Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 4:12 - ಕನ್ನಡ ಸತ್ಯವೇದವು J.V. (BSI)

12 ಅದಾಗಿ ಸನ್ನಿಧಿಯಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಯೆರೂಸಲೇಮನ್ನು ಸೇರಿ ರಾಜಕಂಟಕವಾದ ಆ ಕೆಟ್ಟ ಪಟ್ಟಣವನ್ನೂ ಅದರ ಪೌಳಿಗೋಡೆಯನ್ನೂ ತಿರಿಗಿ ಕಟ್ಟುವದಕ್ಕೆ ಪ್ರಾರಂಭಿಸಿ ಪೌಳಿಗೋಡೆಯ ಅಸ್ತಿವಾರವನ್ನು ಜೀರ್ಣೋದ್ಧಾರ ಮಾಡಿದ್ದಾರೆ ಎಂಬದಾಗಿ ನಾವು ರಾಜರಿಗೆ ಅರಿಕೆಮಾಡಿಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಿನ್ನ ಸನ್ನಿಧಿಯಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಯೆರೂಸಲೇಮನ್ನು ಸೇರಿ ರಾಜಕಂಟಕವಾದ ಆ ಕೆಟ್ಟ ಪಟ್ಟಣವನ್ನೂ, ಅದರ ಪೌಳಿಗೋಡೆಯನ್ನೂ ಪುನಃ ಕಟ್ಟುವುದಕ್ಕೆ ಪ್ರಾರಂಭಿಸಿ ಪೌಳಿಗೋಡೆಯ ಅಸ್ತಿವಾರವನ್ನು ಜೀರ್ಣೋದ್ಧಾರಮಾಡಿದ್ದಾರೆ ಎಂಬುದಾಗಿ ನಾವು ತಮಗೆ ಅರಿಕೆಮಾಡಿಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅದಾಗಿ, ತಮ್ಮ ಸನ್ನಿಧಿಯಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಜೆರುಸಲೇಮನ್ನು ಸೇರಿ ರಾಜ ಕಂಟಕವಾದ ಆ ದುಷ್ಟಪಟ್ಟಣವನ್ನೂ ಅದರ ಪೌಳಿಗೋಡೆಯನ್ನೂ ಮತ್ತೆ ಕಟ್ಟುವುದಕ್ಕೆ ಪ್ರಾರಂಭಿಸಿ, ಪೌಳಿಗೋಡೆಯ ಅಸ್ತಿವಾರವನ್ನು ಮುಗಿಸಿದ್ದಾರೆ ಎಂಬುದಾಗಿ ನಾವು ರಾಜರಿಗೆ ಅರಿಕೆಮಾಡಿಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅರ್ತಷಸ್ತ ರಾಜರೇ, ನಿಮ್ಮ ಸನ್ನಿಧಾನದಲ್ಲಿ ನಾವು ತಿಳಿಸುವ ವಿಷಯವೇನೆಂದರೆ, ನೀವು ಕಳುಹಿಸಿರುವ ಯೆಹೂದ್ಯರು ಇಲ್ಲಿಗೆ ಬಂದಿದ್ದಾರೆ. ಅವರು ತಮ್ಮ ನಗರವಾದ ಜೆರುಸಲೇಮನ್ನು ತಿರುಗಿ ಕಟ್ಟುತ್ತಿದ್ದಾರೆ. ಜೆರುಸಲೇಮ್ ಕೆಟ್ಟ ನಗರವಾಗಿದೆ. ಅದರ ನಿವಾಸಿಗಳು ಯಾವಾಗಲೂ ಬೇರೆ ಅರಸುಗಳಿಗೆ ಎದುರು ಬೀಳುವವರಾಗಿದ್ದಾರೆ. ಈಗ ಆ ಯೆಹೂದ್ಯರು ಅಸ್ತಿವಾರವನ್ನು ಹಾಕಿ ಗೋಡೆಯನ್ನು ಕಟ್ಟುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅದಾಗಿ, ತಮ್ಮ ಸನ್ನಿಧಿಯಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು, ಯೆರೂಸಲೇಮನ್ನು ಸೇರಿ, ರಾಜಕಂಟಕವಾದ ಆ ದುಷ್ಟ ಪಟ್ಟಣವನ್ನೂ, ಅದರ ಪೌಳಿಗೋಡೆಯನ್ನೂ ಮತ್ತೆ ಕಟ್ಟುವುದಕ್ಕೆ ಪ್ರಾರಂಭಿಸಿ, ಪೌಳಿಗೋಡೆಯ ಅಸ್ತಿವಾರವನ್ನು ಮುಗಿಸಿದ್ದಾರೆ ಎಂಬುದಾಗಿ ನಾವು ರಾಜರಿಗೆ ಅರಿಕೆ ಮಾಡಿಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 4:12
22 ತಿಳಿವುಗಳ ಹೋಲಿಕೆ  

ಅಲ್ಲಿನ ಹಿರಿಯರ ಹತ್ತಿರ - ಈ ಅಸ್ತಿವಾರವನ್ನು ಹಾಕಿ ಈ ಆಲಯವನ್ನು ಕಟ್ಟುವದಕ್ಕೆ ನಿಮಗೆ ಅಪ್ಪಣೆಕೊಟ್ಟವರು ಯಾರು ಎಂದು ವಿಚಾರಮಾಡಿದ್ದಲ್ಲದೆ


ಆ ಸಮಯದಲ್ಲಿ ಹೊಳೆಯ ಈಚೆಯ ಪ್ರದೇಶಗಳ ಅಧಿಪತಿಯಾದ ತತ್ತೆನೈಯೂ ಶೆತರ್ಬೋಜೆನೈಯೂ ಇವರ ಜೊತೆಗಾರರೂ ಅವರ ಬಳಿಗೆ ಬಂದು ಅವರನ್ನು - ಈ ಅಸ್ತಿವಾರವನ್ನು ಸರಿಪಡಿಸಿ ಈ ಆಲಯವನ್ನು ಕಟ್ಟುವದಕ್ಕೆ ನಿಮಗೆ ಅಪ್ಪಣೆಕೊಟ್ಟವರು ಯಾರು ಎಂದು ಕೇಳಿದ ಮೇಲೆ


ಇದಲ್ಲದೆ ನೆಬೂಕದ್ನೆಚ್ಚರನಿಗೆ ಒಳಗಾಗುತ್ತೇನೆಂದು ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿದ್ದರೂ ಅವನಿಗೆ ವಿರುದ್ಧವಾಗಿ ತಿರುಗಿಬಿದ್ದು ಇಸ್ರಾಯೇಲ್‍ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಲೊಲ್ಲದೆ ಹಟಹಿಡಿದು ಮನಸ್ಸನ್ನು ಕಠಿನಮಾಡಿಕೊಂಡನು.


ಸಕಲವಿಧವಾದ ಕೆಟ್ಟತನಕ್ಕೆ ದೂರವಾಗಿರಿ.


ಈ ಮನುಷ್ಯನು ಪೀಡೆಯಂತಿದ್ದು ಲೋಕದಲ್ಲಿ ಎಲ್ಲೆಲ್ಲಿಯೂ ಇರುವ ಎಲ್ಲಾ ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೆಂತಲೂ ನಜರೇತಿನವರ ಪಾಷಂಡಮತದಲ್ಲಿ ಪ್ರಮುಖನೆಂತಲೂ ಕಂಡೆವು.


ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಕೂಡಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಕೂಡಿಸಿಕೊಳ್ಳುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿಮಗೆ ಮನಸ್ಸಿಲ್ಲದೆ ಹೋಯಿತು.


ಇದನ್ನು ತಿಳಿದು ಮಂದಟ್ಟುಮಾಡಿಕೋ; ಯೆರೂಸಲೇಮು ಜೀರ್ಣೋದ್ಧಾರವಾಗಿ ಕಟ್ಟಲ್ಪಡಲಿ ಎಂಬ ದೈವೋಕ್ತಿಯು ಹೊರಡುವಂದಿನಿಂದ ಅಭಿಷಿಕ್ತನಾದ ಪ್ರಭುವು ಬರುವದರೊಳಗೆ ಏಳು ವಾರಗಳು ಕಳೆಯಬೇಕು! ಅದು ಪುನಃ ಕಟ್ಟಲ್ಪಟ್ಟು ಅರುವತ್ತೆರಡು ವಾರ ಇರುವದು; ಅದಕ್ಕೆ ಚೌಕವೂ ಕಂದಕವೂ ಇರುವವು; ಆ ಕಾಲವು ಬಹು ಕಷ್ಟಕಾಲ.


ಯೆಹೋವನು ಯೆರೂಸಲೇವಿುನವರ ಮೇಲೆಯೂ ಬೇರೆ ಎಲ್ಲಾ ಯೆಹೂದ್ಯರ ಮೇಲೆಯೂ ಇದನ್ನೆಲ್ಲಾ ಬರಮಾಡಿ ಕಡೆಯಲ್ಲಿ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಡುವಷ್ಟು ರೋಷವುಳ್ಳವನಾದನು. ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ತಿರಿಗಿಬಿದ್ದದರಿಂದ


ಅವರು ನನಗೆ - ಸೆರೆಯವರೊಳಗೆ ತಪ್ಪಿಸಿಕೊಂಡು ಆ ಸಂಸ್ಥಾನದಲ್ಲಿ ವಾಸಿಸುತ್ತಿರುವವರು ಮಹಾ ಕಷ್ಟನಿಂದೆಗಳಿಗೆ ಒಳಗಾಗಿದ್ದಾರೆ; ಯೆರೂಸಲೇವಿುನ ಪೌಳಿಗೋಡೆಯು ಕೆಡವಲ್ಪಟ್ಟಿರುತ್ತದೆ; ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟಿರುತ್ತವೆ ಎಂದು ಹೇಳಿದರು.


ನನ್ನ ಆಜ್ಞಾನುಸಾರ ವಿಚಾರಣೆಯಾಗುವಲ್ಲಿ ಆ ಪಟ್ಟಣದವರು ಪೂರ್ವಕಾಲದಿಂದಲೇ ಅರಸರಿಗೆ ವಿರೋಧವಾಗಿ ತಿರುಗಿ ಬೀಳುತ್ತಾ ದ್ರೋಹಮಾಡುತ್ತಾ ದಂಗೆಯೆಬ್ಬಿಸುತ್ತಾ


ಈ ವಿಷಯವಾಗಿ ತಾವು ತಮ್ಮ ತಂದೆತಾತಂದಿರ ಚರಿತ್ರಗ್ರಂಥದಲ್ಲಿ ಪರಿಶೋಧಿಸಬೇಕೆಂಬದು ನಮ್ಮ ಅಭಿಪ್ರಾಯ. ಆ ಪಟ್ಟಣವು ರಾಜಕಂಟಕವಾದ ಪಟ್ಟಣವು, ಅರಸರಿಗೂ ಸಂಸ್ಥಾನಗಳಿಗೂ ತೊಂದರೆ ಹುಟ್ಟಿಸುವಂಥದು, ಪೂರ್ವಕಾಲದಿಂದಲೇ ದಂಗೆಯೆಬ್ಬಿಸುವಂಥದು ಎಂಬದೂ ಆ ಕಾರಣದಿಂದಲೇ ಹಾಳುಮಾಡಲ್ಪಟ್ಟಿತೆಂಬದೂ ಆ ಚರಿತ್ರ ಗ್ರಂಥದಲ್ಲಿ ಕಂಡುಬರುವದು.


ಅವನ ಕಾಲದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಬಂದನು; ಯೆಹೋಯಾಕೀಮನು ಅವನಿಗೆ ಅಧೀನನಾಗಿ ಮೂರು ವರುಷಗಳಾದನಂತರ ಅವನಿಗೆ ವಿರೋಧವಾಗಿ ತಿರುಗಿಬಿದ್ದನು.


ಅವನು - ನಿನ್ನ ಭರವಸಕ್ಕೆ ಯಾವ ಆಧಾರವುಂಟು? ಬರೀ ಒಂದು ಬಾಯಿಮಾತಿನ ಮೇಲೆ ಯುದ್ಧಕ್ಕೆ ಬೇಕಾದ ವಿವೇಕವೂ ಬಲವೂ ಉಂಟೆಂದು ಅಂದುಕೊಳ್ಳುತ್ತೀ; ನೀನು ಯಾರನ್ನು ನಂಬಿಕೊಂಡು ನನಗೆ ವಿರೋಧವಾಗಿ ತಿರುಗಿ ಬಿದ್ದಿದ್ದೀ?


ಅವರು ಅರಸನಿಗೆ ಕಳುಹಿಸಿದ ಪತ್ರದ ಪ್ರತಿಯು - ಅರ್ತಷಸ್ತರಾಜರಿಗೆ, ಖಾವಂದರ ಸೇವಕರಾದ ಹೊಳೆಯ ಈಚೆಯವರು.


ಹಾಮಾನನು ಅರಸನಾದ ಅಹಷ್ವೇರೋಷನಿಗೆ - ನಿನ್ನ ರಾಜ್ಯದ ಎಲ್ಲಾ ಸಂಸ್ಥಾನಗಳಲ್ಲಿ ಒಂದು ಜನಾಂಗವಿರುತ್ತದೆ; ಅದು ಇತರ ಜನಾಂಗಗಳವರ ಮಧ್ಯದಲ್ಲಿ ಹರಡಿದ್ದರೂ ಅವರಿಂದ ಪ್ರತ್ಯೇಕವಾಗಿಯೇ ಇರುತ್ತದೆ. ಆ ಜನಾಂಗದವರ ನಿಯಮಗಳು ಇತರ ಎಲ್ಲಾ ಜನಾಂಗಗಳವರ ನಿಯಮಗಳಿಗೆ ಬೇರೆಯಾಗಿರುತ್ತವೆ. ಅರಸನ ನಿಯಮಗಳನ್ನಂತೂ ಅವರು ಅನುಸರಿಸುವದೇ ಇಲ್ಲ. ಅರಸನು ಅವರನ್ನು ಸುಮ್ಮನೆ ಬಿಡುವದು ಉಚಿತವಲ್ಲ.


ಹೀಗಿರಲು ಆ ಸಮಯದಲ್ಲಿ ಕೆಲವು ಮಂದಿ ಪಂಡಿತರು ಯೆಹೂದ್ಯರ ಮೇಲೆ ದೂರುಹೊರಿಸುವದಕ್ಕೆ ಸನ್ನಿಧಿಗೆ ಬಂದು


ಅದರಲ್ಲಿ - ಗೆಷೆಮ್ ಎಂಬವನು ನನಗೆ ತಿಳಿಸಿದ ಪ್ರಕಾರ ನೀನೂ ಯೆಹೂದ್ಯರೂ ತಿರುಗಿಬೀಳಬೇಕೆಂದಿದ್ದೀರಿ; ಆದದರಿಂದಲೇ ನೀನು ಆ ಗೋಡೆಯನ್ನು ಕಟ್ಟಿಸುತ್ತೀ. ಮತ್ತು ನೀನು ಅವರ ಅರಸನಾಗುವಿಯೆಂಬ ಸುದ್ದಿಯು ಜನರಲ್ಲಿ ಹಬ್ಬಿರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು