Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 1:16 - ಕನ್ನಡ ಸತ್ಯವೇದವು J.V. (BSI)

16 ನನ್ನ ಪ್ರಾರ್ಥನೆಗಳಲ್ಲಿ ನಿಮಗೋಸ್ಕರ ವಿಜ್ಞಾಪನೆಮಾಡಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಾನು ನಿಮಗೋಸ್ಕರ ನನ್ನ ಪ್ರಾರ್ಥನೆಗಳಲ್ಲಿ ವಿಜ್ಞಾಪನೆ ಮಾಡುವಾಗ ದೇವರಿಗೆ ಎಡೆಬಿಡದೆ ಸ್ತೋತ್ರ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನನ್ನ ಪ್ರಾರ್ಥನೆಗಳಲ್ಲಿ ನಿಮಗಾಗಿ ವಿಜ್ಞಾಪಿಸಿ, ನಿಮ್ಮ ನಿಮಿತ್ತವಾಗಿ ಎಡಬಿಡದೆ ಸ್ತೋತ್ರ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತುಮ್ಚಾ ಸಾಟ್ನಿ ದೆವಾಕ್ ಧನ್ಯವಾದ್ ದಿತಲೆ ಮಿಯಾ ಬಂದ್ ಕರುಕ್ನಾ, ಅನಿ ಮಾಜ್ಯಾ ಮಾಗ್ನ್ಯಾತ್ನಿ ಮಿಯಾ ತುಮ್ಚಿ ಯಾದ್ ಕರ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 1:16
11 ತಿಳಿವುಗಳ ಹೋಲಿಕೆ  

ಆದಕಾರಣ ನಾವು ನಿಮ್ಮ ಸುದ್ದಿಯನ್ನು ಕೇಳಿದ ದಿವಸದಿಂದ ನಿಮಗೋಸ್ಕರ ಪ್ರಾರ್ಥಿಸುವದನ್ನು ಬಿಡದೆ ನೀವು ಸಕಲ ಆತ್ಮೀಯ ಜ್ಞಾನವನ್ನೂ ಗ್ರಹಿಕೆಯನ್ನೂ ಹೊಂದಿ


ಕ್ರಿಸ್ತ ಯೇಸುವಿನಲ್ಲಿ ನೀವು ಇಟ್ಟ ನಂಬಿಕೆಯ ವಿಷಯವಾಗಿಯೂ ದೇವಜನರ ಮೇಲಿರುವ ನಿಮ್ಮ ಪ್ರೀತಿಯ ವಿಷಯವಾಗಿಯೂ ನಾವು ಕೇಳಿ ಪರಲೋಕದಲ್ಲಿ ನಿಮಗೋಸ್ಕರ ಸಿದ್ಧವಾಗಿರುವ ಮಹಾಪದವಿಯನ್ನು ನೆನಸುತ್ತಾ ನಾವು ಪ್ರಾರ್ಥನೆಮಾಡುವಾಗೆಲ್ಲಾ ನಿಮ್ಮ ನಿವಿುತ್ತವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾಗಿರುವ ದೇವರಿಗೆ ಸ್ತೋತ್ರಮಾಡುತ್ತೇವೆ. ನೀವು ಆ ಪದವಿಯನ್ನು ಕುರಿತು ನಿಮ್ಮ ಬಳಿಗೆ ಬಂದಿರುವ ಸುವಾರ್ತೆಯ ಸತ್ಯವಾಕ್ಯದಿಂದ ಮೊದಲೇ ಕೇಳಿದಿರಿ.


ಸಹೋದರರೇ, ನಾವು ಯಾವಾಗಲೂ ನಿಮ್ಮ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ಧರಾಗಿದ್ದೇವೆ. ಹಾಗೆ ಮಾಡುವದು ಯೋಗ್ಯ; ಯಾಕಂದರೆ ನಿಮ್ಮ ನಂಬಿಕೆಯು ಬಹಳ ಅಭಿವೃದ್ಧಿ ಹೊಂದುತ್ತಾ ಬರುತ್ತದೆ, ಪರಸ್ಪರವಾದ ಪ್ರೀತಿ ನಿಮ್ಮೆಲ್ಲರಲ್ಲಿಯೂ ಹೆಚ್ಚುತ್ತಾ ಬರುತ್ತದೆ.


ನಾವು ನಂಬಿಕೆಯ ಫಲವಾದ ನಿಮ್ಮ ಕೆಲಸವನ್ನೂ ಪ್ರೀತಿಪೂರ್ವಕವಾದ ನಿಮ್ಮ ಪ್ರಯಾಸವನ್ನೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೇಲಣ ನಿರೀಕ್ಷೆಯಿಂದುಂಟಾದ ನಿಮ್ಮ ಸೈರಣೆಯನ್ನೂ ನಮ್ಮ ತಂದೆಯಾದ ದೇವರ ಮುಂದೆ ಎಡೆಬಿಡದೆ ಜ್ಞಾಪಕಮಾಡಿಕೊಂಡು ನಮ್ಮ ಪ್ರಾರ್ಥನೆಗಳಲ್ಲಿ ನಿಮಗೋಸ್ಕರ ವಿಜ್ಞಾಪನೆಮಾಡುವಾಗ ನಿಮ್ಮೆಲ್ಲರ ವಿಷಯದಲ್ಲಿ ದೇವರಿಗೆ ಯಾವಾಗಲೂ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ.


ನಾನಾದರೋ ನಿಮಗೋಸ್ಕರವಾಗಿ ಯೆಹೋವನನ್ನು ಪ್ರಾರ್ಥಿಸುತ್ತಾ ಆತನ ಉತ್ತಮ ನೀತಿಮಾರ್ಗವನ್ನು ನಿಮಗೆ ತೋರಿಸಿಕೊಡುವದನ್ನು ಬಿಡುವದೇ ಇಲ್ಲ; ಬಿಟ್ಟರೆ ಆತನ ದೃಷ್ಟಿಯಲ್ಲಿ ಪಾಪಿಯಾಗಿರುವೆನು.


ಯೆರೂಸಲೇಮೇ, ನಾನು ನಿನ್ನ ಪೌಳಿಗೋಡೆಗಳಲ್ಲಿ ಕಾವಲುಗಾರರನ್ನು ನೇವಿುಸಿದ್ದೇನೆ; ಅವರು ಹಗಲೂ ಇರುಳೂ ಮೌನವಾಗಿರರು.


ನಮ್ಮ ದೇವರಾದ ಯೆಹೋವನು ನಮ್ಮನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವ ಹಾಗೆ ನೀನು ನಮಗೋಸ್ಕರ ಆತನಿಗೆ ಮೊರೆಯಿಡು, ಸುಮ್ಮನಿರಬೇಡ ಅಂದರು.


ಆದರೆ ನೀನು ಸುಖದಿಂದಿರುವಾಗ ನನ್ನನ್ನು ಜ್ಞಾಪಕಮಾಡಿಕೊಂಡು ನನಗೆ ಉಪಕಾರ ಮಾಡಿ ಫರೋಹನಿಗೆ ನನ್ನ ಸಂಗತಿಯನ್ನು ತಿಳಿಸಿ ನನ್ನನ್ನು ಈ ಸೆರೆಯಿಂದ ಬಿಡಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು