ಎಜ್ರ 3:5 - ಕನ್ನಡ ಸತ್ಯವೇದವು J.V. (BSI)5 ಅಂದಿನಿಂದ ನಿತ್ಯಸರ್ವಾಂಗಹೋಮವೂ ಅಮಾವಾಸ್ಯೆ, ಯೆಹೋವನ ಎಲ್ಲಾ ಉತ್ಸವದಿನ ಇವುಗಳಲ್ಲಿ ನೇಮಕವಾದ ಸರ್ವಾಂಗಹೋಮಗಳೂ ಜನರು ಸ್ವೇಚ್ಫೆಯಿಂದ ತಂದುಕೊಟ್ಟ ಯಜ್ಞಗಳೂ ಯೆಹೋವನಿಗೆ ಸಮರ್ಪಣೆಯಾಗುತ್ತಾ ಬಂದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅಂದಿನಿಂದ ನಿತ್ಯ ಸರ್ವಾಂಗಹೋಮ, ಅಮಾವಾಸ್ಯೆ, ಯೆಹೋವನ ಎಲ್ಲಾ ಉತ್ಸವದಿನ ಇವುಗಳಲ್ಲಿ ನೇಮಕವಾದ ಸರ್ವಾಂಗಹೋಮಗಳೂ, ಜನರು ಸ್ವ ಇಚ್ಛೆಯಿಂದ ತಂದುಕೊಟ್ಟ ಯಜ್ಞಗಳೂ ಯೆಹೋವನಿಗೆ ಸಮರ್ಪಣೆಯಾಗುತ್ತಾ ಬಂದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅಂದಿನಿಂದ ನಿತ್ಯ ದಹನಬಲಿ ಮತ್ತು ಅಮಾವಾಸ್ಯೆ ಬಲಿ, ಸರ್ವೇಶ್ವರನ ಎಲ್ಲ ಉತ್ಸವದಿನಗಳಿಗೆ ನೇಮಕವಾದ ದಹನಬಲಿ ಹಾಗು, ಜನರು ಸ್ವಂತ ಇಚ್ಛೆಯಿಂದ ತಂದುಕೊಟ್ಟ ಬಲಿದಾನಗಳು, ಇವು ಸರ್ವೇಶ್ವರನಿಗೆ ಸಮರ್ಪಣೆಯಾಗುತ್ತಾ ಬಂದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಇದಾದ ಬಳಿಕ ಅವರು ನಿತ್ಯ ಸರ್ವಾಂಗಹೋಮವನ್ನೂ ಅಮಾವಾಸ್ಯೆ ಮತ್ತು ಇತರ ಹಬ್ಬದ ದಿನಗಳಲ್ಲಿ ಧರ್ಮಶಾಸ್ತ್ರದ ಪ್ರಕಾರ ಅರ್ಪಿಸಬೇಕಾದ ಯಜ್ಞಹೋಮಗಳನ್ನೂ ಸಮರ್ಪಿಸಿದರು. ಜನರು ತಾವು ಯೆಹೋವನಿಗೆ ಕೊಡಬೇಕೆಂದಿದ್ದ ಇತರ ಕಾಣಿಕೆಗಳನ್ನು ಸಹ ತಂದು ಕೊಡಲಾರಂಭಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅದರ ತರುವಾಯ ಅವರು ನಿತ್ಯ ದಹನಬಲಿ, ಅಮಾವಾಸ್ಯೆ ಬಲಿ, ಯೆಹೋವ ದೇವರ ಎಲ್ಲಾ ಪರಿಶುದ್ಧ ಹಬ್ಬಗಳಲ್ಲಿಯೂ ಜನರು ಅರ್ಪಿಸುವ ಸ್ವಂತ ಇಚ್ಛೆಯಿಂದ ತಂದ ಬಲಿದಾನಗಳ ಬಲಿಯನ್ನೂ ಸಮರ್ಪಿಸಿದರು. ಅಧ್ಯಾಯವನ್ನು ನೋಡಿ |