Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 1:13 - ಕನ್ನಡ ಸತ್ಯವೇದವು J.V. (BSI)

13 ನಿಮ್ಮ ರಕ್ಷಣೆಯ ವಿಷಯವಾದ ಸುವಾರ್ತೆಯೆಂಬ ಸತ್ಯವಾಕ್ಯವನ್ನು ಕೇಳಿ ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಸಹ ವಾಗ್ದಾನಮಾಡಲ್ಪಟ್ಟ ಪವಿತ್ರಾತ್ಮನೆಂಬ ಮುದ್ರೆಯನ್ನು ಹೊಂದಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನೀವು ಸಹ ನಿಮ್ಮ ರಕ್ಷಣಾ ಸುವಾರ್ತೆಯ ಸತ್ಯವಾಕ್ಯವನ್ನು ಕೇಳಿ, ಕ್ರಿಸ್ತನಲ್ಲಿ ನಂಬಿಕೆಯಿಟ್ಟು, ವಾಗ್ದಾನಮಾಡಲ್ಪಟ್ಟ ಪವಿತ್ರಾತ್ಮನಿಂದ ಮುದ್ರೆಯನ್ನು ಹೊಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನೀವು ಸಹ ಸತ್ಯವಾಕ್ಯವನ್ನು ಅಂದರೆ, ನಿಮಗೆ ಜೀವೋದ್ಧಾರವನ್ನೀಯುವ ಶುಭಸಂದೇಶವನ್ನು ಕೇಳಿ ಯೇಸುಕ್ರಿಸ್ತರಲ್ಲಿ ವಿಶ್ವಾಸ ಇಟ್ಟಿರಿ. ದೇವರು ವಾಗ್ದಾನಮಾಡಿದ ಪವಿತ್ರಾತ್ಮ ಅವರಿಂದ ಮುದ್ರಿತರಾದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಇದು ನಿಮಗೂ ಅನ್ವಯಿಸುತ್ತದೆ. ನೀವು ಸತ್ಯ ಬೋಧನೆಯ ಬಗ್ಗೆ ಅಂದರೆ ನಿಮ್ಮ ರಕ್ಷಣೆಯ ಕುರಿತಾದ ಸುವಾರ್ತೆಯ ಬಗ್ಗೆ ಕೇಳಿದಾಗ ಕ್ರಿಸ್ತನಲ್ಲಿ ನಂಬಿಕೆಯಿಟ್ಟಿರಿ. ದೇವರು ತನ್ನ ವಾಗ್ದಾನಕ್ಕನುಸಾರವಾಗಿ ನಿಮಗೆ ಪವಿತ್ರಾತ್ಮನನ್ನು ದಯಪಾಲಿಸುವುದರ ಮೂಲಕ ನಿಮ್ಮ ಮೇಲೆ ತನ್ನ ವಿಶೇಷವಾದ ಮುದ್ರೆಯನ್ನು ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನೀವು ಸಹ ನಿಮ್ಮ ರಕ್ಷಣೆಯ ಸುವಾರ್ತೆಯ ಸತ್ಯವಾಕ್ಯವನ್ನು ಕೇಳಿದ ಮೇಲೆ ಕ್ರಿಸ್ತನಲ್ಲಿ ನಂಬಿಕೆಯಿಟ್ಟು ವಾಗ್ದಾನದ ಪವಿತ್ರಾತ್ಮರಿಂದ ಮುದ್ರೆಹೊಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಹೆ ತುಮ್ಕಾಬಿ ಲಾಗುಹೊತಾ ತುಮಿ ಖರ್‍ಯಾ ಶಿಕಾಪಾಚ್ಯಾ ವಿಶಯಾತ್ ಮಟ್ಲ್ಯಾರ್ ತುಮ್ಚ್ಯಾ ರಾಕ್ವನಿಚ್ಯಾ ವಿಶಯಾಚಿ ಬರಿ ಖಬರ್ ಆಯ್ಕುನ್ ಕ್ರಿಸ್ತಾಚ್ಯಾ ವರ್ತಿ ವಿಶ್ವಾಸ್ ಥವ್ಲ್ಯಾಸಿ, ದೆವಾನ್ ಅಪ್ನಿ ದಿಲ್ಲ್ಯಾ ಗೊಸ್ಟಿ ಸಾರ್ಕೆ ಪವಿತ್ರ್ ಆತ್ಮೊ ದಿವ್ನ್ ತುಮ್ಚ್ಯಾ ವರ್ತಿ ವಿಶೆಸ್ ಛಪ್ಪೊ ಘಾಟಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 1:13
38 ತಿಳಿವುಗಳ ಹೋಲಿಕೆ  

ಆತನು ನಮ್ಮ ಮೇಲೆ ಮುದ್ರೆ ಹಾಕಿ ನಮ್ಮ ಹೃದಯಗಳಲ್ಲಿ ಪವಿತ್ರಾತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ.


ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ; ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.


ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ - ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕಂತಲೂ ಲಿಪಿಯುಂಟು.


ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನವ್ಮಿುಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ದೇವರ ವಾಕ್ಯವೆಂದೇ ತಿಳಿದು ಅಂಗೀಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ. ಅದು ನಿಜವಾಗಿ ದೇವರ ವಾಕ್ಯವೇ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.


ಆಮೇಲೆ ಸುನ್ನತಿಯೆಂಬ ಸಂಸ್ಕಾರವನ್ನು ಗುರುತಾಗಿ ಹೊಂದಿದನು. ಇದು ಸುನ್ನತಿಯಾಗುವದಕ್ಕೆ ಮೊದಲೇ ಅವನಿಗಿದ್ದ ನಂಬಿಕೆಯಿಂದಾದ ನೀತಿಗೆ ಮುದ್ರೆಯಾಗಿತ್ತು. ಹೀಗಿರುವದರಿಂದ ಅವನು ನಂಬುವವರೆಲ್ಲರಿಗೂ, ಅವರು ಸುನ್ನತಿಯಿಲ್ಲದವರಾದಾಗ್ಯೂ ಮೂಲತಂದೆಯಾದನು; ಅವರೂ ನೀತಿವಂತರೆಂದು ಎಣಿಸಲ್ಪಡುವರು.


ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟುಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು;


ಕ್ರಿಸ್ತನು ನಮ್ಮ ನಿವಿುತ್ತ ಶಾಪವಾಗಿ ಧರ್ಮಶಾಸ್ತ್ರದಲ್ಲಿ ಹೇಳಿರುವ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಶಾಸ್ತ್ರದಲ್ಲಿ ಬರೆದದೆಯಲ್ಲಾ.


ತರುವಾಯ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ನಿಮ್ಮಲ್ಲಿರುವ ಗಂಡಸರೂ ಹೆಂಗಸರೂ ಪ್ರವಾದಿಸುವರು; ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು, ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು;


ಆ ಸುವಾರ್ತೆಯು ದೇವರ ಬಲಸ್ವರೂಪವಾಗಿದ್ದು ಮೊದಲು ಯೆಹೂದ್ಯರಿಗೆ ಆಮೇಲೆ ಗ್ರೀಕರಿಗೆ ಅಂತೂ ನಂಬುವವರೆಲ್ಲರಿಗೂ ರಕ್ಷಣೆ ಉಂಟುಮಾಡುವಂಥದಾಗಿದೆ.


ಆತನು ದೇವರ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಲ್ಪಟ್ಟು ವಾಗ್ದಾನವಾಗಿದ್ದ ಪವಿತ್ರಾತ್ಮವರವನ್ನು ತಂದೆಯಿಂದ ಹೊಂದಿ


ಆದರೆ ಆ ಸಹಾಯಕನು ಅಂದರೆ ನನ್ನ ಹೆಸರಿನಲ್ಲಿ ತಂದೆಯು ಕಳುಹಿಸಿಕೊಡುವ ಪವಿತ್ರಾತ್ಮನೇ ನಿಮಗೆ ಎಲ್ಲವನ್ನು ಉಪದೇಶಿಸಿ ನಾನು ನಿಮಗೆ ಹೇಳಿದ್ದನ್ನೆಲ್ಲಾ ನಿಮ್ಮ ನೆನಪಿಗೆ ತರುವನು.


ಧರ್ಮಶಾಸ್ತ್ರವು ಮೋಶೆಯ ಮುಖಾಂತರ ಕೊಡಲ್ಪಟ್ಟಿತು; ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರ ಬಂದವು.


ಇಗೋ ನನ್ನ ತಂದೆಯು ವಾಗ್ದಾನಮಾಡಿದ್ದನ್ನು ನಿಮಗೆ ಕಳುಹಿಸಿಕೊಡುತ್ತೇನೆ. ದೇವರು ಮೇಲಣ ಲೋಕದಿಂದ ನಿಮಗೆ ಶಕ್ತಿಯನ್ನು ಹೊದಿಸುವ ತನಕ ಈ ಪಟ್ಟಣದಲ್ಲೇ ಕಾದುಕೊಂಡಿರ್ರಿ ಎಂದು ಹೇಳಿದನು.


ಸತ್ಯವಾಕ್ಯವನ್ನು ನನ್ನ ಬಾಯಿಂದ ತೆಗೆಯಬೇಡ. ನಿನ್ನ ನ್ಯಾಯವಿಧಿಗಳನ್ನು ನಿರೀಕ್ಷಿಸಿಕೊಂಡಿದ್ದೇನೆ.


ಮೊದಲು ನೀವು ಪ್ರಜೆಯಾಗಿರಲಿಲ್ಲ, ಈಗ ದೇವರ ಪ್ರಜೆಯಾಗಿದ್ದೀರಿ; ಮೊದಲು ವಾತ್ಸಲ್ಯ ಹೊಂದಿರಲಿಲ್ಲ, ಈಗ ವಾತ್ಸಲ್ಯ ಹೊಂದಿದವರಾಗಿದ್ದೀರಿ.


ಆದರೆ ನೀವು ಮುಂಚೆ ಪಾಪಕ್ಕೆ ದಾಸರಾಗಿದ್ದರೂ ನಿಮಗೆ ಕಲಿಸಲ್ಪಟ್ಟ ಬೋಧನೆಗೆ ನೀವು ಮನಃಪೂರ್ವಕವಾಗಿ ಅಧೀನರಾದದರಿಂದಲೂ


ಹೀಗಿರಲಾಗಿ ಆತನು ಅವರೊಂದಿಗೆ ಕೂಡಿದ್ದಾಗ್ಗೆ ಅವರಿಗೆ - ಯೋಹಾನನಂತೂ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸಿದನು, ನಿಮಗಾದರೋ ಇನ್ನು ಸ್ವಲ್ಪ ದಿವಸಗಳೊಳಗಾಗಿ ಪವಿತ್ರಾತ್ಮದಲ್ಲಿ ಸ್ನಾನವಾಗುವದು. ಆದಕಾರಣ ನೀವು ಯೆರೂಸಲೇಮನ್ನು ಬಿಟ್ಟು ಹೋಗದೆ ತಂದೆ ಮಾಡಿದಂಥ ನೀವು ನನ್ನಿಂದ ಕೇಳಿದಂಥ ವಾಗ್ದಾನಕ್ಕೆ ಕಾದುಕೊಂಡಿರ್ರಿ ಎಂದು ಅಪ್ಪಣೆಕೊಟ್ಟನು.


ಆದರೆ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಸಹಾಯಕನು, ಅಂದರೆ ತಂದೆಯ ಬಳಿಯಿಂದ ಹೊರಡುವ ಸತ್ಯದ ಆತ್ಮನು, ಬಂದಾಗ ಆತನು ನನ್ನನ್ನು ಕುರಿತು ಸಾಕ್ಷಿಹೇಳುವನು.


ಸಹೋದರರೇ, ಅಬ್ರಹಾಮನ ವಂಶಸ್ಥರೇ, ಮತ್ತು ನಿಮ್ಮಲ್ಲಿರುವ ಯೆಹೂದ್ಯ ಮತಾವಲಂಭಿಗಳೇ, ನಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಿ ಅದೆ.


ದುಡಿಯಿರಿ; ಕೆಟ್ಟುಹೋಗುವ ಆಹಾರಕ್ಕಾಗಿ ದುಡಿಯಬೇಡಿರಿ, ನಿತ್ಯಜೀವಕ್ಕೆ ಉಳಿಯುವ ಆಹಾರಕ್ಕಾಗಿ ದುಡಿಯಿರಿ; ಇಂಥ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ಇದಕ್ಕಾಗಿ ತಂದೆಯಾದ ದೇವರು ಆತನನ್ನು ನೇವಿುಸಿ ಮುದ್ರೆಹಾಕಿದ್ದಾನೆ ಅಂದನು.


ಹಾಗಾದರೆ ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೇ ಪದಾರ್ಥಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಪವಿತ್ರಾತ್ಮವರವನ್ನು ಕೊಡುವನಲ್ಲವೇ ಅಂದನು.


ಇದಲ್ಲದೆ ಮತ್ತೊಬ್ಬ ದೇವದೂತನು ಜೀವಸ್ವರೂಪನಾದ ದೇವರ ಮುದ್ರೆಯನ್ನು ಹಿಡುಕೊಂಡು ಮೂಡಣ ದಿಕ್ಕಿನಿಂದ ಏರಿಬರುವದನ್ನು ಕಂಡೆನು. ಅವನು ಭೂವಿುಯನ್ನೂ ಸಮುದ್ರವನ್ನೂ ಕೆಡಿಸುವದಕ್ಕೆ ಅಧಿಕಾರಹೊಂದಿದ ಆ ನಾಲ್ಕು ಮಂದಿ ದೇವದೂತರಿಗೆ -


ಆತನು ತನ್ನ ಸುಚಿತ್ತದ ಪ್ರಕಾರ ಸತ್ಯಬೋಧನೆಯ ವಾಕ್ಯದಿಂದ ನಮ್ಮನ್ನು ಹುಟ್ಟಿಸಲಾಗಿ ನಾವು ಆತನ ಸೃಷ್ಟಿಗಳಲ್ಲಿ ಪ್ರಥಮಫಲದಂತಾದೆವು.


ಈ ಅತ್ಯಂತ ವಿಶೇಷ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲ್ಪಟ್ಟಿತು; ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು;


ಆ ಗ್ರಂಥಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.


ನೀನು ದೇವರ ದೃಷ್ಟಿಗೆ ಯೋಗ್ಯನಾಗಿ ಕಾಣಿಸಿಕೊಳ್ಳುವದಕ್ಕೆ ಪ್ರಯಾಸಪಡು. ಅವಮಾನಕ್ಕೆ ಗುರಿಯಾಗದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ಉಪದೇಶಿಸುವವನೂ ಆಗಿರು.


ಆತನನ್ನೇ ಕೇಳಿದಿರಲ್ಲಾ, ಆತನಲ್ಲಿಯೇ ಉಪದೇಶವನ್ನು ಹೊಂದಿದಿರಲ್ಲಾ.


ಸತ್ಯವಾಕ್ಯ ದೇವರ ಮಹತ್ವ ಇವುಗಳಿಂದ ಕೂಡಿದವರಾಗಿದ್ದೇವೆ. ಎಡಬಲಗೈಗಳಲ್ಲಿ ನೀತಿಯೆಂಬ ಆಯುಧಗಳನ್ನು ಧರಿಸಿಕೊಂಡವರೂ


ಆತನ ಸಾಕ್ಷಿಯನ್ನು ಒಪ್ಪಿದವನು ದೇವರು ಸತ್ಯವಂತನೆಂಬ ಮಾತಿಗೆ ಮುದ್ರೆ ಹಾಕಿದವನಾಗಿದ್ದಾನೆ.


ಆದಕಾರಣ ಎಲ್ಲಾ ನೀಚತನವನ್ನೂ ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಮನಸ್ಸಿನೊಳಗೆ ಬೇರೂರಿರುವ ವಾಕ್ಯಕ್ಕೆ ನಮ್ರತೆಯಿಂದ ಎಡೆಗೊಡಿರಿ; ಅದು ನಿಮ್ಮ ಆತ್ಮಗಳನ್ನು ರಕ್ಷಿಸುವದಕ್ಕೆ ಸಾಮರ್ಥ್ಯವುಳ್ಳದ್ದಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು