Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 7:27 - ಕನ್ನಡ ಸತ್ಯವೇದವು J.V. (BSI)

27 [ಎಜ್ರನು ಹೇಳಿದ್ದು - ] ನಮ್ಮ ಪಿತೃಗಳ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಅರಸನು ಯೆರೂಸಲೇವಿುನಲ್ಲಿರುವ ಯೆಹೋವನ ಆಲಯವನ್ನು ಶೋಭಿಸುವ ಸ್ಥಿತಿಗೆ ತರುವದಕ್ಕೆ ಆತನ ಪ್ರೇರಣೆಯಿಂದಲೇ ಮನಸ್ಸು ಮಾಡಿದ್ದಾನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಎಜ್ರನು ನೀಡಿದ ಪ್ರತಿಕ್ರಿಯೆ, “ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಅರಸನು ಯೆರೂಸಲೇಮಿನಲ್ಲಿರುವ ಯೆಹೋವನ ಆಲಯವನ್ನು ಶೋಭಾಯಮಾನದ ಸ್ಥಿತಿಗೆ ತರುವುದಕ್ಕೆ ಆತನ ಪ್ರೇರಣೆಯಿಂದಲೇ ಮನಸ್ಸುಮಾಡಿದ್ದಾನೆ. ಅರಸನು ಅವನ ಮಂತ್ರಿಗಳ ಮತ್ತು ಅವನ ಎಲ್ಲಾ ಶ್ರೇಷ್ಠರಾದ ಸರದಾರರ ಮುಂದೆ ನನಗೆ ದಯೆತೋರಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಎಜ್ರನ ಮಾತುಗಳು ಇವು: “ನಮ್ಮ ಪಿತೃಗಳ ದೇವರಾದ ಸರ್ವೇಶ್ವರಸ್ವಾಮಿಗೆ ಸ್ತೋತ್ರವಾಗಲಿ! ಜೆರುಸಲೇಮಿನಲ್ಲಿರುವ ದೇವಾಲಯವನ್ನು ಶೋಭಿಸುವ ಸ್ಥಿತಿಗೆ ತರುವುದಕ್ಕೆ ಸರ್ವೇಶ್ವರನ ಪ್ರೇರಣೆಯಿಂದಲೇ ಅರಸನು ಮನಸ್ಸು ಮಾಡಿದ್ದಾನೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ! ಜೆರುಸಲೇಮಿನಲ್ಲಿರುವ ದೇವಾಲಯವನ್ನು ಗೌರವಿಸುವ ಮನಸ್ಸನ್ನು ರಾಜನ ಹೃದಯದಲ್ಲಿರಿಸಿದ್ದಕ್ಕೆ ಆತನಿಗೆ ಸ್ತೋತ್ರ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆಗ ಎಜ್ರನು, “ನಮ್ಮ ತಂದೆಗಳ ದೇವರಾಗಿರುವ ಯೆಹೋವ ದೇವರು ಸ್ತುತಿಹೊಂದಲಿ! ಯೆರೂಸಲೇಮಿನಲ್ಲಿರುವ ಯೆಹೋವ ದೇವರ ಆಲಯಕ್ಕೆ ಮಹಿಮೆಯನ್ನು ತರುವಂತೆ, ಅರಸನ ಹೃದಯದಲ್ಲಿ ಇಂಥಾದ್ದನ್ನು ಇಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 7:27
16 ತಿಳಿವುಗಳ ಹೋಲಿಕೆ  

ಇದಲ್ಲದೆ ಇಸ್ರಾಯೇಲ್‍ದೇವರ ಆಲಯವನ್ನು ಕಟ್ಟುವದರಲ್ಲಿ ಅಶ್ಶೂರದ ಅರಸನು ತಮಗೆ ಸಹಾಯ ಮಾಡುವಂತೆ ಯೆಹೋವನು ಅವನ ಮನಸ್ಸನ್ನು ತಿರುಗಿಸಿ ತಮಗೆ ಸಂತೋಷವನ್ನು ಉಂಟುಮಾಡಿದ್ದಾನೆ ಎಂದು ಹರ್ಷಿಸುತ್ತಾ ಏಳು ದಿವಸಗಳವರೆಗೂ ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯನ್ನು ಆಚರಿಸಿದರು.


ನನ್ನ ಪವಿತ್ರಾಲಯವನ್ನು ಭೂಷಿಸುವದಕ್ಕಾಗಿ ತುರಾಯಿ, ತಪಸಿ, ತಿಲಕ ಈ ವೃಕ್ಷರೂಪವಾದ ಲೆಬನೋನಿನ ಮಹಿಮೆಯು ನಿನಗಾಗುವದು; ನನ್ನ ಪಾದಸನ್ನಿಧಿಯ ಮಂದಿರವನ್ನು ವೈಭವಪಡಿಸುವೆನು.


ಯಾಕಂದರೆ ಅವರು ದೇವರ ಅಭಿಪ್ರಾಯವನ್ನು ನೆರವೇರಿಸುವದಕ್ಕೂ ಒಂದೇ ಅಭಿಪ್ರಾಯವುಳ್ಳವರಾಗಿದ್ದು ತಮ್ಮ ರಾಜ್ಯವನ್ನು ಮೃಗಕ್ಕೆ ಕೊಡುವದಕ್ಕೂ ದೇವರು ತನ್ನ ವಚನವು ನೆರವೇರುವ ತನಕ ಅವರ ಹೃದಯಗಳನ್ನು ಪ್ರೇರಿಸಿದನು.


ಎಲ್ಲಾ ಒಳ್ಳೇ ದಾನಗಳೂ ಕುಂದಿಲ್ಲದ ಎಲ್ಲಾ ವರಗಳೂ ಮೇಲಣಿಂದ ಸಕಲವಿಧವಾದ ಬೆಳಕಿಗೂ ಮೂಲಕಾರಣನಾದವನಿಂದ ಇಳಿದುಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ಸೂಚನೆಯೂ ಇಲ್ಲ.


ಆ ದಿನಗಳು ಬಂದ ಮೇಲೆ ನಾನು ಅವರ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು - ನನ್ನ ಆಜ್ಞೆಗಳನ್ನು ಅವರ ಹೃದಯದಲ್ಲಿ ಇಡುವೆನು, ಅವರ ಮನಸ್ಸಿನ ಮೇಲೆ ಅವುಗಳನ್ನು ಬರೆಯುವೆನು ಎಂದು ಕರ್ತನು ನುಡಿಯುತ್ತಾನೆ ಎಂಬದಾಗಿ ಹೇಳಿದ ಮೇಲೆ ಇನ್ನು -


ಆ ದಿನಗಳು ಬಂದ ಮೇಲೆ ನಾನು ಇಸ್ರಾಯೇಲ್‍ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು - ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು, ಅವರ ಹೃದಯದ ಮೇಲೆ ಅವುಗಳನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು;


ನಿಮ್ಮ ವಿಷಯವಾಗಿ ನನಗಿರುವ ಹಿತಚಿಂತನೆಯನ್ನು ದೇವರು ತೀತನ ಹೃದಯದಲ್ಲಿಯೂ ಹುಟ್ಟಿಸಿದ್ದಕ್ಕಾಗಿ ಆತನಿಗೆ ಸ್ತೋತ್ರವಾಗಲಿ.


ಯೆರೂಸಲೇವಿುಗೋಸ್ಕರ ಮಾಡತಕ್ಕ ಕಾರ್ಯದ ವಿಷಯವಾಗಿ ನನ್ನ ದೇವರು ನನ್ನಲ್ಲಿ ಯಾವ ಆಲೋಚನೆಯನ್ನು ಹುಟ್ಟಿಸಿದ್ದಾನೆಂದು ಯಾರಿಗೂ ತಿಳಿಸದೆ ರಾತ್ರಿಯಲ್ಲೆದ್ದು ಕೆಲವು ಜನರನ್ನು ಮಾತ್ರ ಕರಕೊಂಡು ಹೊರಟೆನು. ನನ್ನ ವಾಹನಪಶುವಿನ ಹೊರತು ಬೇರೆ ಯಾವ ಪಶುವೂ ನನ್ನೊಂದಿಗಿರಲಿಲ್ಲ.


ರಾಜವನಪಾಲಕನಾದ ಆಸಾಫನು ದೇವಾಲಯದ ಕೋಟೆಯ ಬಾಗಲುಗಳು, ಪಟ್ಟಣದ ಪೌಳಿಗೋಡೆ, ನಾನು ಸೇರುವ ಮನೆ ಇವುಗಳಿಗೆ ಬೇಕಾಗುವ ತೊಲೆಗಳಿಗಾಗಿ ಮರಗಳನ್ನು ಕೊಡುವ ಹಾಗೂ ರಾಜರು ನನ್ನ ಕೈಯಲ್ಲಿ ಪತ್ರಗಳನ್ನು ದಯಮಾಡಬೇಕು ಎಂದು ಬಿನ್ನವಿಸಲು ನನ್ನ ದೇವರ ಕೃಪಾಹಸ್ತಪಾಲನೆ ನನಗಿದ್ದದ್ದರಿಂದ


ನನ್ನ ವಿಷಯವಾದ ನಿಮ್ಮ ಯೋಚನೆಯೆಂಬ ಬಳ್ಳಿಯು ಇಷ್ಟು ದಿವಸಗಳಾದ ಮೇಲೆ ಪುನಃ ಚಿಗುರಿದ್ದಕ್ಕೆ ನಾನು ಕರ್ತನ ನಿವಿುತ್ತ ಬಹಳವಾಗಿ ಸಂತೋಷಪಡುತ್ತೇನೆ. ಇಂಥ ಯೋಚನೆ ನಿಮ್ಮಲ್ಲಿ ನಿಜವಾಗಿ ಇರುತ್ತಿದ್ದರೂ ಇದುವರೆಗೆ ಅದರ ಪ್ರಕಾರ ಮಾಡುವದಕ್ಕೆ ಸಂದರ್ಭ ಸಿಕ್ಕಲಿಲ್ಲವೇನೋ.


ರಾಜನ ಸಂಕಲ್ಪಗಳು ಯೆಹೋವನ ಕೈಯಲ್ಲಿ ನೀರಿನ ಕಾಲುವೆಗಳಂತೆ ಇವೆ; ತನಗೆ ಬೇಕಾದ ಕಡೆಗೆ ತಿರುಗಿಸುತ್ತಾನೆ.


ಹೀಗಿರಲಾಗಿ ನಾನು ನನ್ನ ದೇವರ ಪ್ರೇರಣೆಯಿಂದ ಶ್ರೀಮಂತರನ್ನೂ ಅಧಿಕಾರಿಗಳನ್ನೂ ಸಾಧಾರಣಜನರನ್ನೂ ಖಾನೇಷುಮಾರಿಗೋಸ್ಕರ ಕೂಡಿಸಿದೆನು. ಆಗ [ಯೆರೂಸಲೇವಿುಗೆ] ಮೊದಲು ಬಂದವರ ಹೆಸರುಗಳ ಪಟ್ಟಿಯು ನನಗೆ ಸಿಕ್ಕಿತು. ಅದರಲ್ಲಿ ಬರೆದಿದ್ದದ್ದೇನಂದರೆ -


ಮೋಶೆ - ಘನಚಿತ್ತಕ್ಕೆ ತೋರಿದಂತೆ ನೀನೇ ಅದಕ್ಕೊಂದು ಕಾಲವನ್ನು ನೇವಿುಸಬೇಕು. ಈ ಕಪ್ಪೆಗಳು ಯಾವಾಗ ನಿನ್ನ ಬಳಿಯಿಂದಲೂ ನಿನ್ನ ಮನೆಗಳಿಂದಲೂ ತೊಲಗಿ ನದಿಯಲ್ಲಿ ಮಾತ್ರ ಉಳಿಯುವಂತೆ ನಾನು ನಿನಗೋಸ್ಕರವೂ ನಿನ್ನ ಪ್ರಜಾಪರಿವಾರದವರಿಗೋಸ್ಕರವೂ ಬೇಡಿಕೊಳ್ಳಲಿ ಎಂದು ಫರೋಹನನ್ನು ಕೇಳಲು ಅವನು - ನಾಳೆ ಅಂದನು.


ಹಿಜ್ಕೀಯನೂ ಪ್ರಭುಗಳೂ ಬಂದು ಆ ರಾಶಿಗಳನ್ನು ನೋಡಿದಾಗ ಯೆಹೋವನನ್ನು ಕೊಂಡಾಡಿ ಆತನ ಪ್ರಜೆಗಳಾದ ಇಸ್ರಾಯೇಲ್ಯರನ್ನು ಹರಸಿದರು.


ಅವನು ನಮ್ಮ ಜನರನ್ನು ಪ್ರೀತಿಸುವವನು, ತಾನೇ ನಮ್ಮ ಸಭಾಮಂದಿರವನ್ನು ನಮಗಾಗಿ ಕಟ್ಟಿಸಿದನು ಎಂದು ಆತನನ್ನು ಬಹಳವಾಗಿ ಬೇಡಿಕೊಳ್ಳಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು