ಎಜ್ರ 9:1 - ಕನ್ನಡ ಸತ್ಯವೇದವು J.V. (BSI)1 ಇದಾದನಂತರ ಪ್ರಧಾನಪುರುಷರು ನನ್ನ ಬಳಿಗೆ ಬಂದು - ಇಸ್ರಾಯೇಲ್ಯರಲ್ಲಿ ಸಾಧಾರಣಜನರೂ ಯಾಜಕರೂ ಲೇವಿಯರೂ ಕಾನಾನ್ಯರು, ಹಿತ್ತಿಯರು, ಪೆರಿಜ್ಜೀಯರು, ಯೆಬೂಸಿಯರು, ಅಮ್ಮೋನಿಯರು, ಮೋವಾಬ್ಯರು, ಐಗುಪ್ತ್ಯರು, ಅಮೋರಿಯರು ಎಂಬ ಅನ್ಯದೇಶಗಳವರ ಬಳಕೆಯನ್ನು ತೊರೆಯದೆ ಅವರ ಅಸಹ್ಯಕಾರ್ಯಗಳನ್ನು ಅನುಸರಿಸಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಇದಾದನಂತರ ಪ್ರಧಾನಪುರುಷರು ನನ್ನ ಬಳಿಗೆ ಬಂದು, “ಇಸ್ರಾಯೇಲರಲ್ಲಿ ಸಾಧಾರಣಜನರೂ, ಯಾಜಕರೂ, ಲೇವಿಯರೂ, ಕಾನಾನ್ಯರು, ಹಿತ್ತಿಯರು, ಪೆರಿಜ್ಜೀಯರು, ಯೆಬೂಸಿಯರು, ಅಮ್ಮೋನಿಯರು, ಮೋವಾಬ್ಯರು, ಐಗುಪ್ತ್ಯರು ಮತ್ತು ಅಮೋರಿಯರು ಎಂಬ ಅನ್ಯ ದೇಶಗಳವರ ಬಳಿಕೆಯನ್ನು ತೊರೆಯದೆ ಅವರ ಅಸಹ್ಯಕಾರ್ಯಗಳನ್ನು ಅನುಸರಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಇದಾದನಂತರ ಮುಖ್ಯಸ್ಥರು ನನ್ನ ಬಳಿಗೆ ಬಂದು, “ಕಾನಾನ್ಯರು, ಹಿತ್ತಿಯರು, ಪೆರಿಜ್ಜೀಯರು, ಯೆಬೂಸಿಯರು, ಅಮ್ಮೋನಿಯರು, ಮೋವಾಬ್ಯರು, ಈಜಿಪ್ಟರು, ಅಮೋರಿಯರು ಎಂಬ ಅನ್ಯದೇಶಗಳವರ ಪದ್ಧತಿಯನ್ನು ತೊರೆಯದೆ, ಅವರ ಅಸಹ್ಯಕಾರ್ಯಗಳನ್ನು ಅನುಸರಿಸಿ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಇವೆಲ್ಲಾ ಆದ ಬಳಿಕ ಇಸ್ರೇಲರ ಪ್ರಧಾನರು ನನ್ನ ಬಳಿಗೆ ಬಂದು, “ಎಜ್ರನೇ, ಇಸ್ರೇಲ್ ಜನರು ಸುತ್ತಲೂ ವಾಸಿಸುವ ಅನ್ಯಜನರಿಂದ ತಮ್ಮನ್ನು ಪ್ರತ್ಯೇಕಿಸಿಕೊಳ್ಳಲಿಲ್ಲ. ಯಾಜಕರಾಗಲಿ ಲೇವಿಯರಾಗಲಿ ತಮ್ಮನ್ನು ಪ್ರತ್ಯೇಕಿಸಿಕೊಳ್ಳಲಿಲ್ಲ. ದೇಶದಲ್ಲಿ ವಾಸವಾಗಿರುವ ಕಾನಾನ್ಯರ, ಹಿತ್ತಿಯರ, ಪೆರಿಜ್ಜೀಯರ, ಯೆಬೂಸಿಯರ, ಅಮ್ಮೋನಿಯರ, ಮೋವಾಬ್ಯರ, ಅಮೋರಿಯರ, ಈಜಿಪ್ಟಿನವರ ಕೆಟ್ಟ ಜೀವಿತವು ಇಸ್ರೇಲರ ಮೇಲೆ ಪ್ರಭಾವಬೀರಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಈ ಸಂಗತಿಗಳನ್ನು ಮಾಡಿದ ತರುವಾಯ ಪ್ರಧಾನರು ನನ್ನ ಬಳಿಗೆ ಬಂದು, “ಇಸ್ರಾಯೇಲರೂ, ಯಾಜಕರೂ, ಲೇವಿಯರೂ ತಮ್ಮ ನೆರೆಯವರಿಂದ ಪ್ರತ್ಯೇಕಿಸಿಕೊಳ್ಳಲಿಲ್ಲ. ಅವರು ಕಾನಾನ್ಯರು, ಹಿತ್ತಿಯರು, ಪೆರಿಜೀಯರು, ಯೆಬೂಸಿಯರು, ಅಮ್ಮೋನ್ಯರು, ಮೋವಾಬ್ಯರು, ಈಜಿಪ್ಟರು, ಅಮೋರಿಯರು ಇವರ ಅಸಹ್ಯ ಸಂಗತಿಗಳ ಪದ್ಧತಿಗಳಂತೆ ನಡೆಯುತ್ತಾ ಇದ್ದಾರೆ. ಅಧ್ಯಾಯವನ್ನು ನೋಡಿ |