Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 8:16 - ಕನ್ನಡ ಸತ್ಯವೇದವು J.V. (BSI)

16 ಪ್ರಧಾನರಾದ ಎಲೀಯೆಜೆರ್, ಅರೀಯೇಲ್, ಶೆಮಾಯ, ಎಲ್ನಾತಾನ್, ಯಾರೀಬ್, ಎಲ್ನಾತಾನ್, ನಾತಾನ್, ಜೆಕರ್ಯ, ಮೆಷುಲ್ಲಾಮ್ ಇವರನ್ನೂ ಪಂಡಿತರಾದ ಯೋಯಾರೀಬ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದುದರಿಂದ ನಾನು ಪ್ರಧಾನರಾದ ಎಲೀಯೆಜೆರ್, ಅರೀಯೇಲ್, ಶೆಮಾಯ, ಎಲ್ನಾತಾನ್, ಯಾರೀಬ್, ಎಲ್ನಾತಾನ್, ನಾತಾನ್, ಜೆಕರ್ಯ, ಮೆಷುಲ್ಲಾಮ್ ಇವರನ್ನೂ, ಪಂಡಿತರಾದ ಯೋಯಾರೀಬ್ ಎಲ್ನಾತಾನ್ ಇವರನ್ನೂ ಕರೆಯಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆದುದರಿಂದ ಮುಖ್ಯಸ್ಥರಾದ ಎಲೀಯೇಜೆರ್, ಅರೀಯೇಲ್, ಶೆಮಾಯ, ಎಲ್ನಾತಾನ್, ಯಾರೀಬ್, ಎಲ್ನಾತಾನ್, ನಾತಾನ್, ಜೆಕರ್ಯ, ಮೆಷುಲ್ಲಾಮ್ ಇವರನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆಗ ನಾನು ಎಲಿಯೆಜರ್, ಅರೀಯೇಲ್, ಶೆಮಾಯ, ಎಲ್ನಾತಾನ್, ಯಾರೀಬ್, ಎಲ್ನಾತಾನ್, ನಾತಾನ್, ಜೆಕರ್ಯ ಮತ್ತು ಮೆಷುಲ್ಲಾಮ್ ಎಂಬ ನಾಯಕರನ್ನು ಕರೆದೆನು. ಅಲ್ಲದೆ (ಬೋಧಕರುಗಳಾದ) ಯೋಯಾರೀಬ್ ಮತ್ತು ಎಲ್ನಾತಾನ್ ಎಂಬವರನ್ನು ಕರೆದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಗ ನಾನು ಎಲೀಯೆಜೆರನು, ಅರೀಯೇಲನು, ಶೆಮಾಯನು, ಎಲ್ನತಾನನು, ಯಾರೀಬನು, ಎಲ್ನಾತಾನನು, ನಾತಾನನು, ಜೆಕರ್ಯನು, ಮೆಷುಲ್ಲಾಮನು ಎಂಬ ಪ್ರಮುಖರನ್ನೂ, ಯೋಯಾರೀಬನು, ಎಲ್ನತಾನನು ಎಂಬ ಗ್ರಹಿಕೆಯುಳ್ಳವರನ್ನೂ ಕರೆಕಳುಹಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 8:16
16 ತಿಳಿವುಗಳ ಹೋಲಿಕೆ  

ದೇವರ ಮಗನು ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ಮತ್ತು ನಾವು ದೇವರ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಆತನು ಸತ್ಯದೇವರೂ ನಿತ್ಯಜೀವವೂ ಆಗಿದ್ದಾನೆ.


ನಾನು ಹೇಳುವದನ್ನು ಯೋಚಿಸು; ಕರ್ತನು ಎಲ್ಲಾದರಲ್ಲೂ ನಿನಗೆ ವಿವೇಕವನ್ನು ದಯಪಾಲಿಸುವನು.


ಕಾಲಸಮಯಗಳನ್ನು ಮಾರ್ಪಡಿಸುತ್ತಾನೆ, ರಾಜರನ್ನು ತಳ್ಳುತ್ತಾನೆ, ನಿಲ್ಲಿಸುತ್ತಾನೆ; ಜ್ಞಾನಿಗಳ ಜ್ಞಾನವು, ವಿವೇಕಿಗಳ ವಿವೇಕವು ಆತನ ವರವೇ;


ದೇಶವು ಅಧರ್ಮದಿಂದ ಬಹುನಾಯಕವಾಗುವದು; ಜ್ಞಾನಿಗಳೂ ವಿವೇಕಿಗಳೂ ಆದವರಿಂದ ಧರ್ಮವು ಶಾಶ್ವತವಾಗುವದು.


ಮನುಷ್ಯನ ಹೃದಯಸಂಕಲ್ಪವು ಆಳವಾದ [ಬಾವಿಯ] ನೀರು. ಆದರೆ ವಿವೇಕಿಯು ಅದನ್ನು ಸೇದಬಲ್ಲನು.


ಯೆಹೋವನೇ ಜ್ಞಾನವನ್ನು ಕೊಡುವಾತನು, ಆತನ ಬಾಯಿಂದಲೇ ತಿಳುವಳಿಕೆಯೂ ವಿವೇಕವೂ ಹೊರಟು ಬರುತ್ತವೆ.


ಶಿಮ್ಮೀ, ಶೆಲೆಮ್ಯ, ನಾತಾನ್ ಅದಾಯ;


ಹಾರೀಮನ ಸಂತಾನದವರಾದ ಮಾಸೇಯ, ಎಲೀಯ, ಶೆಮಾಯ, ಯೆಹೀಯೇಲ್, ಉಜ್ಜೀಯ;


ನಮ್ಮ ದೇವರ ಕೃಪಾಹಸ್ತಪಾಲನೆಯು ನಮಗೆ ದೊರಕಿದ್ದರಿಂದ ಅವರು ಇಸ್ರಾಯೇಲನ ಮಗನಾದ ಲೇವಿಯ ಕುಲದ ಮಹ್ಲೀ ಸಂತಾನದವರಲ್ಲಿ ಈಸ್ಸೆಕೆಲನನ್ನೂ ಶೇರೇಬ್ಯನನ್ನೂ ಅವನ ಪುತ್ರಭ್ರಾತೃಗಳಲ್ಲಿ ಹದಿನೆಂಟು ಮಂದಿಯನ್ನೂ ಮೆರಾರೀಯರಲ್ಲಿ ಹಷಬ್ಯನನ್ನೂ


ಅದೋನೀಕಾವಿುನವರಲ್ಲಿ ಕಡೆಯವರಾದ ಎಲೀಫೆಲೆಟ್, ಎಮೀಯೇಲ್, ಶೆಮಾಯ ಎಂಬ ಹೆಸರುಳ್ಳವರೂ ಅವರೊಡನೆ 60 ಮಂದಿ ಗಂಡಸರೂ;


ಭೂಮ್ಯಾಕಾಶಗಳನ್ನುಂಟುಮಾಡಿದ ಇಸ್ರಾಯೇಲ್‍ದೇವರಾದ ಯೆಹೋವನು ತನಗೋಸ್ಕರ ದೇವಾಲಯವನ್ನೂ ರಾಜನಿಗೋಸ್ಕರ ಅರಮನೆಯನ್ನೂ ಕಟ್ಟಿಸತಕ್ಕ ಬುದ್ಧಿ ಜ್ಞಾನವಿವೇಕಗಳುಳ್ಳ ಮಗನನ್ನು ಅರಸನಾದ ದಾವೀದನಿಗೆ ಕೊಟ್ಟದರಿಂದ ಆತನಿಗೆ ಸ್ತೋತ್ರವಾಗಲಿ.


ಮೂಡಣ ದಿಕ್ಕಿನ ಚೀಟು ಶೆಲೆಮ್ಯನ ಹೆಸರಿಗೆ ಬಿದ್ದಿತು. ಬಹು ವಿವೇಕವುಳ್ಳ ಪಂಚಾಯತನಾಗಿರುವ ಅವನ ಮಗನಾದ ಜೆಕರ್ಯನ ಹೆಸರಿಗೆ ಬಡಗಣ ದಿಕ್ಕಿನ ಚೀಟು ಬಿದ್ದಿತು.


ಇಸ್ಸಾಕಾರ್ಯರಿಂದ ಇನ್ನೂರು ಮಂದಿ ಮುಖ್ಯಸ್ಥರು; ಇವರು ಸಮಯೋಚಿತ ಜ್ಞಾನವುಳ್ಳವರಾಗಿ ಇಸ್ರಾಯೇಲ್ಯರು ಮಾಡತಕ್ಕದ್ದನ್ನು ಅರಿತವರು; ಇವರ ಸಹೋದರರೆಲ್ಲರೂ ಇವರ ಆಜ್ಞೆಗೆ ಒಳಗಾಗಿದ್ದರು;


ಆತನು ಅವನಿಗೆ - ನೀನು ನಿನಗೋಸ್ಕರ ದೀರ್ಘಾಯುಷ್ಯವನ್ನಾಗಲಿ, ಐಶ್ವರ್ಯವನ್ನಾಗಲಿ, ವೈರಿಗಳ ಪ್ರಾಣವನ್ನಾಗಲಿ ಕೇಳಿಕೊಳ್ಳದೆ ನ್ಯಾಯ ನಿರ್ಣಯಿಸುವದಕ್ಕೋಸ್ಕರ


ಅಹವಾ ಪ್ರಾಂತದ ಕಡೆಗೆ ಹರಿಯುವ ನದಿಯ ಬಳಿಯಲ್ಲಿ ನಾನು ಇವರನ್ನು ಕೂಡಿಸಿದೆನು. ಅಲ್ಲಿ ಮೂರು ದಿನ ಪಾಳೆಯ ಮಾಡಿಕೊಂಡ ಮೇಲೆ ಸಾಧಾರಣಜನರೂ ಯಾಜಕರೂ ಬಂದಿದ್ದಾರೆ, ಲೇವಿಯರಲ್ಲಿ ಯಾರೂ ಬರಲಿಲ್ಲ ಎಂದು ಕಂಡುಬಂದದರಿಂದ


ಎಲ್ನಾತಾನ್ ಇವರನ್ನೂ ಕರಿಸಿ ಕಾಸಿಫ್ಯ ಊರಿನ ಮುಖ್ಯಸ್ಥನಾದ ಇದ್ದೋವಿನ ಬಳಿಗೆ ಹೋಗಬೇಕೆಂದು ಅಪ್ಪಣೆಮಾಡಿ ನಮ್ಮ ಬಳಿಗೆ ದೇವಾಲಯ ಸೇವಕರನ್ನು ಕಳುಹಿಸುವ ಹಾಗೆ ಅವರು ಇದ್ದೋವಿಗೂ ಕಾಸಿಫ್ಯ ಊರಿನಲ್ಲಿ ವಾಸಿಸುತ್ತಿದ್ದ ಅವನ ಸಹೋದರರಾದ ದೇವಸ್ಥಾನದಾಸ ವರ್ಗದವರಿಗೂ ಹೇಳತಕ್ಕ ಮಾತುಗಳನ್ನು ಹೇಳಿಕೊಟ್ಟೆನು. ಆ ಊರಿನವರು ದೇವದಾಸವರ್ಗದವರಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು