Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 1:18 - ಕನ್ನಡ ಸತ್ಯವೇದವು J.V. (BSI)

18 ಆತನು ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ ಆತನಿಂದ ಕರಿಸಿಕೊಂಡವರು ನಿರೀಕ್ಷಿಸುವ ಪದವಿ ಎಂಥದೆಂಬದನ್ನೂ ದೇವಜನರೆಂಬ ಆತನ ಸ್ವಾಸ್ಥ್ಯದ ಮಹಿಮಾತಿಶಯವು ಎಂಥದೆಂಬದನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆತನೇ ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ, ಆತನ ಕರೆಯ ನಿರೀಕ್ಷೆಯು ಎಂಥದೆಂಬುದನ್ನೂ ಮತ್ತು ದೇವಜನರಲ್ಲಿರುವ ಆತನ ಸ್ವತ್ತಿನ ಮಹಿಮಾತಿಶಯವು ಎಂಥದೆಂಬುದನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ದೇವರು ನಿಮ್ಮ ಮನೋನೇತ್ರಗಳನ್ನು ತೆರೆಯಲಿ; ಅವರ ಬೆಳಕು ನಿಮಗೆ ಕಾಣುವಂತೆ ಆಗಲಿ. ಹೀಗೆ, ಅವರು ಕರೆದಿರುವ ಜನರಿಗೆ ಲಭಿಸುವ ಭರವಸೆಯ ಭಾಗ್ಯ ಎಂಥದ್ದೆಂದೂ ದೇವಜನರಿಗೆ ಕಾಯ್ದಿರಿಸಿರುವ ಸ್ವಾಸ್ತ್ಯ ಸಂಪತ್ತು ಎಂಥದ್ದೆಂದೂ ನೀವು ಅರಿತುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನೀವು ನಿಮ್ಮ ಹೃದಯದಲ್ಲಿ ಇನ್ನೂ ಹೆಚ್ಚಿನ ತಿಳುವಳಿಕೆಯನ್ನು ಹೊಂದಿಕೊಳ್ಳಲೆಂದು ಪ್ರಾರ್ಥಿಸುತ್ತೇನೆ. ನಾವು ಎಂಥ ನಿರೀಕ್ಷೆಯನ್ನು ಹೊಂದಿಕೊಳ್ಳಬೇಕೆಂದು ದೇವರು ನಮ್ಮನ್ನು ಆರಿಸಿಕೊಂಡನೆಂಬುದನ್ನು ಆಗ ತಿಳಿದುಕೊಳ್ಳುವಿರಿ; ಆತನು ತನ್ನ ಪರಿಶುದ್ಧ ಜನರಿಗೆ ವಾಗ್ದಾನ ಮಾಡಿದ ಆಶೀರ್ವಾದಗಳು ಎಷ್ಟು ಮಹಿಮಾತಿಶಯವಾಗಿವೆ ಎಂಬುದನ್ನು ತಿಳಿದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ದೇವರು ನಿಮ್ಮ ಮನೋನೇತ್ರಗಳನ್ನು ಬೆಳಗಿಸಲಿ ಎಂದು ಬೇಡಿಕೊಳ್ಳುತ್ತಿದ್ದೇನೆ. ಆಗ ಮಾತ್ರವೇ ನೀವು ದೇವರ ಕರೆಯ ನಿರೀಕ್ಷೆಯನ್ನೂ, ಪರಿಶುದ್ಧರಲ್ಲಿ ಅವರಿಗಿರುವ ವಾರಸುತನದ ಮಹಿಮೆಯನ್ನೂ ನೀವು ತಿಳಿದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತೊ ತೆಜೊ ಉಜ್ವೊಡ್ ತುಮಿ ಬಗಿ ಸಾರ್ಕೆ ತುಮ್ಚಿ ಮನಾ ಉಗ್ಡುಂದಿತ್, ಅಸೆ ತೆನಿ ಕಸ್ಲ್ಯಾ ಬರೊಸ್ಯಾಸಾಟ್ನಿ ತುಮ್ಕಾ ಬಲ್ವುಲ್ಯಾನಾಯ್ ಮನುನ್ ತುಮ್ಕಾ ಕಳುಂದಿತ್, ತೊ ಅಪ್ನಾಚ್ಯಾ ಭಕ್ತಾಕ್ನಿ ದಿತಲಿ ಗೊಸ್ಟಿಯಾ ಅನಿ ಆಶಿರ್ವಾದಾ ಕವ್ಡಿ ಮೊಟಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 1:18
49 ತಿಳಿವುಗಳ ಹೋಲಿಕೆ  

ಅವರು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು ನನ್ನಲ್ಲಿ ನಂಬಿಕೆಯಿಡುವದರಿಂದ ಪಾಪಪರಿಹಾರವನ್ನೂ ಪವಿತ್ರರಾದವರಲ್ಲಿ ಹಕ್ಕನ್ನೂ ಹೊಂದುವಂತೆ ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ ಅಂದನು.


ಯಾಕಂದರೆ ಕತ್ತಲೆಯೊಳಗಿಂದ ಬೆಳಕು ಹೊಳೆಯಲಿ ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.


ಆಮೇಲೆ ಅವರು ಶಾಸ್ತ್ರವಚನಗಳನ್ನು ತಿಳುಕೊಳ್ಳುವಂತೆ ಆತನು ಅವರ ಬುದ್ಧಿಯನ್ನು ತೆರೆದು


ಈತನು ನಮಗೋಸ್ಕರ ತನ್ನ ರಕ್ತವನ್ನು ಸುರಿಸಿದ್ದರಿಂದ ನಮ್ಮ ಅಪರಾಧಗಳು ಪರಿಹಾರವಾಗಿ ನಮಗೆ ಬಿಡುಗಡೆಯಾಯಿತು. ಇದು ದೇವರ ಕೃಪಾತಿಶಯವೇ.


ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕ್ರಿಸ್ತನಲ್ಲಿದ್ದು ಬೆಳಕಾಗಿದ್ದೀರಿ.


ನೀವು ದೇವರಾತ್ಮನ ಮೂಲಕ ಆಂತರ್ಯದಲ್ಲಿ ವಿಶೇಷಬಲ ಹೊಂದಿದವರಾಗುವ ಹಾಗೆಯೂ


ನೀವೆಲ್ಲರೂ ಒಂದೇ ದೇಹಕ್ಕೆ ಸೇರಿದವರು, ಒಬ್ಬನೇ ಆತ್ಮನನ್ನು ಹೊಂದಿದವರು,


ನನ್ನ ಕಣ್ಣು ತೆರೆ; ಆಗ ನಿನ್ನ ಧರ್ಮಶಾಸ್ತ್ರದ ಅದ್ಭುತಗಳನ್ನು ಕಂಡುಕೊಳ್ಳುವೆನು.


ಯೆಹೋವನೆಂಬ ನಾನು ನನ್ನ ಧರ್ಮದ ಸಂಕಲ್ಪನುಸಾರವಾಗಿ ನಿನ್ನನ್ನು ಕರೆದು ಕೈಹಿಡಿದು ಕಾಪಾಡಿ ನನ್ನ ಜನರಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ ಅನ್ಯಜನಗಳಿಗೆ ಬೆಳಕನ್ನಾಗಿಯೂ ನೇವಿುಸಿದ್ದೇನೆ.


ಆ ದಿನವನ್ನು ನಾವು ಎದುರುನೋಡುತ್ತಾ ನಿಮಗೋಸ್ಕರ ಯಾವಾಗಲೂ ಪ್ರಾರ್ಥನೆಮಾಡಿ - ನಮ್ಮ ದೇವರು ನಿಮ್ಮನ್ನು ಕರೆದದ್ದಕ್ಕೆ ತಾನೇ ನಿಮ್ಮನ್ನು ಯೋಗ್ಯರೆಂದು ಎಣಿಸಬೇಕೆಂತಲೂ ಸತ್ಕ್ರಿಯೆಗಳಲ್ಲಿ ಸಂತೋಷಿಸುವ ನಿಮ್ಮ ಸಕಲ ಆಲೋಚನೆಯನ್ನೂ ನಂಬಿಕೆಯ ಫಲವಾದ ನಿಮ್ಮ ಕೆಲಸವನ್ನೂ ಶಕ್ತಿಪೂರ್ವಕವಾಗಿ ಸಿದ್ಧಿಗೆ ತರಬೇಕೆಂತಲೂ ಬೇಡಿಕೊಳ್ಳುತ್ತೇವೆ.


ನೀವು ದೇವರಿಂದ ಕರೆಯಲ್ಪಟ್ಟವರಾದ ಕಾರಣ ಯೋಗ್ಯರಾಗಿ ನಡೆದುಕೊಳ್ಳಬೇಕೆಂದು ಕರ್ತನ ಸೇವೆಯಲ್ಲಿ ಸೆರೆಯವನಾದ ನಾನು ನಿಮ್ಮನ್ನು ಪ್ರಬೋಧಿಸುತ್ತೇನೆ.


ಕಣ್ಣಿನಿಂದ ಕಂಡು ಕಿವಿಯಿಂದ ಕೇಳಿ ಹೃದಯದಿಂದ ಗ್ರಹಿಸಿ ನನ್ನ ಕಡೆಗೆ ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೇಗೂ ಹೊಂದದ ಹಾಗೆ ಈ ಜನರ ಹೃದಯಕ್ಕೆ ಕೊಬ್ಬೇರಿಸಿ ಕಿವಿಯನ್ನು ಮಂದಮಾಡಿ ಕಣ್ಣಿಗೆ ಅಂಟುಬಳಿ ಎಂದು ನನಗೆ ಹೇಳಿದನು.


ಕ್ರಿಸ್ತ ನಂಬಿಕೆಯುಳ್ಳವರು ಮಾಡತಕ್ಕ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿ ದೇವರು ನಿನ್ನನ್ನು ಕರೆದನು, ಮತ್ತು ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೇ ಪ್ರತಿಜ್ಞೆಯನ್ನು ಮಾಡಿದಿಯಲ್ಲಾ.


ಯೆಹೋವನು ನಿಮ್ಮ ಮೇಲೆ ಗಾಢನಿದ್ರೆಯನ್ನು ಬರಮಾಡಿ ಪ್ರವಾದಿಗಳೆಂಬ ಕಣ್ಣುಗಳನ್ನು ಮುಚ್ಚಿ ದಿವ್ಯದರ್ಶಿಗಳೆಂಬ ತಲೆಗಳಿಗೆ ಮುಸುಕು ಹಾಕಿದ್ದಾನಷ್ಟೆ.


ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯೋಗ್ಯಸ್ಥಿತಿಗೆ ತಂದು ನೆಲೆಗೊಳಿಸಿ ಬಲಪಡಿಸುವನು.


ಇದಲ್ಲದೆ ಆತನಲ್ಲಿ ನಾವು ದೇವರ ಸ್ವಕೀಯ ಪ್ರಜೆಯಾದೆವು, ಬರಬೇಕಾದ ಕ್ರಿಸ್ತನನ್ನು ಎದುರುನೋಡುತ್ತಿದ್ದ ನಾವು ತನ್ನ ಮಹಿಮೆಯನ್ನು ಪ್ರಖ್ಯಾತಿಪಡಿಸಬೇಕೆಂದು ಸಮಸ್ತಕಾರ್ಯಗಳನ್ನು ತನ್ನ ಇಷ್ಟದಂತೆ ನಡಿಸುವ ದೇವರು ತನ್ನ ಸಂಕಲ್ಪದ ಮೇರೆಗೆ ನಮ್ಮನ್ನು ಆದಿಯಲ್ಲಿಯೇ ಆರಿಸಿಕೊಂಡನು.


ಹೀಗಿರಲಾಗಿ ನೀವು ಜ್ಞಾನಪ್ರಕಾಶದಲ್ಲಿ ಸೇರಿ ಕಷ್ಟಾನುಭವವೆಂಬ ಬಲು ಹೋರಾಟವನ್ನು ಸಹಿಸಿಕೊಂಡ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿರಿ;


ತನ್ನ ರಾಜ್ಯಪ್ರಭಾವಗಳಲ್ಲಿ ಪಾಲುಗಾರರಾಗುವದಕ್ಕೆ ಕರೆಯುವ ದೇವರಿಗೆ ಯೋಗ್ಯರಾಗಿ ನೀವು ನಡೆಯಬೇಕೆಂದು ಖಂಡಿತವಾಗಿ ಹೇಳುತ್ತಾ ಇದ್ದೆವೆಂಬದು ನಿಮಗೇ ತಿಳಿದದೆ.


ಇವರಲ್ಲಿ ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಸುವಾರ್ತೆಯ ಪ್ರಕಾಶವು ಉದಯವಾಗಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದನು.


ಆಗ ನೋಡುವವರ ಕಣ್ಣು ಮೊಬ್ಬಾಗದು, ಕೇಳುವವರ ಕಿವಿ ಮಂದವಾಗದು.


ಮತ್ತು ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರಹಿಸಿದ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ನಿಮ್ಮ ಹೃದಯಗಳನ್ನು ಸಂತೈಸಿ


ನಾವಾದರೋ ಹಗಲಿನವರಾಗಿರಲಾಗಿ ವಿಶ್ವಾಸಪ್ರೀತಿಗಳೆಂಬ ವಜ್ರಕವಚವನ್ನೂ ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥಚಿತ್ತರಾಗಿರೋಣ.


ನಾನು ಕ್ರಿಸ್ತನ ಅಪ್ರಮೇಯವಾದ ಐಶ್ವರ್ಯದ ವಿಷಯವಾದ ಶುಭಸಮಾಚಾರವನ್ನು ಅನ್ಯಜನರಿಗೆ ಪ್ರಸಿದ್ಧಿಪಡಿಸುವ ಹಾಗೆಯೂ ಸಮಸ್ತವನ್ನು ಸೃಷ್ಟಿಸಿದ ದೇವರಲ್ಲಿ ಆದಿಯಿಂದ ಮರೆಯಾಗಿದ್ದ ಮರ್ಮವು ಪ್ರಕಟವಾಗುವ ವಿಧ ಎಂಥದೆಂದು ತಿಳಿಸುವ ಹಾಗೆಯೂ ದೇವಜನರೊಳಗೆ ಅತ್ಯಲ್ಪನಾದ ನನಗೆ ಅನುಗ್ರಹಿಸೋಣವಾಯಿತು.


ಈ ಜನರ ಹೃದಯವು ಕೊಬ್ಬಿತು; ಇವರ ಕಿವಿ ಮಂದವಾಯಿತು; ಇವರು ಕಣ್ಣು ಮುಚ್ಚಿಕೊಂಡಿದ್ದಾರೆ. ತಾವು ಕಣ್ಣಿನಿಂದ ಕಂಡು ಕಿವಿಯಿಂದ ಕೇಳಿ ಹೃದಯದಿಂದ ತಿಳಿದು ನನ್ನ ಕಡೆಗೆ ತಿರುಗುಕೊಂಡು ನನ್ನಿಂದ ಸ್ವಸ್ಥತೆಯನ್ನು ಹೇಗೂ ಹೊಂದಬಾರದೆಂದು ಮಾಡಿಕೊಂಡಿದ್ದಾರೆ ಎಂಬದು.


ಅಪಕಾರಕ್ಕೆ ಅಪಕಾರವನ್ನು ನಿಂದೆಗೆ ನಿಂದೆಯನ್ನು ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದನಲ್ಲಾ; ಹೀಗೆ ಮಾಡುವದಾದರೆ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿರಿ.


ಒಂದು ಸಾರಿ ಜ್ಞಾನಪ್ರಕಾಶದಲ್ಲಿ ಸೇರಿ ಪರಲೋಕದಿಂದಾದ ದಾನದ ಅನುಭವವನ್ನು ಹೊಂದಿ


ಕ್ರಿಸ್ತನಿಂದಾದ ಸಮಾಧಾನವು ನಿಮ್ಮ ಹೃದಯಗಳಲ್ಲಿ ಯಜಮಾನನಂತಿದ್ದು ತೀರ್ಪುಹೇಳಲಿ; ನೀವು ಒಂದೇ ದೇಹಕ್ಕೆ ಸೇರಿದವರಾದದರಿಂದ ಸಮಾಧಾನದಿಂದಿರುವದಕ್ಕಾಗಿ ಕರೆಯಲ್ಪಟ್ಟಿರಿ. ಇದಲ್ಲದೆ ಕೃತಜ್ಞತೆಯುಳ್ಳವರಾಗಿರ್ರಿ.


ನೀವು ಕೇಳಿದಂಥ ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲ್ಪಟ್ಟಂಥ ಸುವಾರ್ತೆಯಿಂದ ಉಂಟಾದ ನಿರೀಕ್ಷೆಯನ್ನು ಬಿಟ್ಟು ತೊಲಗಿಹೋಗದೆ ಅಸ್ತಿವಾರದ ಮೇಲೆ ನಿಂತು ಸ್ಥಿರವಾಗಿದ್ದು ನಂಬಿಕೆಯಲ್ಲಿ ನೆಲೆಗೊಂಡಿರುವದಾದರೆ ಆ ಪದವಿ ನಿಮಗೆ ಪ್ರಾಪ್ತವಾಗುವದು.


ನೀವು ಪೂರ್ವಕಾಲದಲ್ಲಿ ಕ್ರಿಸ್ತನನ್ನು ಸೇರದವರಾಗಿದ್ದು ಇಸ್ರಾಯೇಲ್ಯ ಹಕ್ಕಿನಲ್ಲಿ ಪಾಲಿಲ್ಲದವರೂ [ಅಬ್ರಹಾಮನಿಗೆ ಉಂಟಾದ] ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಲ್ಲಿ ಸೇರದವರೂ ಈ ಲೋಕದಲ್ಲಿ ಯಾವ ನಿರೀಕ್ಷೆಯಿಲ್ಲದವರೂ ದೇವರನ್ನರಿಯದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ.


ನಾವೋ ದೇವರಾತ್ಮನ ಮೂಲಕ ನಂಬಿಕೆಯಿಂದ ನೀತಿವಂತರಾಗುತ್ತೇವೆಂಬುವ ನಿರೀಕ್ಷೆ ಸಫಲವಾಗುವದೆಂದು ಎದುರುನೋಡುತ್ತೇವೆ.


ಆ ದಿನದಲ್ಲಿ ಕಿವುಡರು ಶಾಸ್ತ್ರದ ಮಾತುಗಳನ್ನು ಕೇಳುವರು, ಮೊಬ್ಬುಕತ್ತಲುಗಳಲ್ಲಿಯೂ ಕುರುಡರ ಕಣ್ಣು ಕಾಣುವದು.


ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರಿಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ


ನಮ್ಮ ಮಾತುಗಳನ್ನು ಕೇಳಿದವರಲ್ಲಿ ಲುದ್ಯಳೆಂಬ ಒಬ್ಬ ಸ್ತ್ರೀಯು ಇದ್ದಳು. ಆಕೆ ಧೂಮ್ರವರ್ಣದ ವಸ್ತ್ರಗಳನ್ನು ಮಾರುವವಳೂ ಥುವತೈರ ಎಂಬ ಊರಿನವಳೂ ದೇವಭಕ್ತಳೂ ಆಗಿದ್ದಳು. ಪೌಲನು ಹೇಳಿದ ಮಾತುಗಳಿಗೆ ಲಕ್ಷ್ಯಕೊಡುವದಕ್ಕೆ ಕರ್ತನು ಆಕೆಯ ಹೃದಯವನ್ನು ತೆರೆದನು.


ದೇವರು ಕ್ರಿಸ್ತನ ಮೂಲಕವಾಗಿ ನಮ್ಮನ್ನು ಮೇಲಕ್ಕೆ ಕರೆದು ನಮ್ಮ ಮುಂದೆ ಇಟ್ಟಿರುವ ಬಿರುದನ್ನು ಗುರಿಮಾಡಿಕೊಂಡು ಓಡುತ್ತಾ ಇದ್ದೇನೆ.


ಕಿವಿಯಿಂದ ನಿನ್ನ ವಿಷಯವನ್ನು ಕೇಳಿದ್ದೆನು. ಈಗಲಾದರೋ ನಿನ್ನನ್ನೇ ಕಣ್ಣಾರೆ ಕಂಡೆನು.


ಆ ಅಂಕುರದ ಮೇಲೆ ಜ್ಞಾನವಿವೇಕದಾಯಕ ಆತ್ಮ, ಆಲೋಚನಪರಾಕ್ರಮಗಳನ್ನು ಹುಟ್ಟಿಸುವ ಆತ್ಮ, ತಿಳುವಳಿಕೆಯನ್ನೂ ಯೆಹೋವನ ಭಯವನ್ನೂ ಉಂಟುಮಾಡುವ ಆತ್ಮ, ಅಂತು ಯೆಹೋವನ ಆತ್ಮವೇ ನೆಲೆಗೊಂಡಿರುವದು;


ಆತನು ಹೊರಟು ದಾರಿಹಿಡಿದು ಹೋಗುವಾಗ ಒಬ್ಬನು ಓಡುತ್ತಾ ಆತನ ಎದುರಿಗೆ ಬಂದು ಮೊಣಕಾಲೂರಿ - ಒಳ್ಳೇ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯಸ್ಥನಾಗಬೇಕಾದರೆ ಏನು ಮಾಡಬೇಕೆಂದು ಆತನನ್ನು ಕೇಳಲಾಗಿ ಯೇಸು ಅವನಿಗೆ -


ಆತನ ಅಪಾರವಾದ ದಯಾ ಸಹನ ದೀರ್ಘಶಾಂತಿಗಳನ್ನು ಅಸಡ್ಡೆಮಾಡುತ್ತೀಯಾ? ಮನಸ್ಸನ್ನು ಬೇರೆಮಾಡಿಕೊಳ್ಳುವದಕ್ಕೆ ದೇವರ ಉಪಕಾರವು ನಿನ್ನನ್ನು ಪ್ರೇರಿಸುತ್ತದೆಂಬದು ನಿನಗೆ ಗೊತ್ತಿಲ್ಲವೇ?


ದೇವರು ವರಗಳನ್ನು ಅನುಗ್ರಹಿಸಿದ್ದಕ್ಕೂ ಜನರನ್ನು ಕರೆದದ್ದಕ್ಕೂ ಪಶ್ಚಾತ್ತಾಪಪಡುವವನಲ್ಲ.


ಬೆಳಕಿನ ರಾಜ್ಯದೊಳಗೆ ದೇವಜನರ ಬಾಧ್ಯತೆಯಲ್ಲಿ ಪಾಲುಗಾರರಾಗುವದಕ್ಕೆ ನಿಮ್ಮನ್ನು ಯೋಗ್ಯರನ್ನಾಗಿ ಮಾಡಿದ ತಂದೆಗೆ ಕೃತಜ್ಞತಾಸ್ತುತಿ ಮಾಡುವವರಾಗಿರಬೇಕೆಂತಲೂ ದೇವರನ್ನು ಬೇಡಿಕೊಳ್ಳುತ್ತೇವೆ.


ಅನ್ಯಜನಗಳ ವಿಷಯವಾದ ಈ ಮರ್ಮದ ಮಹಿಮಾತಿಶಯವು ಎಷ್ಟೆಂಬದನ್ನು ದೇವರು ತನ್ನ ಜನರಿಗೆ ತಿಳಿಸಲಿಕ್ಕೆ ಮನಸ್ಸು ಮಾಡಿಕೊಂಡನು. ಈ ಮರ್ಮವು ಏನಂದರೆ ಕ್ರಿಸ್ತನು ನಿಮ್ಮಲ್ಲಿದ್ದು ಪ್ರಭಾವದ ನಿರೀಕ್ಷೆಗೆ ಆಧಾರಭೂತನಾಗಿರುವದೇ.


ಹೇಗಂದರೆ ನೀವೆಲ್ಲರು ಪ್ರೀತಿಯಿಂದ ಹೊಂದಿಕೆಯಾಗಿದ್ದು ಬುದ್ಧಿಪೂರ್ವಕ ನಿಶ್ಚಯವೆಂಬ ಭಾಗ್ಯವನ್ನು ಪಡೆದು ದೇವರು ತಿಳಿಸಿರುವ ಮರ್ಮವನ್ನು ಅಂದರೆ ತನ್ನಲ್ಲೇ ಜ್ಞಾನವಿದ್ಯಾಸಂಬಂಧವಾದ ನಿಕ್ಷೇಪಗಳನ್ನೆಲ್ಲಾ ಅಡಗಿಸಿಕೊಂಡಿರುವ ಕ್ರಿಸ್ತನನ್ನು ತಿಳುಕೊಂಡವರಾಗಿ ಹೃದಯದಲ್ಲಿ ದೃಢವಾಗಿರಬೇಕೆಂಬ ಕುತೂಹಲವು ನನಗುಂಟು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು