ಎಜ್ರ 9:15 - ಕನ್ನಡ ಸತ್ಯವೇದವು J.V. (BSI)15 ಯೆಹೋವನೇ, ಇಸ್ರಾಯೇಲ್‍ದೇವರೇ, ಈಗಿರುವಷ್ಟು ಜನರನ್ನು ನಮ್ಮಲ್ಲಿ ಉಳಿಸಿದ್ದರಿಂದ ನೀನು ಧರ್ಮಸ್ವರೂಪನೆಂದು ಪ್ರಕಟವಾಯಿತು. ನಾವಾದರೋ ನಿನ್ನ ದೃಷ್ಟಿಯಲ್ಲಿ ಅಪರಾಧಿಗಳು. ಈ ನಮ್ಮ ದುಷ್ಕೃತ್ಯದ ನಿವಿುತ್ತವಾಗಿ ನಿನ್ನೆದುರಿನಲ್ಲಿ ನಿಲ್ಲಲಾರೆವು ಎಂಬದೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಯೆಹೋವನೇ, ಇಸ್ರಾಯೇಲ್ ದೇವರೇ, ಈಗಿರುವಷ್ಟು ಜನರನ್ನು ನಮ್ಮಲ್ಲಿ ಉಳಿಸಿದ್ದರಿಂದ ನೀನು ಧರ್ಮಸ್ವರೂಪನೆಂದು ಪ್ರಕಟವಾಯಿತು. ನಾವಾದರೋ ನಿನ್ನ ದೃಷ್ಟಿಯಲ್ಲಿ ಅಪರಾಧಿಗಳು. ಈ ನಮ್ಮ ದುಷ್ಕೃತ್ಯದ ನಿಮಿತ್ತವಾಗಿ ನಿನ್ನೆದುರಿನಲ್ಲಿ ನಿಲ್ಲಲಾರೆವು” ಎಂದು ಬೇಡಿಕೊಂಡೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಸರ್ವೇಶ್ವರಾ, ಇಸ್ರಯೇಲ್ ದೇವರೇ, ಈಗಿರುವಷ್ಟು ಜನರನ್ನು ನಮ್ಮಲ್ಲಿ ಉಳಿಸಿದ್ದರಿಂದ ನೀವು ಧರ್ಮಸ್ವರೂಪರೆಂದು ಸ್ಪಷ್ಟವಾಯಿತು. ನಾವಾದರೋ ನಿಮ್ಮ ದೃಷ್ಟಿಯಲ್ಲಿ ಅಪರಾಧಿಗಳು, ಈ ನಮ್ಮ ದುಷ್ಕೃತ್ಯದ ಸಲುವಾಗಿ ನಿಮ್ಮೆದುರಿನಲ್ಲಿ ನಿಲ್ಲಲಾರೆವು.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 “ಇಸ್ರೇಲಿನ ದೇವರಾದ ಯೆಹೋವನೇ, ನೀನು ಒಳ್ಳೆಯವನಾಗಿರುವೆ. ನಮ್ಮ ಜನಾಂಗದ ಕೆಲವರನ್ನಾದರೂ ಉಳಿದುಕೊಳ್ಳುವಂತೆ ಮಾಡಿರುವೆ. ಹೌದು, ನಾವು ಪಾಪಿಗಳು. ನಮ್ಮ ಅಪರಾಧಗಳ ದೆಸೆಯಿಂದ ಯಾರೂ ನಿನ್ನ ಮುಂದೆ ನಿಲ್ಲಲು ಸಾಧ್ಯವಿಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಇಸ್ರಾಯೇಲರ ದೇವರಾಗಿರುವ ಯೆಹೋವ ದೇವರೇ, ನೀವು ನೀತಿವಂತರು! ನಾವು ಇಂದು ತಪ್ಪಿಸಿಕೊಂಡು ಉಳಿದಿದ್ದೇವೆ. ನಾವು ನಮ್ಮ ಅಪರಾಧಗಳ ನಿಮಿತ್ತ ನಿಮ್ಮ ಮುಂದೆ ನಿಲ್ಲಲು ಯೋಗ್ಯರಲ್ಲದಿದ್ದರೂ, ನಮ್ಮ ಅಪರಾಧಗಳೊಂದಿಗೆ ನಿಮ್ಮ ಮುಂದೆ ನಿಂತಿದ್ದೇವೆ,” ಎಂದು ಪ್ರಾರ್ಥನೆಮಾಡಿದೆ. ಅಧ್ಯಾಯವನ್ನು ನೋಡಿ |