ಎಜ್ರ 8:21 - ಕನ್ನಡ ಸತ್ಯವೇದವು J.V. (BSI)21 ಆಮೇಲೆ ಆ ಅಹವಾ ನದಿಯ ಬಳಿಯಲ್ಲಿ - ನಾವು ಉಪವಾಸದಿಂದಿದ್ದು ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸಿಕೊಂಡು ನಮಗೂ ನಮ್ಮ ಮನೆಯವರಿಗೂ ನಮ್ಮ ಎಲ್ಲಾ ಆಸ್ತಿಗೂ ಪ್ರಯಾಣದಲ್ಲಿ ಶುಭವನ್ನು ಕೇಳಿಕೊಳ್ಳಬೇಕೆಂದು ಪ್ರಕಟಿಸಿದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆ ಮೇಲೆ ಆ ಅಹವಾ ನದಿಯ ಬಳಿಯಲ್ಲಿ ನಾವು ಉಪವಾಸದಿಂದಿದ್ದು, ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸಿಕೊಂಡು, ನಮಗೂ ನಮ್ಮ ಮನೆಯವರಿಗೂ ನಮ್ಮ ಎಲ್ಲಾ ಆಸ್ತಿಗೂ ಪ್ರಯಾಣದಲ್ಲಿ ಶುಭವನ್ನು ಬೇಡಿಕೊಳ್ಳಬೇಕೆಂದು ಉಪವಾಸವನ್ನು ಪ್ರಕಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಆಮೇಲೆ ಆ ಅಹವಾ ನದಿಯ ಬಳಿಯಲ್ಲಿ, ನಾವು ಉಪವಾಸದಿಂದಿದ್ದು ನಮ್ಮ ದೇವರ ಮುಂದೆ ನಮ್ಮನ್ನೇ ತಗ್ಗಿಸಿಕೊಂಡು, ನಮಗೂ ನಮ್ಮ ಮನೆಯವರಿಗೂ ನಮ್ಮ ಎಲ್ಲ ಆಸ್ತಿಗೂ ಪ್ರಯಾಣದಲ್ಲಿ ಶುಭವನ್ನು ಕೋರಬೇಕೆಂದು ಪ್ರಕಟಿಸಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಅಹವಾ ನದಿಯ ದಡದಲ್ಲಿದ್ದಾಗ ನಮಗೆ ಸುಖ ಪ್ರಯಾಣ ದೊರೆಯುವಂತೆ ಎಲ್ಲಾ ತರದ ತೊಂದರೆಗಳಿಂದ ಪಾರು ಮಾಡುವಂತೆ ಮತ್ತು ನಮ್ಮಲ್ಲಿರುವ ಸ್ವತ್ತುಗಳನ್ನು ಕಾಪಾಡುವಂತೆ ನಮ್ಮ ದೇವರಲ್ಲಿ ದೀನತೆಯಿಂದ ಉಪವಾಸ ಪ್ರಾರ್ಥನೆ ಮಾಡಬೇಕೆಂದು ನೆರೆದುಬಂದ ಜನರಿಗೆ ಪ್ರಕಟಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆಗ ನಾವು ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸಿಕೊಳ್ಳುವುದಕ್ಕೂ, ನಮಗೂ ನಮ್ಮ ಮಕ್ಕಳಿಗೂ, ನಮ್ಮ ಎಲ್ಲಾ ಸ್ಥಿತಿಗೂ ಅವರಿಂದ ಸರಿಯಾದ ಮಾರ್ಗವನ್ನು ಹುಡುಕುವುದಕ್ಕೂ, ನಾನು ಅಲ್ಲಿ ಅಹಾವ ನದಿಯ ಬಳಿಯಲ್ಲಿ ಉಪವಾಸವನ್ನು ಮಾಡಲು ಪ್ರಕಟಿಸಿದೆನು. ಅಧ್ಯಾಯವನ್ನು ನೋಡಿ |