ಎಜ್ರ 4:5 - ಕನ್ನಡ ಸತ್ಯವೇದವು J.V. (BSI)5 ಅವರ ಉದ್ದೇಶವನ್ನು ಕೆಡಿಸುವದಕ್ಕೋಸ್ಕರ ಹಣಕೊಟ್ಟು ವಕೀಲರನ್ನು ಇಟ್ಟುಕೊಂಡರು. ಪಾರಸಿಯ ರಾಜನಾದ ಕೋರೆಷನ ಕಾಲ ಮೊದಲುಗೊಂಡು ಪಾರಸಿಯ ರಾಜನಾದ ದಾರ್ಯಾವೆಷನ ಆಳಿಕೆಯವರೆಗೂ ಈ ಪ್ರಕಾರ ನಡೆಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಪರ್ಷಿಯ ರಾಜನಾದ ಕೋರೆಷನ ಕಾಲದಿಂದ ಪರ್ಷಿಯ ರಾಜನಾದ ದಾರ್ಯಾವೆಷನ ಆಳ್ವಿಕೆಯವರೆಗೂ ಇದು ಮುಂದುವರಿಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅವರ ಉದ್ದೇಶವನ್ನು ತಡೆಗಟ್ಟಲು ಹಣಕೊಟ್ಟು ವಕೀಲರನ್ನು ಇಟ್ಟರು. ಈ ಪ್ರಕರಣ ಪರ್ಷಿಯರಾಜ ಸೈರಸನ ಕಾಲದಿಂದ ಪರ್ಷಿಯರಾಜ ದಾರ್ಯಾವೆಷನ ಆಳ್ವಿಕೆಯವರೆಗೂ ನಡೆಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯೆಹೂದ ಜನರ ವಿರುದ್ಧವಾಗಿರಲು ಸರಕಾರದ ಅಧಿಕಾರಿಗಳಿಗೆ ಲಂಚಕೊಟ್ಟು ಪ್ರೋತ್ಸಾಹಿಸಿದರು. ಯೆಹೂದ್ಯರು ದೇವಾಲಯ ಕಟ್ಟುವ ಕಾರ್ಯವನ್ನು ನಿಲ್ಲಿಸಲು ಈ ಅಧಿಕಾರಿಗಳು ಪದೇಪದೇ ತೊಂದರೆಪಡಿಸಿದರು. ಪರ್ಶಿಯಾದ ಅರಸನಾದ ಸೈರಸನ ರಾಜ್ಯಭಾರದ ಆಳ್ವಿಕೆಯಲ್ಲಿಯೂ ಅವನ ನಂತರ ಪಟ್ಟಕ್ಕೆ ಬಂದ ದಾರ್ಯಾವೆಷನ ಆಳ್ವಿಕೆಯಲ್ಲಿಯೂ ಇದೇ ರೀತಿ ಮುಂದುವರಿಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಪಾರಸಿಯ ಅರಸನಾದ ಕೋರೆಷನ ದಿನಗಳಿಂದ ಹಿಡಿದು, ಪಾರಸಿಯ ಅರಸನಾದ ದಾರ್ಯಾವೆಷನ ಆಳ್ವಿಕೆಯವರೆಗೂ, ಅವರ ಯೋಚನೆಯನ್ನು ವ್ಯರ್ಥಮಾಡುವುದಕ್ಕೆ ಅವರ ವಿರೋಧವಾಗಿ ವಕೀಲರನ್ನು ಹಣಕೊಟ್ಟು ಇಟ್ಟುಕೊಂಡರು. ಅಧ್ಯಾಯವನ್ನು ನೋಡಿ |