Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 6:17 - ಕನ್ನಡ ಸತ್ಯವೇದವು J.V. (BSI)

17 ಅವರು ಆ ದೇವಾಲಯದ ಪ್ರತಿಷ್ಠೆಗೋಸ್ಕರ ನೂರು ಹೋರಿ, ಇನ್ನೂರು ಟಗರು, ನಾನೂರು ಕುರಿಮರಿ ಇವುಗಳನ್ನೂ ಇಸ್ರಾಯೇಲ್ಯರ ದೋಷಪರಿಹಾರಾರ್ಥವಾಗಿ ಅವರ ಕುಲಗಳ ಸಂಖ್ಯಾನುಸಾರ ಹನ್ನೆರಡು ಹೋತಗಳನ್ನೂ ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವರು ಆ ದೇವಾಲಯದ ಪ್ರತಿಷ್ಠೆಗೋಸ್ಕರ ನೂರು ಹೋರಿ, ಇನ್ನೂರು ಟಗರು, ನಾನೂರು ಕುರಿಮರಿ ಇವುಗಳನ್ನೂ, ಇಸ್ರಾಯೇಲರ ದೋಷಪರಿಹಾರಾರ್ಥವಾಗಿ ಅವರ ಕುಲಗಳ ಸಂಖ್ಯಾನುಸಾರ ಹನ್ನೆರಡು ಹೋತಗಳನ್ನೂ ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅವರು ಆ ದೇವಾಲಯದ ಪ್ರತಿಷ್ಠೆಗಾಗಿ ನೂರು ಹೋರಿ, ಇನ್ನೂರು ಟಗರು ಹಾಗು ನಾನೂರು ಕುರಿಮರಿಗಳನ್ನು ಅರ್ಪಿಸಿದರು. ಅಲ್ಲದೆ ಇಸ್ರಯೇಲರ ದೋಷಪರಿಹಾರಾರ್ಥವಾಗಿ, ಅವರ ಕುಲಗಳ ಸಂಖ್ಯಾನುಸಾರ, ಹನ್ನೆರಡು ಹೋತಗಳನ್ನೂ ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆ ದಿವಸ ಸರ್ವಾಂಗಹೋಮವಾಗಿ ನೂರು ಹೋರಿಗಳನ್ನೂ, ಇನ್ನೂರು ಟಗರುಗಳನ್ನೂ ನಾನೂರು ಕುರಿಮರಿಗಳನ್ನೂ ಸಮರ್ಪಿಸಿದರು. ಎಲ್ಲಾ ಇಸ್ರೇಲರ ದೋಷ ಪರಿಹಾರಕ್ಕಾಗಿ ಕುಲಕ್ಕೆ ಒಂದರಂತೆ ಹನ್ನೆರಡು ಹೋತಗಳನ್ನು ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ದೇವರ ಆಲಯದ ಪ್ರತಿಷ್ಠಾಪನೆಗೋಸ್ಕರ ನೂರು ಹೋರಿಗಳನ್ನೂ, ಇನ್ನೂರು ಟಗರುಗಳನ್ನೂ, ನಾನೂರು ಕುರಿಮರಿಗಳನ್ನೂ, ಇಸ್ರಾಯೇಲ್ ಕುಲ ಗೋತ್ರಗಳ ಲೆಕ್ಕದ ಪ್ರಕಾರ, ಸಮಸ್ತ ಇಸ್ರಾಯೇಲರ ದೋಷಪರಿಹಾರ ಬಲಿಗಾಗಿ ಹನ್ನೆರಡು ಮೇಕೆಯ ಹೋತಗಳನ್ನೂ ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 6:17
17 ತಿಳಿವುಗಳ ಹೋಲಿಕೆ  

ದೇಶಾಂತರದ ಸೆರೆಯಿಂದ ತಿರಿಗಿ ಬಂದವರು ಇಸ್ರಾಯೇಲ್‍ದೇವರಿಗೆ ತೊಂಭತ್ತಾರು ಟಗರುಗಳನ್ನೂ ಎಪ್ಪತ್ತೇಳು ಕುರಿ ಮರಿಗಳನ್ನೂ ಸಮಸ್ತ ಇಸ್ರಾಯೇಲ್ಯರ ನಿವಿುತ್ತವಾಗಿ ಹನ್ನೆರಡು ಹೋರಿಗಳನ್ನೂ ದೋಷಪರಿಹಾರಾರ್ಥವಾಗಿ ಹನ್ನೆರಡು ಹೋತಗಳನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದರು. ಇವೆಲ್ಲಾ ಯೆಹೋವನಿಗೆ ಸರ್ವಾಂಗ ಹೋಮವೇ.


ಅರಸನಾದ ಸೊಲೊಮೋನನು ಯಜ್ಞಕ್ಕಾಗಿ ವಧಿಸಿದ ಹೋರಿಗಳು ಇಪ್ಪತ್ತೆರಡು ಸಾವಿರ, ಕುರಿಗಳು ಲಕ್ಷದ ಇಪ್ಪತ್ತು ಸಾವಿರ. ಈ ಪ್ರಕಾರ ಅರಸನೂ ಎಲ್ಲಾ ಇಸ್ರಾಯೇಲ್ಯರೂ ದೇವಾಲಯವನ್ನು ಪ್ರತಿಷ್ಠಿಸಿದರು.


ಯೆಹೋವನಿಂದ ಇಸ್ರಾಯೇಲನೆಂಬ ಹೆಸರು ಹೊಂದಿದ ಯಾಕೋಬನ ಮಕ್ಕಳಿಂದ ಉತ್ಪತ್ತಿಯಾದ ಕುಲಗಳ ಸಂಖ್ಯೆಗೆ ಸರಿಯಾಗಿ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು


ತನ್ನ ತಪ್ಪು ತನಗೆ ತಿಳಿದುಬಂದಾಗ ಆ ದೋಷಪರಿಹಾರಕ್ಕಾಗಿ ಪೂರ್ಣಾಂಗವಾದ ಹೆಣ್ಣು ಮೇಕೆಯನ್ನು ತಂದು ಸಮರ್ಪಿಸಬೇಕು.


ಅಭಿಷಿಕ್ತನಾದ ಯಾಜಕನೇ ದೋಷಿಯಾಗಿ ಜನರೆಲ್ಲರನ್ನೂ ಅಪರಾಧಕ್ಕೆ ಒಳಪಡಿಸಿದರೆ ತನ್ನ ದೋಷಪರಿಹಾರಕ್ಕಾಗಿ ಅವನು ಪೂರ್ಣಾಂಗವಾದ ಹೋರಿಯನ್ನು ಯೆಹೋವನಿಗೆ ಸಮರ್ಪಿಸಬೇಕು.


ಆ ಪಟ್ಟಣಕ್ಕೆ ಎತ್ತರವಾದ ದೊಡ್ಡ ಪ್ರಾಕಾರವಿತ್ತು; ಅದಕ್ಕೆ ಹನ್ನೆರಡು ಹೆಬ್ಬಾಗಿಲುಗಳಿದ್ದವು; ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ಮಂದಿ ದೇವದೂತರಿದ್ದರು; ಅವುಗಳ ಮೇಲೆ ಇಸ್ರಾಯೇಲ್ಯರ ಹನ್ನೆರಡು ಕುಲಗಳ ಹೆಸರುಗಳು ಬರೆದಿದ್ದವು.


ನನ್ನ ರಾಜ್ಯದಲ್ಲಿ ನೀವು ನನ್ನ ಮೇಜಿನ ಮೇಲೆ ಊಟಮಾಡುವಿರಿ, ಕುಡಿಯುವಿರಿ; ಮತ್ತು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.


ಅರಸನೂ ಎಲ್ಲಾ ಇಸ್ರಾಯೇಲ್ಯರೂ ಯೆಹೋವನ ಸನ್ನಿಧಿಯಲ್ಲಿ ಯಜ್ಞಮಾಡಿದರು.


ಯಾಜಕರು ಅವುಗಳನ್ನು ವಧಿಸಿ ಅವುಗಳ ರಕ್ತವನ್ನು ಸಮಸ್ತ ಇಸ್ರಾಯೇಲ್ಯರ ದೋಷಪರಿಹಾರಕ್ಕಾಗಿ ಯಜ್ಞವೇದಿಯ ಮೇಲೆ ಸುರಿದರು. ಆ ಸರ್ವಾಂಗಹೋಮಗಳೂ ದೋಷಪರಿಹಾರಕ ಯಜ್ಞಗಳೂ ಎಲ್ಲಾ ಇಸ್ರಾಯೇಲ್ಯರಿಗೋಸ್ಕರ ಆಗಬೇಕೆಂದು ಅರಸನು ಆಜ್ಞಾಪಿಸಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು