Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 1:19 - ಕನ್ನಡ ಸತ್ಯವೇದವು J.V. (BSI)

19 ನಂಬುವವರಾದ ನಮ್ಮಲ್ಲಿ ಆತನು ಸಾಧಿಸುವ ಪರಾಕ್ರಮವು ಎಷ್ಟು ಅತಿಶಯವಾದದ್ದೆಂಬದನ್ನೂ ನೀವು ತಿಳುಕೊಳ್ಳುವಂತೆ ಅನುಗ್ರಹಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಮತ್ತು ನಂಬುವವರಾದ ನಮ್ಮಲ್ಲಿ ಕಾರ್ಯ ಸಾಧಿಸುವ ಆತನ ಪರಾಕ್ರಮ ಶಕ್ತಿಯ ಅಪಾರವಾದ ಮಹತ್ವವು ಎಂಥದೆಂಬುದನ್ನೂ ನೀವು ತಿಳಿಯುವಂತೆ ದೇವರು ನಿಮಗೆ ಅನುಗ್ರಹಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಕ್ರೈಸ್ತವಿಶ್ವಾಸಿಗಳಾದ ನಮ್ಮಲ್ಲಿ ದೇವರು ಸಾಧಿಸಿರುವ ಮಹತ್ಕಾರ್ಯಗಳು ಎಷ್ಟು ಶಕ್ತಿಯುತವಾದುವು ಎಂಬುದು ನಿಮಗೆ ಮನದಟ್ಟಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನಂಬಿಕೆಯಿಡುವಂಥ ನಮಗೆ ದೇವರ ಶಕ್ತಿಯು ಎಷ್ಟು ಮಹತ್ವವುಳ್ಳದ್ದಾಗಿದೆ ಎಂಬುದನ್ನೂ ಆಗ ನೀವು ತಿಳಿದುಕೊಳ್ಳುವಿರಿ. ಕ್ರಿಸ್ತನನ್ನು ಮರಣದಿಂದ ಜೀವಂತನಾಗಿ ಎಬ್ಬಿಸಲು ದೇವರು ಉಪಯೋಗಿಸಿದ ಮಹಾಶಕ್ತಿ ಅದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಮಾತ್ರವಲ್ಲದೆ ನಂಬುವವರಾದ ನಮಗಾಗಿರುವ ಹೋಲಿಸಲಾಗದ ದೇವರ ಮಹಾಶಕ್ತಿಯನ್ನೂ ನೀವು ತಿಳಿಯುವಂತೆ ಪ್ರಾರ್ಥನೆ ಮಾಡುವವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಅನಿ ವಿಶ್ವಾಸ್ ಕರ್ತಲ್ಯಾ ಅಮ್ಚ್ಯಾ ಮದ್ದಿ ಕಾಮ್ ಕರ್ತಲೊ ತೆಚೊ ಬಳ್ ಕೆವ್ಡೊ ಮೊಟೊ ಹಾಯ್ ಹ್ಯೊ ಬಳ್ ಅಮ್ಚ್ಯಾ ಮದ್ದಿ ತ್ಯಾಚ್ ಲೈ ಮೊಟ್ಯಾ ಬಳಾಚ್ಯಾ ವೈನಾ ದಿಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 1:19
19 ತಿಳಿವುಗಳ ಹೋಲಿಕೆ  

ಯಾಕಂದರೆ ದೇವರೇ ತನ್ನ ಸುಚಿತ್ತವನ್ನು ನೆರವೇರಿಸಬೇಕೆಂದು ನಿಮ್ಮಲ್ಲಿ ಉದ್ದೇಶವನ್ನೂ ಪ್ರಯತ್ನವನ್ನೂ ಉಂಟುಮಾಡುವವನಾಗಿದ್ದಾನೆ.


ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಶಕ್ತಿಯ ಪ್ರಕಾರ ನಾವು ಬೇಡುವದಕ್ಕಿಂತಲೂ ಯೋಚಿಸುವದಕ್ಕಿಂತಲೂ


ನೀವು ದೀಕ್ಷಾಸ್ನಾನದಲ್ಲಿ ಕ್ರಿಸ್ತನೊಂದಿಗೆ ಹೂಣಲ್ಪಟ್ಟದ್ದರಿಂದಲೇ ಆ ಸುನ್ನತಿಯನ್ನು ಹೊಂದಿದಿರಿ. ಇದಲ್ಲದೆ ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರ ಸಾಮರ್ಥ್ಯದಲ್ಲಿ ನಂಬಿಕೆಯಿಡುವದರ ಮೂಲಕ ಅದರಲ್ಲಿ ಆತನ ಕೂಡ ಎದ್ದು ಬಂದಿರಿ.


ಬಲಾಧಿಕ್ಯವು ದೇವರದೇ ಹೊರತು ನಮ್ಮೊಳಗಿಂದ ಬಂದದ್ದಲ್ಲವೆಂದು ತೋರುವದಕ್ಕಾಗಿ ಈ ನಿಕ್ಷೇಪವು ಮಣ್ಣಿನ ಘಟಗಳಲ್ಲಿ ನಮಗುಂಟು.


ನನ್ನಲ್ಲಿ ಕಾರ್ಯಸಾಧಿಸುವ ದೇವರ ಬಲವನ್ನು ಪ್ರಯೋಗಮಾಡಿ ಇದಕ್ಕೋಸ್ಕರವೇ ಹೋರಾಡುತ್ತೇನೆ, ಪ್ರಯಾಸಪಡುತ್ತೇನೆ.


ಕಡೇ ಮಾತೇನಂದರೆ, ನೀವು ಕರ್ತನನ್ನೂ ಆತನ ಅತ್ಯಧಿಕವಾದ ಶಕ್ತಿಯನ್ನೂ ಆಶ್ರಯಿಸಿಕೊಂಡವರಾಗಿ ಬಲಗೊಳ್ಳಿರಿ.


ದೇವರು ತನ್ನ ಶಕ್ತಿಯ ಪ್ರಯೋಗದಲ್ಲಿ ನನಗೆ ಉಚಿತಾರ್ಥವಾಗಿ ಅನುಗ್ರಹಿಸಿದ ಕೆಲಸವನ್ನನುಸರಿಸಿ ನಾನು ಈ ಸುವಾರ್ತೆಗೆ ಸೇವಕನಾದೆನು.


ನಾವು ಆತನ ನಿರ್ಮಾಣ; ಸತ್ಕಾರ್ಯಗಳನ್ನು ಮಾಡುವದಕ್ಕಾಗಿಯೇ ಕ್ರಿಸ್ತ ಯೇಸುವಿನಲ್ಲಿ ಸೃಷ್ಟಿಸಲ್ಪಟ್ಟೆವು. ನಾವು ಸತ್ಕಾರ್ಯಗಳನ್ನು ನಡಿಸುವವರಾಗಿ ಬದುಕಬೇಕೆಂದು ದೇವರು ನಮ್ಮನ್ನು ಮೊದಲೇ ನೇವಿುಸಿದನು.


ಆ ಸುವಾರ್ತೆಯು ದೇವರ ಬಲಸ್ವರೂಪವಾಗಿದ್ದು ಮೊದಲು ಯೆಹೂದ್ಯರಿಗೆ ಆಮೇಲೆ ಗ್ರೀಕರಿಗೆ ಅಂತೂ ನಂಬುವವರೆಲ್ಲರಿಗೂ ರಕ್ಷಣೆ ಉಂಟುಮಾಡುವಂಥದಾಗಿದೆ.


ಆತನು ತನ್ನ ಸುಚಿತ್ತದ ಪ್ರಕಾರ ಸತ್ಯಬೋಧನೆಯ ವಾಕ್ಯದಿಂದ ನಮ್ಮನ್ನು ಹುಟ್ಟಿಸಲಾಗಿ ನಾವು ಆತನ ಸೃಷ್ಟಿಗಳಲ್ಲಿ ಪ್ರಥಮಫಲದಂತಾದೆವು.


ಆ ದಿನವನ್ನು ನಾವು ಎದುರುನೋಡುತ್ತಾ ನಿಮಗೋಸ್ಕರ ಯಾವಾಗಲೂ ಪ್ರಾರ್ಥನೆಮಾಡಿ - ನಮ್ಮ ದೇವರು ನಿಮ್ಮನ್ನು ಕರೆದದ್ದಕ್ಕೆ ತಾನೇ ನಿಮ್ಮನ್ನು ಯೋಗ್ಯರೆಂದು ಎಣಿಸಬೇಕೆಂತಲೂ ಸತ್ಕ್ರಿಯೆಗಳಲ್ಲಿ ಸಂತೋಷಿಸುವ ನಿಮ್ಮ ಸಕಲ ಆಲೋಚನೆಯನ್ನೂ ನಂಬಿಕೆಯ ಫಲವಾದ ನಿಮ್ಮ ಕೆಲಸವನ್ನೂ ಶಕ್ತಿಪೂರ್ವಕವಾಗಿ ಸಿದ್ಧಿಗೆ ತರಬೇಕೆಂತಲೂ ಬೇಡಿಕೊಳ್ಳುತ್ತೇವೆ.


ನಾವು ಕೇಳಿದ ಸಂಗತಿಯನ್ನು [ನಮ್ಮಲ್ಲಿ] ಯಾರು ನಂಬಿದ್ದರು? ಯೆಹೋವನ ಬಾಹುವು ಯಾರಿಗೆ ಗೋಚರವಾಗಿತ್ತು?


ನಾವು ಸಾರಿದ ಸುವಾರ್ತೆಯು ನಿಮ್ಮಲ್ಲಿ ಬರೀ ಮಾತಾಗಿ ಬಾರದೆ ಶಕ್ತಿಯೊಡನೆಯೂ ಪವಿತ್ರಾತ್ಮದೊಡನೆಯೂ ಬಹು ನಿಶ್ಚಯದೊಡನೆಯೂ ಬಂತೆಂಬದನ್ನೂ ಬಲ್ಲೆವು. ನಾವು ನಿಮ್ಮಲ್ಲಿದ್ದು ನಿಮಗೋಸ್ಕರ ಎಂಥವರಾಗಿ ವರ್ತಿಸಿದೆವೆಂಬದನ್ನು ನೀವೂ ಬಲ್ಲಿರಿ.


ಹೀಗಿರಲಾಗಿ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನಸೃಷ್ಟಿಯಾದನು. ಇಗೋ, ಪೂರ್ವಸ್ಥಿತಿ ಹೋಗಿ ಎಲ್ಲಾ ನೂತನವಾಯಿತು.


ಅವರು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು ನನ್ನಲ್ಲಿ ನಂಬಿಕೆಯಿಡುವದರಿಂದ ಪಾಪಪರಿಹಾರವನ್ನೂ ಪವಿತ್ರರಾದವರಲ್ಲಿ ಹಕ್ಕನ್ನೂ ಹೊಂದುವಂತೆ ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ ಅಂದನು.


ದೇಹದಿಂದ ಹುಟ್ಟಿದ್ದು ದೇಹವೇ; ಆತ್ಮನಿಂದ ಹುಟ್ಟಿದ್ದು ಆತ್ಮವೇ.


ಆತನು ಎಲ್ಲವನ್ನೂ ತನಗೆ ಅಧೀನಮಾಡಿಕೊಳ್ಳಲಾಗುವ ಪರಾಕ್ರಮವನ್ನು ಸಾಧಿಸಿ ದೀನಾವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸಿ ಪ್ರಭಾವವುಳ್ಳ ತನ್ನ ದೇಹದ ಸಾರೂಪ್ಯವಾಗುವಂತೆ ಮಾಡುವನು.


ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸಭೆಯ ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲಾದರಲ್ಲಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವದು. ಯೇಸು ಕ್ರಿಸ್ತನಿಗೆ ಆಧಿಪತ್ಯವೂ ಘನವೂ ಯುಗಯುಗಾಂತರಗಳಲ್ಲಿಯೂ ಇರುವವು. ಆಮೆನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು