ಎಜ್ರ 9:6 - ಕನ್ನಡ ಸತ್ಯವೇದವು J.V. (BSI)6 ನನ್ನ ದೇವರೇ, ನಾನು ಮನಗುಂದಿದವನಾಗಿದ್ದೇನೆ; ನಿನ್ನ ಕಡೆಗೆ ಮುಖವನ್ನೆತ್ತುವದಕ್ಕೆ ನಾಚಿಕೊಳ್ಳುತ್ತೇನೆ. ನನ್ನ ದೇವರೇ, ನಮ್ಮ ಪಾಪಗಳು ನಮ್ಮ ತಲೆಮೀರಿ ಬೆಳೆದವು. ನಮ್ಮ ಅಪರಾಧವು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 “ನನ್ನ ದೇವರೇ, ನಾನು ಮನಗುಂದಿದವನಾಗಿದ್ದೇನೆ, ನಿನ್ನ ಕಡೆಗೆ ತಿರುಗಿಕೊಳ್ಳಲು ನಾಚಿಕೊಳ್ಳುತ್ತೇನೆ. ನನ್ನ ದೇವರೇ, ನಮ್ಮ ಪಾಪಗಳು ನಮ್ಮ ತಲೆಮೀರಿ ಬೆಳೆದಿವೆ, ನಮ್ಮ ಅಪರಾಧವು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 “ನನ್ನ ದೇವರೇ, ನಾನು ಮನಗುಂದಿದವನು ಆಗಿದ್ದೇನೆ; ನಿಮ್ಮ ಕಡೆಗೆ ಮುಖವನ್ನು ಎತ್ತುವುದಕ್ಕೆ ನಾಚಿಕೊಳ್ಳುತ್ತೇನೆ. ನನ್ನ ದೇವರೇ, ನಮ್ಮ ಪಾಪಗಳು ನಮ್ಮ ತಲೆಮೀರಿ ಬೆಳೆದಿವೆ; ನಮ್ಮ ಅಪರಾಧ ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿದೆ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಚಾಚಿ ಹೀಗೆ ಪ್ರಾರ್ಥಿಸಿದೆನು: “ನನ್ನ ದೇವರೇ, ನಿನ್ನ ಕಡೆಗೆ ಮುಖವೆತ್ತಲು ನನಗೆ ನಾಚಿಕೆಯಾಗುತ್ತದೆ; ಯಾಕೆಂದರೆ ನಮ್ಮ ಪಾಪಗಳು ನಮ್ಮ ತಲೆಮೀರಿ ಬೆಳೆದಿದೆ. ನಮ್ಮ ಅಪರಾಧಗಳ ರಾಶಿಯು ಪರಲೋಕದವರೆಗೂ ಏರಿಹೋಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಪ್ರಾರ್ಥಿಸಿದೆನು: “ನನ್ನ ದೇವರೇ, ನಾನು ನನ್ನ ಮುಖವನ್ನು ನಿಮ್ಮ ಮುಂದೆ ಎತ್ತಲಾರದೆ, ಲಜ್ಜೆಯಿಂದ ನಾಚಿಕೆಪಡುತ್ತೇನೆ. ನನ್ನ ದೇವರೇ, ನಮ್ಮ ಅಕ್ರಮಗಳು ನಮ್ಮ ತಲೆಮೀರಿ ಬೆಳೆದಿವೆ. ನಮ್ಮ ಅಪರಾಧವು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿವೆ. ಅಧ್ಯಾಯವನ್ನು ನೋಡಿ |