Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 8:33 - ಕನ್ನಡ ಸತ್ಯವೇದವು J.V. (BSI)

33 ನಾಲ್ಕನೆಯ ದಿನ ನಮ್ಮ ದೇವರ ಆಲಯದಲ್ಲಿ ಊರೀಯನ ಮಗನಾದ ಮೆರೇಮೋತ್ ಎಂಬ ಯಾಜಕನಿಗೆ ಬೆಳ್ಳಿಬಂಗಾರವನ್ನೂ ಉಪಕರಣಗಳನ್ನೂ ತೂಕಮಾಡಿ ಒಂದೊಂದಾಗಿ ಎಣಿಸಿಕೊಟ್ಟೆವು. ಫೀನೆಹಾಸನ ವಂಶದವನಾದ ಎಲ್ಲಾಜಾರ್, ಯೇಷೂವನ ಮಗನಾದ ಯೋಜಾಬಾದ್, ಬಿನ್ನೂಯನ ಮಗನಾದ ನೋವದ್ಯ ಎಂಬ ಲೇವಿಯರು ಅವನ ಜೊತೆಯಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ನಾಲ್ಕನೆಯ ದಿನ ನಮ್ಮ ದೇವರ ಆಲಯದಲ್ಲಿ ಊರೀಯನ ಮಗನಾದ ಮೆರೇಮೋತ್ ಎಂಬ ಯಾಜಕನಿಗೆ ಬೆಳ್ಳಿಬಂಗಾರವನ್ನೂ ಉಪಕರಣಗಳನ್ನೂ ತೂಕಮಾಡಿ ಒಂದೊಂದಾಗಿ ಎಣಿಸಿಕೊಟ್ಟೆವು. ಫೀನೆಹಾಸನ ವಂಶದವನಾದ ಎಲ್ಲಾಜಾರ್, ಯೇಷೂವನ ಮಗನಾದ ಯೋಜಾಬಾದ್, ಬಿನ್ನೂಯನ ಮಗನಾದ ನೋವದ್ಯ ಎಂಬ ಲೇವಿಯರು ಅವನ ಜೊತೆಯಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ನಾಲ್ಕನೆಯ ದಿನ ನಮ್ಮ ದೇವರ ಆಲಯದಲ್ಲಿ ಊರೀಯನ ಮಗ ಮೆರೇಮೋತ್ ಎಂಬ ಯಾಜಕನಿಗೆ ಬೆಳ್ಳಿಬಂಗಾರವನ್ನೂ ಉಪಕರಣಗಳನ್ನೂ ತೂಕಮಾಡಿ ಒಂದೊಂದಾಗಿ ಎಣಿಸಿ ಕೊಟ್ಟೆವು. ಫೀನೆಹಾಸನ ವಂಶದವನಾದ ಎಲ್ಲಾಜಾರ್, ಯೇಷೂವನ ಮಗ ಯೋಜಾಬಾದ್, ಬಿನ್ನೂಯನ ಮಗ ನೋವದ್ಯ ಎಂಬ ಲೇವಿಯರು ಅವನ ಜೊತೆಯಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ನಾಲ್ಕನೆಯ ದಿನ ನಾವು ದೇವಾಲಯಕ್ಕೆ ಹೋಗಿ ಅಲ್ಲಿ ಬೆಳ್ಳಿ, ಚಿನ್ನ ಮತ್ತು ಇತರ ಶ್ರೇಷ್ಠವಸ್ತುಗಳನ್ನು ತೂಗಿ ಯಾಜಕನಾದ ಊರೀಯನ ಮಗನಾದ ಮೆರೇಮೋತನಿಗೆ ಒಪ್ಪಿಸಿದೆವು. ಫೀನೆಹಾಸನ ಮಗನಾದ ಎಲ್ಲಾಜಾರನು ಮೆರೇಮೋತನ ಸಂಗಡವಿದ್ದನು. ಲೇವಿಯರಾದ ಯೇಷೂವನ ಮಗನಾದ ಯೋಜಾಬಾದನು ಮತ್ತು ಬಿನ್ನೂಯನ ಮಗನಾದ ನೋವದ್ಯನು ಅವರ ಸಂಗಡ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ತರುವಾಯ ನಾಲ್ಕನೆಯ ದಿವಸದಲ್ಲಿ ಆ ಬೆಳ್ಳಿಯೂ, ಬಂಗಾರವೂ, ಸಲಕರಣೆಗಳೂ ನಮ್ಮ ದೇವರ ಆಲಯದಲ್ಲಿ ಯಾಜಕರಾಗಿರುವ ಊರೀಯನ ಮಗ ಮೆರೇಮೋತನ ಕೈಯಿಂದ ತೂಕಮಾಡಿ ಕೊಟ್ಟೆವು. ಅವನ ಸಂಗಡ ಲೇವಿಯರಾದ ಫೀನೆಹಾಸನ ಮಗನಾಗಿರುವ ಎಲಿಯಾಜರನೂ, ಯೇಷೂವನ ಮಗ ಯೋಜಾಬಾದನೂ, ಬಿನ್ನೂಯ್ ಮಗ ನೋವದ್ಯನೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 8:33
16 ತಿಳಿವುಗಳ ಹೋಲಿಕೆ  

ಅಲ್ಲಿಂದ ಮುಂದಕ್ಕೆ ಗೋಡೆಯನ್ನು ಜೀರ್ಣೋದ್ಧಾರಮಾಡಿಸಿದವನು ಊರೀಯನ ಮಗನೂ ಹಕ್ಕೋಚನ ಮೊಮ್ಮಗನೂ ಆಗಿರುವ ಮೆರೇಮೋತ್; ಆಮೇಲೆ ಬೆರೆಕ್ಯನ ಮಗನೂ ಮೆಷೇಜಬೇಲನ ಮೊಮ್ಮಗನೂ ಆಗಿರುವ ಮೆಷುಲ್ಲಾಮ್; ಆಚೆಗೆ ಬಾನನ ಮಗನಾದ ಚಾದೋಕ್; ಮುಂದಕ್ಕೆ ತೆಕೋವದವರು.


ಇವನ ಆಚೆ ಗೋಡೆಯ ಇನ್ನೊಂದು ಭಾಗವನ್ನು ಅಂದರೆ ಎಲ್ಯಾಷೀಬನ ಮನೆಯ ಬಾಗಲಿನಿಂದ ಅದೇ ಮನೆಯ ಕೊನೆಯವರೆಗೆ ಹಕ್ಕೋಚನ ಮೊಮ್ಮಗನೂ ಊರೀಯನ ಮಗನೂ ಆದ ಮೆರೇಮೋತನು ಜೀರ್ಣೋದ್ಧಾರ ಮಾಡಿದನು.


ಆ ಯಾಜಕರೂ ಲೇವಿಯರೂ ಯೆರೂಸಲೇವಿುನ ದೇವಾಲಯಕ್ಕೆ ಮುಟ್ಟಿಸುವದಕ್ಕೋಸ್ಕರ ಬೆಳ್ಳಿ ಬಂಗಾರವನ್ನೂ ಉಪಕರಣಗಳನ್ನೂ ತೂಕಮಾಡಿಸಿ ತಮ್ಮ ವಶದಲ್ಲಿಟ್ಟುಕೊಂಡರು.


ಲೇವಿಯರಲ್ಲಿ ಅಜನ್ಯನ ಮಗನಾದ ಯೇಷೂವ, ಹೇನಾದಾದ್ ವಂಶದವನಾದ ಬಿನ್ನೂಯ್, ಕದ್ಮೀಯೇಲ್ ಎಂಬವರೂ


ಆಮೇಲೆ ಯೇಷೂವ, ಬಾನೀ, ಶೇರೇಬ್ಯ, ಯಾಮೀನ್, ಅಕ್ಕೂಬ್, ಶಬ್ಬೆತೈ, ಹೋದೀಯ, ಮಾಸೇಯ, ಕೆಲೀಟ, ಅಜರ್ಯ, ಯೋಜಾಬಾದ್, ಹಾನಾನ್, ಪೆಲಾಯ ಎಂಬ ಲೇವಿಯರು ಧರ್ಮಶಾಸ್ತ್ರವನ್ನು ಜನರು ಗ್ರಹಿಸುವಂತೆ ಮಾಡಿದರು.


ಇವನ ಆಚೆ ಅಜರ್ಯನ ಮನೆಯಿಂದ ಮೂಲೆಯವರೆಗೆ ಇರುವ ಗೋಡೆಯ ಇನ್ನೊಂದು ಭಾಗವನ್ನು ಜೀರ್ಣೋದ್ಧಾರಮಾಡಿದವನು ಹೇನಾದಾದನ ಮಗನಾದ ಬಿನ್ನೂಯ್.


ಅವರ ಕೈಯಲ್ಲಿ ಕೊಟ್ಟ ಸಾಮಾನುಗಳ ತೂಕ - ಬೆಳ್ಳಿಯು ಆರುನೂರೈವತ್ತು ತಲಾಂತು, ಬೆಳ್ಳಿಯ ಸಾಮನುಗಳು ನೂರು ತಲಾಂತು, ಬಂಗಾರವು ನೂರು ತಲಾಂತು,


ಅರಸನಿಂದಲೂ ಅವನ ಮಂತ್ರಿಗಳಿಂದಲೂ ಸರದಾರರಿಂದಲೂ ಅಲ್ಲಿದ್ದ ಎಲ್ಲಾ ಇಸ್ರಾಯೇಲ್ಯರಿಂದಲೂ ನಮ್ಮ ದೇವರ ಆಲಯಕ್ಕೋಸ್ಕರ ಕಾಣಿಕೆಯಾಗಿ ಕೊಡಲ್ಪಟ್ಟ ಬೆಳ್ಳಿಬಂಗಾರವನ್ನೂ ಸಾಮಾನುಗಳನ್ನೂ ತೂಕಮಾಡಿ ಅವರಿಗೆ ಒಪ್ಪಿಸಿದೆನು.


ಆದದರಿಂದ ನೀವು ಜಾಗರೂಕರಾಗಿದ್ದು ಯೆರೂಸಲೇವಿುನಲ್ಲಿರುವ ಯಾಜಕರ ಮತ್ತು ಲೇವಿಯರ ಪ್ರಧಾನರ ಮುಂದೆಯೂ ಇಸ್ರಾಯೇಲ್ ಗೋತ್ರಪ್ರಧಾನರ ಮುಂದೆಯೂ ಇವುಗಳನ್ನು ತೂಕಮಾಡಿ ಯೆಹೋವನ ಆಲಯದ ಕೊಠಡಿಗಳಲ್ಲಿಡುವವರೆಗೂ ಕಾಯಿರಿ ಅಂದೆನು.


ಆಗಲೇ ಎಲ್ಲವುಗಳ ತೂಕವು ಲಿಖಿತವಾಯಿತು.


ಲೇವಿಯರಲ್ಲಿ - ಹೋದವ್ಯನವರಾದ ಯೇಷೂವ, ಕದ್ಮೀಯೇಲ್ ಇವರ ಸಂತಾನದವರು 74


ಲೇವಿಯರಲ್ಲಿ - ಯೋಜಾಬಾದ್, ಶಿಮ್ಮೀ, ಕೆಲೀಟ ಅನ್ನಿಸಿಕೊಳ್ಳುವ ಕೇಲಾಯ, ಪೆತಹ್ಯ, ಯೆಹೂದ, ಎಲೀಯೆಜೆರ್ ಇವರೂ;


ಇವರ ಬಂಧುಗಳಾದ ಶೆಬನ್ಯ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು