Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 6:4 - ಕನ್ನಡ ಸತ್ಯವೇದವು J.V. (BSI)

4 ದೊಡ್ಡ ಕಲ್ಲುಗಳ ಮೂರು ವರಸೆಗಳಾದ ಮೇಲೆ ಹೊಸ ಮರದ ಒಂದು ವರಸೆಯನ್ನು ಹಾಕಿ ಕಟ್ಟಬೇಕು. ವೆಚ್ಚವೆಲ್ಲಾ ರಾಜಭಂಡಾರದಿಂದ ಕೊಡಲ್ಪಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ದೊಡ್ಡ ಕಲ್ಲುಗಳ ಮೂರು ಸಾಲುಗಳಾದ ಮೇಲೆ ಹೊಸ ಮರದ ಒಂದು ಸಾಲನ್ನು ಹಾಕಿ ಕಟ್ಟಬೇಕು. ವೆಚ್ಚವೆಲ್ಲಾ ರಾಜಭಂಡಾರದಿಂದ ಕೊಡಲ್ಪಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ದೊಡ್ಡ ಕಲ್ಲುಗಳ ಮೂರು ವರಸೆಗಳಾದ ಮೇಲೆ, ಹೊಸ ಮರದ ಒಂದು ವರಸೆಯನ್ನು ಹಾಕಿ ಕಟ್ಟಬೇಕು. ಇದರ ವೆಚ್ಚವೆಲ್ಲಾ ರಾಜಭಂಡಾರದಿಂದ ಕೊಡಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅದರ ಗೋಡೆಯಲ್ಲಿ ಮೂರುಸಾಲು ದೊಡ್ಡ ಗಾತ್ರದ ಕಲ್ಲುಗಳಿರಬೇಕು; ಒಂದು ಸಾಲಿನಲ್ಲಿ ಮರದ ತೊಲೆಗಳಿರಬೇಕು. ದೇವಾಲಯ ಕಟ್ಟಲು ತಗಲುವ ಖರ್ಚುವೆಚ್ಚವೆಲ್ಲವನ್ನು ರಾಜನ ಖಜಾನೆಯಿಂದ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದೊಡ್ಡ ಕಲ್ಲುಗಳ ಮೂರು ಸಾಲುಗಳೂ, ಹೊಸ ತೊಲೆಗಳ ಒಂದು ಸಾಲೂ ಇರಲಿ. ಅದರ ಖರ್ಚು ಅರಮನೆಯ ಬೊಕ್ಕಸದಿಂದ ಕೊಡಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 6:4
10 ತಿಳಿವುಗಳ ಹೋಲಿಕೆ  

ದೇವಾಲಯದ ಪ್ರಾಕಾರದಲ್ಲಿ ಮೂರು ಸಾಲು ಕಲ್ಲಿನ ಕಂಬಗಳನ್ನೂ ಒಂದು ಸಾಲು ದೇವದಾರುವಿನ ಕಂಬಗಳನ್ನೂ ಇರಿಸಿದನು.


ಅರಸುಗಳು ಯೆರೂಸಲೇಮ್ ಪಟ್ಟಣಕ್ಕೆ ನಿನಗೋಸ್ಕರ ಕಾಣಿಕೆಗಳನ್ನು ತಂದು ಸಮರ್ಪಿಸಲಿ.


ಆದರೆ ಭೂವಿುಯು ಆ ಸ್ತ್ರೀಯ ಸಹಾಯಕ್ಕೆ ಬಂದು ಬಾಯಿ ತೆರೆದು ಘಟಸರ್ಪನು ತನ್ನ ಬಾಯೊಳಗಿಂದ ಬಿಟ್ಟ ನದಿಯನ್ನು ಕುಡಿದುಬಿಟ್ಟಿತು.


ರಾಜರು ನಿನಗೆ ಸಾಕುತಂದೆಗಳು, ಅವರ ರಾಣಿಗಳು ನಿನಗೆ ಸಾಕುತಾಯಿಯರು ಆಗುವರು; ನಿನಗೆ ಸಾಷ್ಟಾಂಗವಾಗಿ ಅಡ್ಡಬಿದ್ದು ನಿನ್ನ ಪಾದಧೂಳಿಯನ್ನು ನೆಕ್ಕುವರು; ನಾನೇ ಯೆಹೋವನು. ನನ್ನನ್ನು ನಿರೀಕ್ಷಿಸಿಕೊಂಡವರು ಆಶಾಭಂಗಪಡರು ಎಂದು ನಿನಗೆ ಗೊತ್ತಾಗುವದು.


ತಾರ್ಷೀಷ್‍ಪ್ರಾಂತದ ಮತ್ತು ಸಮುದ್ರದ ಕರಾವಳಿಯ ಅರಸರು ಕಪ್ಪಗಳನ್ನು ಸಲ್ಲಿಸಲಿ; ಶೆಬಾ ಮತ್ತು ಸೆಬಾ ಎಂಬ ಪ್ರದೇಶಗಳ ರಾಜರೂ ಕಾಣಿಕೆಗಳನ್ನು ತಂದೊಪ್ಪಿಸಲಿ.


ಆ ದೇವಾಲಯವನ್ನು ಕಟ್ಟುವದಕ್ಕಾಗಿ ನೀವು ಯೆಹೂದ್ಯರ ಹಿರಿಯರಿಗೆ ರಾಜರ ಸೊತ್ತಿನಿಂದ ಅಂದರೆ ಹೊಳೆಯಾಚೆಯ ಪ್ರಾಂತಗಳ ಕಪ್ಪದಿಂದ ತಡಮಾಡದೆ ಎಲ್ಲಾ ವೆಚ್ಚವನ್ನು ಕೊಡಬೇಕೆಂಬದಾಗಿಯೂ


ಆದರೆ ಪಾರಸಿಯ ರಾಜನಾದ ಕೋರೆಷನಿಂದ ಪಡಕೊಂಡ ಅಪ್ಪಣೆಯ ಮೇರೆಗೆ ಅವರು ಕಲ್ಲುಕುಟಿಗ ಬಡಗಿ ಇವರಿಗೆ ಹಣವನ್ನೂ ಲೆಬನೋನಿನಿಂದ ಸಮುದ್ರಮಾರ್ಗವಾಗಿ ಯೊಪ್ಪಕ್ಕೆ ದೇವದಾರುಮರಗಳನ್ನು ತರತಕ್ಕ ಚೀದೋನ್ಯರು, ತೂರ್ಯರು ಇವರಿಗೆ ಅನ್ನಪಾನಗಳನ್ನೂ ಎಣ್ಣೆಯನ್ನೂ ಕೊಟ್ಟಿದ್ದರು.


ದಾರ್ಯಾವೆಷರಾಜರಿಗೆ ಸರ್ವಥಾಕ್ಷೇಮ. ನಾವು ಯೆಹೂದಸೀಮೆಗೆ ಹೋಗಿ ಮಹೋನ್ನತದೇವರ ಆಲಯವನ್ನು ನೋಡಿದೆವೆಂಬದಾಗಿ ರಾಜರಿಗೆ ಅರಿಕೆ ಮಾಡುತ್ತೇವೆ. ಆ ಆಲಯವನ್ನು ದೊಡ್ಡ ಕಲ್ಲುಗಳಿಂದ ಕಟ್ಟುತ್ತಾ ಗೋಡೆಗಳ ಮೇಲೆ ತೊಲೆಗಳನ್ನಿಡುತ್ತಾ ಇದ್ದಾರೆ. ಈ ಕೆಲಸವು ಜಾಗರೂಕತೆಯಿಂದ ಮುಂದರಿದು ಅವರ ಕೈಯಿಂದ ಬೆಳೆಯುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು