Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 6:11 - ಕನ್ನಡ ಸತ್ಯವೇದವು J.V. (BSI)

11 ಈ ನನ್ನ ಆಜ್ಞೆಯನ್ನು ಯಾವನಾದರೂ ಬದಲಾಯಿಸುವದಾದರೆ ಅವನ ಮನೆಯಿಂದಲೇ ಒಂದು ತೊಲೆಯನ್ನು ತೆಗೆದು ಅದನ್ನು ಶೂಲವನ್ನಾಗಿ ಮಾಡಿ ಅದಕ್ಕೆ ಅವನನ್ನು ಎತ್ತಬೇಕೆಂದೂ ಆ ಮನೆಯನ್ನು ತಿಪ್ಪೆಯನ್ನಾಗಿ ಮಾಡಿಬಿಡಬೇಕೆಂದೂ ತೀರ್ಮಾನಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಈ ನನ್ನ ಆಜ್ಞೆಯನ್ನು ಯಾವನಾದರೂ ಬದಲಾಯಿಸುವುದಾದರೆ ಅವನ ಮನೆಯಿಂದಲೇ ಒಂದು ತೊಲೆಯನ್ನು ತೆಗೆದು, ಅದನ್ನು ಶೂಲವನ್ನಾಗಿ ಮಾಡಿ, ಅದರ ಮೇಲೆ ಅವನನ್ನು ಏರಿಸಬೇಕು ಮತ್ತು ಅ ಮನೆಯನ್ನು ತಿಪ್ಪೆಯನ್ನಾಗಿ ಮಾಡಿಬಿಡಬೇಕೆಂದು ಆಜ್ಞಾಪಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಈ ನನ್ನ ಆಜ್ಞೆಯನ್ನು ಯಾವನಾದರೂ ಬದಲಾಯಿಸುವುದಾದರೆ, ಅವನ ಮನೆಯಿಂದಲೇ ಒಂದು ತೊಲೆಯನ್ನು ತೆಗೆದು ಅದನ್ನು ಶೂಲವನ್ನಾಗಿ ಮಾಡಿ, ಅದಕ್ಕೆ ಅವನನ್ನು ಏರಿಸಬೇಕು; ಹಾಗು ಆ ಮನೆಯನ್ನು ತಿಪ್ಪೆಯನ್ನಾಗಿ ಮಾಡಿಬಿಡಬೇಕು. ಇದು ನನ್ನ ತೀರ್ಮಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಮಾತ್ರವಲ್ಲದೆ, ನನ್ನ ಆಜ್ಞೆ ಏನೆಂದರೆ: ಯಾವನಾದರೂ ನನ್ನ ಆಜ್ಞೆಯನ್ನು ಬದಲಾಯಿಸಿದರೆ ಅವನ ಮನೆಯಿಂದಲೇ ಒಂದು ತೊಲೆಯನ್ನು ಎಳೆದು ಅದನ್ನು ಶೂಲವನ್ನಾಗಿ ಮಾಡಿ, ಅವನನ್ನು ಅದಕ್ಕೆ ನೇತು ಹಾಕಬೇಕು; ಅವನ ಮನೆಯನ್ನು ಕೆಡವಿ ಅದನ್ನು ಮಣ್ಣುದಿಬ್ಬವನ್ನಾಗಿ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಾನು ಕೊಡುವ ಅಪ್ಪಣೆ ಏನೆಂದರೆ, ಯಾವನಾದರೂ ಈ ನನ್ನ ಆಜ್ಞೆಯನ್ನು ಬದಲು ಮಾಡಿದರೆ, ಅವನ ಮನೆಯಿಂದ ಒಂದು ತೊಲೆಯನ್ನು ತೆಗೆದು ಅದರಿಂದಲೇ ಅವನನ್ನು ಗಲ್ಲಿಗೆ ಏರಿಸಬೇಕು. ಅವನ ಮನೆಯನ್ನು ಇದರ ನಿಮಿತ್ತ ತಿಪ್ಪೆಯನ್ನಾಗಿ ಮಾಡಿಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 6:11
7 ತಿಳಿವುಗಳ ಹೋಲಿಕೆ  

ಸಕಲ ಜನಾಂಗಕುಲಭಾಷೆಗಳವರಲ್ಲಿ ಯಾರಾದರೂ ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರ ದೇವರ ವಿಷಯದಲ್ಲಿ ಅಲ್ಲದ ಮಾತನ್ನಾಡಿದರೆ ಅವರನ್ನು ಚೂರುಚೂರಾಗಿ ಕತ್ತರಿಸಿ ಅವರ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಬೇಕೆಂಬ ಆಜ್ಞೆಯನ್ನು ವಿಧಿಸುತ್ತೇನೆ; ಹೀಗೆ ಉದ್ಧರಿಸಲು ಸಮರ್ಥನಾದ ಇನ್ನಾವ ದೇವರೂ ಇಲ್ಲವಲ್ಲಾ ಎಂದು ಹೇಳಿದನು.


ಆಗ ರಾಜನು ಪಂಡಿತರಿಗೆ ಪ್ರತ್ಯುತ್ತರವಾಗಿ - ನನ್ನ ಮಾತು ಖಂಡಿತ; ನೀವೇ ಆ ಕನಸನ್ನೂ ಅದರ ಅಭಿಪ್ರಾಯವನ್ನೂ ನನಗೆ ತಿಳಿಸದಿದ್ದರೆ ನಿಮ್ಮನ್ನು ಚೂರುಚೂರಾಗಿ ಕಡಿಸುವೆನು, ನಿಮ್ಮ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಿಸಿಬಿಡುವೆನು;


ನಿನ್ನ ದೇವರ ಧರ್ಮವನ್ನೂ ರಾಜಾಜ್ಞೆಯನ್ನೂ ಕೈಕೊಳ್ಳದವರಿಗೆಲ್ಲಾ ಮರಣದಂಡನೆ, ಗಡಿಪಾರುಮಾಡುವದು, ದಂಡತೆರಿಸುವದು, ಬೇಡಿಹಾಕುವದು ಈ ವಿಧವಾದ ಶಿಕ್ಷೆಯನ್ನು ತಪ್ಪದೆ ವಿಧಿಸಬೇಕು ಎಂಬದೇ.


ಹಾಮಾನನನ್ನು ಮೊರ್ದೆಕೈಗೋಸ್ಕರ ಸಿದ್ಧಮಾಡಿದ ಗಲ್ಲಿಗೆ ಹಾಕಿದರು. ಅರಸನ ಕೋಪವೂ ಶಾಂತವಾಯಿತು.


ಅದಕ್ಕೆ ಎಸ್ತೇರಳು - ಅರಸನ ಚಿತ್ತಕ್ಕೆ ಬಂದರೆ ನಾನು ಈಹೊತ್ತು ತಮಗೋಸ್ಕರ ಸಿದ್ಧಮಾಡಿಸಿರುವ ಔತಣಕ್ಕೆ ಹಾಮಾನನೊಡನೆ ಬರೋಣವಾಗಲಿ ಎಂದು ಅರಿಕೆಮಾಡಿದಳು.


ಇದಲ್ಲದೆ ಬಾಳನ ವಿಗ್ರಹಸ್ತಂಭವನ್ನೂ ದೇವಸ್ಥಾನವನ್ನೂ ಕೆಡವಿ ಹಾಳುಮಾಡಿದರು. ಅಂದಿನಿಂದ ಇಂದಿನವರೆಗೂ ಆ ಸ್ಥಳವನ್ನು ಶೌಚಕ್ಕಾಗಿ ಉಪಯೋಗಿಸುತ್ತಾರೆ.


ಆಕೆಯ ಶವವು ಆ ಹೊಲಕ್ಕೆ ಗೊಬ್ಬರವಾಗುವದು; ಇದು ಈಜೆಬೆಲಳ ಶವವೆಂದು ಯಾರಿಗೂ ಗುರುತು ಸಿಕ್ಕದ ಹಾಗಾಗುವದು ಎಂಬದಾಗಿ ಯೆಹೋವನು ತಿಷ್ಬೀಯನೂ ತನ್ನ ಸೇವಕನೂ ಆದ ಎಲೀಯನ ಮುಖಾಂತರವಾಗಿ ಹೇಳಿಸಿದ ಮಾತು ಈಗ ನೆರವೇರಿತು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು