Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 1:15 - ಕನ್ನಡ ಸತ್ಯವೇದವು J.V. (BSI)

15 ಹೀಗಿರಲಾಗಿ ಕರ್ತನಾದ ಯೇಸುವಿನಲ್ಲಿ ನೀವು ಇಟ್ಟಿರುವ ನಂಬಿಕೆಯನ್ನು ಕುರಿತೂ ದೇವಜನರೆಲ್ಲರಿಗೆ ನೀವು ತೋರಿಸುವ ಪ್ರೀತಿಯನ್ನು ಕುರಿತೂ ಕೇಳಿ ನಾನು ನಿಮ್ಮ ನಿವಿುತ್ತವಾಗಿ ಎಡೆಬಿಡದೆ ದೇವರಿಗೆ ಸ್ತೋತ್ರಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಹೀಗಿರಲಾಗಿ ಕರ್ತನಾದ ಯೇಸುವಿನಲ್ಲಿ ನೀವು ಇಟ್ಟಿರುವ ನಂಬಿಕೆಯನ್ನು ಮತ್ತು ದೇವಜನರೆಲ್ಲರಿಗೆ ನೀವು ತೋರಿಸುವ ಪ್ರೀತಿಯ ವಿಷಯವನ್ನು ಕೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15-16 ಪ್ರಭು ಯೇಸುವಿನಲ್ಲಿ ನೀವಿಟ್ಟಿರುವ ವಿಶ್ವಾಸ ಹಾಗೂ ದೇವಜನರೆಲ್ಲರ ಮೇಲೆ ನಿಮಗಿರುವ ಪ್ರೀತಿಯನ್ನು ಕುರಿತು ಕೇಳಿದ್ದೇನೆ. ಅಂದಿನಿಂದ ನಿಮ್ಮ ಸಲುವಾಗಿ ದೇವರಿಗೆ ಸದಾ ಕೃತಜ್ಞತಾಸ್ತುತಿ ಸಲ್ಲಿಸಿ, ನನ್ನ ಪ್ರಾರ್ಥನೆಯಲ್ಲಿ ನಿಮ್ಮನ್ನು ಸ್ಮರಿಸಿಕೊಳ್ಳುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15-16 ಆದಕಾರಣವೇ ನನ್ನ ಪ್ರಾರ್ಥನೆಗಳಲ್ಲಿ ನಾನು ನಿಮ್ಮನ್ನು ಜ್ಞಾಪಿಸಿಕೊಂಡು ನಿಮ್ಮ ವಿಷಯದಲ್ಲಿ ದೇವರಿಗೆ ಯಾವಾಗಲೂ ಸ್ತೋತ್ರ ಸಲ್ಲಿಸುತ್ತೇನೆ. ಪ್ರಭುವಾದ ಯೇಸುವಿನಲ್ಲಿ ನಿಮಗಿರುವ ನಂಬಿಕೆಯ ಬಗ್ಗೆ ಮತ್ತು ಎಲ್ಲಾ ದೇವಜನರ ಮೇಲೆ ನಿಮಗಿರುವ ಪ್ರೀತಿಯ ಬಗ್ಗೆ ಕೇಳಿದಂದಿನಿಂದ ನಾನು ನಿಮ್ಮ ವಿಷಯದಲ್ಲಿ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಈ ಕಾರಣದಿಂದ ನಾನು ಸಹ ಕರ್ತ ಯೇಸುವಿನಲ್ಲಿರುವ ನಿಮ್ಮ ನಂಬಿಕೆ ಹಾಗೂ ಪರಿಶುದ್ಧರೆಲ್ಲರಿಗಾಗಿರುವ ಪ್ರೀತಿಯನ್ನು ಕುರಿತು ಕೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಹ್ಯಾ ಕಾರಾನಾ ಸಾಟ್ನಿ ಧನಿಯಾ ಜೆಜು ವರ್ತಿ ತುಮಿ ಥವಲ್ಲ್ಯಾ ವಿಶ್ವಾಸಾಚ್ಯಾ ಅನಿ ಸಗ್ಳ್ಯಾ ದೆವಾಚ್ಯಾ ಲೊಕಾಂಚ್ಯಾ ಸಾಟ್ನಿ ಥವಲ್ಲ್ಯಾ ಪ್ರೆಮಾಚ್ಯಾ ವಿಶಯಾತ್ ಮಿಯಾ ಆಯ್ಕ್ಲೊ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 1:15
17 ತಿಳಿವುಗಳ ಹೋಲಿಕೆ  

ಕರ್ತನಾದ ಯೇಸುವಿನ ಮೇಲೆ ನೀನು ಇಟ್ಟಿರುವ ನಂಬಿಕೆಯನ್ನು ಕುರಿತೂ ದೇವಜನರೆಲ್ಲರ ಮೇಲಿರುವ ನಿನ್ನ ಪ್ರೀತಿಯನ್ನು ಕುರಿತೂ ಕೇಳಿದ್ದರಿಂದ


ನೀವು ದೇವಜನರಿಗೆ ಉಪಚಾರ ಮಾಡಿದಿರಿ, ಇನ್ನೂ ಮಾಡುತ್ತಾ ಇದ್ದೀರಿ. ಈ ಕೆಲಸವನ್ನೂ ಇದರಲ್ಲಿ ನೀವು ದೇವರ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯನ್ನೂ ಆತನು ಮರೆಯುವದಕ್ಕೆ ಅನ್ಯಾಯಸ್ಥನಲ್ಲ.


ಸಹೋದರರೇ, ನಾವು ಯಾವಾಗಲೂ ನಿಮ್ಮ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ಧರಾಗಿದ್ದೇವೆ. ಹಾಗೆ ಮಾಡುವದು ಯೋಗ್ಯ; ಯಾಕಂದರೆ ನಿಮ್ಮ ನಂಬಿಕೆಯು ಬಹಳ ಅಭಿವೃದ್ಧಿ ಹೊಂದುತ್ತಾ ಬರುತ್ತದೆ, ಪರಸ್ಪರವಾದ ಪ್ರೀತಿ ನಿಮ್ಮೆಲ್ಲರಲ್ಲಿಯೂ ಹೆಚ್ಚುತ್ತಾ ಬರುತ್ತದೆ.


ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಆಜ್ಞೆಯನ್ನು ನಾವು ಆತನಿಂದ ಹೊಂದಿದ್ದೇವೆ.


ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿ ಬಿದ್ದಿರುವ ತನ್ನ ಸಹೋದರನನ್ನು ನೋಡಿ ಕರುಣಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವದುಂಟೇ?


ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನ್ನೊಬ್ಬರು ಹೃದಯಪೂರ್ವಕವಾಗಿಯೂ ಯಥಾರ್ಥವಾಗಿಯೂ ಪ್ರೀತಿಸಿರಿ.


ನಮ್ಮ ಕರ್ತನ ಕೃಪೆಯು ಅತ್ಯಧಿಕವಾಗಿದ್ದು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯನ್ನೂ ಪ್ರೀತಿಯನ್ನೂ ನನ್ನಲ್ಲಿ ಉಂಟುಮಾಡಿತು.


ಶುದ್ಧ ಹೃದಯ ಒಳ್ಳೇಮನಸ್ಸಾಕ್ಷಿ ನಿಷ್ಕಪಟವಾದ ನಂಬಿಕೆ ಎಂಬಿವುಗಳಿಂದ ಹುಟ್ಟಿದ ಪ್ರೀತಿಯೇ ದೇವವಾಕ್ಯೋಪದೇಶದ ಗುರಿಯಾಗಿದೆ.


ಸಹೋದರಸ್ನೇಹ ವಿಷಯದಲ್ಲಿ ನಿಮಗೆ ಬರೆಯುವದು ಅವಶ್ಯವಿಲ್ಲ; ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಉಪದೇಶವನ್ನು ನೀವೇ ದೇವರಿಂದ ಹೊಂದಿದವರಾಗಿದ್ದು ಸಮಸ್ತ ಮಕೆದೋನ್ಯದಲ್ಲಿರುವ ಸಹೋದರರನ್ನೆಲ್ಲಾ ಪ್ರೀತಿಸುವವರಾಗಿಯೇ ಇದ್ದೀರಿ.


ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋಜನವಿಲ್ಲ. ಪ್ರೀತಿಯಿಂದ ಕೆಲಸ ನಡಿಸುವ ನಂಬಿಕೆಯಿಂದಲೇ ಪ್ರಯೋಜನವಾಗಿದೆ.


ಭೂಲೋಕದಲ್ಲಿರುವ ದೇವಜನರ ವಿಷಯದಲ್ಲಿ - ಇವರೇ ಶ್ರೆಷ್ಠರು, ಇವರೇ ನನಗೆ ಇಷ್ಟರಾದವರು ಎಂತಲೂ ಹೇಳುವೆನು.


ಯೆಹೂದ್ಯರಿಗೂ ಗ್ರೀಕರಿಗೂ ದೇವರ ಕಡೆಗೆ ತಿರುಗಬೇಕೆಂತಲೂ ನಮ್ಮ ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡಬೇಕೆಂತಲೂ ಖಂಡಿತವಾಗಿ ಬೋಧಿಸುವವನಾಗಿದ್ದೆನು; ಇದೆಲ್ಲಾ ನಿಮಗೇ ತಿಳಿದಿದೆ.


ಮೊದಲನೇದು, ನಿಮ್ಮ ನಂಬಿಕೆಯು ಲೋಕದಲ್ಲೆಲ್ಲಾ ಪ್ರಸಿದ್ಧಿಗೆ ಬಂದದ್ದರಿಂದ ನಿಮ್ಮೆಲ್ಲರ ವಿಷಯವಾಗಿ ಯೇಸು ಕ್ರಿಸ್ತನ ಮೂಲಕ ನನ್ನ ದೇವರಿಗೆ ಸ್ತೋತ್ರ ಮಾಡುತ್ತೇನೆ.


ದೇವರ ಚಿತ್ತಾನುಸಾರವಾಗಿ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು ಎಫೆಸದಲ್ಲಿರುವ ದೇವಜನರಿಗೂ ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟಿರುವವರಿಗೂ ಬರೆಯುವದೇನಂದರೆ -


ನೀವು ದೇವರ ಪ್ರೀತಿಯಲ್ಲಿ ನೆಲೆಗೊಂಡು ನಿಂತು ಅದರ ಅಗಲ ಉದ್ದ ಎತ್ತರ ಆಳ ಎಷ್ಟೆಂಬದನ್ನು ದೇವಜನರೆಲ್ಲರೊಂದಿಗೆ ಗ್ರಹಿಸಲೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು