ಎಜ್ರ 5:11 - ಕನ್ನಡ ಸತ್ಯವೇದವು J.V. (BSI)11 ಅವರು ನಮಗೆ - ನಾವು ಪರಲೋಕ ಭೂಲೋಕಗಳ ದೇವರ ಸೇವಕರು. ಅನೇಕಾನೇಕ ವರುಷಗಳ ಹಿಂದೆ ಕಟ್ಟಿದ್ದ ಆಲಯವನ್ನು ತಿರಿಗಿ ಕಟ್ಟುತ್ತಿರುತ್ತೇವೆ. ಇಸ್ರಾಯೇಲ್ಯರ ಒಬ್ಬ ಮಹಾರಾಜನು ಅದನ್ನು ಕಟ್ಟಿಸಿ ತೀರಿಸಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅವರು ನಮಗೆ, ‘ನಾವು ಪರಲೋಕ ಮತ್ತು ಭೂಲೋಕಗಳ ದೇವರ ಸೇವಕರು. ಅನೇಕಾನೇಕ ವರ್ಷಗಳ ಹಿಂದೆ ಕಟ್ಟಿದ್ದ ಆಲಯವನ್ನು ಪುನಃ ಕಟ್ಟುತ್ತಿದ್ದೇವೆ. ಇಸ್ರಾಯೇಲರ ಒಬ್ಬ ಮಹಾರಾಜನು ಅದನ್ನು ಕಟ್ಟಿಸಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅವರು ನಮಗೆ, ನಾವು ಪರಲೋಕ ಭೂಲೋಕಗಳ ದೇವರ ದಾಸರು. ಅನೇಕಾನೇಕ ವರ್ಷಗಳ ಹಿಂದೆ ಕಟ್ಟಿದ್ದ ಆಲಯವನ್ನು ತಿರುಗಿ ಕಟ್ಟುತ್ತಿದ್ದೇವೆ. ಇಸ್ರಯೇಲರ ಒಬ್ಬ ಮಹಾರಾಜನು ಇದನ್ನು ಕಟ್ಟಿಮುಗಿಸಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಅದಕ್ಕೆ ಅವರು ಈ ರೀತಿಯಾಗಿ ಉತ್ತರಕೊಟ್ಟರು: “ಭೂಪರಲೋಕಗಳ ದೇವರ ಸೇವಕರಾದ ನಾವು ಬಹಳ ವರ್ಷಗಳ ಹಿಂದೆ ಇಸ್ರೇಲರ ರಾಜನು ಕಟ್ಟಿಸಿ ಮುಗಿಸಿದ ದೇವಾಲಯವನ್ನು ಮತ್ತೆ ಕಟ್ಟುತ್ತಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅವರು ನಮಗೆ ಕೊಟ್ಟ ಉತ್ತರವೇನೆಂದರೆ: “ನಾವು ಪರಲೋಕ ಮತ್ತು ಭೂಲೋಕಗಳ ದೇವರ ಸೇವಕರಾಗಿದ್ದೇವೆ. ಅನೇಕ ವರ್ಷಗಳ ಹಿಂದೆ ಇಸ್ರಾಯೇಲಿನಲ್ಲಿದ್ದ ಒಬ್ಬ ಮಹಾ ಅರಸನು ಕಟ್ಟಿದ್ದ ಆಲಯವನ್ನು ನಾವು ಪುನಃ ಕಟ್ಟುತ್ತಿದ್ದೇವೆ. ಅಧ್ಯಾಯವನ್ನು ನೋಡಿ |