ಎಜ್ರ 9:9 - ಕನ್ನಡ ಸತ್ಯವೇದವು J.V. (BSI)9 ನಾವು ದಾಸರಾದರೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮನ್ನು ಕೈಬಿಡಲಿಲ್ಲ; ಹಾಳುಬಿದ್ದ ನಮ್ಮ ದೇವರ ಆಲಯವನ್ನು ತಿರಿಗಿ ಕಟ್ಟಿ ಭದ್ರಪಡಿಸುವದಕ್ಕೋಸ್ಕರ ನಮಗೆ ಉಜ್ಜೀವನ ಪ್ರಾಪ್ತವಾಗುವಂತೆಯೂ ಯೆಹೂದದಲ್ಲಿಯೂ ಯೆರೂಸಲೇವಿುನಲ್ಲಿಯೂ ನಮಗೆ ಅಭಯಾಶ್ರಯ ಸಿಕ್ಕುವಂತೆಯೂ ಪಾರಸಿಯ ರಾಜರ ಮುಂದೆ ನಮಗೆ ಕೃಪೆಯನ್ನು ಅನುಗ್ರಹಿಸಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಾವು ದಾಸರಾದರೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮನ್ನು ಕೈಬಿಡಲಿಲ್ಲ; ಹಾಳುಬಿದ್ದ ನಮ್ಮ ದೇವರ ಆಲಯವನ್ನು ಪುನಃ ಕಟ್ಟಿ ಭದ್ರಪಡಿಸುವುದಕ್ಕೋಸ್ಕರ ನಮಗೆ ಉಜ್ಜೀವನ ಪ್ರಾಪ್ತವಾಗುವಂತೆಯೂ, ಯೆಹೂದದಲ್ಲಿಯೂ ಮತ್ತು ಯೆರೂಸಲೇಮಿನಲ್ಲಿಯೂ ನಮಗೆ ಅಭಯಾಶ್ರಯ ಸಿಕ್ಕುವಂತೆಯೂ ಪರ್ಷಿಯ ರಾಜರ ಮುಂದೆ ನಮಗೆ ಕೃಪೆಯನ್ನು ಅನುಗ್ರಹಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನಾವು ಗುಲಾಮರಾದರೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮನ್ನು ಕೈಬಿಡಲಿಲ್ಲ; ಹಾಳುಬಿದ್ದ ನಮ್ಮ ದೇವಾಲಯವನ್ನು ಪುನಃ ಕಟ್ಟಿ ಭದ್ರಪಡಿಸುವುದಕ್ಕಾಗಿ, ನಮಗೆ ನವಜೀವನ ಪ್ರಾಪ್ತವಾಗುವಂತೆ ಹಾಗು ಜುದೇಯದಲ್ಲೂ ಜೆರುಸಲೇಮಿನಲ್ಲೂ ನಮಗೆ ಅಭಯಾಶ್ರಯ ಸಿಕ್ಕುವಂತೆ, ಪರ್ಷಿಯ ರಾಜರ ಮುಂದೆ ನಮಗೆ ಕೃಪೆಯನ್ನು ಅನುಗ್ರಹಿಸಿದ್ದೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಹೌದು, ನಾವು ಗುಲಾಮರಾಗಿದ್ದೆವು. ಆದರೆ ಸದಾಕಾಲ ಗುಲಾಮರಾಗಲು ನೀನು ನಮ್ಮನ್ನು ಬಿಡಲಿಲ್ಲ. ನಮ್ಮ ಮೇಲೆ ನೀನು ದಯೆ ತೋರಿಸಿರುವೆ. ಪರ್ಶಿಯ ರಾಜರು ನಮಗೆ ಕರುಣೆತೋರುವಂತೆ ಮಾಡಿದೆ. ನಿನ್ನ ಆಲಯವು ಹಾಳಾಗಿತ್ತು. ನಿನ್ನ ಆ ಆಲಯವನ್ನು ಮತ್ತೆ ಹೊಸದಾಗಿ ಕಟ್ಟಲು ನೀನು ನಮಗೆ ಹೊಸ ಜೀವವನ್ನು ಕೊಟ್ಟಿರುವೆ. ದೇವರೇ, ಯೆಹೂದ ಮತ್ತು ಜೆರುಸಲೇಮ್‌ಗಳ ಸಂರಕ್ಷಣೆಗಾಗಿ ಗೋಡೆಯನ್ನು ಕಟ್ಟಲು ನೀನು ನಮಗೆ ಸಹಾಯಮಾಡಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನಾವು ಗುಲಾಮರಾದರೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮನ್ನು ಕೈಬಿಡಲಿಲ್ಲ; ಹಾಳುಬಿದ್ದ ದೇವಾಲಯವನ್ನು ಪುನಃ ಕಟ್ಟಿ ಭದ್ರಪಡಿಸಲು ನಮಗೆ ನವಜೀವನ ಕೊಟ್ಟು, ಯೆಹೂದ ಮತ್ತು ಯೆರೂಸಲೇಮಿನಲ್ಲಿ ನಮಗೆ ಸಂರಕ್ಷಣೆಯ ಗೋಡೆ ಸಿಗುವಂತೆ, ಪಾರಸಿಯ ರಾಜರ ಸಮ್ಮುಖದಲ್ಲಿ ನಮಗೆ ದಯೆಯನ್ನು ದಯಪಾಲಿಸಿದ್ದೀರಿ. ಅಧ್ಯಾಯವನ್ನು ನೋಡಿ |