Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 4:20 - ಕನ್ನಡ ಸತ್ಯವೇದವು J.V. (BSI)

20 ಇದ್ದದ್ದಲ್ಲದೆ ಯೆರೂಸಲೇವಿುನಲ್ಲಿ ಬಲಿಷ್ಠ ರಾಜರು ಆಳುತ್ತಾ ಹೊಳೆಯಾಚೆಯ ಎಲ್ಲಾ ಪ್ರದೇಶಗಳಲ್ಲಿ ಅಧಿಕಾರ ನಡಿಸುತ್ತಾ ಕಪ್ಪ ತೆರಿಗೆ ಸುಂಕಗಳನ್ನು ತೆಗೆದುಕೊಳ್ಳುತ್ತಾ ಇದ್ದರೆಂದು ಕಂಡುಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವರು ಯೆರೂಸಲೇಮಿನಲ್ಲಿ ಬಲಿಷ್ಠರಾಗಿ ರಾಜ್ಯ ಆಳುತ್ತಾ, ಹೊಳೆಯಾಚೆಯ ಎಲ್ಲಾ ಪ್ರದೇಶಗಳಲ್ಲಿ ಅಧಿಕಾರನಡಿಸುತ್ತಾ, ಕಪ್ಪ, ತೆರಿಗೆ ಸುಂಕಗಳನ್ನು ತೆಗೆದುಕೊಳ್ಳುತ್ತಾ ಇದ್ದರೆಂದು ಕಂಡುಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ದಂಗೆಯೆಬ್ಬಿಸುತ್ತಾ ಬಂದಿದ್ದಾರೆ; ಇದಲ್ಲದೆ ಜೆರುಸಲೇಮಿನಲ್ಲಿ ಬಲಿಷ್ಠ ರಾಜರು ಆಳುತ್ತಾ, ನದಿಯಾಚೆಯ ಎಲ್ಲ ಪ್ರದೇಶಗಳಲ್ಲಿ ಅಧಿಕಾರ ನಡೆಸುತ್ತಾ, ಕಪ್ಪ, ತೆರಿಗೆ, ಸುಂಕಗಳನ್ನು ತೆಗೆದುಕೊಳ್ಳುತ್ತಿದ್ದರೆಂದು ಕಂಡುಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಬಲಿಷ್ಠರಾಜರು ಜೆರುಸಲೇಮನ್ನು ಮತ್ತು ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯವನ್ನೆಲ್ಲಾ ಆಳಿದರು. ಅವರಿಗೆ ಕಪ್ಪಕಾಣಿಕೆ, ಸುಂಕ, ತೆರಿಗೆಗಳನ್ನು ಸಲ್ಲಿಸಲಾಗುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಇದಲ್ಲದೆ ಯೆರೂಸಲೇಮಿನಲ್ಲಿ ಬಲಿಷ್ಠ ರಾಜರು ಆಳುತ್ತಾ, ಯೂಫ್ರೇಟೀಸ್ ನದಿಯಾಚೆಯ ಎಲ್ಲಾ ಪ್ರದೇಶಗಳಲ್ಲಿ ಅಧಿಕಾರ ನಡೆಸುತ್ತಾ, ಕಪ್ಪ, ತೆರಿಗೆ, ಸುಂಕಗಳನ್ನು ತೆಗೆದುಕೊಳ್ಳುತ್ತಿದ್ದರೆಂದು ಕಂಡುಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 4:20
23 ತಿಳಿವುಗಳ ಹೋಲಿಕೆ  

ಸೊಲೊಮೋನನು ಯೂಫ್ರೇಟೀಸ್‍ನದಿ ಮೊದಲುಗೊಂಡು ಫಿಲಿಷ್ಟಿಯರ ಮತ್ತು ಐಗುಪ್ತ್ಯರ ದೇಶಗಳವರೆಗೂ ಇರುವ ಎಲ್ಲಾ ರಾಜ್ಯಗಳವರನ್ನು ಆಳುತ್ತಿದ್ದನು. ಅವರು ಅವನ ಜೀವಮಾನದಲ್ಲೆಲ್ಲಾ ಅವನಿಗೆ ಅಧೀನರಾಗಿ ಕಪ್ಪಕೊಡುತ್ತಿದ್ದರು.


ಆ ದಿನದಲ್ಲಿ ಯೆಹೋವನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು - ಐಗುಪ್ತದೇಶದ ನದಿಯಿಂದ ಯೂಫ್ರೇಟೀಸ್ ಮಹಾನದಿಯವರೆಗೂ ಈ ದೇಶವನ್ನೆಲ್ಲಾ ನಿನ್ನ ಸಂತತಿಯವರಿಗೆ ಕೊಟ್ಟಿದ್ದೇನೆ ಅಂದನು;


ಅವನು ಸಮುದ್ರದಿಂದ ಸಮುದ್ರದವರೆಗೂ [ಯೂಫ್ರೇಟೀಸ್] ನದಿಯಿಂದ ಭೂವಿುಯ ಕಟ್ಟಕಡೆಯವರೆಗೂ ಆಳಲಿ.


ದಾವೀದನು ಯೂಫ್ರೇಟೀಸ್ ನದಿಯ ಸುತ್ತಣ ಪ್ರದೇಶದಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಾಪಿಸುವದಕ್ಕೆ ಹೋಗುತ್ತಿದ್ದ ಚೋಬದ ಅರಸನಾದ ಹದರೆಜರನನ್ನು ಹಮಾತಿನ ಬಳಿಯಲ್ಲಿ ಸೋಲಿಸಿ


ಇದಲ್ಲದೆ ಆ ದೇವಾಲಯದ ಯಾಜಕ ಲೇವಿಯ ಗಾಯಕ ದ್ವಾರಪಾಲಕ ದಾಸ ಮುಂತಾದ ಸೇವಕರಲ್ಲಿ ಯಾವನಿಂದಾದರೂ ಕಪ್ಪ, ತೆರಿಗೆ, ಸುಂಕ ಇವುಗಳನ್ನು ವಸೂಲಿ ಮಾಡುವದಕ್ಕೆ ನಿಮಗೆ ಅಧಿಕಾರವಿಲ್ಲ ಎಂಬದಾಗಿ ತಿಳಿದಿರಲಿ.


ಆ ಪಟ್ಟಣವನ್ನೂ ಅದರ ಗೋಡೆಗಳನ್ನೂ ತಿರಿಗಿ ಕಟ್ಟುವದಾದರೆ ತಮಗೆ ಹೊಳೆಯ ಈಚೆಯಲ್ಲಿ ಒಂದು ಅಂಶವೂ ಉಳಿಯದು ಎಂಬದಾಗಿ ಅರಸರಿಗೆ ಅರಿಕೆಮಾಡಿಕೊಳ್ಳುತ್ತೇವೆ ಎಂಬದೇ.


ಆ ಪಟ್ಟಣವನ್ನೂ ಅದರ ಗೋಡೆಗಳನ್ನೂ ಕಟ್ಟುವದು ಕೊನೆಗಾಣುವದಾದರೆ ಅವರು ಕಪ್ಪ ತೆರಿಗೆ ಸುಂಕಗಳನ್ನು ಕೊಡಲಿಕ್ಕಿಲ್ಲ. ಮತ್ತು ಕಡೆಯಲ್ಲಿ ಅರಸರಿಗೆ ನಷ್ಟವುಂಟಾಗುವದೆಂದು ಖಾವಂದರಿಗೆ ತಿಳಿದಿರಲಿ.


ಫಿಲಿಷ್ಟಿಯರಲ್ಲಿ ಕೆಲವರು ಯೆಹೋಷಾಫಾಟನಿಗೆ ಕಾಣಿಕೆಯನ್ನೂ ಕಪ್ಪವನ್ನಾಗಿ ಬೆಳ್ಳಿಯನ್ನೂ ತಂದುಕೊಡುತ್ತಿದ್ದರು. ಅರಬಿಯರು ತಮ್ಮ ಪಶುಗಳಲ್ಲಿ ಏಳು ಸಾವಿರದ ಏಳು ನೂರು ಟಗರುಗಳನ್ನೂ ಏಳು ಸಾವಿರದ ಏಳು ನೂರು ಹೋತಗಳನ್ನೂ ಕೊಡುತ್ತಿದ್ದರು.


ಪ್ರತಿವರುಷ ಆರುನೂರರುವತ್ತಾರು ತಲಾಂತು ಬಂಗಾರವು ದೊರಕುತ್ತಿತ್ತು.


ಸೇನಾಪತಿಯಾದ ಶೋಫಕನನ್ನು ಕೊಂದನು. ಹದರೆಜರನ ದಾಸರು ಇಸ್ರಾಯೇಲ್ಯರ ಮುಂದೆ ತಮ್ಮ ಕೈ ಸಾಗದೆಂದು ತಿಳಿದು ದಾವೀದನೊಡನೆ ಒಪ್ಪಂದಮಾಡಿಕೊಂಡು ಅವನ ದಾಸರಾದರು. ಅಂದಿನಿಂದ ಅರಾಮ್ಯರು ಅಮ್ಮೋನಿಯರಿಗೆ ಸಹಾಯಮಾಡುವದಕ್ಕೆ ಮನಸಿಲ್ಲದವರಾದರು.


ದಾವೀದನು ಎದೋವಿುನಲ್ಲಿ ಕಾವಲುದಂಡುಗಳನ್ನಿರಿಸಿದನು. ಎದೋಮ್ಯರೆಲ್ಲರೂ ದಾವೀದನ ದಾಸರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯವುಂಟಾಯಿತು.


ಇದಲ್ಲದೆ ಅವನು ದಮಸ್ಕದ ಅರಾಮ್ ದೇಶದಲ್ಲಿ ಕಾವಲುದಂಡನ್ನು ಇರಿಸಿದನು. ಹೀಗೆ ಅರಾಮ್ಯರು ಅವನ ಸೇವಕರಾಗಿ ಅವನಿಗೆ ಕಪ್ಪ ಕೊಡುವವರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯ ದೊರಕಿತು.


ಅವನು ಯೂಫ್ರೇಟೀಸ್ ನದಿಯ ಈಚೆಯಲ್ಲಿ ತಿಪ್ಸಹು ಮೊದಲುಗೊಂಡು ಗಾಜದವರೆಗಿರುವ ಈಚೆಯ ಎಲ್ಲಾ ಅರಸರಿಗೂ ದೊರೆಯಾಗಿದ್ದನು. ಅವನು ಸುತ್ತಣ ರಾಜರೊಡನೆ ಸಮಾಧಾನದಿಂದಿದ್ದನು.


ಯೇಸು ಅಲ್ಲಿಂದ ಹೋಗುತ್ತಿರುವಾಗ ಸುಂಕಕ್ಕೆ ಕೂತಿದ್ದ ಮತ್ತಾಯನೆಂಬ ಒಬ್ಬ ಮನುಷ್ಯನನ್ನು ನೋಡಿ - ನನ್ನನ್ನು ಹಿಂಬಾಲಿಸು ಎಂದು ಅವನನ್ನು ಕರೆಯಲು ಅವನು ಎದ್ದು ಆತನನ್ನು ಹಿಂಬಾಲಿಸಿದನು.


ನನ್ನ ಆಜ್ಞಾನುಸಾರ ವಿಚಾರಣೆಯಾಗುವಲ್ಲಿ ಆ ಪಟ್ಟಣದವರು ಪೂರ್ವಕಾಲದಿಂದಲೇ ಅರಸರಿಗೆ ವಿರೋಧವಾಗಿ ತಿರುಗಿ ಬೀಳುತ್ತಾ ದ್ರೋಹಮಾಡುತ್ತಾ ದಂಗೆಯೆಬ್ಬಿಸುತ್ತಾ


ಆದದರಿಂದ ಆ ಮನುಷ್ಯರನ್ನು ತಡಿಸಬೇಕೆಂತಲೂ ನನ್ನ ಅಪ್ಪಣೆಯಾಗುವವರೆಗೆ ಆ ಪಟ್ಟಣವನ್ನು ಕಟ್ಟಗೊಡಬಾರದೆಂತಲೂ ಪ್ರಕಟಿಸಿರಿ.


ಅಯ್ಯೋ, ಜನಭರಿತವಾಗಿದ್ದ ನಗರಿಯು ಒಂಟಿಯಾಗಿ ಕೂತು ಬಿಟ್ಟಳಲ್ಲಾ! ಜನಾಂಗಗಳಲ್ಲಿ ರತ್ನವಾಗಿದ್ದವಳು ವಿಧವೆಯಾದಳು, ಸಂಸ್ಥಾನಗಳಲ್ಲಿ ಶಿರೋಮಣಿಯಾಗಿದ್ದವಳು ಬಿಟ್ಟಿಯಾಳಾದಳು.


ದಾವೀದನ ಜೀವಮಾನದಲ್ಲೆಲ್ಲಾ ಅವನ ವಿುತ್ರನಾಗಿದ್ದ ತೂರಿನ ಅರಸನಾದ ಹೀರಾಮನು ಸೊಲೊಮೋನನು ತಂದೆಗೆ ಬದಲಾಗಿ ಅಭಿಷೇಕಿಸಲ್ಪಟ್ಟನೆಂದು ಕೇಳಿದಾಗ ಅವನ ಬಳಿಗೆ ತನ್ನ ಸೇವಕರನ್ನು ಕಳುಹಿಸಿದನು.


ನನಗಾದರೋ ನನ್ನ ದೇವರಾದ ಯೆಹೋವನು ಎಲ್ಲಾ ಕಡೆಗಳಲ್ಲಿಯೂ ಸಮಾಧಾನವನ್ನು ಅನುಗ್ರಹಿಸಿದ್ದಾನೆ; ನನ್ನನ್ನು ವಿರೋಧಿಸುವವನು ಒಬ್ಬನೂ ಇಲ್ಲ; ಆಪತ್ತು ನನಗೆ ದೂರವಾಗಿದೆ.


ಅದರಲ್ಲಿ ರಾಜದಂಡಯೋಗ್ಯವಾದ ಗಟ್ಟಿ ಕೊಂಬೆಗಳಿದ್ದವು, ಅವುಗಳ ಎತ್ತರವು ವಿುಕ್ಕ ರೆಂಬೆಗಳಿಗಿಂತ ಹೆಚ್ಚಾಗಿತ್ತು, ಬಹು ರೆಂಬೆಗಳ ಮಧ್ಯದಲ್ಲಿ ಉದ್ದುದ್ದವಾಗಿ ಕಾಣಿಸಿದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು