Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 1:14 - ಕನ್ನಡ ಸತ್ಯವೇದವು J.V. (BSI)

14 ದೇವರು ಸಂಪಾದಿಸಿಕೊಂಡ ಜನರಿಗೆ ವಿಮೋಚನೆಯಾಗುವದೆಂಬದಕ್ಕೆ ಪವಿತ್ರಾತ್ಮನು ನಮ್ಮ ಬಾಧ್ಯತೆಗೆ ಸಂಚಕಾರವಾಗಿದ್ದಾನೆ. ಆ ವಿಮೋಚನೆಯು ದೇವರ ಮಹಿಮೆಗೆ ಎಷ್ಟೋ ಪ್ರಖ್ಯಾತಿಯನ್ನು ಉಂಟುಮಾಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ದೇವರು ತನ್ನ ಸ್ವಕೀಯ ಜನರಿಗೆ ವಿಮೋಚನೆಯುಂಟಾಗುತ್ತದೆ ಎಂಬುದಕ್ಕೆ ಪವಿತ್ರಾತ್ಮನು ನಮ್ಮ ಬಾಧ್ಯತೆಗೆ ಸಂಚಕಾರವಾಗಿದ್ದಾನೆ. ಈ ಕಾರಣ ದೇವರಿಗೆ ಮಹಿಮೆಯನ್ನು ಸಲ್ಲಿಸೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಹೀಗೆ ದೇವರಿಗೆ ಸೇರಿದವರು ವಿಮೋಚನೆ ಹೊಂದಿ ಸ್ವರ್ಗೀಯ ಸ್ವಾಸ್ತ್ಯಕ್ಕೆ ಬಾಧ್ಯರಾಗಲು ಆ ಪವಿತ್ರಾತ್ಮರೇ ಆಧಾರ. ಈ ಕಾರಣ ದೇವರಿಗೆ ಮಹಿಮೆ ಸಲ್ಲಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ದೇವರು ತನ್ನ ಜನರಿಗೆ ವಾಗ್ದಾನ ಮಾಡಿದವುಗಳನ್ನು ನಾವು ಹೊಂದಿಕೊಳ್ಳುತ್ತೇವೆ ಎಂಬುದಕ್ಕೆ ಆ ಪವಿತ್ರಾತ್ಮನೇ ಪ್ರಮಾಣವಾಗಿದ್ದಾನೆ. ದೇವರು ಸಂಪಾದಿಸಿಕೊಂಡ ಜನರಿಗೆ ಇದು ಸಂಪೂರ್ಣ ವಿಮೋಚನೆಯನ್ನು ಉಂಟುಮಾಡುತ್ತದೆ. ದೇವರ ಮಹಿಮೆಗೆ ಸ್ತೋತ್ರವಾಗ ಬೇಕೆಂಬುದೇ ಇದೆಲ್ಲದರ ಉದ್ದೇಶವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ದೇವರಿಗೆ ಸೇರಿದವರಾದ ನಾವು ವಿಮೋಚನೆಯಾಗುವ ತನಕ ನಮ್ಮ ಸ್ವರ್ಗೀಯ ವಾರಸುತನವನ್ನು ಹೊಂದುವೆವು ಎಂಬುವುದಕ್ಕೆ ಈ ಪವಿತ್ರಾತ್ಮ ದೇವರೇ ನಮಗೆ ಹೊಣೆಯಾಗಿದ್ದಾರೆ. ದೇವರ ಮಹಿಮೆಯ ನಿಮಿತ್ಯವಾಗಿ ನಾವು ಅವರನ್ನು ಸ್ತುತಿಸೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಪವಿತ್ರ್ ಆತ್ಮೊ ದೆವಾನ್ ಅಪ್ನಾಚ್ಯಾ ಲೊಕಾಕ್ನಿ ಗೊಸ್ಟ್ ದಿಲ್ಲೆ ಸಗ್ಳೆ ಅಮ್ಕಾ ಗಾವ್ತಾ ಮನ್ತಲ್ಯಾಕ್ ಖಾತ್ರಿ ಹೊವ್ನ್ ಹಾಯ್, ಅನಿ ಹಿ ಖಾತ್ರಿ ಅಮ್ಕಾ ದೆವ್ ಅಪ್ನಾಚೆ - ಅಪ್ನಾಚೆ ಮನುನ್ ಹೊತ್ತ್ಯಾಕ್ನಿ ಪುರಾ ರಿತಿನ್ ಸ್ವತಂತ್ರ್ ದಿತಾ ಮನುನ್ ದಾಕ್ವುನ್ ದಿತಾ ತೆಚ್ಯಾ ಮಹಿಮೆಚಿ ಸ್ತುತಿ ಹೊಂವ್ದಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 1:14
18 ತಿಳಿವುಗಳ ಹೋಲಿಕೆ  

ಆ ಸ್ಥಿತಿಗಾಗಿ ನಮ್ಮನ್ನು ಸಿದ್ಧಮಾಡಿರುವವನು ದೇವರೇ; ಆತನು ಪವಿತ್ರಾತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ.


ಆತನು ನಮ್ಮ ಮೇಲೆ ಮುದ್ರೆ ಹಾಕಿ ನಮ್ಮ ಹೃದಯಗಳಲ್ಲಿ ಪವಿತ್ರಾತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ.


ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ; ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.


ನೀವು ಪುತ್ರರಾಗಿರುವದರಿಂದ ದೇವರು ಅಪ್ಪಾ ತಂದೆಯೇ ಎಂದು ಕೂಗುವ ತನ್ನ ಮಗನ ಆತ್ಮನನ್ನು ನಮ್ಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು.


ಇದು ಮಾತ್ರವಲ್ಲದೆ ಪ್ರಥಮ ಫಲವಾಗಿರುವ ಪವಿತ್ರಾತ್ಮವರವನ್ನು ಹೊಂದಿದ ನಾವಾದರೂ ದೇವಪುತ್ರರ ಪದವಿಯನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೋಡುತ್ತಾ ನಮ್ಮೊಳಗೆ ನರಳುತ್ತೇವೆ.


ನಾನೀಗ ನಿಮ್ಮನ್ನು ಕರ್ತನಿಗೂ ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತೇನೆ. ಆತನು ನಿಮ್ಮಲ್ಲಿ ಭಕ್ತಿವೃದ್ಧಿಯನ್ನುಂಟುಮಾಡುವದಕ್ಕೂ ಪವಿತ್ರರಾದವರೆಲ್ಲರಲ್ಲಿ ನಿಮಗೆ ಹಕ್ಕನ್ನು ಅನುಗ್ರಹಿಸುವದಕ್ಕೂ ಶಕ್ತನಾಗಿದ್ದಾನೆ.


ಅವರನ್ನು ತನ್ನ ಪವಿತ್ರದೇಶಕ್ಕೆ ಅಂದರೆ ತನ್ನ ಭುಜಬಲದಿಂದ ಸಂಪಾದಿಸಿದ ಈ ಪರ್ವತಸೀಮೆಗೆ ಕರತಂದನು.


ನೀನು ಹಿಂದಿನ ಕಾಲದಲ್ಲಿ ಸ್ವಕುಲವಾಗಿರಬೇಕೆಂದು ಬಿಡಿಸಿ ಸಂಪಾದಿಸಿಕೊಂಡ ನಿನ್ನ ಮಂಡಲಿಯನ್ನು ಜ್ಞಾಪಿಸಿಕೋ; ನಿನ್ನ ವಾಸಸ್ಥಾನವಾಗಿದ್ದ ಚೀಯೋನ್‍ಗಿರಿಯನ್ನು ಮರೆಯಬೇಡ.


ನೀವಾದರೋ ನಿಮ್ಮನ್ನು ಕತ್ತಲೆಯೊಳಗಿಂದ ಕರೆದು ತನ್ನ ಆಶ್ಚರ್ಯಕರವಾದ ಬೆಳಕಿನಲ್ಲಿ ಸೇರಿಸಿದಾತನ ಗುಣಾತಿಶಯಗಳನ್ನು ಪ್ರಚಾರಮಾಡುವವರಾಗುವಂತೆ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನವೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ.


ದೇವರು ಸ್ವರಕ್ತದಿಂದ ಸಂಪಾದಿಸಿಕೊಂಡ ಸಭೆಯನ್ನು ಪರಿಪಾಲಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.


ಆದರೆ ಇವು ಸಂಭವಿಸುವದಕ್ಕೆ ತೊಡಗುವಾಗ ಮೇಲಕ್ಕೆ ನೋಡಿರಿ, ನಿಮ್ಮ ತಲೆ ಎತ್ತಿರಿ; ನಿಮ್ಮ ಬಿಡುಗಡೆಯು ಸಮೀಪವಾಗಿದೆ ಅಂದನು.


ನೀವು ಕ್ರಿಸ್ತ ಯೇಸುವಿನಲ್ಲಿರುವದು ಆತನಿಂದಲೇ. ಕ್ರಿಸ್ತ ಯೇಸು ನಮಗೆ ದೇವರ ಕಡೆಯಿಂದ ಜ್ಞಾನವೂ ನೀತಿ ಶುದ್ಧೀಕರಣ ವಿಮೋಚನೆಗಳಿಗೆ ಕಾರಣನೂ ಆದನು.


ಇದಲ್ಲದೆ ಆತನಲ್ಲಿ ನಾವು ದೇವರ ಸ್ವಕೀಯ ಪ್ರಜೆಯಾದೆವು, ಬರಬೇಕಾದ ಕ್ರಿಸ್ತನನ್ನು ಎದುರುನೋಡುತ್ತಿದ್ದ ನಾವು ತನ್ನ ಮಹಿಮೆಯನ್ನು ಪ್ರಖ್ಯಾತಿಪಡಿಸಬೇಕೆಂದು ಸಮಸ್ತಕಾರ್ಯಗಳನ್ನು ತನ್ನ ಇಷ್ಟದಂತೆ ನಡಿಸುವ ದೇವರು ತನ್ನ ಸಂಕಲ್ಪದ ಮೇರೆಗೆ ನಮ್ಮನ್ನು ಆದಿಯಲ್ಲಿಯೇ ಆರಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು