Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 4:16 - ಕನ್ನಡ ಸತ್ಯವೇದವು J.V. (BSI)

16 ಆ ಪಟ್ಟಣವನ್ನೂ ಅದರ ಗೋಡೆಗಳನ್ನೂ ತಿರಿಗಿ ಕಟ್ಟುವದಾದರೆ ತಮಗೆ ಹೊಳೆಯ ಈಚೆಯಲ್ಲಿ ಒಂದು ಅಂಶವೂ ಉಳಿಯದು ಎಂಬದಾಗಿ ಅರಸರಿಗೆ ಅರಿಕೆಮಾಡಿಕೊಳ್ಳುತ್ತೇವೆ ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆ ಪಟ್ಟಣವನ್ನೂ ಅದರ ಗೋಡೆಗಳನ್ನೂ ಪುನಃ ಕಟ್ಟುವುದಾದರೆ ತಮಗೆ ಹೊಳೆಯ ಈಚೆಯಲ್ಲಿ ಒಂದು ಅಂಗುಲವೂ ಉಳಿಯದು ಎಂಬುದಾಗಿ ಅರಸರಿಗೆ ಅರಿಕೆಮಾಡಿಕೊಳ್ಳುತ್ತೇವೆ ಎಂಬುದೇ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆ ಪಟ್ಟಣವನ್ನೂ ಅದರ ಗೋಡೆಗಳನ್ನೂ ಪುನಃ ಕಟ್ಟುವುದಾದರೆ ತಮಗೆ ನದಿಯ ಈಚೆಯಲ್ಲಿ ಒಂದು ಅಂಗುಲವೂ ಉಳಿಯದು ಎಂಬುದಾಗಿ ಅರಸರಿಗೆ ಅರಿಕೆ ಮಾಡಿಕೊಳ್ಳುತ್ತೇವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ರಾಜನಾದ ಅರ್ತಷಸ್ತನೇ, ಈ ಪಟ್ಟಣ ಮತ್ತು ಅದರ ಪೌಳಿಗೋಡೆಗಳು ತಿರಿಗಿ ಕಟ್ಟಲ್ಪಟ್ಟರೆ ನೀವು ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯಗಳ ಮೇಲಿನ ನಿಯಂತ್ರಣವನ್ನು ಕಳೆದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆ ಪಟ್ಟಣವನ್ನೂ, ಅದರ ಗೋಡೆಗಳನ್ನೂ ಪುನಃ ಕಟ್ಟುವುದಾದರೆ, ತಮಗೆ ಯೂಫ್ರೇಟೀಸ್ ನದಿಯ ಈಚೆಯಲ್ಲಿ ಒಂದು ಅಂಗುಲವೂ ಉಳಿಯದು ಎಂಬುದಾಗಿ ಅರಸನಿಗೆ ಅರಿಕೆ ಮಾಡಿಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 4:16
5 ತಿಳಿವುಗಳ ಹೋಲಿಕೆ  

ಇದ್ದದ್ದಲ್ಲದೆ ಯೆರೂಸಲೇವಿುನಲ್ಲಿ ಬಲಿಷ್ಠ ರಾಜರು ಆಳುತ್ತಾ ಹೊಳೆಯಾಚೆಯ ಎಲ್ಲಾ ಪ್ರದೇಶಗಳಲ್ಲಿ ಅಧಿಕಾರ ನಡಿಸುತ್ತಾ ಕಪ್ಪ ತೆರಿಗೆ ಸುಂಕಗಳನ್ನು ತೆಗೆದುಕೊಳ್ಳುತ್ತಾ ಇದ್ದರೆಂದು ಕಂಡುಬಂತು.


ಅವನು ಯೂಫ್ರೇಟೀಸ್ ನದಿಯ ಈಚೆಯಲ್ಲಿ ತಿಪ್ಸಹು ಮೊದಲುಗೊಂಡು ಗಾಜದವರೆಗಿರುವ ಈಚೆಯ ಎಲ್ಲಾ ಅರಸರಿಗೂ ದೊರೆಯಾಗಿದ್ದನು. ಅವನು ಸುತ್ತಣ ರಾಜರೊಡನೆ ಸಮಾಧಾನದಿಂದಿದ್ದನು.


ದಾವೀದನು ಯೂಫ್ರೇಟೀಸ್ ನದಿಯ ಸುತ್ತಣ ಪ್ರದೇಶದಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಾಪಿಸುವದಕ್ಕೆ ಹೋಗುತ್ತಿದ್ದ ರೆಹೋಬನ ಮಗನೂ ಚೋಬದ ಅರಸನೂ ಆದ ಹದದೆಜೆರನನ್ನು ಸೋಲಿಸಿ


ಈ ವಿಷಯವಾಗಿ ತಾವು ತಮ್ಮ ತಂದೆತಾತಂದಿರ ಚರಿತ್ರಗ್ರಂಥದಲ್ಲಿ ಪರಿಶೋಧಿಸಬೇಕೆಂಬದು ನಮ್ಮ ಅಭಿಪ್ರಾಯ. ಆ ಪಟ್ಟಣವು ರಾಜಕಂಟಕವಾದ ಪಟ್ಟಣವು, ಅರಸರಿಗೂ ಸಂಸ್ಥಾನಗಳಿಗೂ ತೊಂದರೆ ಹುಟ್ಟಿಸುವಂಥದು, ಪೂರ್ವಕಾಲದಿಂದಲೇ ದಂಗೆಯೆಬ್ಬಿಸುವಂಥದು ಎಂಬದೂ ಆ ಕಾರಣದಿಂದಲೇ ಹಾಳುಮಾಡಲ್ಪಟ್ಟಿತೆಂಬದೂ ಆ ಚರಿತ್ರ ಗ್ರಂಥದಲ್ಲಿ ಕಂಡುಬರುವದು.


ಅರಸನು ಅವರಿಗೆ ಕೊಟ್ಟ ಉತ್ತರವು - ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರಿಗೂ ಸಮಾರ್ಯದಲ್ಲಿರುವ ಇವರ ಜೊತೆಗಾರರಿಗೂ ಹೊಳೆಯ ಆಚೆಯಲ್ಲಿರುವ ಇತರರಿಗೂ ಕ್ಷೇಮ ಇತ್ಯಾದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು