Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 8:23 - ಕನ್ನಡ ಸತ್ಯವೇದವು J.V. (BSI)

23 ನಾವು ಈ ಕಾರಣದಿಂದ ಉಪವಾಸಮಾಡಿ ದೇವರನ್ನು ಪ್ರಾರ್ಥಿಸಲು ಆತನು ನಮಗೆ ಪ್ರಸನ್ನನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆದುದರಿಂದ ನಾವು ಉಪವಾಸಮಾಡಿ ದೇವರನ್ನು ಪ್ರಾರ್ಥಿಸಲು ಆತನು ನಮಗೆ ಪ್ರಸನ್ನನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನಾವು ಈ ಕಾರಣ ಉಪವಾಸಮಾಡಿ ದೇವರನ್ನು ಪ್ರಾರ್ಥಿಸಿದೆವು; ಅವರು ನಮಗೆ ಪ್ರಸನ್ನರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಹಾಗೆ ನಾವು ನಮ್ಮ ಪ್ರಯಾಣದ ಕುರಿತು ದೇವರಿಗೆ ಉಪವಾಸ ಪ್ರಾರ್ಥನೆ ಮಾಡಿದೆವು. ಆತನು ಅದನ್ನು ಅನುಗ್ರಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದ್ದರಿಂದ ನಾವು ಉಪವಾಸ ಮಾಡಿ ಇದಕ್ಕೋಸ್ಕರ ನಮ್ಮ ದೇವರನ್ನು ಬೇಡಿಕೊಂಡೆವು. ದೇವರು ನಮ್ಮ ವಿಜ್ಞಾಪನೆಯನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 8:23
18 ತಿಳಿವುಗಳ ಹೋಲಿಕೆ  

ನಾವು ಮೊದಲನೆಯ ತಿಂಗಳಿನ ಹನ್ನೆರಡನೆಯ ದಿನದಲ್ಲಿ ಅಹವಾ ನದಿಯನ್ನು ಬಿಟ್ಟು ಯೆರೂಸಲೇವಿುಗೆ ಹೊರಟೆವು. ನಮ್ಮ ದೇವರ ಹಸ್ತವು ನಮ್ಮನ್ನು ಪಾಲಿಸುತ್ತಾ ಇತ್ತು. ಆತನು ಶತ್ರುಗಳ ಮತ್ತು ದಾರಿಯಲ್ಲಿ ಹೊಂಚುಹಾಕುವವರ ಕೈಗೆ ಸಿಕ್ಕದಂತೆ ನಮ್ಮನ್ನು ತಪ್ಪಿಸಿದನು.


ಅಲ್ಲಿಂದಲಾದರೂ ನೀವು ಸಂಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ನಿಮ್ಮ ದೇವರಾದ ಯೆಹೋವನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು.


ಅವರು ದೇವರ ಮೇಲೆ ಭರವಸವಿಟ್ಟದರಿಂದ ಆತನು ತನಗೆ ಮೊರೆಯಿಟ್ಟ ಅವರಿಗೆ ಕಿವಿಗೊಟ್ಟು ಯುದ್ಧದಲ್ಲಿ ಜಯವನ್ನು ಅನುಗ್ರಹಿಸಿದನು. ಹಗ್ರೀಯರೂ ಇವರ ಜೊತೆಯಲ್ಲಿದ್ದವರೂ ಅವರ ಕೈಯಲ್ಲಿ ಕೊಡಲ್ಪಟ್ಟರು.


ಉಪವಾಸವಿದ್ದು ಗೋಣಿತಟ್ಟು ಸುತ್ತಿಕೊಂಡು ಬೂದಿ ಬಳಿದುಕೊಂಡು ಕರ್ತನಾದ ದೇವರ ಕಡೆಗೆ ಮುಖವೆತ್ತಿ ಪ್ರಾರ್ಥನೆ ವಿಜ್ಞಾಪನೆಗಳಲ್ಲಿ ನಿರತನಾದೆನು.


ಇದಲ್ಲದೆ ಯೆಹೋವನು ಐಗುಪ್ತ್ಯರನ್ನು ಹೊಡೆಯುವನು, ಗಾಯಮಾಡಿ ವಾಸಿಮಾಡುವವನಾಗಿಯೇ ಹೊಡೆಯುವನು; ಅವರು ಯೆಹೋವನ ಕಡೆಗೆ ತಿರುಗಿಕೊಳ್ಳುವರು; ಆತನು ಅವರ ವಿಜ್ಞಾಪನೆಯನ್ನು ಲಾಲಿಸಿ ಅವರನ್ನು ಗುಣಪಡಿಸುವನು.


ಅದಕ್ಕೆ ಕೊರ್ನೇಲ್ಯನು - ನಾನು ನಾಲ್ಕು ದಿವಸಗಳ ಹಿಂದೆ ಮಧ್ಯಾಹ್ನದ ಮೇಲೆ ಮೂರು ಗಂಟೆಗೆ ನಡೆಯತಕ್ಕ ದೇವರ ಪ್ರಾರ್ಥನೆಯನ್ನು ಇಷ್ಟು ಹೊತ್ತಿನವರೆಗೂ ನನ್ನ ಮನೆಯಲ್ಲಿ ಮಾಡುತ್ತಿದ್ದಾಗ ಹೊಳೆಯುವ ವಸ್ತ್ರವನ್ನು ಧರಿಸಿಕೊಂಡಿದ್ದ ಒಬ್ಬ ಮನುಷ್ಯನು ನನ್ನೆದುರಿಗೆ ನಿಂತುಕೊಂಡು -


ಆಕೆ ದೇವಾಲಯವನ್ನು ಬಿಟ್ಟುಹೋಗದೆ ಉಪವಾಸ ವಿಜ್ಞಾಪನೆಗಳಿಂದ ರಾತ್ರಿಹಗಲೂ ದೇವರ ಸೇವೆಯನ್ನು ಮಾಡುತ್ತಿದ್ದಳು.


ನನ್ನನ್ನು ಕೇಳಿಕೋ, ನಾನು ನಿನಗೆ ಸದುತ್ತರವನ್ನು ದಯಪಾಲಿಸಿ ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು.


ಅದೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಇಸ್ರಾಯೇಲ್ಯರು ಉಪವಾಸವಾಗಿದ್ದು ಗೋಣೀತಟ್ಟನ್ನು ಕಟ್ಟಿಕೊಂಡು ತಲೆಯ ಮೇಲೆ ಮಣ್ಣುಹಾಕಿಕೊಂಡು ನೆರೆದು ಬಂದರು.


ಆಕೆ ಬಂಜೆಯಾಗಿರಲಾಗಿ ಅವನು ಆಕೆಗೋಸ್ಕರ ಯೆಹೋವನನ್ನು ಬೇಡಿಕೊಂಡನು. ಯೆಹೋವನು ಅವನ ವಿಜ್ಞಾಪನೆಯನ್ನು ಲಾಲಿಸಿದ್ದರಿಂದ ರೆಬೆಕ್ಕಳು ಬಸುರಾದಳು.


(ಯೆಹೋವಾಹಾಜನು ಯೆಹೋವನಿಗೆ ಮೊರೆಯಿಟ್ಟನು. ಆತನು ಅವನ ಮೊರೆಯನ್ನು ಲಾಲಿಸಿ ಅರಾಮ್ಯರ ಅರಸನಿಂದ ಬಹಳವಾಗಿ ಬಾಧಿಸಲ್ಪಟ್ಟ ಇಸ್ರಾಯೇಲ್ಯರ ಮೇಲೆ ಕಟಾಕ್ಷವಿಟ್ಟು


ಸ್ವಬುದ್ಧಿಯನ್ನೇ ಆಧಾರಮಾಡಿಕೊಳ್ಳದೆ ಪೂರ್ಣಮನಸ್ಸಿನಿಂದ ಯೆಹೋವನಲ್ಲಿ ಭರವಸವಿಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು