Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 6:7 - ಕನ್ನಡ ಸತ್ಯವೇದವು J.V. (BSI)

7 ಆ ದೇವಾಲಯವನ್ನು ಕಟ್ಟುವ ಕೆಲಸಕ್ಕೆ ಅಡ್ಡಿ ಮಾಡಬೇಡಿರಿ; ಯೆಹೂದ ದೇಶಾಧಿಪತಿಯು, ಯೆಹೂದ್ಯರ ಹಿರಿಯರು ಇವರೇ ಅದನ್ನು ಅದರ ಸ್ಥಳದಲ್ಲಿ ಕಟ್ಟಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆ ದೇವಾಲಯವನ್ನು ಕಟ್ಟುವ ಕೆಲಸಕ್ಕೆ ಅಡ್ಡಿ ಮಾಡಬೇಡಿರಿ. ಯೆಹೂದ ದೇಶಾಧಿಪತಿಯು, ಯೆಹೂದ್ಯರ ಹಿರಿಯರು ಇವರೇ ಅದನ್ನು ಅದರ ಸ್ಥಳದಲ್ಲಿ ಕಟ್ಟಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆ ದೇವಾಲಯವನ್ನು ಕಟ್ಟುವ ಕೆಲಸಕ್ಕೆ ಅಡ್ಡಿಮಾಡಬೇಡಿ; ಜುದೇಯದ ರಾಜ್ಯಪಾಲ ಮತ್ತು ಯೆಹೂದ್ಯರ ಹಿರಿಯರೇ ಅದನ್ನು ಅದರ ಸ್ಥಳದಲ್ಲಿ ಕಟ್ಟಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಕೆಲಸ ಮಾಡುವವರನ್ನು ತೊಂದರೆಪಡಿಸಬೇಡಿ. ದೇವಾಲಯ ಕಟ್ಟುವ ಕೆಲಸವನ್ನು ನಿಲ್ಲಿಸುವ ಪ್ರಯತ್ನ ಮಾಡಬೇಡಿ. ಯೆಹೂದ್ಯರ ದೇಶಾಧಿಪತಿ ಮತ್ತು ಯೆಹೂದ್ಯ ನಾಯಕರು ಅದನ್ನು ಮತ್ತೆ ಕಟ್ಟಲಿ. ಹಿಂದಿನ ದೇವಾಲಯವಿದ್ದಲ್ಲಿಯೇ ಹೊಸದನ್ನು ಕಟ್ಟಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ದೇವರ ಆಲಯವನ್ನು ಕಟ್ಟುವ ಕೆಲಸಕ್ಕೆ ನೀವು ಅಡ್ಡಿಮಾಡಬೇಡಿರಿ. ಯೆಹೂದ್ಯರ ಅಧಿಪತಿಯೂ, ಯೆಹೂದ್ಯರ ಹಿರಿಯರೂ ಅದರ ಸ್ಥಳದಲ್ಲಿ ದೇವರ ಆಲಯವನ್ನು ಕಟ್ಟಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 6:7
4 ತಿಳಿವುಗಳ ಹೋಲಿಕೆ  

[ಆಗ ದಾರ್ಯಾವೆಷನು ಬರೆದು ಕಳುಹಿಸಿದ್ದೇನಂದರೆ -] ಹೊಳೆಯಾಚೆಯ ಪ್ರದೇಶಗಳ ಅಧಿಪತಿಯಾದ ತತ್ತೆನೈ, ಶೆತರ್ಬೋಜೆನೈ, ಹೊಳೆಯಾಚೆಯಲ್ಲಿ ಇವರ ಜೊತೆಗಾರರಾದ ಅಪರ್ಸತ್ಕಾಯರು ಇವರಿಗೆ - ನೀವು ಅವರ ಗೊಡವೆಗೆ ಹೋಗಬೇಡಿರಿ.


ಆ ದೇವಾಲಯವನ್ನು ಕಟ್ಟುವದಕ್ಕಾಗಿ ನೀವು ಯೆಹೂದ್ಯರ ಹಿರಿಯರಿಗೆ ರಾಜರ ಸೊತ್ತಿನಿಂದ ಅಂದರೆ ಹೊಳೆಯಾಚೆಯ ಪ್ರಾಂತಗಳ ಕಪ್ಪದಿಂದ ತಡಮಾಡದೆ ಎಲ್ಲಾ ವೆಚ್ಚವನ್ನು ಕೊಡಬೇಕೆಂಬದಾಗಿಯೂ


ನಿಮ್ಮಲ್ಲಿ ಯಾರು ಆತನ ಪ್ರಜೆಗಳಾಗಿರುತ್ತಾರೋ ಅವರು ಯೆಹೂದದೇಶದ ಯೆರೂಸಲೇವಿುಗೆ ಹೋಗಿ ಅಲ್ಲಿ ವಾಸಿಸುತ್ತಿರುವ ಇಸ್ರಾಯೇಲ್‍ದೇವರಾದ ಯೆಹೋವನಿಗೋಸ್ಕರ ಆಲಯವನ್ನು ಕಟ್ಟಲಿ; ಅವರ ದೇವರು ಅವರ ಸಂಗಡ ಇರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು