Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 3:13 - ಕನ್ನಡ ಸತ್ಯವೇದವು J.V. (BSI)

13 ಜನರು ಮಹಾಧ್ವನಿಯಿಂದ ಆರ್ಭಟಿಸುತ್ತಿದ್ದದರಿಂದ ಹರ್ಷಧ್ವನಿ ಯಾವದೋ ಅಳುವವರ ಧ್ವನಿ ಯಾವದೋ ಗೊತ್ತಾಗಲಿಲ್ಲ. ಗದ್ದಲವು ಬಹುದೂರದವರೆಗೂ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಜನರು ಮಹಾಧ್ವನಿಯಿಂದ ಅರ್ಭಟಿಸುತ್ತಿದ್ದರಿಂದ ಹರ್ಷಧ್ವನಿ ಯಾವುದು ಅಳುವವರ ಧ್ವನಿ ಯಾವುದು ಗೊತ್ತಾಗಲಿಲ್ಲ. ಗದ್ದಲವು ಬಹುದೂರದ ವರೆಗೂ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಜನರು ಹೀಗೆ ಮಹಾಧ್ವನಿಯಿಂದ ಆರ್ಭಟಿಸುತ್ತಾ ಇದ್ದುದರಿಂದ ಹರ್ಷಧ್ವನಿ ಯಾವುದು ಅಳುವವರ ಧ್ವನಿ ಯಾವುದು ಎಂದು ಹೇಳಲಾಗಲಿಲ್ಲ. ಗದ್ದಲವು ಬಹುದೂರದವರೆಗೂ ಕೇಳಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅವರ ಉತ್ಸಾಹಧ್ವನಿಯಲ್ಲಿ ಹರ್ಷಧ್ವನಿ ಯಾವುದು ಅಳುವವರ ಧ್ವನಿ ಯಾವುದು ಎಂದು ತಿಳಿಯುತ್ತಿರಲಿಲ್ಲ. ಆದರೆ ಆ ಧ್ವನಿಯು ಬಹುದೂರದವರೆಗೂ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಜನರು ಹೀಗೆ ಮಹಾಧ್ವನಿಯಿಂದ ಆರ್ಭಟಿಸುತ್ತಾ ಇದ್ದುದರಿಂದ, ಹರ್ಷಧ್ವನಿ ಯಾವುದು, ಅಳುವವರ ಧ್ವನಿ ಯಾವುದು ಎಂದು ಗುರುತಿಸಲಾಗಲಿಲ್ಲ. ಗದ್ದಲವು ಬಹು ದೂರದವರೆಗೂ ಕೇಳಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 3:13
14 ತಿಳಿವುಗಳ ಹೋಲಿಕೆ  

ಯೆಹೋವನ ಒಡಂಬಡಿಕೆಯ ಮಂಜೂಷವು ಪಾಳೆಯಕ್ಕೆ ಬಂದಾಗ ಇಸ್ರಾಯೇಲ್ಯರೆಲ್ಲರೂ ಭೂವಿುಯು ಪ್ರತಿಧ್ವನಿಕೊಡುವಷ್ಟು ಆರ್ಭಟಿಸಿದರು.


ಎಂಬೀ ಮಾತನ್ನು ಯೆಹೋವನು ಜೆರುಬ್ಬಾಬೆಲನಿಗೆ ದಯಪಾಲಿಸಿದ್ದಾನೆ. ದೊಡ್ಡ ಬೆಟ್ಟವೇ, ನೀನು ಯಾರು? ಜೆರುಬ್ಬಾಬೆಲನ ಮುಂದೆ ನೆಲಸಮವಾಗುವಿ; ಅವನು ಕಲಶದ ಕಲ್ಲನ್ನು ಕೋಲಾಹಲದೊಡನೆ ಮೆರವಣಿಗೆಮಾಡುವನು; ಇದರ ಮೇಲೆ ದೇವರ ದಯೆಯಿರಲಿ, ದೇವರ ದಯೆಯಿರಲಿ ಎಂಬ ಜನಘೋಷವಾಗುವದು.


ಉಲ್ಲಾಸ ಕೋಲಾಹಲ, ವಧೂವರರ ಸ್ವರ, ಇವುಗಳು ಕೇಳ ಬರುವವು. ಸೇನಾಧೀಶ್ವರನಾದ ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ, ಯೆಹೋವನು, ಒಳ್ಳೆಯವನು, ಆತನ ಕೃಪೆಯು ಶಾಶ್ವತ ಎಂದು ಕೀರ್ತಿಸುತ್ತಾ ಕೃತಜ್ಞತಾಬಲಿಯನ್ನು ಯೆಹೋವನ ಆಲಯಕ್ಕೆ ತರುವವರ ಗಾನವೂ ಕಿವಿಗೆ ಬೀಳುವದು. ನಾನು ದೇಶವನ್ನು ದುರವಸ್ಥೆಯಿಂದ ತಪ್ಪಿಸಿ ಪೂರ್ವಸ್ಥಿತಿಗೆ ತರುವೆನು.


ಯೆಹೋವನೇ, ನೀತಿವಂತನನ್ನು ಆಶೀರ್ವದಿಸುವವನು ನೀನೇ; ನಿನ್ನ ದಯವು ದೊಡ್ಡ ಗುರಾಣಿಯಂತೆ ಅವನನ್ನು ಆವರಿಸಿಕೊಳ್ಳುವದು.


ದೇವರು ತಮಗೆ ವಿಶೇಷಾನಂದವನ್ನುಂಟುಮಾಡಿದ್ದರಿಂದ ಜನರು ಆ ದಿನದಲ್ಲಿ ಅನೇಕ ಯಜ್ಞಗಳನ್ನು ಸಮರ್ಪಿಸಿ ತಮ್ಮ ಹೆಂಡತಿ ಮಕ್ಕಳೊಡನೆ ಮಹೋತ್ಸವ ಮಾಡಿದರು. ಯೆರೂಸಲೇವಿುನ ಉತ್ಸವದ ಹರ್ಷಧ್ವನಿಯು ಬಹುದೂರದವರೆಗೂ ಕೇಳಿಸಿತು.


ಯಾಜಕನಾದ ಚಾದೋಕನೂ ಪ್ರವಾದಿಯಾದ ನಾತಾನನೂ ಗೀಹೋನಿನ ಬಳಿಯಲ್ಲಿ ಅವನಿಗೆ ರಾಜ್ಯಾಭಿಷೇಕಮಾಡಿದರು. ಅಲ್ಲಿಂದ ಅವರು ಮಹಾಸಂತೋಷದಿಂದ ಆರ್ಭಟಿಸುತ್ತಾ ಪಟ್ಟಣಕ್ಕೆ ಬಂದಿದ್ದಾರೆ. ಇದರಿಂದಲೇ ಪಟ್ಟಣದಲ್ಲಿ ಗದ್ದಲವುಂಟಾಗಿದೆ; ನೀವು ಕೇಳಿದ ಆರ್ಭಟವು ಇದೇ.


ತರುವಾಯ ಅವರೆಲ್ಲರೂ ಅವನನ್ನು ಹಿಂಬಾಲಿಸಿ ಕೊಳಲೂದುತ್ತಾ ಬಹುಸಂತೋಷದಿಂದ ಆರ್ಭಟಿಸುತ್ತಾ ತಿರಿಗಿ ಬಂದರು. ಅವರ ಕೂಗಿನಿಂದ ಭೂವಿುಯು ಸೀಳಿಹೋಗುತ್ತದೋ ಎಂಬಂತೆ ಆಯಿತು.


ಮತ್ತು ಆ ಸ್ಥಳಕ್ಕೆ ಬೋಕೀಮೆಂಬ ಹೆಸರಿಟ್ಟು ಅಲ್ಲಿಯೇ ಯೆಹೋವನಿಗೋಸ್ಕರ ಯಜ್ಞಮಾಡಿದರು.


ಆದರೆ ಯಾಜಕರಲ್ಲಿಯೂ ಲೇವಿಯರಲ್ಲಿಯೂ ಗೋತ್ರ ಪ್ರಧಾನರಲ್ಲಿಯೂ ಅನೇಕರು ಅಂದರೆ ಮುಂಚಿನ ದೇವಾಲಯವನ್ನು ನೋಡಿದ್ದ ಮುದುಕರು ತಮ್ಮ ಕಣ್ಣು ಮುಂದೆ ದೇವಾಲಯದ ಅಸ್ತಿವಾರವು ಹಾಕಲ್ಪಡುವದನ್ನು ನೋಡುವಾಗ ಬಹಳವಾಗಿ ಅತ್ತರು; ಬೇರೆ ಹಲವರು ಹರ್ಷಧ್ವನಿಯಿಂದ ಆರ್ಭಟಿಸಿದರು.


ಸೆರೆಯಿಂದ ತಿರಿಗಿ ಬಂದವರು ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಮಂದಿರವನ್ನು ಕಟ್ಟುತ್ತಿರುತ್ತಾರೆಂಬದನ್ನು ಯೆಹೂದ್ಯರ ಮತ್ತು ಬೆನ್ಯಾಮೀನ್ಯರ ವಿರೋಧಿಗಳು ಕೇಳಿದಾಗ


ಯೆಹೋವನು ಇಂತೆನ್ನುತ್ತಾನೆ - ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲ್ಯರೂ ಯೆಹೂದ್ಯರೂ ಒಟ್ಟಿಗೆ ಹಿಂದಿರುಗಿ ದಾರಿಯುದ್ದಕ್ಕೂ ಅಳುತ್ತಾ ಬಂದು ತಮ್ಮ ದೇವರಾದ ಯೆಹೋವನನ್ನು ಮರೆಹೊಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು