Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 8:18 - ಕನ್ನಡ ಸತ್ಯವೇದವು J.V. (BSI)

18 ನಮ್ಮ ದೇವರ ಕೃಪಾಹಸ್ತಪಾಲನೆಯು ನಮಗೆ ದೊರಕಿದ್ದರಿಂದ ಅವರು ಇಸ್ರಾಯೇಲನ ಮಗನಾದ ಲೇವಿಯ ಕುಲದ ಮಹ್ಲೀ ಸಂತಾನದವರಲ್ಲಿ ಈಸ್ಸೆಕೆಲನನ್ನೂ ಶೇರೇಬ್ಯನನ್ನೂ ಅವನ ಪುತ್ರಭ್ರಾತೃಗಳಲ್ಲಿ ಹದಿನೆಂಟು ಮಂದಿಯನ್ನೂ ಮೆರಾರೀಯರಲ್ಲಿ ಹಷಬ್ಯನನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಮ್ಮ ದೇವರ ಕೃಪಾಶೀರ್ವಾದ ನಮಗೆ ದೊರೆಕ್ಕಿದ್ದರಿಂದ ಅವರು ಇಸ್ರಾಯೇಲನ ಮಗನಾದ ಲೇವಿಯ ಕುಲದ ಮಹ್ಲೀ ಸಂತಾನದವರಲ್ಲಿ ಈಸ್ಸೆಕೆಲನನ್ನೂ, ಶೇರೇಬ್ಯನನ್ನೂ ಅವನ ಪುತ್ರಭ್ರಾತೃಗಳಲ್ಲಿ ಹದಿನೆಂಟು ಜನರನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನಮ್ಮ ದೇವರ ಕೃಪಾಹಸ್ತ ನಮ್ಮ ಮೇಲೆ ಇದ್ದುದರಿಂದ ಅವರು ಇಸ್ರಯೇಲನ ಮಗ ಲೇವಿಯ ಕುಲದ ಮಹ್ಲೀ ಸಂತಾನದವರಲ್ಲಿ ಈಸ್ಸೆಕೆಲನನ್ನು, ಶೇರೇಬ್ಯನನ್ನು, ಅವನ ಪುತ್ರ ಭ್ರಾತೃಗಳಲ್ಲಿ ಹದಿನೆಂಟು ಮಂದಿಯನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ದೇವರು ನಮ್ಮ ಸಂಗಡವಿದ್ದ ಕಾರಣ, ಇದ್ದೋವಿನ ಸಂಬಂಧಿಕರು ಇವರನ್ನು ಕಳುಹಿಸಿಕೊಟ್ಟರು: ಮಹ್ಲೀಯ ಸಂತತಿಯವರಲ್ಲಿ ಜಾಣನಾದ ಶೇರೇಬ್ಯ, ಮಹ್ಲೀಯು ಲೇವಿಯ ವಂಶದವನಾಗಿದ್ದನು. ಲೇವಿಯು ಇಸ್ರೇಲನ ಒಬ್ಬ ಮಗನಾಗಿದ್ದನು. ಅವರು ಸಹ ತಮ್ಮ ಗಂಡುಮಕ್ಕಳನ್ನು ಮತ್ತು ಸಹೋದರರನ್ನು ಕಳುಹಿಸಿದರು. ಒಟ್ಟಿನಲ್ಲಿ ಆ ಕುಟುಂಬದಿಂದ 18 ಮಂದಿ ಗಂಡಸರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಮ್ಮ ದೇವರ ಕೃಪಾಹಸ್ತವು ನಮ್ಮ ಮೇಲೆ ಇದ್ದುದರಿಂದ, ಅವರು ಇಸ್ರಾಯೇಲಿನ ಮಗನಾಗಿರುವ ಲೇವಿಯ ಮಗ ಮಹ್ಲೀಯ ಪುತ್ರರಲ್ಲಿ ಬುದ್ಧಿವಂತನಾದ ಶೇರೇಬ್ಯನೂ, ಅವನ ಪುತ್ರರೂ, ಸಹೋದರರೂ ಆದ ಹದಿನೆಂಟು ಮಂದಿಯನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 8:18
22 ತಿಳಿವುಗಳ ಹೋಲಿಕೆ  

ಇದಲ್ಲದೆ ನನ್ನ ಮನಸ್ಸು ಒಪ್ಪುವ ಪಾಲಕರನ್ನು ನಿಮಗೆ ದಯಪಾಲಿಸುವೆನು; ಅವರು ನಿಮ್ಮನ್ನು ಜ್ಞಾನವಿವೇಕಗಳಿಂದ ಪೋಷಿಸುವರು.


ರಾಜವನಪಾಲಕನಾದ ಆಸಾಫನು ದೇವಾಲಯದ ಕೋಟೆಯ ಬಾಗಲುಗಳು, ಪಟ್ಟಣದ ಪೌಳಿಗೋಡೆ, ನಾನು ಸೇರುವ ಮನೆ ಇವುಗಳಿಗೆ ಬೇಕಾಗುವ ತೊಲೆಗಳಿಗಾಗಿ ಮರಗಳನ್ನು ಕೊಡುವ ಹಾಗೂ ರಾಜರು ನನ್ನ ಕೈಯಲ್ಲಿ ಪತ್ರಗಳನ್ನು ದಯಮಾಡಬೇಕು ಎಂದು ಬಿನ್ನವಿಸಲು ನನ್ನ ದೇವರ ಕೃಪಾಹಸ್ತಪಾಲನೆ ನನಗಿದ್ದದ್ದರಿಂದ


ಅರಸನ, ಅವನ ಮಂತ್ರಿಗಳ ಮತ್ತು ಅವನ ಎಲ್ಲಾ ಶ್ರೇಷ್ಠರಾದ ಸರದಾರರ ಮುಂದೆ ನನಗೆ ದಯೆತೋರಿಸಿದ್ದಾನೆ. ನನ್ನ ದೇವರಾದ ಯೆಹೋವನ ಹಸ್ತಪಾಲನೆಯು ನನಗೆ ದೊರಕಿದ್ದರಿಂದ ನಾನು ಧೈರ್ಯತಂದುಕೊಂಡು ನನ್ನೊಂದಿಗೆ ಪ್ರಯಾಣ ಮಾಡುವದಕ್ಕೆ ಕೆಲವು ಮಂದಿ ಇಸ್ರಾಯೇಲ್ ಪ್ರಧಾನರನ್ನು ಕೂಡಿಸಿಕೊಂಡೆನು.


ಬಳಿಕ ರಾಜನು ಶಾಸ್ತ್ರೀಯ ವಿದ್ಯೆಯ ಸರ್ವವಿಷಯಗಳಲ್ಲಿ ಅವರನ್ನು ವಿಚಾರಮಾಡಲು ಅವನ ಪೂರ್ಣರಾಜ್ಯದಲ್ಲಿನ ಎಲ್ಲಾ ಜೋಯಿಸರಿಗಿಂತಲೂ ಮಂತ್ರವಾದಿಗಳಿಗಿಂತಲೂ ಹತ್ತರಷ್ಟು ನಿಪುಣರಾಗಿ ಕಂಡುಬಂದರು.


ನಮ್ಮ ದೇವರ ಹಸ್ತವು ಆತನ ಎಲ್ಲಾ ಶರಣಾರ್ಥಿಗಳನ್ನೂ ಪಾಲಿಸುವದು; ಆತನ ಬಲವಾದ ರೌದ್ರಕ್ಕೆ ಆತನನ್ನು ತೊರೆದುಬಿಟ್ಟವರೆಲ್ಲರೂ ಗುರಿಯಾಗುವರು ಎಂದು ನಾವು ಅರಸನ ಮುಂದೆ ಹೇಳಿದ್ದರಿಂದ ದಾರಿಯಲ್ಲಿ ನಮ್ಮನ್ನು ಶತ್ರುಗಳಿಂದ ರಕ್ಷಿಸುವದಕ್ಕೋಸ್ಕರ ಸೈನ್ಯವನ್ನೂ ಅಶ್ವಬಲವನ್ನೂ ಕೇಳಿಕೊಳ್ಳುವದಕ್ಕೆ ನಾಚಿಕೊಂಡಿದ್ದೆನು.


ಎಜ್ರನು ಇಸ್ರಾಯೇಲ್‍ದೇವರಾದ ಯೆಹೋವನಿಂದ ದೊರಕಿದ ಮೋಶೆಯ ಧರ್ಮೋಪದೇಶದಲ್ಲಿ ಪಾರಂಗತನಾದ ಶಾಸ್ತ್ರಿಯಾಗಿದ್ದನು. ಅವನ ದೇವರಾದ ಯೆಹೋವನ ಹಸ್ತಪಾಲನೆಯಿಂದ ಅರಸನು ಅವನಿಗೆ ಇಷ್ಟವಾದದ್ದನ್ನೆಲ್ಲಾ ಅನುಗ್ರಹಿಸಿದನು.


ಮೆರಾರಿಯ ಮಕ್ಕಳು - ಮಹ್ಲೀ, ಮುಷೀ; ಇವರೆಲ್ಲರೂ ಲೇವಿಗೋತ್ರಗಳ ಮೂಲ ಪುರುಷರು.


ಸಹೋದರರೇ, ಬುದ್ಧಿಯ ವಿಷಯದಲ್ಲಿ ಬಾಲಕರಾಗಿರಬೇಡಿರಿ; ಕೆಟ್ಟತನದ ವಿಷಯದಲ್ಲಿ ಶಿಶುಗಳಾಗಿಯೇ ಇದ್ದು ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಾಗಿರಬೇಕು.


ಮನೆಯನ್ನು ಕಟ್ಟುವದಕ್ಕೆ ಜ್ಞಾನವೇ ಸಾಧನ; ಅದನ್ನು ಸ್ಥಿರಪಡಿಸುವದಕ್ಕೆ ವಿವೇಕವೇ ಆಧಾರ;


ನಿನ್ನ ಎಲ್ಲಾ ನಡವಳಿಯಲ್ಲಿ ಆತನ ಚಿತ್ತಕ್ಕೆ ವಿಧೇಯನಾಗಿರು; ಆತನೇ ನಿನ್ನ ಮಾರ್ಗಗಳನ್ನು ಸರಾಗಮಾಡುವನು.


ಈ ಲೇವಿಗೋತ್ರಪ್ರಧಾನರಲ್ಲಿ ಯೇಷೂವನ ಮಗನೂ ಯೋಚಾದಾಕನ ಮೊಮ್ಮಗನೂ ಆದ ಯೋಯಾಕೀಮ್, ದೇಶಾಧಿಪತಿಯಾದ ನೆಹೆಮೀಯ, ಯಾಜಕನೂ ಧರ್ಮೋಪದೇಶಕನೂ ಆದ ಎಜ್ರ


ರೆಹೋಬ್, ಹಷಬ್ಯ, ಜಕ್ಕೂರ್, ಶೇರೇಬ್ಯ, ಶೆಬನ್ಯ,


ಆಮೇಲೆ ಯೇಷೂವ, ಬಾನೀ, ಶೇರೇಬ್ಯ, ಯಾಮೀನ್, ಅಕ್ಕೂಬ್, ಶಬ್ಬೆತೈ, ಹೋದೀಯ, ಮಾಸೇಯ, ಕೆಲೀಟ, ಅಜರ್ಯ, ಯೋಜಾಬಾದ್, ಹಾನಾನ್, ಪೆಲಾಯ ಎಂಬ ಲೇವಿಯರು ಧರ್ಮಶಾಸ್ತ್ರವನ್ನು ಜನರು ಗ್ರಹಿಸುವಂತೆ ಮಾಡಿದರು.


ಅನಂತರ ನಾನು ಯಾಜಕರ ಮುಖ್ಯಸ್ಥರಿಂದ ಶೇರೇಬ್ಯ, ಹಷಬ್ಯ ಇವರನ್ನೂ ಇವರ ಸಹೋದರರಲ್ಲಿ ಹತ್ತು ಮಂದಿಯನ್ನೂ ಆರಿಸಿಕೊಂಡು


ಪ್ರಧಾನರಾದ ಎಲೀಯೆಜೆರ್, ಅರೀಯೇಲ್, ಶೆಮಾಯ, ಎಲ್ನಾತಾನ್, ಯಾರೀಬ್, ಎಲ್ನಾತಾನ್, ನಾತಾನ್, ಜೆಕರ್ಯ, ಮೆಷುಲ್ಲಾಮ್ ಇವರನ್ನೂ ಪಂಡಿತರಾದ ಯೋಯಾರೀಬ್,


ಗೋತ್ರಸ್ಥಾಪಕರಾದ ಮೆರಾರೀಯ ಮಕ್ಕಳು - ಮಹ್ಲೀ, ಮೂಷೀ ಎಂಬವರು. ಗೋತ್ರ ಕುಟುಂಬಗಳ ಪ್ರಕಾರ ಇವರೇ ಲೇವಿಯ ವಂಶದವರು.


ಹಿಜ್ಕೀಯನು ಯೆಹೋವನ [ಭಜನೆಯಲ್ಲಿ] ಗಟ್ಟಿಗರಾಗಿದ್ದ ಎಲ್ಲಾ ಲೇವಿಯರೊಡನೆ ಪ್ರೀತಿಯಿಂದ ಮಾತಾಡಿದನು. ನೇಮಕವಾದ ಏಳು ದಿವಸಗಳವರೆಗೂ ಜನರು ಸಮಾಧಾನಯಜ್ಞಗಳನ್ನರ್ಪಿಸುತ್ತಾ ತಮ್ಮ ಪಿತೃಗಳ ದೇವರಾದ ಯೆಹೋವನನ್ನು ತಮ್ಮ ದೇವರೆಂದು ಕೊಂಡಾಡುತ್ತಾ ಔತಣ ಮಾಡಿದರು.


ಅವನೊಡನೆ ಯೆಶಾಯನನ್ನೂ ಅವರ ಪುತ್ರಭ್ರಾತೃಗಳಲ್ಲಿ ಇಪ್ಪತ್ತು ಮಂದಿಯನ್ನೂ ದಾವೀದನೂ ಅವನ ಸರದಾರರೂ


ಲೇವಿಯ ಮಕ್ಕಳು - ಗೇರ್ಷೋನ್, ಕೆಹಾತ್, ಮೆರಾರೀ.


ಎಲ್ಲಾಜಾರನು ಫೀನೆಹಾಸನನ್ನು ಪಡೆದನು; ಫೀನೆಹಾಸನು ಅಬೀಷೂವನನ್ನು ಪಡೆದನು.


ಅವನು ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಬಾಬೆಲಿನಿಂದ ಹೊರಟನು; ತನ್ನ ದೇವರ ಕೃಪಾಹಸ್ತಪಾಲನೆಯಿಂದ ಐದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆರೂಸಲೇವಿುಗೆ ಸೇರಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು