Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 4:13 - ಕನ್ನಡ ಸತ್ಯವೇದವು J.V. (BSI)

13 ಆ ಪಟ್ಟಣವನ್ನೂ ಅದರ ಗೋಡೆಗಳನ್ನೂ ಕಟ್ಟುವದು ಕೊನೆಗಾಣುವದಾದರೆ ಅವರು ಕಪ್ಪ ತೆರಿಗೆ ಸುಂಕಗಳನ್ನು ಕೊಡಲಿಕ್ಕಿಲ್ಲ. ಮತ್ತು ಕಡೆಯಲ್ಲಿ ಅರಸರಿಗೆ ನಷ್ಟವುಂಟಾಗುವದೆಂದು ಖಾವಂದರಿಗೆ ತಿಳಿದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆ ಪಟ್ಟಣವನ್ನೂ ಅದರ ಗೋಡೆಗಳನ್ನೂ ಕಟ್ಟುವುದು ಮುಕ್ತಾಯಗೊಂಡರೆ ಅವರು ಕಪ್ಪ, ತೆರಿಗೆ ಮತ್ತು ಸುಂಕಗಳನ್ನು ಪಾವತಿಸಲಿಕ್ಕಿಲ್ಲ ಮತ್ತು ಕಡೆಯಲ್ಲಿ ಇದರಿಂದ ಅರಸರಿಗೆ ನಷ್ಟವುಂಟಾಗುವುದೆಂದು ತಮಗೆ ತಿಳಿದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆ ಪಟ್ಟಣವನ್ನೂ ಅದರ ಪೌಳಿಗೋಡೆಗಳನ್ನೂ ಕಟ್ಟುವುದು ಮುಗಿಸಿದರೆ ಅವರು ಕಪ್ಪ, ತೆರಿಗೆ, ಸುಂಕಗಳನ್ನು ಕೊಡುವುದಿಲ್ಲ; ಕಡೆಯಲ್ಲಿ ಅರಸರಿಗೆ ನಷ್ಟವುಂಟಾಗುವುದೆಂದು ತಮಗೆ ತಿಳಿದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅದೇ ಸಮಯದಲ್ಲಿ ರಾಜರೇ, ನೀವು ತಿಳಿಯಬೇಕಾದ ವಿಷಯವೇನೆಂದರೆ, ಜೆರುಸಲೇಮ್ ಮತ್ತು ಅದರ ಪೌಳಿಗೋಡೆಗಳು ಕಟ್ಟಲ್ಪಟ್ಟಲ್ಲಿ ಅಲ್ಲಿಯ ಪ್ರಜೆಗಳು ತೆರಿಗೆ ಕೊಡುವುದನ್ನು ನಿಲ್ಲಿಸುವರು. ನಿನಗೆ ಕಪ್ಪಕಾಣಿಕೆ ಸಲ್ಲಿಸುವುದನ್ನೂ ಇತರ ತೆರಿಗೆಗಳನ್ನು ಕೊಡುವುದನ್ನೂ ನಿಲ್ಲಿಸುವರು. ಇದರಿಂದಾಗಿ ರಾಜರಿಗೆ ದೊಡ್ಡ ನಷ್ಟವಾಗಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆ ಪಟ್ಟಣವನ್ನೂ, ಅದರ ಗೋಡೆಗಳನ್ನೂ ಕಟ್ಟುವುದು ಮುಗಿದರೆ, ಅವರು ಕಪ್ಪ, ತೆರಿಗೆ, ಸುಂಕಗಳನ್ನು ಕೊಡುವುದಿಲ್ಲ. ಕಡೆಯಲ್ಲಿ ಅರಸರಿಗೆ ನಷ್ಟವುಂಟಾಗುವುದೆಂದು ತಮಗೆ ತಿಳಿದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 4:13
9 ತಿಳಿವುಗಳ ಹೋಲಿಕೆ  

ಇದಲ್ಲದೆ ಆ ದೇವಾಲಯದ ಯಾಜಕ ಲೇವಿಯ ಗಾಯಕ ದ್ವಾರಪಾಲಕ ದಾಸ ಮುಂತಾದ ಸೇವಕರಲ್ಲಿ ಯಾವನಿಂದಾದರೂ ಕಪ್ಪ, ತೆರಿಗೆ, ಸುಂಕ ಇವುಗಳನ್ನು ವಸೂಲಿ ಮಾಡುವದಕ್ಕೆ ನಿಮಗೆ ಅಧಿಕಾರವಿಲ್ಲ ಎಂಬದಾಗಿ ತಿಳಿದಿರಲಿ.


ಮತ್ತು ಕೆಲವರು - ಸರಕಾರಕ್ಕೆ ಕಂದಾಯಕೊಡುವದಕ್ಕಾಗಿ ನಾವು ನಮ್ಮ ಹೊಲ ತೋಟಗಳ ಮೇಲೆ ಸಾಲ ತೆಗೆದುಕೊಳ್ಳಬೇಕಾಯಿತು;


ಪೇತ್ರನು ಮನೆಯೊಳಕ್ಕೆ ಬಂದಾಗ ಯೇಸು ಅವನಿಗಿಂತ ಮೊದಲೇ - ಸೀಮೋನಾ, ನಿನಗೆ ಹೇಗೆ ತೋರುತ್ತದೆ? ಭೂಲೋಕದ ಅರಸರು ಸುಂಕವನ್ನಾಗಲಿ ಮಂಡೇತೆರಿಗೆಯನ್ನಾಗಲಿ ಯಾರಿಂದ ತೆಗೆದುಕೊಳ್ಳುತ್ತಾರೆ? ತಮ್ಮ ಮಕ್ಕಳಿಂದಲೋ? ಬೇರೆಯವರಿಂದಲೋ ಎಂದು ಕೇಳಿದನು.


ಯೇಸು ಅಲ್ಲಿಂದ ಹೋಗುತ್ತಿರುವಾಗ ಸುಂಕಕ್ಕೆ ಕೂತಿದ್ದ ಮತ್ತಾಯನೆಂಬ ಒಬ್ಬ ಮನುಷ್ಯನನ್ನು ನೋಡಿ - ನನ್ನನ್ನು ಹಿಂಬಾಲಿಸು ಎಂದು ಅವನನ್ನು ಕರೆಯಲು ಅವನು ಎದ್ದು ಆತನನ್ನು ಹಿಂಬಾಲಿಸಿದನು.


ಗರ್ವಿಷ್ಠರು ನನಗೆ ವಿರೋಧವಾಗಿ ಸುಳ್ಳುಕಲ್ಪಿಸಿದ್ದಾರೆ; ನಾನಾದರೋ ಪೂರ್ಣಮನಸ್ಸಿನಿಂದ ನಿನ್ನ ನೇಮಗಳನ್ನು ಕೈಕೊಳ್ಳುವೆನು.


ಮೋಸಗಾರನೇ, ನಿನ್ನ ನಾಲಿಗೆಯು ಹದವಾದ ಕ್ಷೌರಕತ್ತಿಯಂತೆ ಅಪಾಯಗಳನ್ನೇ ಕಲ್ಪಿಸುತ್ತದೆ.


ಇದ್ದದ್ದಲ್ಲದೆ ಯೆರೂಸಲೇವಿುನಲ್ಲಿ ಬಲಿಷ್ಠ ರಾಜರು ಆಳುತ್ತಾ ಹೊಳೆಯಾಚೆಯ ಎಲ್ಲಾ ಪ್ರದೇಶಗಳಲ್ಲಿ ಅಧಿಕಾರ ನಡಿಸುತ್ತಾ ಕಪ್ಪ ತೆರಿಗೆ ಸುಂಕಗಳನ್ನು ತೆಗೆದುಕೊಳ್ಳುತ್ತಾ ಇದ್ದರೆಂದು ಕಂಡುಬಂತು.


ನಾವಂತು ಅರಮನೆಯ ಉಪ್ಪನ್ನು ಉಣ್ಣುವವರಾದದರಿಂದ ಅರಸರಿಗೆ ಅಪಮಾನವುಂಟಾಗುವದನ್ನು ನೋಡಿ ಸುಮ್ಮನಿರುವದು ಉಚಿತವಲ್ಲವೆಂದು ತಿಳಿದು ಅರಸರಿಗೆ ಈ ಪತ್ರಮೂಲಕವಾಗಿ ವರ್ತಮಾನ ಕಳುಹಿಸಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು