Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 4:4 - ಕನ್ನಡ ಸತ್ಯವೇದವು J.V. (BSI)

4 ಆಗ ಆ ದೇಶನಿವಾಸಿಗಳು ಯೆಹೂದ್ಯರನ್ನು ಕೈಗುಂದಿಸಿ ಕಟ್ಟದ ಹಾಗೆ ಬೆದರಿಸಿದ್ದಲ್ಲದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಗ ಆ ದೇಶನಿವಾಸಿಗಳು ಯೆಹೂದ್ಯರನ್ನು ಧೈರ್ಯಗುಂದಿಸಿ ದೇವಾಲಯ ಕಟ್ಟದ ಹಾಗೆ ಬೆದರಿಸಿದರು. ಇದರೊಂದಿಗೆ ಅವರ ಉದ್ದೇಶವನ್ನು ಕೆಡಿಸುವುದಕ್ಕೋಸ್ಕರ ಹಣಕೊಟ್ಟು ವಕೀಲರನ್ನು ನೇಮಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆಗ ಆ ದೇಶನಿವಾಸಿಗಳು ಯೆಹೂದ್ಯರನ್ನು ನಿರಾಶೆಗೊಳಿಸಿ ಅದನ್ನು ಕಟ್ಟದ ಹಾಗೆ ಬೆದರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಇದನ್ನು ಕೇಳಿ ಅವರಿಗೆ ಸಿಟ್ಟುಬಂತು. ಮತ್ತು ಯೆಹೂದ್ಯರಿಗೆ ಉಪದ್ರವ ಕೊಡಲು ಪ್ರಾರಂಭಿಸಿದರು. ದೇವಾಲಯ ಕಟ್ಟುವ ಕೆಲಸವನ್ನು ನಿಲ್ಲಿಸಲೂ ಕಟ್ಟುವವರನ್ನು ನಿರಾಶೆಪಡಿಸಲೂ ಪ್ರಯತ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಸುತ್ತಲಿದ್ದ ಜನಾಂಗಗಳವರು ಯೆಹೂದದ ಜನರನ್ನು ನಿರಾಶರನ್ನಾಗಿ ಮಾಡಲು ಮತ್ತು ಕಟ್ಟುವುದನ್ನು ಮುಂದುವರಿಸುವ ವಿಷಯದಲ್ಲಿ ಭಯಪಡಿಸಲು ಮುಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 4:4
11 ತಿಳಿವುಗಳ ಹೋಲಿಕೆ  

ಅವರು ಸುತ್ತಣ ಪ್ರಾಂತಗಳ ಜನರಿಗೆ ಹೆದರಿಕೊಂಡಿದ್ದರಿಂದ ವೇದಿಯನ್ನು ಅದರ ಸ್ಥಳದಲ್ಲಿ ಕಟ್ಟಿ ಅದರ ಮೇಲೆ ಯೆಹೋವನಿಗೋಸ್ಕರ ಪ್ರಾತಃಸ್ಸಾಯಂಕಾಲಗಳ ಸರ್ವಾಂಗಹೋಮಗಳನ್ನು ಅರ್ಪಿಸಿದರು.


ಆಮೇಲೆ ಆ ಪ್ರಧಾನರು ಅರಸನಿಗೆ - ಒಡೆಯಾ, ಇವನಿಗೆ ಮರಣದಂಡನೆಯಾಗಬೇಕು. ಇವನು ಪಟ್ಟಣದಲ್ಲಿ ಉಳಿದಿರುವ ಯೋಧರಿಗೂ ಸಕಲ ಜನರಿಗೂ ಇಂಥಾ ಮಾತುಗಳನ್ನು ನುಡಿಯುತ್ತಾ ಅವರನ್ನು ಜೋಲುಗೈಯವರನ್ನಾಗಿ ಮಾಡುತ್ತಾನೆ; ಈ ಜನರ ಕ್ಷೇಮವನ್ನಲ್ಲ, ಹಾನಿಯನ್ನೇ ಹಾರೈಸುತ್ತಾನೆ ಎಂದು ಹೇಳಿದರು.


ಹೀಗೆ ಎಲ್ಲರೂ - ಇವರ ಕೈಗಳು ಜೋಲು ಬಿದ್ದು ಕೆಲಸವನ್ನು ತೀರಿಸದೆ ಬಿಡಲಿ ಅಂದುಕೊಂಡು ನಮ್ಮನ್ನು ಹೆದರಿಸುವದಕ್ಕೆ ಪ್ರಯತ್ನಿಸಿದರು. [ನನ್ನ ದೇವರೇ,] ನನ್ನ ಕೈಗಳನ್ನು ಬಲಪಡಿಸು.


ಅತ್ತ ನಮ್ಮ ವಿರೋಧಿಗಳು - ಅವರಿಗೆ ತಿಳಿಯದೆಯೂ ಗೋಚರವಾಗದೆಯೂ ಫಕ್ಕನೆ ಅವರೊಳಗೆ ನುಗ್ಗಿ ಅವರನ್ನು ಕೊಂದು ಕೆಲಸವನ್ನು ನಿಲ್ಲಿಸಿಬಿಡೋಣ ಅಂದುಕೊಳ್ಳುತ್ತಿದ್ದರು.


ಅಬ್ನೇರನು ಹೆಬ್ರೋನಿನಲ್ಲಿ ಸತ್ತನೆಂಬ ವರ್ತಮಾನವು ಸೌಲನ ಮಗನಾದ ಈಷ್ಬೋಶೆತನಿಗೆ ಮುಟ್ಟಿದಾಗ ಅವನ ಕೈಗಳು ಜೋಲುಬಿದ್ದವು. ಇಸ್ರಾಯೇಲ್ಯರೆಲ್ಲರೂ ಕಳವಳಗೊಂಡರು.


ಅವರ ಉದ್ದೇಶವನ್ನು ಕೆಡಿಸುವದಕ್ಕೋಸ್ಕರ ಹಣಕೊಟ್ಟು ವಕೀಲರನ್ನು ಇಟ್ಟುಕೊಂಡರು. ಪಾರಸಿಯ ರಾಜನಾದ ಕೋರೆಷನ ಕಾಲ ಮೊದಲುಗೊಂಡು ಪಾರಸಿಯ ರಾಜನಾದ ದಾರ್ಯಾವೆಷನ ಆಳಿಕೆಯವರೆಗೂ ಈ ಪ್ರಕಾರ ನಡೆಯಿತು.


ತನ್ನ ಸಹೋದರರ ಮುಂದೆಯೂ ಸಮಾರ್ಯದ ದಂಡಿನವರ ಮುಂದೆಯೂ - ನಿತ್ರಾಣಿಗಳಾದ ಈ ಯೆಹೂದ್ಯರು ಮಾಡುವದೇನು? ಇವರು ತಮ್ಮನ್ನು ಬಲಪಡಿಸಿಕೊಳ್ಳಬೇಕೆಂದಿರುವರೋ? ಯಜ್ಞವನ್ನರ್ಪಿಸುವರೋ? ಈ ಹೊತ್ತೇ ಈ ಕೆಲಸವನ್ನು ತೀರಿಸುವರೇನು? ಸುಟ್ಟು ಹೋದ ಪಟ್ಟಣದ ಧೂಳಿನ ರಾಶಿಯೊಳಗೆ ಹುಗಿದುಹೋದ ಕಲ್ಲುಗಳನ್ನು ಬದುಕಿಸುವರೇನೋ ಎಂದು ಹೇಳಿ ಯೆಹೂದ್ಯರನ್ನು ಗೇಲಿಮಾಡಿದನು.


ಪಾರಸಿಯ ರಾಜ್ಯದ ದಿವ್ಯಪಾಲಕನು ಇಪ್ಪತ್ತೊಂದು ದಿವಸ ನನ್ನನ್ನು ತಡೆಯಲು ಇಗೋ, ಪ್ರಧಾನ ದಿವ್ಯಪಾಲಕರಲ್ಲೊಬ್ಬನಾದ ಮೀಕಾಯೇಲನು ನನ್ನ ಸಹಾಯಕ್ಕೆ ಬಂದನು; ಅಲ್ಲಿ ಪಾರಸಿಯ ರಾಜನ ಸಂಗಡ [ಹೋರಾಡಿ]


ಅವನು ನನಗೆ ಹೀಗೆ ಹೇಳಿದನು - ನಾನು ನಿನ್ನ ಬಳಿಗೆ ಏಕೆ ಬಂದೆನೆಂಬದು ನಿನಗೆ ಗೊತ್ತಲ್ಲವೆ; ಈಗ ನಾನು ಪಾರಸಿಯ ರಾಜ್ಯದ ದಿವ್ಯಪಾಲಕನೊಂದಿಗೆ ಹೋರಾಡಲು ಹಿಂದಿರುಗಬೇಕು; ನಾನು ಆ ಹೋರಾಟವನ್ನು ತೀರಿಸಿದ ಕೂಡಲೆ ಆಹಾ, ಗ್ರೀಕ್‍ರಾಜ್ಯದ ದಿವ್ಯಪಾಲಕನು ಎದುರುಬೀಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು