Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 6:14 - ಕನ್ನಡ ಸತ್ಯವೇದವು J.V. (BSI)

14 ಯೆಹೂದ್ಯರ ಹಿರಿಯರು ಪ್ರವಾದಿಯಾದ ಹಗ್ಗೈ, ಇದ್ದೋವಿನ ಮಗನಾದ ಜೆಕರೀಯ ಇವರ ಪ್ರಬೋಧನೆಯಿಂದ ಪ್ರೇರಿತರಾಗಿ ಕಟ್ಟುವ ಕೆಲಸವನ್ನು ಸಾಗಿಸುತ್ತಾ ಬಂದು ಇಸ್ರಾಯೇಲ್ ದೇವರ ಆಜ್ಞಾನುಸಾರವಾಗಿಯೂ ಪಾರಸಿಯ ರಾಜರಾದ ಕೋರೆಷ್, ದಾರ್ಯಾವೆಷ್, ಅರ್ತಷಸ್ತ ಇವರ ಅಪ್ಪಣೆಯ ಆಧಾರದಿಂದಲೂ ಕಟ್ಟಡವನ್ನು ಮುಗಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆಹೂದ್ಯರ ಹಿರಿಯರು, ಪ್ರವಾದಿಯಾದ ಹಗ್ಗೈ, ಇದ್ದೋವಿನ ಮಗನಾದ ಜೆಕರೀಯ ಇವರ ಪ್ರವಾದನೆಯಿಂದ ಪ್ರೇರಿತರಾಗಿ ಕಟ್ಟುವ ಕೆಲಸವನ್ನು ಮುಂದುವರಿಸಿದರು. ಇಸ್ರಾಯೇಲ್ ದೇವರ ಆಜ್ಞಾನುಸಾರವಾಗಿಯೂ ಪರ್ಷಿಯ ರಾಜರಾದ ಕೋರೆಷ್, ದಾರ್ಯಾವೆಷ್, ಅರ್ತಷಸ್ತ ಇವರ ಅಪ್ಪಣೆಯ ಆಧಾರದಿಂದಲೂ ಕಟ್ಟಡವನ್ನು ಮುಗಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಯೆಹೂದ್ಯರ ಹಿರಿಯರು ಪ್ರವಾದಿ ಹಗ್ಗೈ ಹಾಗು ಇದ್ದೋವಿನ ಮಗ ಜೆಕರೀಯ ಅವರ ಪ್ರಬೋಧನೆಯಿಂದ ಪ್ರೇರಿತರಾಗಿ, ಕಟ್ಟುವ ಕೆಲಸವನ್ನು ಮುಂದುವರಿಸಿದರು. ಇಸ್ರಯೇಲ್ ದೇವರ ಆಜ್ಞಾನುಸಾರ ಪರ್ಷಿಯದ ರಾಜ ಸೈರಸನ, ದಾರ್ಯಾವೆಷ್ ಹಾಗು ಅರ್ತಷಸ್ತ ಅವರ ಅಪ್ಪಣೆಯ ಆಧಾರದಿಂದ ಕಟ್ಟಡವನ್ನು ಮುಗಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಹೀಗೆ ಯೆಹೂದ್ಯರ ಹಿರಿಯರು ದೇವಾಲಯದ ಕಟ್ಟಡ ಕೆಲಸವನ್ನು ಮುಂದುವರಿಸಿದರು. ಪ್ರವಾದಿಯಾದ ಹಗ್ಗೈನಂತೆ ಮತ್ತು ಇದ್ದೋವಿನ ಮಗನಾದ ಜೆಕರೀಯನಂತೆ ಅವರನ್ನು ಪ್ರೋತ್ಸಾಹಿಸುತ್ತಾ ಇದ್ದರು. ಆದ್ದರಿಂದ ಅವರು ಯಶಸ್ವಿಯಾದರು. ದೇವಾಲಯದ ಕೆಲಸ ಮುಗಿಯಿತು. ಇಸ್ರೇಲಿನ ದೇವರ ಆಜ್ಞೆಗೆ ವಿಧೇಯರಾಗಿಯೂ, ಸೈರಸ್, ದಾರ್ಯಾವೆಷ ಮತ್ತು ಅರ್ತಷಸ್ತ ಎಂಬ ಪರ್ಶಿಯ ಅರಸರ ಆಜ್ಞೆಗೆ ವಿಧೇಯರಾಗಿಯೂ ಕಟ್ಟಡದ ಕೆಲಸವನ್ನು ಸಂಪೂರ್ಣ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಹಾಗೆಯೇ ಯೆಹೂದ್ಯರ ಹಿರಿಯರು ಕಟ್ಟಿಸಿ, ಪ್ರವಾದಿಗಳಾದ ಹಗ್ಗಾಯನೂ, ಇದ್ದೋನನ ಮಗನಾದ ಜೆಕರ್ಯನೂ ಪ್ರವಾದಿಸಿದ್ದರಿಂದ ಅಭಿವೃದ್ಧಿಯನ್ನು ಹೊಂದಿದರು. ಅವರು ಇಸ್ರಾಯೇಲ್ ದೇವರ ಅಪ್ಪಣೆಯ ಪ್ರಕಾರವೂ, ಕೋರೆಷ್, ದಾರ್ಯಾವೆಷ್ ಹಾಗೂ ಅರ್ತಷಸ್ತ ಎಂಬ ಪರ್ಷಿಯದ ರಾಜರ ಅಪ್ಪಣೆಯ ಪ್ರಕಾರವೂ ಕಟ್ಟಿ ತೀರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 6:14
25 ತಿಳಿವುಗಳ ಹೋಲಿಕೆ  

ಇದಾದ ಮೇಲೆ ಪಾರಸಿಯ ರಾಜನಾದ ಅರ್ತಷಸ್ತನ ಆಳಿಕೆಯಲ್ಲಿ ಎಜ್ರನು ಬಾಬೆಲಿನಿಂದ ಬಂದನು. ಇವನು ಸೆರಾಯನ ಮಗನು; ಸೆರಾಯನು ಅಜರ್ಯನ ಮಗನು;


ಆದರೆ ಬಾಬೆಲಿನ ಅರಸನಾದ ಕೋರೆಷನು ತನ್ನ ಆಳಿಕೆಯ ಮೊದಲನೆಯ ವರುಷದಲ್ಲಿ ಈ ದೇವಾಲಯವನ್ನು ತಿರಿಗಿ ಕಟ್ಟುವದಕ್ಕೆ ಅಪ್ಪಣೆ ಕೊಟ್ಟದ್ದಲ್ಲದೆ


ಅಂದಿನಿಂದ ಪಾರಸಿಯ ರಾಜನಾದ ದಾರ್ಯಾವೆಷನ ಆಳಿಕೆಯ ಎರಡನೆಯ ವರುಷದವರೆಗೂ ಯೆರೂಸಲೇವಿುನ ದೇವಾಲಯವನ್ನು ಕಟ್ಟುವ ಕೆಲಸವು ನಿಂತು ಹೋಯಿತು.


ಜೆರುಬ್ಬಾಬೆಲನ ಕೈಗಳು ಈ ಆಲಯದ ಅಸ್ತಿವಾರವನ್ನು ಹಾಕಿವೆ, ಆ ಕೈಗಳೇ ಇದನ್ನು ಪೂರೈಸುವವು; ಆಗ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದವನು ಸೇನಾಧೀಶ್ವರ ಯೆಹೋವನೇ ಎಂದು ನಿನಗೆ ಗೊತ್ತಾಗುವದು.


ಮಲೆನಾಡಿಗೆ ಹೋಗಿ ಮರವನ್ನು ತಂದು ನನ್ನ ಆಲಯವನ್ನು ಕಟ್ಟಿರಿ; ನಾನು ಅದಕ್ಕೆ ಮೆಚ್ಚಿ ನನ್ನ ಪ್ರಭಾವವನ್ನು ಅಲ್ಲಿ ಪ್ರಕಾಶಗೊಳಿಸುವೆನು; ಇದು ಯೆಹೋವನ ನುಡಿ.


ಮತ್ತು ಕೋರೆಷನ ವಿಷಯವಾಗಿ - ಅವನು ನನ್ನ ಮಂದೆ ಕಾಯುವವನು, ಯೆರೂಸಲೇಮು ಕಟ್ಟಲ್ಪಡಲಿ, ದೇವಸ್ಥಾನದ ಅಸ್ತಿವಾರವು ಹಾಕಲ್ಪಡಲಿ ಎಂದು ಹೇಳಿ ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸತಕ್ಕವನು ಎಂಬದಾಗಿ ಮಾತಾಡುವವನಾಗಿದ್ದೇನೆ.


ಆಗ ಜೆರುಬ್ಬಾಬೆಲ್, ಯೇಷೂವ ಇವರೂ ಬೇರೆ ಇಸ್ರಾಯೇಲ್ ಗೋತ್ರಪ್ರಧಾನರೂ ಅವರಿಗೆ - ನೀವು ನಮ್ಮ ದೇವರ ಆಲಯವನ್ನು ಕಟ್ಟುವದರಲ್ಲಿ ನಮ್ಮೊಡನೆ ಸೇರಲೇ ಕೂಡದು; ಪಾರಸಿಯ ರಾಜನಾದ ಕೋರೆಷನಿಂದ ನಮಗಾದ ಅಪ್ಪಣೆಯ ಮೇರೆಗೆ ನಾವೇ ಇಸ್ರಾಯೇಲ್‍ದೇವರಾದ ಯೆಹೋವನ ಆಲಯವನ್ನು ಕಟ್ಟುತ್ತೇವೆ ಎಂದು ಉತ್ತರ ಕೊಟ್ಟರು.


ಅವರು ಯೆರೂಸಲೇವಿುನ ದೇವಾಲಯಕ್ಕೆ ಮುಟ್ಟಿದ ಎರಡನೆಯ ವರುಷದ ಎರಡನೆಯ ತಿಂಗಳಲ್ಲಿ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್, ಯೋಚಾದಾಕನ ಮಗನಾದ ಯೇಷೂವ ಇವರೂ ಇವರ ಸಹೋದರರಾದ ಇತರ ಯಾಜಕರೂ ಲೇವಿಯರೂ ಸೆರೆಯಿಂದ ಯೆರೂಸಲೇವಿುಗೆ ತಿರಿಗಿ ಬಂದ ಬೇರೆ ಎಲ್ಲರೂ ದೇವಾಲಯವನ್ನು ಕಟ್ಟುವದಕ್ಕೆ ಪ್ರಾರಂಭಿಸಿ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚು ವಯಸ್ಸುಳ್ಳ ಲೇವಿಯರನ್ನು ಯೆಹೋವನ ಆಲಯವನ್ನು ಕಟ್ಟುವವರ ಮೇಲ್ವಿಚಾರಣೆಗೆ ನೇವಿುಸಿದರು.


ಆಗ ಪ್ರವಾದಿಗಳಾದ ಹಗ್ಗಾಯನೂ ಇದ್ದೋವಿನ ಮಗನಾದ ಜೆಕರ್ಯನೂ ಇಸ್ರಾಯೇಲ್‍ದೇವರಿಂದ ಪ್ರೇರಿತರಾಗಿ ಆತನ ಹೆಸರಿನಲ್ಲಿ ಯೆಹೂದದ ಮತ್ತು ಯೆರೂಸಲೇವಿುನ ಯೆಹೂದ್ಯರನ್ನು ಪ್ರಬೋಧಿಸಲು


ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್, ಯೋಚಾದಾಕನ ಮಗನಾದ ಯೇಷೂವ ಇವರು ಯೆರೂಸಲೇವಿುನ ದೇವಾಲಯವನ್ನು ಕಟ್ಟಿಸುವದಕ್ಕೆ ಪ್ರಾರಂಭಿಸಿದರು; ದೇವಪ್ರವಾದಿಗಳು ಅವರೊಡನಿದ್ದು ಅವರಿಗೆ ಸಹಾಯಮಾಡುತ್ತಿದ್ದರು.


ಅರಸನಾದ ದಾರ್ಯಾವೆಷನ ಆಳಿಕೆಯ ಎರಡನೆಯ ವರುಷದ ಆರನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ಶೆಯಲ್ತೀಯೇಲನಿಗೆ ಹುಟ್ಟಿದ ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲನಿಗೂ ಯೆಹೋಚಾದಾಕನಿಗೆ ಜನಿಸಿದ ಮಹಾಯಾಜಕನಾದ ಯೆಹೋಶುವನಿಗೂ ಪ್ರವಾದಿಯಾದ ಹಗ್ಗಾಯನ ಮೂಲಕ ಹೇಳಿಕಳುಹಿಸಿದನು -


ದಾರ್ಯಾವೆಷನ ಆಳಿಕೆಯ ಎರಡನೆಯ ವರುಷದ ಎಂಟನೆಯ ತಿಂಗಳಲ್ಲಿ ಯೆಹೋವನು ಇದ್ದೋವಿನ ಮೊಮ್ಮಗನೂ ಬೆರಕ್ಯನ ಮಗನೂ ಆದ ಜೆಕರ್ಯನೆಂಬ ಪ್ರವಾದಿಗೆ ಈ ವಾಕ್ಯವನ್ನು ದಯಪಾಲಿಸಿದನು -


ಹೀಗಿರಲು ಯೆಹೋವನು ಇಂತೆನ್ನುತ್ತಾನೆ - ನಾನು ಕನಿಕರವುಳ್ಳವನಾಗಿ ಯೆರೂಸಲೇವಿುಗೆ ಹಿಂದಿರುಗಿದ್ದೇನೆ; ನನ್ನ ಆಲಯವು ಅಲ್ಲಿ ಕಟ್ಟಲ್ಪಡುವದು; ಯೆರೂಸಲೇವಿುನಲ್ಲಿ ನೂಲು ಎಳೆಯಲ್ಪಡುವದು; ಇದು ಸೇನಾಧೀಶ್ವರ ಯೆಹೋವನ ನುಡಿ.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ದೇವಾಲಯವನ್ನು ಕಟ್ಟುವ ಉದ್ದೇಶದಿಂದ ಸೇನಾಧೀಶ್ವರ ಯೆಹೋವನ ಆ ಮಂದಿರದ ಅಸ್ತಿವಾರವನ್ನು ಹಾಕಿದ ಕಾಲದಲ್ಲಿಯೂ ಇದ್ದ ಪ್ರವಾದಿಗಳ ಬಾಯಿಂದ ಈ ಮಾತುಗಳನ್ನು ಈಗ ಕೇಳುವವರೇ, ನಿಮ್ಮ ಕೈಗಳು ಬಲಗೊಳ್ಳಲಿ!


ಅರಸನಾದ ಕೋರೆಷನ ಮೊದಲನೆಯ ವರುಷದಲ್ಲಿ ಅರಸನಾದ ಕೋರೆಷನು ಯೆರೂಸಲೇವಿುನ ದೇವಾಲಯದ ವಿಷಯ ಕೊಟ್ಟ ಅಪ್ಪಣೆ - ಬಲವಾದ ಅಸ್ತಿವಾರವನ್ನು ಹಾಕಿ ಯಜ್ಞಸಮರ್ಪಣೆಗಾಗಿ ಆಲಯವನ್ನು ತಿರಿಗಿ ಕಟ್ಟಬೇಕು. ಅದರ ಎತ್ತರ ಅರುವತ್ತು ಮೊಳವೂ ಅಗಲ ಅರುವತ್ತು ಮೊಳವೂ ಇರಬೇಕು.


ಆ ದೇವಾಲಯವನ್ನು ಕಟ್ಟುವದಕ್ಕಾಗಿ ನೀವು ಯೆಹೂದ್ಯರ ಹಿರಿಯರಿಗೆ ರಾಜರ ಸೊತ್ತಿನಿಂದ ಅಂದರೆ ಹೊಳೆಯಾಚೆಯ ಪ್ರಾಂತಗಳ ಕಪ್ಪದಿಂದ ತಡಮಾಡದೆ ಎಲ್ಲಾ ವೆಚ್ಚವನ್ನು ಕೊಡಬೇಕೆಂಬದಾಗಿಯೂ


ನಾವು ದಾಸರಾದರೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮನ್ನು ಕೈಬಿಡಲಿಲ್ಲ; ಹಾಳುಬಿದ್ದ ನಮ್ಮ ದೇವರ ಆಲಯವನ್ನು ತಿರಿಗಿ ಕಟ್ಟಿ ಭದ್ರಪಡಿಸುವದಕ್ಕೋಸ್ಕರ ನಮಗೆ ಉಜ್ಜೀವನ ಪ್ರಾಪ್ತವಾಗುವಂತೆಯೂ ಯೆಹೂದದಲ್ಲಿಯೂ ಯೆರೂಸಲೇವಿುನಲ್ಲಿಯೂ ನಮಗೆ ಅಭಯಾಶ್ರಯ ಸಿಕ್ಕುವಂತೆಯೂ ಪಾರಸಿಯ ರಾಜರ ಮುಂದೆ ನಮಗೆ ಕೃಪೆಯನ್ನು ಅನುಗ್ರಹಿಸಿದ್ದಾನೆ.


ಗೋಡೆಯು ಭಾದ್ರಪದ ಮಾಸದ ಇಪ್ಪತ್ತೈದನೆಯ ದಿನದಲ್ಲಿ ತೀರಿತು. ಅದನ್ನು ಕಟ್ಟುವದಕ್ಕೆ ಒಟ್ಟು ಐವತ್ತೆರಡು ದಿನಗಳು ಹಿಡಿದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು