Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 9:4 - ಕನ್ನಡ ಸತ್ಯವೇದವು J.V. (BSI)

4 ಇಸ್ರಾಯೇಲ್‍ದೇವರ ವಿಧಿಗಳನ್ನು ಗೌರವಿಸಿದವರೆಲ್ಲರೂ ಸೆರೆಯಿಂದ ಬಂದವರ ದ್ರೋಹದ ಸಲುವಾಗಿ ಕಳವಳಗೊಂಡು ನನ್ನನ್ನು ಕೂಡಿಕೊಂಡರು. ನಾನು ಸಂಧ್ಯಾನೈವೇದ್ಯಸಮರ್ಪಣೆಯ ಹೊತ್ತಿನವರೆಗೂ ಸ್ತಬ್ಧನಾಗಿ ಕೂತುಕೊಂಡಿದ್ದೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇಸ್ರಾಯೇಲ್ ದೇವರ ವಿಧಿಗಳನ್ನು ಗೌರವಿಸಿದವರೆಲ್ಲರೂ ಸೆರೆಯಿಂದ ಬಂದವರ ದ್ರೋಹದ ಸಲುವಾಗಿ ಕಳವಳಗೊಂಡು ನನ್ನನ್ನು ಕೂಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಇಸ್ರಯೇಲ್ ದೇವರ ವಿಧಿಗಳ ಬಗ್ಗೆ ಗೌರವವಿದ್ದವರೆಲ್ಲರು ಸೆರೆಯಿಂದ ಬಂದವರ ದ್ರೋಹದ ಸಲುವಾಗಿ ಕಳವಳಗೊಂಡು, ನನ್ನನ್ನು ಕೂಡಿಕೊಂಡರು. ನಾನು ಸಂಧ್ಯಾನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಸ್ತಬ್ಧವಾಗಿ ಕುಳಿತುಕೊಂಡಿದ್ದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಇದನ್ನು ನೋಡಿ ದೇವರ ಕಟ್ಟಳೆಗಳನ್ನು ಗೌರವಿಸುವ ಪ್ರತಿಯೊಬ್ಬನು ಭಯಪಟ್ಟನು; ನಡುಗಿದನು. ಯಾಕೆಂದರೆ ಸೆರೆವಾಸದಿಂದ ಹಿಂದಿರುಗಿ ಬಂದ ಇಸ್ರೇಲರು ದೇವರಿಗೆ ನಂಬಿಗಸ್ತರಾಗಿರಲಿಲ್ಲ. ನಾನೂ ನನ್ನೊಂದಿಗಿದ್ದ ಜನರೂ ಸಾಯಂಕಾಲದ ಯಜ್ಞವನ್ನರ್ಪಿಸುವ ಸಮಯದ ತನಕ ಹಾಗೆಯೇ ಕುಳಿತಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಸೆರೆಯಿಂದ ಬಂದವರ ಅಪರಾಧಕ್ಕೋಸ್ಕರ ಇಸ್ರಾಯೇಲ್ ದೇವರ ಮಾತುಗಳಿಗೆ ಹೆದರಿಕೊಂಡಿದ್ದ ಮನುಷ್ಯರೆಲ್ಲರೂ, ನನ್ನ ಬಳಿಗೆ ಕೂಡಿಬಂದರು. ಆದರೆ ನಾನು ಸಾಯಂಕಾಲದ ಬಲಿಯನ್ನು ಅರ್ಪಿಸುವವರೆಗೆ ಸ್ತಬ್ಧನಾಗಿ ಕುಳಿತುಕೊಂಡಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 9:4
13 ತಿಳಿವುಗಳ ಹೋಲಿಕೆ  

ಸ್ವಾವಿುಯಾದ ನೀನೂ ನಮ್ಮ ದೇವರ ಆಜ್ಞೆಯನ್ನು ಗೌರವಿಸುವವರೂ ಹೇಳಿಕೊಟ್ಟ ಬುದ್ಧಿವಾದಾನುಸಾರ ಇಂಥ ಎಲ್ಲಾ ಹೆಂಡತಿಯರನ್ನೂ ಅವರ ಮಕ್ಕಳನ್ನೂ ಕಳುಹಿಸಿಬಿಡುವದಾಗಿ ಈಗಲೇ ನಮ್ಮ ದೇವರಿಗೆ ಪ್ರತಿಜ್ಞೆಮಾಡಿ ಧರ್ಮಶಾಸ್ತ್ರಕ್ಕನುಸಾರವಾಗಿ ನಡೆಯೋಣ.


ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತು, ಹೌದು, [ನನ್ನ ಕೈಯಿಂದಲೇ] ಇವುಗಳೆಲ್ಲಾ ಉಂಟಾದವು. ನಾನು ಕಟಾಕ್ಷಿಸುವವನು ಎಂಥವನೆಂದರೆ ದೀನನೂ ಮನಮುರಿದವನೂ ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.


ಅವುಗಳಲ್ಲಿ ಒಂದನ್ನು ಪ್ರಾತಃಕಾಲದಲ್ಲಿ ಮತ್ತೊಂದನ್ನು ಸಾಯಂಕಾಲದಲ್ಲಿ ಸಮರ್ಪಿಸಬೇಕು.


ನಿನ್ನ ಧರ್ಮಶಾಸ್ತ್ರವನ್ನು ಅನುಸರಿಸದವರ ನಿವಿುತ್ತ ನನಗೆ ಕಣ್ಣೀರು ಪ್ರವಾಹವಾಗಿ ಹರಿಯುತ್ತದೆ.


ಈ ದೇಶದ ಮತ್ತು ಅದರ ನಿವಾಸಿಗಳ ವಿಷಯ ನಾನು ಹೇಳಿದ ಮಾತುಗಳನ್ನು ಕೇಳಿದಾಗ ನೀನು ದುಃಖಪಟ್ಟು ದೇವರಾದ ನನ್ನ ಮುಂದೆ ತಗ್ಗಿಸಿಕೊಂಡದ್ದರಿಂದಲೂ ದೀನಮನಸ್ಸಿನಿಂದ ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರುಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು.


ಒಂದಾನೊಂದು ದಿವಸ ಪೇತ್ರ ಯೋಹಾನರು ಮಧ್ಯಾಹ್ನದ ಮೇಲೆ ಮೂರು ಘಂಟೆಗೆ ನಡೆಯ ತಕ್ಕ ಪ್ರಾರ್ಥನೆಗಾಗಿ ದೇವಾಲಯಕ್ಕೆ ಹೋಗುತ್ತಿರಲು ಹುಟ್ಟುಕುಂಟನಾಗಿದ್ದ ಒಬ್ಬ ಮನುಷ್ಯನನ್ನು ಯಾರೋ ಹೊತ್ತುಕೊಂಡು ಬಂದರು.


ಮೊದಲು ನನ್ನ ಕನಸಿನಲ್ಲಿ ಕಂಡ ಗಬ್ರಿಯೇಲನೆಂಬ ಪುರುಷನು ಅಸುರುಸುರಾಗಿ ಹಾರಿಬಂದು ಸಂಧ್ಯಾನೈವೇದ್ಯಸಮಯದಲ್ಲಿ ನನ್ನನ್ನು ಸೇರಿ


ನೀನು ಯೆರೂಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಿ ಅದರೊಳಗೆ ನಡೆಯುವ ಸಮಸ್ತ ಅಸಹ್ಯಕಾರ್ಯಗಳಿಗಾಗಿ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು ಎಂದು ಅಪ್ಪಣೆಕೊಟ್ಟನು.


ಆಗ ಮೂರನೆಯ ದಿನದಲ್ಲಿ ಅಂದರೆ ಒಂಭತ್ತನೆಯ ತಿಂಗಳಿನ ಇಪ್ಪತ್ತನೆಯ ದಿನದಲ್ಲಿ ಯೆಹೂದ್ಯರ ಮತ್ತು ಬೆನ್ಯಾಮೀನ್ಯರ ಎಲ್ಲಾ ಪುರುಷರೂ ಯೆರೂಸಲೇವಿುನಲ್ಲಿ ಬಂದು ಕೂಡಿ ಆ ಸಂಗತಿಯ ನಿವಿುತ್ತವಾಗಿಯೂ ದೊಡ್ಡ ಮಳೆಯ ದೆಸೆಯಿಂದಲೂ ನಡುಗುತ್ತಾ ದೇವಾಲಯದ ಬೈಲಿನಲ್ಲಿ ಕೂತುಕೊಂಡರು.


ಆ ಕಾಲದಲ್ಲಿ ದಾನಿಯೇಲನಾದ ನಾನು ಮೂರು ವಾರ ಶೋಕಿಸುತ್ತಿದ್ದೆನು.


ಸಾಯಂಕಾಲದಲ್ಲಿ ಎರಡನೆಯ ಕುರಿಯನ್ನು ಹೋಮಮಾಡುವಾಗ ಹೊತ್ತಾರೆಯಲ್ಲಿ ಮಾಡಿದ ಪ್ರಕಾರವೇ ಅದರೊಂದಿಗೆ ಧಾನ್ಯವನ್ನೂ ಪಾನದ್ರವ್ಯವನ್ನೂ ಸಮರ್ಪಿಸಬೇಕು. ಅದು ಯೆಹೋವನಿಗೆ ಸುಗಂಧ ಹೋಮವಾಗಿರುವದು.


ಇಸ್ರಾಯೇಲ್ಯರ ವರ್ಗಸಮೂಹದವರು ದೇವದರ್ಶನದ ಗುಡಾರದ ಬಾಗಲಿನ ಹತ್ತಿರ ಅಳುತ್ತಿರುವಾಗ ಇಸ್ರಾಯೇಲ್ಯನಾದ ಒಬ್ಬ ಮನುಷ್ಯನು ಮೋಶೆಗೂ ಸರ್ವಸಮೂಹದವರಿಗೂ ಎದುರಾಗಿಯೇ ಒಬ್ಬ ವಿುದ್ಯಾನ್ ಸ್ತ್ರೀಯನ್ನು ತನ್ನ ಕುಲದವರ ಬಳಿಗೆ ಕರಕೊಂಡು ಬರುವದನ್ನು ಕಂಡರು.


ಯೆಹೋವನ ಮಾತಿಗೆ ಭಯಪಡುವವರೇ, ಆತನ ಮಾತನ್ನು ಕೇಳಿರಿ! ನನ್ನ ಹೆಸರಿನ ನಿವಿುತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಂಬಂಧಿಗಳು - ಯೆಹೋವನು ಮಹಿಮೆಪಡಲಿ, ನಿಮಗಾಗುವ ಉತ್ಸಾಹವನ್ನು ನೋಡೋಣ ಎಂದು ಹೇಳಿದ್ದಾರಲ್ಲಾ; ಅವರಿಗಂತು ಅವಮಾನವಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು