Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 8:28 - ಕನ್ನಡ ಸತ್ಯವೇದವು J.V. (BSI)

28 ಅವು ಬಂಗಾರದಷ್ಟು ಬೆಲೆಯುಳ್ಳವುಗಳು. ನಾನು ಅವರಿಗೆ - ನೀವು ಯೆಹೋವನ ಸ್ವಕೀಯರು; ಆ ಪಾತ್ರೆಗಳೂ ದೇವರ ವಸ್ತುಗಳು; ಆ ಬೆಳ್ಳಿಬಂಗಾರವೂ ನಿಮ್ಮ ಪಿತೃಗಳ ದೇವರಾದ ಯೆಹೋವನಿಗೋಸ್ಕರ ಸಮರ್ಪಿತವಾದ ಕಾಣಿಕೆಯು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನಾನು ಅವರಿಗೆ, “ನೀವು ಯೆಹೋವನ ಸ್ವಕೀಯರು; ಆ ಪಾತ್ರೆಗಳೂ, ದೇವರ ವಸ್ತುಗಳು; ಆ ಬೆಳ್ಳಿಬಂಗಾರವೂ ನಿಮ್ಮ ಪೂರ್ವಿಕರ ದೇವರಾದ ಯೆಹೋವನಿಗೋಸ್ಕರ ಸಮರ್ಪಿತವಾದ ಕಾಣಿಕೆಯು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ನಾನು ಅವರಿಗೆ, ‘ನೀವು ಸರ್ವೇಶ್ವರನ ಸ್ವಕೀಯರು; ಆ ಪಾತ್ರೆಗಳು ಕೂಡ ದೇವರ ವಸ್ತುಗಳು; ಆ ಬೆಳ್ಳಿಬಂಗಾರ ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರನಿಗೆ ಸಮರ್ಪಿತವಾದ ಕಾಣಿಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆ ಹನ್ನೆರಡು ಮಂದಿ ಯಾಜಕರಿಗೆ ನಾನು ಹೇಳಿದ್ದೇನೆಂದರೆ, “ನೀವು ಮತ್ತು ಈ ವಸ್ತುಗಳು ಯೆಹೋವನಿಗೆ ಪರಿಶುದ್ಧವಾದವುಗಳಾಗಿವೆ. ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಜನರು ಕಾಣಿಕೆ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ನಾನು ಅವರಿಗೆ, “ನೀವು ಯೆಹೋವ ದೇವರಿಗೆ ಪ್ರತಿಷ್ಠಿತರಾಗಿದ್ದೀರಿ. ಈ ವಸ್ತುಗಳು ಹಾಗೆಯೇ ಪ್ರತಿಷ್ಠಿತವು. ಈ ಬೆಳ್ಳಿ ಬಂಗಾರವು ನಿಮ್ಮ ಪಿತೃಗಳ ದೇವರಾಗಿರುವ ಯೆಹೋವ ದೇವರಿಗೆ ಸಮರ್ಪಿತವಾದ ಕಾಣಿಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 8:28
15 ತಿಳಿವುಗಳ ಹೋಲಿಕೆ  

ತೊಲಗಿರಿ, ತೊಲಗಿರಿ, ಬಾಬೆಲಿನಿಂದ ಹೊರಡಿರಿ, ಅಶುದ್ಧವಾದ ಯಾವದನ್ನೂ ಮುಟ್ಟದಿರಿ, ಅದರ ಮಧ್ಯದೊಳಗಿಂದ ತೆರಳಿರಿ, ಯೆಹೋವನ ಆರಾಧನೆಯ ಉಪಕರಣಗಳನ್ನು ಹೊರುವವರೇ, ಶುದ್ಧರಾಗಿರಿ!


ಕೆಲಸ ತೀರಿದಾಗ ಅವರು ಉಳಿದ ಹಣವನ್ನು ಅರಸನಿಗೂ ಯೆಹೋಯಾದನಿಗೂ ಒಪ್ಪಿಸಿದರು. ಇವರು ಅದರಿಂದ ಯೆಹೋವನ ಆಲಯದ ಆರಾಧನೆಗಾಗಿಯೂ ಯಜ್ಞಾರ್ಪಣೆಗಾಗಿಯೂ ಉಪಯೋಗವಾಗುವ ಧೂಪಾರತಿ, ಬೆಳ್ಳಿಬಂಗಾರದ ಪಾತ್ರೆ ಮೊದಲಾದ ಸಾಮಾನುಗಳನ್ನು ಮಾಡಿಸಿದರು. ಯೆಹೋಯಾದನ ಜೀವಮಾನದಲ್ಲೆಲ್ಲಾ ಯೆಹೋವನ ಆಲಯದಲ್ಲಿ ಪ್ರತಿನಿತ್ಯವೂ ಸರ್ವಾಂಗಹೋಮ ಸಮರ್ಪಣೆಯಾಗುತ್ತಿತ್ತು.


ಅವರು ಆರೋನ್ಯರ ಕೈಕೆಳಗಿದ್ದುಕೊಂಡು ಯೆಹೋವನ ಆಲಯದ ಪರಿಚರ್ಯೆಯನ್ನು ನಡಿಸುತ್ತಿದ್ದರು. ಅವರ ಕೆಲಸಗಳು ಯಾವವಂದರೆ - ಅಂಗಳ ಕೋಣೆಗಳನ್ನು ನೋಡಿಕೊಳ್ಳುವದೂ ದೇವಾಲಯಕ್ಕೆ ಸಂಬಂಧಪಟ್ಟವುಗಳನ್ನೆಲ್ಲಾ ಶುದ್ಧ ಮಾಡುವದೂ ದೇವಾಲಯದಲ್ಲಿ ಸೇವೆಮಾಡುವದೂ


ಲೇವಿಕುಲದ ವಿಷಯದಲ್ಲಿ ಹೀಗಂದನು - [ಯೆಹೋವನೇ,] ನಿನ್ನ ನಿರ್ಣಯವನ್ನು ತಿಳಿಸುವ ಊರೀಮ್ ತುಮ್ಮೀಮ್ ಎಂಬ ವಸ್ತುಗಳು ನಿನ್ನ ಭಕ್ತರಾದ ಇವರ ವಶದಲ್ಲಿ ಉಂಟಷ್ಟೆ. ನೀನು ಮಸ್ಸದಲ್ಲಿ ಅವರನ್ನು ಪರೀಕ್ಷಿಸಿದಿಯಲ್ಲಾ; ಮೆರೀಬದಲ್ಲಿ ನೀರು ಹೊರಟ ಸ್ಥಳದ ಹತ್ತಿರ ಅವರೊಡನೆ ವಿವಾದ ಮಾಡಿದಿ.


ಅವನ ಕಾಣಿಕೆಯು ಯಾವದಂದರೆ - ದೇವರ ಸೇವೆಗೆ ನೇಮಕವಾದ ರೂಪಾಯಿಯ ತೂಕದ ಮೇರೆಗೆ ನೂರ ಮೂವತ್ತು ರೂಪಾಯಿ ತೂಕದ ಬೆಳ್ಳಿಯ ಹರಿವಾಣವು; ಎಪ್ಪತ್ತು ತೊಲೆ ತೂಕವುಳ್ಳ ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು;


ಮೋಶೆಯ ಮೂಲಕ ಯೆಹೋವನು ಆಜ್ಞಾಪಿಸಿದ ಎಲ್ಲಾ ಕೆಲಸಗಳಿಗೋಸ್ಕರ ಆತನಿಗೆ ಕಾಣಿಕೆಗಳನ್ನು ತಂದುಕೊಟ್ಟ ಇಸ್ರಾಯೇಲ್ಯರ ಸ್ತ್ರೀಪುರುಷರೆಲ್ಲರೂ ಮನಃಪೂರ್ವಕವಾಗಿಯೇ ಕೊಟ್ಟರು.


ಬಂಗಾರದ ಇಪ್ಪತ್ತು ಬಟ್ಟಲುಗಳು ಪ್ರತಿಯೊಂದೂ ಸಾವಿರ ಪವನು; ಇವುಗಳಲ್ಲದೆ ಶ್ರೇಷ್ಠವಾದ ಶುಭ್ರತಾಮ್ರದ ಎರಡು ಪಾತ್ರೆಗಳಿದ್ದವು.


ಮೇಲೆ ಕಂಡವರ ಕುಲಬಂಧುಗಳೂ ದೇವಾಲಯದ ಭಂಡಾರ, ಪರಿಶುದ್ಧವಸ್ತುಗಳ ಭಂಡಾರ ಇವುಗಳನ್ನು ಕಾಯುವವರೂ ಆದ ಲೇವಿಯರ ಪಟ್ಟಿ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು