ಎಜ್ರ 8:31 - ಕನ್ನಡ ಸತ್ಯವೇದವು J.V. (BSI)31 ನಾವು ಮೊದಲನೆಯ ತಿಂಗಳಿನ ಹನ್ನೆರಡನೆಯ ದಿನದಲ್ಲಿ ಅಹವಾ ನದಿಯನ್ನು ಬಿಟ್ಟು ಯೆರೂಸಲೇವಿುಗೆ ಹೊರಟೆವು. ನಮ್ಮ ದೇವರ ಹಸ್ತವು ನಮ್ಮನ್ನು ಪಾಲಿಸುತ್ತಾ ಇತ್ತು. ಆತನು ಶತ್ರುಗಳ ಮತ್ತು ದಾರಿಯಲ್ಲಿ ಹೊಂಚುಹಾಕುವವರ ಕೈಗೆ ಸಿಕ್ಕದಂತೆ ನಮ್ಮನ್ನು ತಪ್ಪಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ನಾವು ಮೊದಲನೆಯ ತಿಂಗಳಿನ ಹನ್ನೆರಡನೆಯ ದಿನದಲ್ಲಿ ಅಹವಾ ನದಿಯನ್ನು ಬಿಟ್ಟು ಯೆರೂಸಲೇಮಿಗೆ ಹೊರಟೆವು. ನಮ್ಮ ದೇವರ ಹಸ್ತವು ನಮ್ಮನ್ನು ಪಾಲಿಸುತ್ತಾ ಇತ್ತು. ಆತನು ಶತ್ರುಗಳ ಮತ್ತು ದಾರಿಯಲ್ಲಿ ಹೊಂಚುಹಾಕುವವರ ಕೈಗೆ ಸಿಕ್ಕದಂತೆ ನಮ್ಮನ್ನು ತಪ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ನಾವು ಮೊದಲನೆಯ ತಿಂಗಳಿನ ಹನ್ನೆರಡನೆಯ ದಿನದಲ್ಲಿ ಅಹವಾ ನದಿಯನ್ನು ಬಿಟ್ಟು ಜೆರುಸಲೇಮಿಗೆ ಹೊರಟೆವು. ನಮ್ಮ ದೇವರ ಕೃಪಾಹಸ್ತ ನಮ್ಮನ್ನು ಪಾಲಿಸುತ್ತಾ ಇತ್ತು. ಶತ್ರುಗಳ ಹಾಗು ದಾರಿಯಲ್ಲಿ ಹೊಂಚುಹಾಕುವವರ ಕೈಗೆ ಸಿಕ್ಕದಂತೆ ಅವರು ನಮ್ಮನ್ನು ಪಾರುಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಮೊದಲನೆಯ ತಿಂಗಳಿನ ಹನ್ನೆರಡನೆಯ ದಿನ ನಾವು ಅಹವಾ ನದಿಯ ದಡವನ್ನು ಬಿಟ್ಟು ಜೆರುಸಲೇಮಿಗೆ ಹೊರಟೆವು. ದೇವರು ನಮ್ಮೊಂದಿಗಿದ್ದು ಶತ್ರುಗಳಿಂದಲೂ ಕಳ್ಳರಿಂದಲೂ ನಮ್ಮನ್ನು ಸಂರಕ್ಷಿಸಿ ಕಾಪಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ನಾವು ಯೆರೂಸಲೇಮಿಗೆ ಹೋದ ಮೊದಲನೆಯ ತಿಂಗಳ, ಹನ್ನೆರಡನೆಯ ದಿವಸದಲ್ಲಿ ಅಹಾವ ನದಿಯನ್ನು ಬಿಟ್ಟು ಹೊರಟೆವು. ನಮ್ಮ ದೇವರ ಹಸ್ತವು ನಮ್ಮ ಮೇಲೆ ಇದ್ದುದರಿಂದ, ದೇವರು ಶತ್ರುವಿನ ಕೈಗೂ, ಮಾರ್ಗದಲ್ಲಿ ಹೊಂಚುಹಾಕುವವರ ಕೈಗೂ ನಮ್ಮನ್ನು ತಪ್ಪಿಸಿಬಿಟ್ಟರು. ಅಧ್ಯಾಯವನ್ನು ನೋಡಿ |