Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 9:3 - ಕನ್ನಡ ಸತ್ಯವೇದವು J.V. (BSI)

3 ಈ ವರ್ತಮಾನವನ್ನು ಕೇಳಿದೊಡನೆ ನಾನು ಬಟ್ಟೆಮೇಲಂಗಿಗಳನ್ನು ಹರಿದುಕೊಂಡು ತಲೆಯ ಮತ್ತು ಗಡ್ಡದ ಕೂದಲುಗಳನ್ನು ಕಿತ್ತುಕೊಂಡು ಸ್ತಬ್ಧನಾಗಿ ಕೂತುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಈ ವರ್ತಮಾನವನ್ನು ಕೇಳಿದೊಡನೆ ನಾನು ಬಟ್ಟೆಗಳನ್ನು ಮತ್ತು ಮೇಲಂಗಿಗಳನ್ನು ಹರಿದುಕೊಂಡು ತಲೆಯ ಮತ್ತು ಗಡ್ಡದ ಕೂದಲುಗಳನ್ನು ಕಿತ್ತುಕೊಂಡು, ಸ್ತಬ್ಧನಾಗಿ ಕುಳಿತುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಈ ಸಮಾಚಾರವನ್ನು ಕೇಳಿದೊಡನೆ ನಾನು ಸಿಟ್ಟಿನಿಂದ ಬಟ್ಟೆಗಳನ್ನೂ ಮೇಲಂಗಿಯನ್ನೂ ಹರಿದುಕೊಂಡು, ಸ್ತಬ್ಧನಾಗಿ ಕುಳಿತುಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಇದನ್ನು ಕೇಳಿದೊಡನೆ ನನ್ನ ಮನಸ್ಸಿನ ದುಃಖವನ್ನು ತೋರಿಸುವಂತೆ ನನ್ನ ಬಟ್ಟೆಯನ್ನು ಹರಿದು ಹಾಕಿದೆನು. ನನ್ನ ತಲೆಯ ಮತ್ತು ಗಡ್ಡದ ಕೂದಲನ್ನು ಕೆದರಿಕೊಂಡು ದಿಗ್ಭ್ರಮೆಗೊಂಡವನಾಗಿಯೂ ಬೇಸರಗೊಂಡವನಾಗಿಯೂ ಕುಳಿತುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಾನು ಇದನ್ನು ಕೇಳಿದಾಗ ನನ್ನ ವಸ್ತ್ರವನ್ನೂ, ನನ್ನ ನಿಲುವಂಗಿಯನ್ನೂ ಹರಿದು ನನ್ನ ತಲೆಯ ಮತ್ತು ಗಡ್ಡದ ಕೂದಲನ್ನು ಕಿತ್ತು, ಸ್ತಬ್ಧನಾಗಿ ಕುಳಿತುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 9:3
21 ತಿಳಿವುಗಳ ಹೋಲಿಕೆ  

ನಾನು ಈ ವರ್ತಮಾನವನ್ನು ಕೇಳಿದಾಗ ನೆಲದ ಮೇಲೆ ಕೂತುಕೊಂಡು ಅತ್ತೆನು; ಕೆಲವು ದಿವಸಗಳವರೆಗೂ ಶೋಕಿಸುತ್ತಾ ಉಪವಾಸವಾಗಿದ್ದು ಪರಲೋಕ ದೇವರ ಮುಂದೆ ವಿಜ್ಞಾಪನೆ ಮಾಡುತ್ತಾ ಇದ್ದೆನು.


ಆಗ ಯೆಹೋಶುವನೂ ಇಸ್ರಾಯೇಲ್ಯರ ಹಿರಿಯರೂ ತಮ್ಮ ಬಟ್ಟೆಗಳನ್ನು ಹರಿದುಕೊಂಡು ತಲೆಯ ಮೇಲೆ ಬೂದಿಯನ್ನು ಹಾಕಿಕೊಂಡು ಸಾಯಂಕಾಲದವರೆಗೂ ಯೆಹೋವನ ಮಂಜೂಷದ ಮುಂದೆ ಬೋರಲಬಿದ್ದಿದ್ದರು.


[ಯೆಹೂದವೇ,] ನಿನ್ನ ಮುದ್ದು ಮಕ್ಕಳಿಗಾಗಿ ಕ್ಷೌರಮಾಡಿಸಿಕೋ, ತಲೆಬೋಳಿಸಿಕೋ; ನಿನ್ನ ಬೋಳುತನವನ್ನು ರಣಹದ್ದಿನ ಹಾಗೆ ವಿಸ್ತರಿಸಿಕೋ; ಅವರು ನಿನ್ನ ಕಡೆಯಿಂದ ಸೆರೆಹೋಗಿದ್ದಾರಲ್ಲಾ!


ಆಗ ದಾನಿಯೇಲನಾದ ನಾನು ಬೆಂಡಾಗಿ ಕೆಲವು ದಿವಸ ಕಾಯಿಲೆಬಿದ್ದೆನು; ಆಮೇಲೆ ಎದ್ದು ರಾಜಕಾರ್ಯವನ್ನು ನಡಿಸಿದೆನು; ಆ ಕನಸಿಗೆ ಬೆಚ್ಚಿಬೆರಗಾದೆನು; ಅದು ಯಾರಿಗೂ ತಿಳಿಯಲಿಲ್ಲ.


ಆಗ ಬೇಲ್ತೆಶಚ್ಚರನೆಂಬ ಅಡ್ಡಹೆಸರಿನ ದಾನಿಯೇಲನು ತನ್ನ ಬುದ್ಧಿಗೆ ತೋರಿದ್ದಕ್ಕೆ ದಿಗಿಲುಪಟ್ಟು ತುಸುಹೊತ್ತು ಸ್ತಬ್ಧನಾದನು. ರಾಜನು ಇದನ್ನು ನೋಡಿ - ಬೇಲ್ತೆಶಚ್ಚರನೇ, ನನ್ನ ಕನಸಾಗಲಿ ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ ಎಂದು ಹೇಳಲು ಬೇಲ್ತೆಶಚ್ಚರನು - ಎನ್ನೊಡೆಯನೇ, ಆ ಕನಸು ನಿನ್ನ ಹಗೆಗಳಿಗೆ ಫಲಿಸಲಿ, ಅದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ!


ಅವರು ಗೋಣಿತಟ್ಟನ್ನು ಸುತ್ತಿಕೊಳ್ಳುವರು, ದಿಗಿಲು ಅವರನ್ನು ಮುಚ್ಚಿಬಿಡುವದು; ಎಲ್ಲರ ಮುಖದಲ್ಲಿಯೂ ನಾಚಿಕೆತೋರುವದು. ಎಲ್ಲರೂ ತಲೆ ಬೋಳಿಸಿಕೊಂಡಿರುವರು.


ಆಗ ಸೆರೆಯಾಗಿ ಒಯ್ಯಲ್ಪಟ್ಟು ಕೆಬಾರ್ ನದಿಯ ಹತ್ತಿರ ತೇಲ್ ಆಬೀಬಿನಲ್ಲಿ ವಾಸವಾಗಿದ್ದವರ ಬಳಿಗೆ ಬಂದು ಅವರು ಕೂತಿದ್ದ ಸ್ಥಳದಲ್ಲಿಯೇ ಕೂತುಕೊಂಡೆನು; ಏಳು ದಿವಸ ಅಲ್ಲೇ ಅವರ ಮಧ್ಯದಲ್ಲಿ ಸ್ತಬ್ಧನಾಗಿ ಇದ್ದುಬಿಟ್ಟೆನು.


ಅರಸನಾಗಲಿ ಸುರಳಿಯ ಮಾತುಗಳನ್ನೆಲ್ಲಾ ಕೇಳಿದ ಅವನ ಸೇವಕರಲ್ಲಿ ಯಾರೇ ಆಗಲಿ ಭಯಪಡಲಿಲ್ಲ, ಬಟ್ಟೆಗಳನ್ನು ಹರಿದುಕೊಳ್ಳಲಿಲ್ಲ.


[ಯೆರೂಸಲೇಮೇ,] ತಲೆಯನ್ನು ಬೋಳಿಸಿಕೊಂಡು ಕೂದಲನ್ನು ಬಿಸಾಟುಬಿಟ್ಟು ಬೋಳುಗುಡ್ಡಗಳಲ್ಲಿ ಶೋಕಗೀತವನ್ನು ಹಾಡು; ಯೆಹೋವನು ತನ್ನ ಕೋಪಕ್ಕೆ ಗುರಿಯಾದ ಈ ವಂಶವನ್ನು ನಿರಾಕರಿಸಿ ತ್ಯಜಿಸಿದ್ದಾನೆ.


ಬಯಿತ್ ಮತ್ತು ದೀಬೋನ್ ಊರುಗಳವರು ಅಳುವದಕ್ಕಾಗಿ ಪೂಜಾಸ್ಥಾನಗಳಿಗೆ ಹತ್ತಿದ್ದಾರೆ; ನೆಬೋವಿನಲ್ಲಿಯೂ ಮೇದೆಬದಲ್ಲಿಯೂ ಮೋವಾಬ್ಯರು ಗೋಳಾಡುತ್ತಾರೆ; ಎಲ್ಲರ ತಲೆಯು ಬೋಳು, ಎಲ್ಲರ ಗಡ್ಡವು ವಿಕಾರವಾಗಿ ಕತ್ತರಿಸಿದೆ.


ನನ್ನ ಆತ್ಮವು ಕುಂದಿಹೋಗಿದೆ; ನನ್ನ ಮನಸ್ಸು ಬೆರಗಾಗಿದೆ.


ನೀವು ದೇವರಿಗೆ - ನಿನ್ನ ಕೃತ್ಯಗಳು ಎಷ್ಟೋ ಭಯಂಕರವಾಗಿವೆ; ನಿನ್ನ ಪರಾಕ್ರಮದ ಮಹತ್ತಿನ ದೆಸೆಯಿಂದ ನಿನ್ನ ಶತ್ರುಗಳು ನಿನ್ನ ಮುಂದೆ ಮುದುರಿಕೊಳ್ಳುವರು;


ಆಗ ಯೋಬನು ಎದ್ದು ಮೇಲಂಗಿಯನ್ನು ಹರಿದುಕೊಂಡು ತಲೆಬೋಳಿಸಿಕೊಂಡು ನೆಲದಲ್ಲಿ ಅಡ್ಡಬಿದ್ದು ನಮಸ್ಕರಿಸಿ


ಕೋಪಗೊಂಡು ಅವರನ್ನು ಶಪಿಸಿ ಅವರಲ್ಲಿ ಕೆಲವರನ್ನು ಹೊಡೆದು ಅವರ ಕೂದಲುಗಳನ್ನು ಕಿತ್ತು -


ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಆಗಿದ್ದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬವರು ತಮ್ಮ ಬಟ್ಟೆಗಳನ್ನು ಹರಕೊಂಡು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.


ಅವರು ತಲೆಬೋಳಿಸಿಕೊಳ್ಳಬಾರದು; ಗಡ್ಡವನ್ನು ಕತ್ತರಿಸಿ ವಿಕಾರಗೊಳಿಸಬಾರದು; ದೇಹವನ್ನು ಗಾಯ ಮಾಡಿಕೊಳ್ಳಬಾರದು.


ಸೌಲನೂ ಅವನ ಮಗನಾದ ಯೋನಾತಾನನೂ ಯೆಹೋವನ ಪ್ರಜೆಗಳಾದ ಇಸ್ರಾಯೇಲ್ಯರೂ ಕತ್ತಿಯಿಂದ ಸಂಹೃತರಾದದ್ದಕ್ಕಾಗಿ


ನಿನ್ನ ಧರ್ಮಶಾಸ್ತ್ರಭ್ರಷ್ಟರಾದ ದುಷ್ಟರಿಗಾಗಿ ಉರಿಗೊಂಡಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು