ಎಜ್ರ 6:9 - ಕನ್ನಡ ಸತ್ಯವೇದವು J.V. (BSI)9 ಪರಲೋಕ ದೇವರ ಸರ್ವಾಂಗಹೋಮಗಳಿಗೋಸ್ಕರ ಬೇಕಾದ ಹೋರಿ ಟಗರು ಕುರಿಮರಿಗಳನ್ನೂ ಗೋದಿ ಉಪ್ಪೂ ದ್ರಾಕ್ಷಾರಸ ಎಣ್ಣೆ ಇವುಗಳನ್ನೂ ಯೆರೂಸಲೇವಿುನ ಯಾಜಕರು ಹೇಳುವ ಪ್ರಕಾರ ಪ್ರತಿದಿನವೂ ತಪ್ಪದೆ ಒದಗಿಸಿ ಕೊಡಬೇಕೆಂಬದಾಗಿಯೂ ಆಜ್ಞಾಪಿಸುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅವರು ಪರಲೋಕದೇವರ ಸರ್ವಾಂಗಹೋಮಗಳಿಗೋಸ್ಕರ ಬೇಕಾದ ಹೋರಿ, ಟಗರು, ಕುರಿಮರಿಗಳನ್ನೂ, ಗೋದಿ, ಉಪ್ಪು, ದ್ರಾಕ್ಷಾರಸ, ಎಣ್ಣೆ ಇವುಗಳನ್ನೂ ಯೆರೂಸಲೇಮಿನ ಯಾಜಕರು ಹೇಳುವ ಪ್ರಕಾರ ಪ್ರತಿದಿನವೂ ತಪ್ಪದೆ ಒದಗಿಸಿ ಕೊಡಬೇಕು ಎಂಬುದಾಗಿಯೂ ಆಜ್ಞಾಪಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಪರಲೋಕ ದೇವರಿಗೆ ದಹನಬಲಿಗಳನ್ನು ಸಮರ್ಪಿಸಲು ಬೇಕಾದ ಹೋರಿ, ಟಗರು, ಕುರಿಗಳನ್ನೂ ಗೋದಿ, ಉಪ್ಪು, ದ್ರಾಕ್ಷಾರಸ, ಎಣ್ಣೆ ಇವುಗಳನ್ನೂ ಜೆರುಸಲೇಮಿನ ಯಾಜಕರು ಹೇಳುವ ಪ್ರಕಾರ ಪ್ರತಿದಿನ ತಪ್ಪದೆ ಒದಗಿಸಿಕೊಡಬೇಕೆಂದು ಆಜ್ಞಾಪಿಸುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆ ಜನರಿಗೆ ಏನು ಅವಶ್ಯಕತೆಯಿದೆಯೋ ಅದನ್ನು ಪೂರೈಸಬೇಕು. ಅವರಿಗೆ ಎಳೆಹೋರಿಗಳು, ಟಗರುಗಳು, ಗಂಡುಕುರಿಗಳು ಪರಲೋಕದ ದೇವರಿಗೆ ಯಜ್ಞವನ್ನರ್ಪಿಸಲು ಬೇಕಾಗಿದ್ದರೆ ಅವುಗಳನ್ನು ಕೊಡಿರಿ. ಜೆರುಸಲೇಮಿನ ಯಾಜಕರು ಗೋಧಿ, ಉಪ್ಪು, ದ್ರಾಕ್ಷಾರಸ, ಎಣ್ಣೆ ಬೇಕು ಎಂದು ಹೇಳಿದರೆ ಅದನ್ನು ಪ್ರತಿದಿನ ತಪ್ಪದೆ ಒದಗಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಪರಲೋಕದ ದೇವರಿಗೆ ದಹನಬಲಿಗಳ ನಿಮಿತ್ತ ಅವರಿಗೆ ಬೇಕಾದ ಹೋರಿಗಳೂ, ಟಗರುಗಳೂ, ಕುರಿಮರಿಗಳೂ, ಗೋಧಿಯೂ, ಉಪ್ಪೂ, ದ್ರಾಕ್ಷಾರಸವೂ, ಎಣ್ಣೆಯೂ ಪ್ರತಿದಿನ ತಪ್ಪದೆ ಯೆರೂಸಲೇಮಿನಲ್ಲಿರುವ ಯಾಜಕರ ನೇಮಕದ ಪ್ರಕಾರ ಅವರಿಗೆ ಕೊಡಬೇಕು. ಅಧ್ಯಾಯವನ್ನು ನೋಡಿ |