Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 4:6 - ಕನ್ನಡ ಸತ್ಯವೇದವು J.V. (BSI)

6 ಅಹಷ್ವೇರೋಷನ ಆಳಿಕೆಯ ಪ್ರಾರಂಭದಲ್ಲಿ ಅವರು ಯೆಹೂದದಲ್ಲಿಯೂ ಯೆರೂಸಲೇವಿುನಲ್ಲಿಯೂ ವಾಸಿಸುವವರಿಗೆ ವಿರೋಧವಾಗಿ ಆಪಾದನ ಪತ್ರವನ್ನು ಬರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅಹಷ್ವೇರೋಷನ ಆಳ್ವಿಕೆಯ ಪ್ರಾರಂಭದಲ್ಲಿ ಅವರು ಯೆಹೂದದಲ್ಲಿಯೂ ಮತ್ತು ಯೆರೂಸಲೇಮಿನಲ್ಲಿಯೂ ವಾಸ ಮಾಡುತ್ತಿದ್ದವರ ವಿರುದ್ಧವಾಗಿ ಆಪಾದನೆಯ ಪತ್ರವನ್ನು ಬರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಇದಲ್ಲದೆ, ಅಹಷ್ಟೇರೋಷನ ಆಳ್ವಿಕೆಯ ಆರಂಭದಲ್ಲಿ ಅವರು ಜುದೇಯ ಹಾಗು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದವರಿಗೆ ವಿರುದ್ಧ ಆಪಾದನ ಪತ್ರವನ್ನು ಬರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆ ಶತ್ರುಗಳು ಪರ್ಶಿಯ ರಾಜನಿಗೆ ಪತ್ರವನ್ನು ಬರೆದು ದೇವಾಲಯವನ್ನು ಕಟ್ಟುವ ಕಾರ್ಯವನ್ನು ನಿಲ್ಲಿಸಬೇಕೆಂದು ಬೇಡಿಕೊಂಡರು. ಅಹಷ್ವೇರೋಷನು ಪರ್ಶಿಯ ದೇಶದ ಅರಸನಾದಾಗ ಅವನಿಗೆ ಪತ್ರ ಬರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದರೆ ಅಹಷ್ವೇರೋಷನು ಆಳುವಾಗ, ಅವನ ಆಳ್ವಿಕೆಯ ಪ್ರಾರಂಭದಲ್ಲಿ, ಅವರು ಯೆಹೂದ ಮತ್ತು ಯೆರೂಸಲೇಮಿನ ನಿವಾಸಿಗಳಿಗೆ ವಿರೋಧವಾಗಿ ದೂರು ಸಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 4:6
13 ತಿಳಿವುಗಳ ಹೋಲಿಕೆ  

ಅಹಷ್ವೇರೋಷನ ಮಗನೂ ಮೇದ್ಯಯ ವಂಶದವನೂ ಕಸ್ದೀಯ ರಾಜ್ಯದ ದೊರೆತನವನ್ನು ಹೊಂದಿದವನೂ ಆದ ದಾರ್ಯಾವೆಷನ ಆಳಿಕೆಯ ಮೊದಲನೆಯ ವರುಷದಲ್ಲಿ


ಹಿಂದುಸ್ಥಾನ ಮೊದಲುಗೊಂಡು ಕೂಷಿನವರೆಗೂ ಇರುವ ನೂರಿಪ್ಪತ್ತೇಳು ಸಂಸ್ಥಾನಗಳನ್ನು ಆಳುತ್ತಿದ್ದ ಅಹಷ್ವೇರೋಷನ ಕಾಲದಲ್ಲಿ ನಡೆದ ಚರಿತ್ರೆ.


ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು. ಆಗ ಪರಲೋಕದಲ್ಲಿ ಮಹಾ ಶಬ್ದವನ್ನು ಕೇಳಿದೆನು, ಅದು - ಈಗ ಜಯವೂ ಶಕ್ತಿಯೂ ರಾಜ್ಯವೂ ನಮ್ಮ ದೇವರಿಗೆ ಉಂಟಾಯಿತು; ಆತನು ಅಭಿಷೇಕಿಸಿದವನ ಅಧಿಕಾರವು ಈಗ ಸ್ಥಾಪಿತವಾಯಿತು; ಹಗಲಿರುಳು ನಮ್ಮ ಸಹೋದರರ ಮೇಲೆ ನಮ್ಮ ದೇವರ ಮುಂದೆ ದೂರು ಹೇಳಿದ ದೂರುಗಾರನು ದೊಬ್ಬಲ್ಪಟ್ಟಿದ್ದಾನೆ.


ಅವನು ಬಂದ ಮೇಲೆ ಯೆರೂಸಲೇವಿುನಿಂದ ಬಂದಿದ್ದ ಯೆಹೂದ್ಯರು ಅವನ ಸುತ್ತಲು ನಿಂತುಕೊಂಡು ತಾವು ಸ್ಥಾಪಿಸಲಾರದ ಅನೇಕ ದೊಡ್ಡ ದೊಡ್ಡ ತಪ್ಪುಗಳನ್ನು ಹೊರಿಸುತ್ತಿರಲು


ಇದಲ್ಲದೆ ಇವರು ಈಗ ನನ್ನ ಮೇಲೆ ಹೊರಿಸುವ ತಪ್ಪುಗಳನ್ನು ನಿಜವೆಂದು ನಿನಗೆ ತೋರಿಸಲಾರರು.


ಇದಲ್ಲದೆ ಆತನ ಮೇಲೆ ಹೊರಿಸಿದ ಅಪರಾಧವನ್ನು ಬರೆದು ಆತನ ತಲೆಯ ಮೇಲ್ಗಡೆ ಹಚ್ಚಿದರು; ಅದೇನಂದರೆ - ಇವನು ಯೇಸು, ಯೆಹೂದ್ಯರ ಅರಸನು ಎಂಬದೇ.


ಅವರ ಉದ್ದೇಶವನ್ನು ಕೆಡಿಸುವದಕ್ಕೋಸ್ಕರ ಹಣಕೊಟ್ಟು ವಕೀಲರನ್ನು ಇಟ್ಟುಕೊಂಡರು. ಪಾರಸಿಯ ರಾಜನಾದ ಕೋರೆಷನ ಕಾಲ ಮೊದಲುಗೊಂಡು ಪಾರಸಿಯ ರಾಜನಾದ ದಾರ್ಯಾವೆಷನ ಆಳಿಕೆಯವರೆಗೂ ಈ ಪ್ರಕಾರ ನಡೆಯಿತು.


ಏಳನೆಯ ದಿನದಲ್ಲಿ ಅರಸನಾದ ಅಹಷ್ವೇರೋಷನು ದ್ರಾಕ್ಷಾರಸಪಾನಮಾಡಿ ಆನಂದಲಹರಿಯಲ್ಲಿದ್ದಾಗ


ತರುವಾಯ ಅವನ ಜನರು ಬೇರೊಂದು ಬಾವಿಯನ್ನು ತೋಡಿದಾಗ ಆ ದೇಶದವರು ಅದಕ್ಕಾಗಿಯೂ ಜಗಳವಾಡಿದ್ದರಿಂದ ಅವನು ಅದಕ್ಕೆ ಸಿಟ್ನಾ ಎಂದು ಹೆಸರಿಟ್ಟನು.


ಅರಸನಾದ ಅಹಷ್ವೇರೋಷನ ಬಳಿಗೆ ಅವನ ಆಳಿಕೆಯ ಏಳನೆಯ ವರುಷದ ಹತ್ತನೆಯ ತಿಂಗಳಾದ ಪುಷ್ಯ ಮಾಸದಲ್ಲಿ ಆಕೆಯನ್ನು ರಾಜಗೃಹಕ್ಕೆ ಕರತಂದರು. ಅರಸನು ಎಲ್ಲಾ ಸ್ತ್ರೀಯರಲ್ಲಿ ಎಸ್ತೇರಳನ್ನು ಮೆಚ್ಚಿದನು.


ಹಾಮಾನನು ಅರಸನಾದ ಅಹಷ್ವೇರೋಷನಿಗೆ - ನಿನ್ನ ರಾಜ್ಯದ ಎಲ್ಲಾ ಸಂಸ್ಥಾನಗಳಲ್ಲಿ ಒಂದು ಜನಾಂಗವಿರುತ್ತದೆ; ಅದು ಇತರ ಜನಾಂಗಗಳವರ ಮಧ್ಯದಲ್ಲಿ ಹರಡಿದ್ದರೂ ಅವರಿಂದ ಪ್ರತ್ಯೇಕವಾಗಿಯೇ ಇರುತ್ತದೆ. ಆ ಜನಾಂಗದವರ ನಿಯಮಗಳು ಇತರ ಎಲ್ಲಾ ಜನಾಂಗಗಳವರ ನಿಯಮಗಳಿಗೆ ಬೇರೆಯಾಗಿರುತ್ತವೆ. ಅರಸನ ನಿಯಮಗಳನ್ನಂತೂ ಅವರು ಅನುಸರಿಸುವದೇ ಇಲ್ಲ. ಅರಸನು ಅವರನ್ನು ಸುಮ್ಮನೆ ಬಿಡುವದು ಉಚಿತವಲ್ಲ.


ಈಗ ಸತ್ಯಾಂಶವನ್ನು ನಿನಗೆ ತಿಳಿಸುವೆನು. ಇಗೋ, ಪಾರಸಿಯ ದೇಶದಲ್ಲಿ ಇನ್ನು ಮೂವರು ರಾಜರು ಏಳುವರು; ನಾಲ್ಕನೆಯ ರಾಜನು ಎಲ್ಲರಿಗಿಂತಲೂ ಅಧಿಕ ಧನವಂತನಾಗಿರುವನು; ಅವನು ತನ್ನ ಧನದಿಂದ ಪ್ರಬಲನಾಗಿ ಗ್ರೀಕ್ ರಾಜ್ಯಕ್ಕೆ ವಿರುದ್ಧವಾಗಿ ತನ್ನ ಬಲವನ್ನೆಲ್ಲಾ ಎಬ್ಬಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು