ಎಜ್ರ 5:17 - ಕನ್ನಡ ಸತ್ಯವೇದವು J.V. (BSI)17 ಅರಸನಿಗೆ ಸರಿತೋಚುವದಾದರೆ ಯೆರೂಸಲೇವಿುನ ಈ ದೇವಾಲಯವನ್ನು ತಿರಿಗಿ ಕಟ್ಟುವದಕ್ಕೆ ಅರಸನಾದ ಕೋರೆಷನಿಂದ ಅಪ್ಪಣೆ ದೊರಕಿದ್ದು ಸತ್ಯವೋ ಎಂಬದರ ವಿಷಯವಾಗಿ ಬಾಬೆಲಿನ ರಾಜ ಭಂಡಾರದಲ್ಲಿ ಹುಡುಕಿನೋಡಲಿ. ಮತ್ತು ಈ ಸಂಗತಿಯನ್ನು ಕುರಿತು ರಾಜರ ಚಿತ್ತವೇನೆಂಬದು ನಮಗೆ ತಿಳಿಸೋಣವಾಗಲಿ ಎಂಬದೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 “ಅರಸರಿಗೆ ಸರಿತೋರುವುದಾದರೆ ಯೆರೂಸಲೇಮಿನ ಈ ದೇವಾಲಯವನ್ನು ಪುನಃ ಕಟ್ಟುವುದಕ್ಕೆ ಅರಸನಾದ ಕೋರೆಷನಿಂದ ಅಪ್ಪಣೆ ದೊರಕಿದ್ದು ಸತ್ಯವೋ ಎಂಬುದರ ವಿಷಯವಾಗಿ ಬಾಬಿಲೋನಿನ ರಾಜಭಂಡಾರದಲ್ಲಿ ಹುಡುಕಿ ನೋಡಲಿ ಮತ್ತು ಈ ಸಂಗತಿಯನ್ನು ಕುರಿತು ರಾಜರ ಚಿತ್ತವೇನೆಂಬುದು ನಮಗೆ ತಿಳಿಸೋಣವಾಗಲಿ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 “ಅರಸರಿಗೆ ಸರಿತೋರುವುದಾದರೆ, ಜೆರುಸಲೇಮಿನ ಈ ದೇವಾಲಯವನ್ನು ಮರಳಿ ಕಟ್ಟುವುದಕ್ಕೆ ಅರಸ ಸೈರಸನ ಅಪ್ಪಣೆ ದೊರಕಿದ್ದು ಸತ್ಯವೋ ಎಂಬುದರ ಬಗ್ಗೆ ಬಾಬಿಲೋನಿನ ರಾಜಭಂಡಾರದಲ್ಲಿ ಹುಡುಕಿನೋಡಬೇಕು. ಈ ಸಂಗತಿಯನ್ನು ಕುರಿತು ರಾಜರ ಚಿತ್ತವೇನೆಂಬುದು ನಮಗೆ ತಿಳಿಸೋಣವಾಗಲಿ,” ಎಂಬುದಾಗಿ ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ರಾಜರಾದ ತಾವು ಅಪೇಕ್ಷಿಸಿದರೆ ರಾಜವೃತ್ತಾಂತವನ್ನು ನೀವೇ ಪರಿಶೋಧಿಸಿ. ಜೆರುಸಲೇಮಿನಲ್ಲಿ ಮತ್ತೆ ದೇವಾಲಯವನ್ನು ಕಟ್ಟಲು ರಾಜ ಸೈರಸನು ಆಜ್ಞಾಪಿಸಿದ್ದು ನಿಜವೇ ಎಂಬುದನ್ನು ನೀವೇ ನೋಡಿರಿ. ಆಮೇಲೆ, ಅರಸನೇ, ಇದರ ವಿಚಾರವಾಗಿ ಏನು ತೀರ್ಮಾನ ಮಾಡಿದ್ದೀರೆಂದು ನಮಗೆ ಪತ್ರದ ಮೂಲಕ ತಿಳಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 “ಆದ್ದರಿಂದ ಅರಸನಿಗೆ ಸರಿ ತೋರುವುದಾದರೆ, ಯೆರೂಸಲೇಮಿನಲ್ಲಿರುವ ದೇವರ ಆಲಯವನ್ನು ಪುನಃ ಕಟ್ಟಲು ಅರಸನಾದ ಕೋರೆಷನು ಅಪ್ಪಣೆ ಮಾಡಿದ್ದು ಉಂಟೋ, ಇಲ್ಲವೋ ಎಂಬುದನ್ನು ಬಾಬಿಲೋನಿನಲ್ಲಿರುವ ಅರಸನ ಬೊಕ್ಕಸದ ಮನೆಯಲ್ಲಿ ವಿಚಾರಿಸಲಿ. ತರುವಾಯ ಅರಸನು ಈ ಕಾರ್ಯಕ್ಕೋಸ್ಕರ ತನ್ನ ಚಿತ್ತವೇನೆಂದು ನಮಗೆ ತಿಳಿಸೋಣವಾಗಲಿ,” ಎಂಬುದಾಗಿ ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿ |