Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 6:10 - ಕನ್ನಡ ಸತ್ಯವೇದವು J.V. (BSI)

10 ಅವರಾದರೋ ಪರಲೋಕದೇವರಿಗೆ ಸುಗಂಧಹೋಮಗಳನ್ನು ಸಮರ್ಪಿಸಿ ರಾಜನ ಮತ್ತು ರಾಜಪುತ್ರರ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥನೆ ಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವರಾದರೋ ಪರಲೋಕದೇವರಿಗೆ ಸುಗಂಧಹೋಮಗಳನ್ನು ಸಮರ್ಪಿಸಿ, ರಾಜನ ಮತ್ತು ರಾಜಪುತ್ರರ ದೀರ್ಘಾಯಷ್ಯಕ್ಕಾಗಿ ಪ್ರಾರ್ಥನೆಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅವರಾದರೋ ಪರಲೋಕ ದೇವರಿಗೆ ಸುಗಂಧಹೋಮಗಳನ್ನು ಸಮರ್ಪಿಸಿ, ರಾಜನ ಮತ್ತು ರಾಜಪುತ್ರರ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥನೆ ಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅವುಗಳನ್ನು ಜೆರುಸಲೇಮಿನ ಯಾಜಕರಿಗೆ ಕೊಡಿರಿ. ಅವುಗಳನ್ನು ಯಜ್ಞವಾಗಿ ಸಮರ್ಪಿಸಿದಾಗ ಪರಲೋಕದ ದೇವರು ಅದನ್ನು ಮೆಚ್ಚುವನು. ಯಾಜಕರು ನನಗಾಗಿಯೂ ನನ್ನ ಮಕ್ಕಳಿಗಾಗಿಯು ಪ್ರಾರ್ಥಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಇದಲ್ಲದೆ ಅವರು ಪರಲೋಕದ ದೇವರಿಗೆ ಸುವಾಸನೆಯುಳ್ಳ ಬಲಿಗಳನ್ನು ಅರ್ಪಿಸುವ ಹಾಗೆಯೂ, ಅರಸನ ಪ್ರಾಣಕ್ಕೋಸ್ಕರವೂ, ಅವನ ಮಕ್ಕಳ ಪ್ರಾಣಕ್ಕೋಸ್ಕರವೂ ಪ್ರಾರ್ಥನೆ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 6:10
11 ತಿಳಿವುಗಳ ಹೋಲಿಕೆ  

ನಾನು ಯಾವ ಪಟ್ಟಣಕ್ಕೆ ನಿಮ್ಮನ್ನು ಸಾಗಿಸಿದೆನೋ ಅದರ ಕ್ಷೇಮವನ್ನು ಹಾರೈಸಿ ಅದಕ್ಕಾಗಿ ಯೆಹೋವನನ್ನು ಪ್ರಾರ್ಥಿಸಿರಿ; ಅದರ ಕ್ಷೇಮವೇ ನಿಮ್ಮ ಕ್ಷೇಮ.


ಅರಸನ ಮತ್ತು ಅವನ ಸಂತಾನದವರ ರಾಜ್ಯದ ಮೇಲೆ ದೇವಕೋಪವುಂಟಾಗದ ಹಾಗೆ ನೀವು ಪರಲೋಕ ದೇವರ ಆಜ್ಞಾನುಸಾರ ಬೇಕಾದದ್ದನ್ನೆಲ್ಲಾ ಯಾವ ಕೊರತೆಯೂ ಇಲ್ಲದೆ ಒದಗಿಸಿಕೊಡಬೇಕು.


ಕ್ರಿಸ್ತನು ನಿಮ್ಮನ್ನು ಪ್ರೀತಿಸಿ ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.


ಅದರ ಕರುಳುಗಳನ್ನೂ ಕಾಲುಗಳನ್ನೂ ನೀರಿನಲ್ಲಿ ತೊಳೆಸಿದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಸುವಾಸನೆಯನ್ನುಂಟು ಮಾಡುವ ಸರ್ವಾಂಗಹೋಮವಾಗಿದೆ.


ಅದರ ಕರುಳುಗಳನ್ನೂ ಕಾಲುಗಳನ್ನೂ ನೀರಿನಲ್ಲಿ ತೊಳೆದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಸುವಾಸನೆಯನ್ನುಂಟುಮಾಡುವ ಸರ್ವಾಂಗಹೋಮವಾಗಿದೆ.


ಅದರ ಸುವಾಸನೆಯು ಯೆಹೋವನಿಗೆ ಗಮಗವಿುಸಲು ಆತನು ಹೃದಯದೊಳಗೆ - ಮನುಷ್ಯರ ಮನಸ್ಸಂಕಲ್ಪವು ಚಿಕ್ಕಂದಿನಿಂದಲೇ ಕೆಟ್ಟದ್ದು; ಆದರೂ ನಾನು ಇನ್ನು ಮೇಲೆ ಅವರ ನಿವಿುತ್ತವಾಗಿ ಭೂವಿುಯನ್ನು ಶಪಿಸುವದಿಲ್ಲ; ನಾನು ಎಲ್ಲಾ ಜೀವಿಗಳನ್ನೂ ಈಗ ಸಂಹರಿಸಿದಂತೆ ಇನ್ನು ಮೇಲೆ ಸಂಹರಿಸುವದಿಲ್ಲ.


ಪರಲೋಕ ದೇವರ ಸರ್ವಾಂಗಹೋಮಗಳಿಗೋಸ್ಕರ ಬೇಕಾದ ಹೋರಿ ಟಗರು ಕುರಿಮರಿಗಳನ್ನೂ ಗೋದಿ ಉಪ್ಪೂ ದ್ರಾಕ್ಷಾರಸ ಎಣ್ಣೆ ಇವುಗಳನ್ನೂ ಯೆರೂಸಲೇವಿುನ ಯಾಜಕರು ಹೇಳುವ ಪ್ರಕಾರ ಪ್ರತಿದಿನವೂ ತಪ್ಪದೆ ಒದಗಿಸಿ ಕೊಡಬೇಕೆಂಬದಾಗಿಯೂ ಆಜ್ಞಾಪಿಸುತ್ತೇನೆ.


ಆಗ ರಾಜನಾದ ನೆಬೂಕದ್ನೆಚ್ಚರನು ಅಡ್ಡಬಿದ್ದು ದಾನಿಯೇಲನನ್ನು ಪೂಜಿಸಿ ಅವನಿಗೆ ನೈವೇದ್ಯ ಮಾಡಿ ಧೂಪಹಾಕಬೇಕೆಂದು ಆಜ್ಞಾಪಿಸಿ


ನೀವು ಕೇಳಿಕೊಂಡಂತೆ ನಿಮ್ಮ ಕುರಿದನಗಳನ್ನೂ ತೆಗೆದುಕೊಂಡು ಹೋಗಬಹುದು; ಅದಲ್ಲದೆ ನನ್ನ ಹಿತಕ್ಕಾಗಿಯೂ ಪ್ರಾರ್ಥಿಸಿರಿ ಅಂದನು.


ಪಾರಸಿಯ ರಾಜನಾದ ಕೋರೆಷನೆಂಬ ನನ್ನ ಮಾತನ್ನು ಕೇಳಿರಿ - ಪರಲೋಕದೇವರಾದ ಯೆಹೋವನು ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನೂ ಕೊಟ್ಟು ತನಗೋಸ್ಕರ ಯೆಹೂದ ದೇಶದ ಯೆರೂಸಲೇವಿುನಲ್ಲಿ ಆಲಯವನ್ನು ಕಟ್ಟಿಸಬೇಕು ಎಂದು ಆಜ್ಞಾಪಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು