Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 8:22 - ಕನ್ನಡ ಸತ್ಯವೇದವು J.V. (BSI)

22 ನಮ್ಮ ದೇವರ ಹಸ್ತವು ಆತನ ಎಲ್ಲಾ ಶರಣಾರ್ಥಿಗಳನ್ನೂ ಪಾಲಿಸುವದು; ಆತನ ಬಲವಾದ ರೌದ್ರಕ್ಕೆ ಆತನನ್ನು ತೊರೆದುಬಿಟ್ಟವರೆಲ್ಲರೂ ಗುರಿಯಾಗುವರು ಎಂದು ನಾವು ಅರಸನ ಮುಂದೆ ಹೇಳಿದ್ದರಿಂದ ದಾರಿಯಲ್ಲಿ ನಮ್ಮನ್ನು ಶತ್ರುಗಳಿಂದ ರಕ್ಷಿಸುವದಕ್ಕೋಸ್ಕರ ಸೈನ್ಯವನ್ನೂ ಅಶ್ವಬಲವನ್ನೂ ಕೇಳಿಕೊಳ್ಳುವದಕ್ಕೆ ನಾಚಿಕೊಂಡಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನಮ್ಮ ದೇವರ ಹಸ್ತವು ಆತನ ಎಲ್ಲಾ ಶರಣಾರ್ಥಿಗಳನ್ನೂ ಪಾಲಿಸುವುದು; ಆತನನ್ನು ತೊರೆದುಬಿಟ್ಟವರೆಲ್ಲರೂ ಆತನ ಉಗ್ರವಾದ ಕೋಪಕ್ಕೆ ಗುರಿಯಾಗುವರು. ದಾರಿಯಲ್ಲಿ ನಮ್ಮನ್ನು ಶತ್ರುಗಳಿಂದ ರಕ್ಷಿಸುವುದಕ್ಕೋಸ್ಕರ ಸೈನ್ಯವನ್ನೂ, ಅಶ್ವಬಲವನ್ನೂ ಕೊಡಲು ಅರಸನಿಂದ ಸಹಾಯ ಕೇಳಲು ನಾಚಿಕೊಂಡಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ನಮ್ಮ ದೇವರ ಕೃಪಾಹಸ್ತ ಅವರ ಎಲ್ಲ ಶರಣಾರ್ಥಿಗಳ ಮೇಲಿತ್ತು. ನಮ್ಮ ದೇವರನ್ನು ತೊರೆದುಬಿಟ್ಟವರೆಲ್ಲರು ಅವರ ಪ್ರಬಲವಾದ ರೌದ್ರಕ್ಕೆ ಗುರಿಯಾಗುವರು ಎಂದು ನಾವು ಅರಸನ ಮುಂದೆ ಹೇಳಿದ್ದೆವು. ಆದುದರಿಂದ ದಾರಿಯಲ್ಲಿ ನಮ್ಮನ್ನು ಶತ್ರುಗಳಿಂದ ರಕ್ಷಿಸುವುದಕ್ಕಾಗಿ ಸೈನ್ಯವನ್ನಾಗಲಿ, ಅಶ್ವಬಲವನ್ನಾಗಲಿ ಕೇಳಿಕೊಳ್ಳುವುದಕ್ಕೆ ನಾನು ನಾಚಿಕೊಂಡಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನಾವು ಪ್ರಯಾಣ ಮಾಡುವಾಗ ದಾರಿಯಲ್ಲಿ ಶತ್ರುಗಳಿದ್ದುದರಿಂದ ನಮ್ಮ ಸಂರಕ್ಷಣೆಗಾಗಿ ಸಿಪಾಯಿಗಳನ್ನು ಮತ್ತು ರಾಹುತರನ್ನು ಅರಸನಿಂದ ಕೇಳಲು ನನಗೆ ಸಂಕೋಚವಾಯಿತು. ಯಾಕೆಂದರೆ, “ನಮ್ಮ ದೇವರು ತನ್ನನ್ನು ನಂಬಿದವರೊಂದಿಗಿದ್ದಾನೆ; ಆತನಿಂದ ದೂರಹೋಗುವವರ ಮೇಲೆ ಆತನು ಕೋಪವುಳ್ಳವನಾಗಿದ್ದಾನೆ” ಎಂದು ರಾಜನಾದ ಅರ್ತಷಸ್ತನಿಗೆ ನಾವು ಹೇಳಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 “ನಮ್ಮ ದೇವರ ಕೃಪಾಹಸ್ತವು ಅವರನ್ನು ಹುಡುಕುವವರೆಲ್ಲರ ಮೇಲೆಯೂ ಇದೆ, ಆದರೆ ಅವರ ಕೋಪವು ಅವರನ್ನು ತ್ಯಜಿಸುವ ಎಲ್ಲರ ವಿರುದ್ಧವಾಗಿರುತ್ತದೆ,” ಎಂದು ನಾವು ಅರಸನಿಗೆ ಹೇಳಿದ್ದರಿಂದ, ಮಾರ್ಗದಲ್ಲಿ ಶತ್ರುವಿಗೆ ವಿರೋಧವಾಗಿ ನಮಗೆ ಸಹಾಯ ಕೊಡಲು ಸೈನ್ಯವನ್ನೂ ಅಶ್ವಬಲವನ್ನೂ ಅರಸನಿಂದ ಕೇಳಲು ನಾಚಿಕೆಪಟ್ಟೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 8:22
24 ತಿಳಿವುಗಳ ಹೋಲಿಕೆ  

ಯಾಕಂದರೆ ಕರ್ತನು ನೀತಿವಂತರನ್ನು ಕಟಾಕ್ಷಿಸುತ್ತಾನೆ, ಆತನು ಅವರ ವಿಜ್ಞಾಪನೆಗಳಿಗೆ ಕಿವಿಗೊಡುತ್ತಾನೆ. ಕೆಡುಕರಿಗೋ ಕರ್ತನು ಕೋಪದ ಮುಖವುಳ್ಳವನಾಗಿರುತ್ತಾನೆ ಎಂದು ಬರೆದದೆ.


ಯೆಹೋವನು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ದೃಷ್ಟಿಯನ್ನು ಪ್ರಸರಿಸುತ್ತಾ ತನ್ನ ಕಡೆಗೆ ಯಥಾರ್ಥಮನಸ್ಸುಳ್ಳವರ ರಕ್ಷಣೆಗಾಗಿ ತನ್ನ ಪ್ರತಾಪವನ್ನು ತೋರ್ಪಡಿಸುತ್ತಾನೆ. ನೀನು ಈ ಕಾರ್ಯದಲ್ಲಿ ಬುದ್ಧಿಹೀನನಾಗಿ ನಡೆದುಕೊಂಡಿದ್ದೀ; ಇಂದಿನಿಂದ ನಿನಗೆ ಯುದ್ಧಗಳು ಇದ್ದೇ ಇರುವವು ಎಂದು ಹೇಳಿದನು.


ಯೆಹೋವನು ತನ್ನನ್ನು ನಿರೀಕ್ಷಿಸುವವರಿಗೂ ಹುಡುಕುವವರಿಗೂ ಮಹೋಪಕಾರಿಯಾಗಿದ್ದಾನೆ.


ಅವನು ಆಸನನ್ನು ಎದುರುಗೊಳ್ಳುವದಕ್ಕೆ ಹೋಗಿ ಅವನಿಗೆ - ಆಸನೇ, ಎಲ್ಲಾ ಯೆಹೂದ ಬೆನ್ಯಾಮೀನ್ ಕುಲಗಳವರೇ, ಕಿವಿಗೊಡಿರಿ. ನೀವು ಯೆಹೋವನನ್ನು ಹೊಂದಿಕೊಂಡಿರುವ ತನಕ ಆತನೂ ನಿಮ್ಮೊಂದಿಗಿರುವನು; ನೀವು ಆತನನ್ನು ಹುಡುಕಿದರೆ ನಿಮಗೆ ಸಿಕ್ಕುವನು; ಆತನನ್ನು ಬಿಟ್ಟರೆ ಆತನೂ ನಿಮ್ಮನ್ನು ಬಿಟ್ಟು ಬಿಡುವನು.


ಯೆಹೋವನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ; ಆತನ ಆಶ್ರಿತರಲ್ಲಿ ಒಬ್ಬರಾದರೂ ಅಪರಾಧಿಯೆಂದು ಎಣಿಸಲ್ಪಡುವದಿಲ್ಲ.


ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಅನುಕೂಲವಾಗುತ್ತವೆ ಎಂದು ನಮಗೆ ಗೊತ್ತದೆ.


ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು; ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.


ಆದರೆ ನನ್ನವನಾಗಿರುವ ನೀತಿವಂತನು ನಂಬಿಕೆಯಿಂದಲೇ ಬದುಕುವನು; ಅವನು ಹಿಂದೆಗೆದರೆ ಅವನಲ್ಲಿ ನನಗೆ ಸಂತೋಷವಿರುವದಿಲ್ಲ ಎಂದು ಬರೆದದೆ.


ಎಜ್ರನು ಇಸ್ರಾಯೇಲ್‍ದೇವರಾದ ಯೆಹೋವನಿಂದ ದೊರಕಿದ ಮೋಶೆಯ ಧರ್ಮೋಪದೇಶದಲ್ಲಿ ಪಾರಂಗತನಾದ ಶಾಸ್ತ್ರಿಯಾಗಿದ್ದನು. ಅವನ ದೇವರಾದ ಯೆಹೋವನ ಹಸ್ತಪಾಲನೆಯಿಂದ ಅರಸನು ಅವನಿಗೆ ಇಷ್ಟವಾದದ್ದನ್ನೆಲ್ಲಾ ಅನುಗ್ರಹಿಸಿದನು.


ಅರಸನ, ಅವನ ಮಂತ್ರಿಗಳ ಮತ್ತು ಅವನ ಎಲ್ಲಾ ಶ್ರೇಷ್ಠರಾದ ಸರದಾರರ ಮುಂದೆ ನನಗೆ ದಯೆತೋರಿಸಿದ್ದಾನೆ. ನನ್ನ ದೇವರಾದ ಯೆಹೋವನ ಹಸ್ತಪಾಲನೆಯು ನನಗೆ ದೊರಕಿದ್ದರಿಂದ ನಾನು ಧೈರ್ಯತಂದುಕೊಂಡು ನನ್ನೊಂದಿಗೆ ಪ್ರಯಾಣ ಮಾಡುವದಕ್ಕೆ ಕೆಲವು ಮಂದಿ ಇಸ್ರಾಯೇಲ್ ಪ್ರಧಾನರನ್ನು ಕೂಡಿಸಿಕೊಂಡೆನು.


ನೀವು ದೇವರಾದ ಯೆಹೋವನ ನಿಬಂಧನೆಯನ್ನು ಮೀರಿ ಅನ್ಯದೇವತೆಗಳಿಗೆ ಅಡ್ಡಬಿದ್ದು ಸೇವಿಸಿದರೆ ಯೆಹೋವನ ಕೋಪಾಗ್ನಿಯು ನಿಮ್ಮ ಮೇಲೆ ಉರಿಯುವದು; ಮತ್ತು ಆತನು ಕೊಟ್ಟ ಒಳ್ಳೆಯ ದೇಶದಿಂದ ನೀವು ತೆಗೆದುಹಾಕಲ್ಪಟ್ಟು ಬೇಗನೆ ನಾಶವಾದೀರಿ ಅಂದನು.


ಅವನು ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಬಾಬೆಲಿನಿಂದ ಹೊರಟನು; ತನ್ನ ದೇವರ ಕೃಪಾಹಸ್ತಪಾಲನೆಯಿಂದ ಐದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆರೂಸಲೇವಿುಗೆ ಸೇರಿದನು.


ಯಾಕಂದರೆ ನಾನು ಅವನ ಮುಂದೆ ನಿಮ್ಮನ್ನು ಹೊಗಳಿದ್ದರಲ್ಲಿ ನಾಚಿಕೆಪಡಬೇಕಾಗಿ ಬರಲಿಲ್ಲ. ನಾವು ನಿಮಗೆ ಹೇಳಿದ ಎಲ್ಲಾ ಮಾತುಗಳು ಹೇಗೆ ಸತ್ಯವಾಗಿದ್ದವೋ ಹಾಗೆ ನಾವು ತೀತನ ಮುಂದೆ ಆಡಿದ ಹೊಗಳಿಕೆಯ ಮಾತುಗಳೂ ಸತ್ಯವೆಂದು ಕಂಡುಬಂದವು.


ನಾನಂತೂ ಈ ಹಕ್ಕುಗಳಲ್ಲಿ ಒಂದನ್ನೂ ನಡಿಸಲಿಲ್ಲ; ನನ್ನ ವಿಷಯದಲ್ಲಿಯೂ ಹೀಗಾಗಬೇಕೆಂದು ಈ ಸಂಗತಿಗಳನ್ನು ನಾನು ಬರೆಯಲಿಲ್ಲ. ಅದಕ್ಕಿಂತ ಸಾಯುವದೇ ನನಗೆ ಲೇಸು. ಹೊಗಳಿಕೊಳ್ಳುವದಕ್ಕೆ ನನಗಿರುವ ಈ ಆಸ್ಪದವನ್ನು ಯಾರೂ ತೆಗೆದುಬಿಡಬಾರದು.


ನಿನ್ನ ಕೋಪದ ಬಲವನ್ನೂ ಭಯಭಕ್ತಿಗೆ ಕಾರಣವಾಗಿರತಕ್ಕ ನಿನ್ನ ರೌದ್ರವನ್ನೂ ಗ್ರಹಿಸುವವರಾರು?


ಯೆಹೋವನ ಸರ್ವಸಭೆಯ ಮಾತನ್ನು ಕೇಳಿರಿ - ನೀವು ಇಸ್ರಾಯೇಲ್ ದೇವರಿಗೆ ವಿರುದ್ಧವಾಗಿ ಇಂಥ ದ್ರೋಹ ಮಾಡಿದ್ದೇಕೆ? ನಿಮಗೋಸ್ಕರ ವೇದಿಯನ್ನು ಕಟ್ಟಿಕೊಂಡದರಿಂದ ನೀವು ಯೆಹೋವನಿಗೆ ವಿಮುಖರಾದ ಹಾಗಾಯಿತಲ್ಲವೇ. ನೀವು ಈ ಹೊತ್ತು ಯೆಹೋವನಿಗೆ ವಿರುದ್ಧವಾಗಿ ತಿರುಗಿಬಿದ್ದಂತಾಯಿತು.


ನಾವು ಮೊದಲನೆಯ ತಿಂಗಳಿನ ಹನ್ನೆರಡನೆಯ ದಿನದಲ್ಲಿ ಅಹವಾ ನದಿಯನ್ನು ಬಿಟ್ಟು ಯೆರೂಸಲೇವಿುಗೆ ಹೊರಟೆವು. ನಮ್ಮ ದೇವರ ಹಸ್ತವು ನಮ್ಮನ್ನು ಪಾಲಿಸುತ್ತಾ ಇತ್ತು. ಆತನು ಶತ್ರುಗಳ ಮತ್ತು ದಾರಿಯಲ್ಲಿ ಹೊಂಚುಹಾಕುವವರ ಕೈಗೆ ಸಿಕ್ಕದಂತೆ ನಮ್ಮನ್ನು ತಪ್ಪಿಸಿದನು.


ಅರಸನು ಅವುಗಳನ್ನು ನನಗೆ ಕೊಟ್ಟದ್ದಲ್ಲದೆ ನನ್ನನ್ನು ಸಾಗಕಳುಹಿಸುವದಕ್ಕೋಸ್ಕರ ಸೇನಾಧಿಪತಿಗಳನ್ನೂ ರಾಹುತರನ್ನೂ ಕಳುಹಿಸಿದನು. ಹೀಗೆ ನಾನು ಹೊಳೆಯಾಚೆಯ ದೇಶಾಧಿಪತಿಗಳ ಬಳಿಗೆ ಬಂದು ಅರಸನ ಪತ್ರಗಳನ್ನು ಅವರಿಗೆ ಕೊಟ್ಟೆನು.


ಅವರು ಬಿದ್ದು ಹೋಗಿದ್ದಾರೆ; ನಾವಾದರೋ ಎದ್ದು ನಿಂತಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು