ್ಥಾನದ ಸೇವೆಗಾಗಿ ಇದ್ದ ಯಾಜಕರು, ಲೇವಿಯರು, ಗಾಯಕರು, ದ್ವಾರಪಾಲಕರು ಮತ್ತು ಸಾಧಾರಣಜನರಲ್ಲಿ ಕೆಲವರು ಅವರವರಿಗೆ ನೇಮಕವಾದ ಪಟ್ಟಣಗಳಲ್ಲಿ ವಾಸಿಸಿದರು; ಬೇರೆ ಎಲ್ಲಾ ಇಸ್ರಾಯೇಲರು ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

70 ಹೀಗೆ ಯಾಜಕರು, ಲೇವಿಯರು, ಗಾಯಕರು, ದ್ವಾರಪಾಲಕರು, ದೇವಸ್ಥಾನದ ಪರಿಚಾರಕರು, ಜನಸಾಮಾನ್ಯರಲ್ಲಿ ಕೆಲವರು, ತಮತಮಗೆ ನೇಮಕವಾದ ಪಟ್ಟಣಗಳಲ್ಲಿ ವಾಸಿಸಿದರು. ಉಳಿದ ಎಲ್ಲ ಇಸ್ರಯೇಲರು ತಮ್ಮ ತಮ್ಮ ಪಟ್ಟಣಗಳಲ್ಲೇ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

70 ಅವರಲ್ಲಿದ್ದ ಯಾಜಕರು, ಲೇವಿಯರು ಮತ್ತು ಇನ್ನಿತರರು ಜೆರುಸಲೇಮ್ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೆಲೆಸಿದರು. ಇವರೊಳಗೆ ಗಾಯಕರೂ ದ್ವಾರಪಾಲಕರೂ ದೇವಾಲಯದ ಸೇವಕರೂ ಇದ್ದರು. ಉಳಿದ ಇಸ್ರೇಲ್ ಜನರು ತಮ್ಮತಮ್ಮ ಊರುಗಳಲ್ಲಿ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

70 ಯಾಜಕರೂ, ಲೇವಿಯರೂ, ದ್ವಾರಪಾಲಕರೂ, ಹಾಡುಗಾರರೂ, ದೇವಾಲಯದ ಸೇವಕರೂ ತಮ್ಮ ತಮ್ಮ ಪಟ್ಟಣಗಳಲ್ಲಿಯೂ ಉಳಿದ ಇಸ್ರಾಯೇಲರು ತಮ್ಮ ಪಟ್ಟಣಗಳಲ್ಲಿಯೂ ವಾಸವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 2:70
7 ತಿಳಿವುಗಳ ಹೋಲಿಕೆ  

ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು, ಸಾಧಾರಣಜನರಿಗೆ ಸೇರಿದವರು, ದೇವಸ್ಥಾನದಾಸರು ಅಂತೂ ಇಸ್ರಾಯೇಲ್ಯರೆಲ್ಲರೂ ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದರು.


ನಾವು ನಿನ್ನ ರಕ್ತಸಂಬಂಧಿಗಳಾಗಿದ್ದೇವೆ; ಹಿಂದಿನ ದಿವಸಗಳಲ್ಲಿ ಅಂದರೆ ಸೌಲನ ಆಳಿಕೆಯಲ್ಲಿ ಇಸ್ರಾಯೇಲ್ಯರ ದಳಪತಿಯಾಗಿ ಹೋಗುತ್ತಾ ಬರುತ್ತಾ ಇದ್ದವನು ನೀನೇ. ನಿನ್ನನ್ನು ಕುರಿತು ನಿನ್ನ ದೇವರಾದ ಯೆಹೋವನು - ನೀನು ನನ್ನ ಪ್ರಜೆಗಳಾದ ಇಸ್ರಾಯೇಲ್ಯರ ನಾಯಕನೂ ಪಾಲಕನೂ ಆಗಿರುವಿ ಎಂದು ಹೇಳಿದ್ದಾನಷ್ಟೆ ಅಂದರು.


ಆಗ ಅವರ ಪಟ್ಟಣಗಳನ್ನೂ ಸ್ವಾಸ್ತ್ಯವನ್ನೂ ಮೊದಲು ಸ್ವಾಧೀನಮಾಡಿಕೊಂಡವರು ಇಸ್ರಾಯೇಲ್ಯರು, ಯಾಜಕರು, ಲೇವಿಯರು, ದೇವಸ್ಥಾನದಾಸರು ಇವರೇ.


ಅಲ್ಲಿಂದ ಹೊರಟು ಊರುಬಾಗಲಿಗೆ ಬಂದು ಕಾಯುವವರಿಗೆ - ನಾವು ಅರಾಮ್ಯರ ಪಾಳೆಯಕ್ಕೆ ಹೋಗಿದ್ದೆವು. ಅಲ್ಲಿ ನಮಗೆ ಯಾರೂ ಕಾಣಿಸಲಿಲ್ಲ, ಮನುಷ್ಯ ಶಬ್ದವೇ ಕೇಳಿಸಲಿಲ್ಲ. ಕತ್ತೆಕುದುರೆಗಳು ಅಲ್ಲಲ್ಲಿ ಕಟ್ಟಲ್ಪಟ್ಟಿರುತ್ತವೆ, ಡೇರೆಗಳು ಇದ್ದ ಹಾಗೆಯೇ ಇರುತ್ತವೆ ಎಂದು ಕೂಗಿ ತಿಳಿಸಿದರು.


ಸೆರೆಯಿಂದ ತಿರಿಗಿ ಬಂದ [ಯೆಹೂದ] ಸಂಸ್ಥಾನದವರ ಖಾನೇಷುಮಾರಿ. ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಂದ ಬಾಬೆಲಿಗೆ ಸೆರೆಯೊಯ್ಯಲ್ಪಟ್ಟವರಲ್ಲಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು