Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 1:17 - ಕನ್ನಡ ಸತ್ಯವೇದವು J.V. (BSI)

17 ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಪ್ರಭಾವಸ್ವರೂಪನಾದ ತಂದೆಯೂ ಆಗಿರುವಾತನು ತನ್ನ ವಿಷಯವಾಗಿ ತಿಳುವಳಿಕೆಯನ್ನು ಕೊಟ್ಟು ಇದುವರೆಗೆ ಗುಪ್ತವಾಗಿದ್ದ ಸತ್ಯಾರ್ಥಗಳನ್ನು ತಿಳುಕೊಳ್ಳುವ ಜ್ಞಾನವುಳ್ಳ ಆತ್ಮವನ್ನು ನಿಮಗೆ ದಯಪಾಲಿಸಬೇಕೆಂದು ಪ್ರಾರ್ಥಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಮಹಿಮಾಸ್ವರೂಪನಾದ ತಂದೆಯೂ ಆಗಿರುವಾತನು ತನ್ನ ವಿಷಯವಾಗಿ ಪೂರ್ಣವಾದ ತಿಳಿವಳಿಕೆಯನ್ನು ಕೊಟ್ಟು, ಜ್ಞಾನ ಮತ್ತು ಪ್ರಕಟಣೆಗಳ ಆತ್ಮವನ್ನು ನಿಮಗೆ ದಯಪಾಲಿಸಬೇಕೆಂದು ಪ್ರಾರ್ಥಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಮ್ಮ ಪ್ರಭು ಯೇಸುಕ್ರಿಸ್ತರ ದೇವರೂ ಮಹಿಮಾನ್ವಿತ ತಂದೆಯೂ ಆದವರು, ನಿಮಗೆ ಜ್ಞಾನವನ್ನೂ ವಿವೇಚನೆಯನ್ನೂ ನೀಡುವ ಆತ್ಮವನ್ನು ದಯಪಾಲಿಸಲಿ; ತಮ್ಮನ್ನು ಸಂಪೂರ್ಣವಾಗಿ ಅರಿತುಕೊಳ್ಳುವ ವರವನ್ನು ಈಯಲಿ, ಎಂದು ಪ್ರಾರ್ಥಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಮ್ಮ ಪ್ರಭುವಾದ ಯೇಸು ಕ್ರಿಸ್ತನ ದೇವರೂ ಮಹಿಮಾ ಸ್ವರೂಪನಾದ ತಂದೆಯೂ ಆಗಿರುವಾತನಿಗೆ ನಾನು ಯಾವಾಗಲೂ ಪ್ರಾರ್ಥಿಸುತ್ತೇನೆ. ದೇವರ ಜ್ಞಾನದಿಂದ ಅಂದರೆ ಆತನು ನಿಮಗೆ ತಿಳಿಯಪಡಿಸಿದ ಜ್ಞಾನದಿಂದ ನಿಮ್ಮನ್ನು ವಿವೇಕಿಗಳನ್ನಾಗಿ ಮಾಡುವಂಥ ಆತ್ಮವನ್ನು ಆತನು ನಿಮಗೆ ಅನುಗ್ರಹಿಸಲೆಂದು ನಾನು ಪ್ರಾರ್ಥಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಮ್ಮ ಕರ್ತ ಯೇಸುಕ್ರಿಸ್ತರ ದೇವರೂ ಮಹಿಮೆಯ ತಂದೆಯಾದವರನ್ನು ನೀವು ಪೂರ್ಣವಾಗಿ ತಿಳಿದುಕೊಳ್ಳುವಂತೆ ಜ್ಞಾನದ ಮತ್ತು ಪ್ರಕಟಣೆಯ ಆತ್ಮವನ್ನು ನಿಮಗೆ ಅನುಗ್ರಹಿಸಲಿ ಎಂದು ನಿಮಗಾಗಿ ಯಾವಾಗಲೂ ಪ್ರಾರ್ಥನೆ ಮಾಡುವವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚೊ ದೆವ್, ಮಹಿಮೆನ್ ಭರಲ್ಲೊ ಬಾಬಾ ತುಮ್ಕಾ ಶಾನ್ಪಾನ್ ಅನಿ ದೆವಾಕುಚ್ ತುಮ್ಕಾ ದಾಕ್ವುನ್ ದಿತಲೊ ಪವಿತ್ರ್ ಆತ್ಮೊ ದಿಂವ್ದಿ, ಅಸೆ ತುಮಿ ತೆಕಾ ವಳ್ಕಿ ಸಾರ್ಕೆ ಹೊಂವ್ದಿ ಮನುನ್ ಮಿಯಾ ಮಾಗ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 1:17
56 ತಿಳಿವುಗಳ ಹೋಲಿಕೆ  

ಆ ಅಂಕುರದ ಮೇಲೆ ಜ್ಞಾನವಿವೇಕದಾಯಕ ಆತ್ಮ, ಆಲೋಚನಪರಾಕ್ರಮಗಳನ್ನು ಹುಟ್ಟಿಸುವ ಆತ್ಮ, ತಿಳುವಳಿಕೆಯನ್ನೂ ಯೆಹೋವನ ಭಯವನ್ನೂ ಉಂಟುಮಾಡುವ ಆತ್ಮ, ಅಂತು ಯೆಹೋವನ ಆತ್ಮವೇ ನೆಲೆಗೊಂಡಿರುವದು;


ಆಗ ನೀನು ಯೆಹೋವನ ಭಯವನ್ನು ಅರಿತು ದೈವಜ್ಞಾನವನ್ನು ಪಡೆದುಕೊಳ್ಳುವಿ.


ನಮ್ಮನ್ನು ತನ್ನ ಪ್ರಭಾವದಿಂದಲೂ ಗುಣಾತಿಶಯದಿಂದಲೂ ಕರೆದ ದೇವರ ವಿಷಯವಾಗಿ ಯೇಸುವಿನ ದಿವ್ಯ ಶಕ್ತಿಯು ನಮಗೆ ಪರಿಜ್ಞಾನವನ್ನು ಕೊಟ್ಟದ್ದರಲ್ಲಿ ಜೀವಕ್ಕೂ ಭಕ್ತಿಗೂ ಬೇಕಾದದ್ದೆಲ್ಲವು ದೊರೆಯಿತೆಂದು ಬಲ್ಲೆವಷ್ಟೆ.


ನೀವು ಕೃಪೆಯಲ್ಲಿಯೂ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನದಲ್ಲಿಯೂ ಅಭಿವೃದ್ಧಿಯನ್ನು ಹೊಂದುತ್ತಾ ಇರ್ರಿ. ಆತನಿಗೆ ಈಗಲೂ ಸದಾಕಾಲವೂ ಸ್ತೋತ್ರ. ಆಮೆನ್.


ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರ. ಆತನು ಪರಲೋಕದಲ್ಲಿನ ಸಕಲ ಆತ್ಮೀಯವರಗಳನ್ನು ನಮಗೆ ಕ್ರಿಸ್ತ ಯೇಸುವಿನಲ್ಲಿ ಅನುಗ್ರಹಿಸಿದ್ದಾನೆ.


ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವದೇ ನಿತ್ಯಜೀವವು.


ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ತಂದೆಯೇ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ; ಮಗನೇ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಿಸುವದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದವನಾಗಿದ್ದಾನೆ.


ನಮಗಾದರೋ ದೇವರು ತನ್ನ ಆತ್ಮನ ಮೂಲಕ ಅದನ್ನು ಪ್ರಕಟಿಸಿದನು. ಆ ಆತ್ಮನು ಎಲ್ಲಾ ವಿಷಯಗಳನ್ನು, ದೇವರ ಅಗಾಧವಾದ ವಿಷಯಗಳನ್ನು ಕೂಡ ಪರಿಶೋಧಿಸುವವನಾಗಿದ್ದಾನೆ.


ಅವರು ನನ್ನನ್ನು ಯೆಹೋವನೆಂದು ಗ್ರಹಿಸತಕ್ಕ ಹೃದಯವನ್ನು ಅವರಿಗೆ ಅನುಗ್ರಹಿಸುವೆನು; ಅವರು ನನ್ನ ಜನರಾಗಿರುವರು, ನಾನು ಅವರ ದೇವರಾಗಿರುವೆನು; ಅವರು ನನ್ನ ಕಡೆಗೆ ಮನಃಪೂರ್ವಕವಾಗಿ ಹಿಂದಿರುಗಿ ಬರುವರು.


ಆ ಮರ್ಮವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಪವಿತ್ರಾತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿದ್ದ ಜನರಿಗೆ ತಿಳಿಸಲ್ಪಡಲಿಲ್ಲ.


ಯೇಸು ಆಕೆಗೆ - ನನ್ನನ್ನು ಹಿಡಿಯಬೇಡ; ಯಾಕಂದರೆ ನಾನು ಇನ್ನೂ ತಂದೆಯ ಬಳಿಗೆ ಏರಿಹೋದವನಲ್ಲ. ನೀನು ನನ್ನ ಸಹೋದರರ ಬಳಿಗೆ ಹೋಗಿ - ನಾನು ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ಏರಿಹೋಗುತ್ತೇನೆ ಎಂದು ಅವರಿಗೆ ಹೇಳು ಅಂದನು.


ಅವನ ಮಾತಿನಲ್ಲಿ ಕಂಡುಬಂದ ಜ್ಞಾನವನ್ನೂ ಪವಿತ್ರಾತ್ಮ ಶಕ್ತಿಯನ್ನೂ ಎದುರಿಸಲಾರದೆ ಹೋದರು.


ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೇಡಿನಿಂದ ನಮ್ಮನ್ನು ತಪ್ಪಿಸು.


ಆದರೆ ಆ ಸಹಾಯಕನು ಅಂದರೆ ನನ್ನ ಹೆಸರಿನಲ್ಲಿ ತಂದೆಯು ಕಳುಹಿಸಿಕೊಡುವ ಪವಿತ್ರಾತ್ಮನೇ ನಿಮಗೆ ಎಲ್ಲವನ್ನು ಉಪದೇಶಿಸಿ ನಾನು ನಿಮಗೆ ಹೇಳಿದ್ದನ್ನೆಲ್ಲಾ ನಿಮ್ಮ ನೆನಪಿಗೆ ತರುವನು.


ಹೊಗಳಿಕೊಳ್ಳುವದು ವಿಹಿತವಲ್ಲದಿದ್ದರೂ ಅದು ನನಗೆ ಅವಶ್ಯವಾಗಿದೆ. ಆದದರಿಂದ ಕರ್ತನು ನನಗೆ ದಯಪಾಲಿಸಿದ ದರ್ಶನಗಳನ್ನು ಕುರಿತೂ ತಿಳಿಯಪಡಿಸಿದ ರಹಸ್ಯಗಳನ್ನು ಕುರಿತೂ ಹೇಳುತ್ತೇನೆ.


ಯಾಕಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರುನಿಲ್ಲುವದಕ್ಕೂ ಎದುರುಮಾತಾಡುವದಕ್ಕೂ ಆಗದಂಥ ಬಾಯನ್ನೂ ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ.


ದ್ವಾರಗಳೇ, ಉನ್ನತವಾಗಿರ್ರಿ; ಪುರಾತನವಾದ ಕದಗಳೇ, ತೆರೆದುಕೊಂಡಿರ್ರಿ; ಮಹಾಪ್ರಭಾವವುಳ್ಳ ಅರಸನು ಆಗವಿುಸುತ್ತಾನೆ.


ಒಬ್ಬನಿಗೆ ದೇವರಾತ್ಮನ ಮೂಲಕ ಜ್ಞಾನವಾಕ್ಯವು, ಒಬ್ಬನಿಗೆ ಆ ಆತ್ಮನಿಗೆ ಅನುಗುಣವಾಗಿ ವಿದ್ಯಾವಾಕ್ಯವು,


ಇದನ್ನು ಇಹಲೋಕಾಧಿಕಾರಿಗಳಲ್ಲಿ ಯಾರೂ ಅರಿಯಲಿಲ್ಲ; ಅರಿತಿದ್ದರೆ ಅವರು ಮಹಿಮೆಯುಳ್ಳ ಕರ್ತನನ್ನು ಶಿಲುಬೆಗೆ ಹಾಕಿಸುತ್ತಿರಲಿಲ್ಲ;


ಹೀಗೆ ನೀವು ಏಕ ಮನಸ್ಸಿನಿಂದ ಒಮ್ಮುಖವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾದ ದೇವರನ್ನು ಕೊಂಡಾಡುವಿರಿ.


ಅವರು ತಂದೆಯನ್ನಾದರೂ ನನ್ನನ್ನಾದರೂ ತಿಳಿಯದವರಾಗಿರುವದರಿಂದ ಇಂಥದನ್ನು ನಿಮಗೆ ಮಾಡುವರು.


ಪಾರಸಿಯ ರಾಜನಾದ ಕೋರೆಷನ ಆಳಿಕೆಯ ಮೂರನೆಯ ವರುಷದಲ್ಲಿ ಬೇಲ್ತೆಶಚ್ಚರನೆಂಬ ದಾನಿಯೇಲನಿಗೆ ಒಂದು ಸಂಗತಿಯು ಪ್ರಕಟವಾಯಿತು; ಬಹು ಕಷ್ಟದ ಗಡುವಿನ ಆ ಸಂಗತಿಯು ಸತ್ಯ; ಅವನು ಕಂಡ ಕನಸನ್ನು ಗಮನಿಸಿ ಆ ಸಂಗತಿಯನ್ನು ಮಂದಟ್ಟುಮಾಡಿಕೊಂಡನು.


ನೆರೆಹೊರೆಯವರೂ ಅಣ್ಣತಮ್ಮಂದಿರೂ ಒಬ್ಬರಿಗೊಬ್ಬರು - ಯೆಹೋವನ ಜ್ಞಾನವನ್ನು ಪಡೆಯಿರಿ ಎಂದು ಇನ್ನು ಮೇಲೆ ಬೋಧಿಸಬೇಕಾಗಿರುವದಿಲ್ಲ; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ನನ್ನ ಜ್ಞಾನವನ್ನು ಪಡೆದಿರುವರು; ನಾನು ಅವರ ಅಪರಾಧವನ್ನು ಕ್ಷವಿುಸಿ ಅವರ ಪಾಪವನ್ನು ನನ್ನ ನೆನಪಿಗೆ ಎಂದಿಗೂ ತರುವದಿಲ್ಲ. ಇದು ಯೆಹೋವನ ನುಡಿ.


ಆ ಸಹಾಯಕನು ಯಾರಂದರೆ ಸತ್ಯದ ಆತ್ಮನೇ. ಲೋಕವು ಆತನನ್ನು ನೋಡದೆಯೂ ತಿಳಿಯದೆಯೂ ಇರುವದರಿಂದ ಆತನನ್ನು ಹೊಂದಲಾರದು. ನೀವು ಆತನನ್ನು ಬಲ್ಲಿರಿ; ಹೇಗಂದರೆ ನಿಮ್ಮ ಬಳಿಯಲ್ಲಿ ವಾಸಮಾಡುತ್ತಾನೆ ಮತ್ತು ನಿಮ್ಮೊಳಗೆ ಇರುವನು.


ಅದಕ್ಕೆ ಯೇಸು - ಯೋನನ ಮಗನಾದ ಸೀಮೋನನೇ, ನೀನು ಧನ್ಯನು; ಈ ಗುಟ್ಟು ನಿನಗೆ ತಿಳಿಸಿದವನು ನರಮನುಷ್ಯನಲ್ಲ, ಪರಲೋಕದಲ್ಲಿರುವ ನನ್ನ ತಂದೆಯೇ ತಿಳಿಸಿದನು.


ಆ ಸಮಯದಲ್ಲಿ ಯೇಸು ಹೇಳಿದ್ದೇನಂದರೆ - ತಂದೆಯೇ, ಪರಲೋಕ ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ಮಾತುಗಳನ್ನು ಮರೆಮಾಡಿ ಬಾಲಕರಿಗೆ ಪ್ರಕಟಮಾಡಿದ್ದೀ ಎಂದು ನಿನ್ನನ್ನು ಕೊಂಡಾಡುತ್ತೇನೆ.


ಹೆಚ್ಚಳಪಡುವವನು ತಾನು ನನ್ನನ್ನು ತಿಳಿದು ನಾನು ಲೋಕದಲ್ಲಿ ಪ್ರೀತಿನೀತಿನ್ಯಾಯಗಳನ್ನು ತೋರ್ಪಡಿಸುವ ಯೆಹೋವನಾಗಿರುವೆನು ಎಂದು ಗ್ರಹಿಸಿಕೊಂಡಿದ್ದೇನೆ ಎಂಬದಕ್ಕೇ ಹೆಚ್ಚಳಪಡಲಿ; ಪ್ರೀತಿನೀತಿನ್ಯಾಯಗಳೇ ನನಗೆ ಆನಂದವೆಂದು ಯೆಹೋವನು ಅನ್ನುತ್ತಾನೆ.


ತನ್ನ ದೇವತೆಗಳು ದೇವರಲ್ಲದೆ ಇದ್ದರೂ ಅವುಗಳನ್ನು ಯಾವ ಜನಾಂಗವಾದರೂ ಬದಲಾಯಿಸಿಕೊಂಡಿತೋ? ಆದರೆ ನನ್ನ ಜನರು ತಮ್ಮ ಮಹಿಮೆಯಾದ ನನಗೆ ಬದಲಾಗಿ ಕೆಲಸಕ್ಕೆ ಬಾರದ್ದನ್ನು ಆರಿಸಿಕೊಂಡಿದ್ದಾರೆ.


ಮಹಾಪ್ರಭಾವವುಳ್ಳ ಈ ಅರಸನು ಯಾರು? ಸೇನಾಧೀಶ್ವರನಾದ ಯೆಹೋವನೇ; ಮಹಾಪ್ರಭಾವವುಳ್ಳ ಅರಸನು ಈತನೇ. ಸೆಲಾ.


ಆಮೆನ್. ಸ್ತೋತ್ರವೂ ಪ್ರಭಾವವೂ ಜ್ಞಾನವೂ ಕೃತಜ್ಞತಾಸ್ತುತಿಯೂ ಮಾನವೂ ಬಲವೂ ಶಕ್ತಿಯೂ ನಮ್ಮ ದೇವರಿಗೆ ಯುಗಯುಗಾಂತರಗಳಲ್ಲಿಯೂ ಇರಲಿ, ಆಮೆನ್ ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು.


ದೇವರ ದಾಸನೂ ಯೇಸು ಕ್ರಿಸ್ತನ ಅಪೊಸ್ತಲನೂ ಆಗಿರುವ ಪೌಲನು ನಮ್ಮೆಲ್ಲರಿಗೆ ಹುದುವಾಗಿರುವ ನಂಬಿಕೆಯ ಸಂಬಂಧದಲ್ಲಿ ನನ್ನ ನಿಜಕುಮಾರನಾದ ತೀತನಿಗೆ ಬರೆಯುವದೇನಂದರೆ - ತಂದೆಯಾದ ದೇವರಿಂದಲೂ ನಮ್ಮ ರಕ್ಷಕನಾದ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಶಾಂತಿಯೂ ಆಗಲಿ. ದೇವರಾದುಕೊಂಡವರ ನಂಬಿಕೆಯೂ ಭಕ್ತಿಯನ್ನುಂಟುಮಾಡುವ ಸತ್ಯದ ಪರಿಜ್ಞಾನವೂ ವೃದ್ಧಿಯಾಗುವದಕ್ಕೋಸ್ಕರವೇ ಅಪೊಸ್ತಲನಾಗಿದ್ದೇನೆ. ಆ ನಂಬಿಕೆಗೂ ಸತ್ಯದ ಪರಿಜ್ಞಾನಕ್ಕೂ ನಿತ್ಯಜೀವದ ನಿರೀಕ್ಷೆಯೇ ಆಧಾರವಾಗಿದೆ. ಸುಳ್ಳಾಡದ ದೇವರು ಆ ನಿತ್ಯಜೀವವನ್ನು ಕೊಡುತ್ತೇನೆಂದು ಅನಾದಿಕಾಲದಲ್ಲಿ ವಾಗ್ದಾನಮಾಡಿ ತನ್ನ ಕ್ಲುಪ್ತ ಸಮಯದಲ್ಲಿ ವಾಗ್ದಾನ ನೆರವೇರಿಸಿ ಪ್ರಸಂಗದ ಮೂಲಕ ಪ್ರಕಟಿಸಿದನು. ಆ ಪ್ರಸಂಗೋದ್ಯೋಗವು ನಮ್ಮ ರಕ್ಷಕನಾದ ದೇವರ ಅಪ್ಪಣೆಯ ಪ್ರಕಾರ ನನಗೆ ಒಪ್ಪಿಸಲ್ಪಟ್ಟದೆ.


ಪರಿಶುದ್ಧದೇವರುಗಳ ಆತ್ಮವು ನೆಲೆಸಿರುವ ಒಬ್ಬನು ನಿನ್ನ ರಾಜ್ಯದಲ್ಲಿ ಇದ್ದಾನೆ; ದೇವರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ ವಿವೇಕವೂ ಬುದ್ಧಿಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು; ನಿನ್ನ ತಂದೆಯಾದ ನೆಬೂಕದ್ನೆಚ್ಚರ ರಾಜನು ಅವನನ್ನು ಜೋಯಿಸರು ಮಂತ್ರವಾದಿಗಳು ಪಂಡಿತರು ಶಾಕುನಿಕರು ಇವರಿಗೆ ಅಧ್ಯಕ್ಷನನ್ನಾಗಿ ನೇವಿುಸಿದನು;


ಯೆಹೋವಾ, ಮಹಿಮಪ್ರತಾಪ ವೈಭವ ಪರಾಕ್ರಮಪ್ರಭಾವಗಳು ನಿನ್ನವು; ಭೂಮ್ಯಾಕಾಶಗಳಲ್ಲಿರುವದೆಲ್ಲಾ ನಿನ್ನದೇ. ಯೆಹೋವನೇ, ರಾಜ್ಯವು ನಿನ್ನದು; ನೀನು ಮಹೋನ್ನತನಾಗಿ ಸರ್ವವನ್ನೂ ಆಳುವವನಾಗಿರುತ್ತೀ.


ನನ್ನ ಸಹೋದರರೇ, ಪ್ರಭಾವವುಳ್ಳ ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಪಕ್ಷಪಾತಿಗಳಾಗಿರಬಾರದು.


ಹೀಗಿರುವದರಿಂದ ಸಹೋದರರೇ, ನಾನು ನಿಮ್ಮ ಬಳಿಗೆ ಬಂದು ದೇವರು ತಿಳಿಸಿದ್ದನ್ನು ಪ್ರಕಟಿಸದೆ ಜ್ಞಾನವಾಕ್ಯವನ್ನಾಡದೆ ಪ್ರವಾದನೆಯನ್ನು ಹೇಳದೆ ಉಪದೇಶಮಾಡದೆ ವಾಣಿಗಳನ್ನು ಮಾತ್ರ ಆಡುವವನಾಗಿದ್ದರೆ ನನ್ನಿಂದ ನಿಮಗೇನು ಪ್ರಯೋಜನವಾದೀತು?


ಯಾಕಂದರೆ ನೀವು ಹೇಳತಕ್ಕದ್ದನ್ನು ಪವಿತ್ರಾತ್ಮನು ಆ ಗಳಿಗೆಯಲ್ಲಿಯೇ ನಿಮಗೆ ಕಲಿಸಿಕೊಡುವನು ಅಂದನು.


ಮೇಲಣಲೋಕಗಳಲ್ಲಿ ದೇವರಿಗೆ ಮಹಿಮೆ, ಭೂಲೋಕದಲ್ಲಿ ಮನುಷ್ಯರೊಳಗೆ ಸಮಾಧಾನ ದೇವರು ಅವರಿಗೆ ಒಲಿಯುತ್ತಾನೆ ಎಂದು ದೇವರನ್ನು ಕೊಂಡಾಡುತ್ತಾ ಹೇಳಿದರು.


ಯೆಹೋವನ ಮಹಾಧ್ವನಿಯು ಮೇಘಮಂಡಲದಲ್ಲಿ ಕೇಳಿಸುತ್ತದೆ; ಪ್ರಭಾವಸ್ವರೂಪನಾದ ದೇವರು ಗುಡುಗುತ್ತಾನೆ; ಯೆಹೋವನು ಆಕಾಶದ ಜಲರಾಶಿಗಳ ಮೇಲೆ ಇದ್ದಾನೆ.


ಎದುರಿಸುವವರನ್ನು ನಿಧಾನದಿಂದ ತಿದ್ದುವವನೂ ಆಗಿರಬೇಕು. ಒಂದು ವೇಳೆ ದೇವರು ಆ ಎದುರಿಸುವವರ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿ ಸತ್ಯದ ಜ್ಞಾನವನ್ನು ಅವರಿಗೆ ಕೊಟ್ಟಾನು.


ಇದಲ್ಲದೆ ದೇವರ ಜ್ಞಾನವು ಅವರಿಗೆ ಇಷ್ಟವಿಲ್ಲದ್ದರಿಂದ ಅಲ್ಲದ ಕೃತ್ಯಗಳನ್ನು ನಡಿಸುವವರಾಗುವಂತೆ ದೇವರು ಅವರನ್ನು ಅನಿಷ್ಟಭಾವಕ್ಕೆ ಒಪ್ಪಿಸಿದನು.


ನಮ್ಮ ಮೂಲಪುರುಷನಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಮೆಸೊಪೊತಾಮ್ಯದಲ್ಲಿದ್ದಾಗ ಪ್ರಭಾವ ಸ್ವರೂಪನಾದ ದೇವರು


ಯಾರಿಗೆ ನಾನು ಜಾಣತನದ ವರವನ್ನು ಪರಿಪೂರ್ತಿಯಾಗಿ ಅನುಗ್ರಹಿಸಿದ್ದೇನೋ ಅಂಥ ಜಾಣರೆಲ್ಲರ ಸಂಗಡ ನೀನು ಮಾತಾಡಿ ಅವರ ಕೈಯಿಂದ ಆ ವಸ್ತ್ರಗಳನ್ನು ಸಿದ್ಧಪಡಿಸಬೇಕು. ಆರೋನನು ಅವುಗಳನ್ನು ಧರಿಸಿಕೊಂಡು ನನ್ನ ಯಾಜಕನಾಗುವದಕ್ಕೆ ಪ್ರತಿಷ್ಠಿತನಾಗುವನು.


ಕಿವಿಯಿಂದ ನಿನ್ನ ವಿಷಯವನ್ನು ಕೇಳಿದ್ದೆನು. ಈಗಲಾದರೋ ನಿನ್ನನ್ನೇ ಕಣ್ಣಾರೆ ಕಂಡೆನು.


ವಿವೇಕಿಯ ಹೃದಯವು ತಿಳುವಳಿಕೆಯನ್ನು ಸಂಪಾದಿಸುವದು; ಜ್ಞಾನಿಯ ಕಿವಿಯು ತಿಳುವಳಿಕೆಯನ್ನು ಹುಡುಕುವದು.


ನಾವೆಲ್ಲರು ನಂಬಿಕೆಯಿಂದಲೂ ದೇವಕುಮಾರನ ವಿಷಯವಾದ ಜ್ಞಾನದಿಂದಲೂ ಉಂಟಾಗುವ ಐಕ್ಯವನ್ನು ಹೊಂದಿ ಪ್ರವೀಣತೆಗೆ ಬಂದವರಾಗಿ ಕ್ರಿಸ್ತನ ಪರಿಪೂರ್ಣತೆಯೆಂಬ ಪ್ರಮಾಣವನ್ನು ಮುಟ್ಟುವ ತನಕ


ನಮ್ಮಲ್ಲಿ ಪ್ರವೀಣರಾದವರು ಇದೇ ಅಭಿಪ್ರಾಯವುಳ್ಳವರಾಗಿರೋಣ. ಯಾವದಾದರೂ ಒಂದು ವಿಷಯದಲ್ಲಿ ನೀವು ಬೇರೆ ಅಭಿಪ್ರಾಯವುಳ್ಳವರಾಗಿದ್ದರೆ ಅದನ್ನೂ ದೇವರು ನಿಮಗೆ ತೋರಿಸಿಕೊಡುವನು.


ಅವರು - ನಮ್ಮ ಕಣ್ಣುಗಳು ತೆರೆಯಲ್ಪಡಬೇಕು, ಸ್ವಾಮೀ ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು