ಎಜ್ರ 4:23 - ಕನ್ನಡ ಸತ್ಯವೇದವು J.V. (BSI)23 ಅರಸನಾದ ಅರ್ತಷಸ್ತನ ಪತ್ರದ ಪ್ರತಿಯು ರೆಹೂಮ್, ಲೇಖಕನಾದ ಶಿಂಷೈ ಇವರ ಮುಂದೆಯೂ ಇವರ ಜೊತೆಗಾರರ ಮುಂದೆಯೂ ಪಠನವಾದ ಕೂಡಲೆ ಅವರು ಶೀಘ್ರವಾಗಿ ಯೆರೂಸಲೇವಿುಗೆ ಹೋಗಿ ಬಲಾತ್ಕಾರದಿಂದಲೂ ಅಧಿಕಾರದಿಂದಲೂ ಯೆಹೂದ್ಯರನ್ನು ತಡೆದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅರಸನಾದ ಅರ್ತಷಸ್ತನ ಈ ಪತ್ರವನ್ನು ರೆಹೂಮ್, ಲೇಖಕನಾದ ಶಿಂಷೈ ಇವರ ಮುಂದೆಯೂ ಇವರ ಜೊತೆಗಾರರ ಮುಂದೆಯೂ ಓದಿದ ಕೂಡಲೆ ಅವರು ಶೀಘ್ರವಾಗಿ ಯೆರೂಸಲೇಮಿಗೆ ಹೋಗಿ ಬಲವಂತದಿಂದಲೂ ಅಧಿಕಾರದಿಂದಲೂ ಯೆಹೂದ್ಯರನ್ನು ತಡೆದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅರಸ ಅರ್ತಷಸ್ತನ ಈ ಪತ್ರವನ್ನು ರೆಹೂಮ್ ಹಾಗು ಕಾರ್ಯದರ್ಶಿ ಶಿಂಷೈ ಇವರ ಮುಂದೆ ಮತ್ತು ಇವರ ಜೊತೆಗಾರರ ಮುಂದೆ ಓದಲಾಯಿತು. ಕೂಡಲೆ ಅವರು ಜೆರುಸಲೇಮಿಗೆ ಶೀಘ್ರವಾಗಿ ಹೋಗಿ, ಬಲಾತ್ಕಾರದಿಂದ ಹಾಗು ಅಧಿಕಾರದಿಂದ ಯೆಹೂದ್ಯರನ್ನು ತಡೆದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ರಾಜನಾದ ಅರ್ತಷಸ್ತನು ಬರೆದ ಪತ್ರವನ್ನು ರೆಹೂಮನಿಗೂ ಕಾರ್ಯದರ್ಶಿ ಶಿಂಷೈಗೂ ಅವರೊಂದಿಗಿದ್ದ ಜನರ ಮುಂದೆ ಓದಲಾಯಿತು. ಆ ಕೂಡಲೇ ಅವರು ಬೇಗನೆ ಜೆರುಸಲೇಮಿನಲ್ಲಿದ್ದ ಯೆಹೂದ್ಯರ ಬಳಿಗೆ ಹೋಗಿ ಅಲ್ಲಿ ನಡೆಯುತ್ತಿದ್ದ ಕೆಲಸವನ್ನು ಬಲವಂತದಿಂದ ನಿಲ್ಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಅರಸನಾದ ಅರ್ತಷಸ್ತನ ಪತ್ರದ ಪ್ರತಿಯು ರೆಹೂಮನಿಗೂ, ಕಾರ್ಯದರ್ಶಿ ಶಿಂಷೈಯಿಗೂ, ಅವರ ಜೊತೆಗಾರರಿಗೂ ಓದಿದ ತರುವಾಯ, ಅವರು ಯೆರೂಸಲೇಮಿನಲ್ಲಿ ಇರುವ ಯೆಹೂದ್ಯರ ಬಳಿಗೆ ತ್ವರೆಯಾಗಿ ಹೋಗಿ, ಒತ್ತಾಯದಿಂದ ಮತ್ತು ಅಧಿಕಾರದಿಂದ ಅವರನ್ನು ನಿಲ್ಲಿಸುವಂತೆ ಮಾಡಿದರು. ಅಧ್ಯಾಯವನ್ನು ನೋಡಿ |