Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 1:5 - ಕನ್ನಡ ಸತ್ಯವೇದವು J.V. (BSI)

5-6 ಆತನು ತನ್ನ ಕೃಪೆಯನ್ನು ಪ್ರಖ್ಯಾತಿಗೆ ತರಬೇಕೆಂದು ನಮ್ಮನ್ನು ಯೇಸು ಕ್ರಿಸ್ತನ ಮೂಲಕ ತನ್ನ ಪುತ್ರರನ್ನಾಗಿ ಸ್ವೀಕರಿಸುವದಕ್ಕೆ ದಯಾಪೂರ್ವಕವಾದ ತನ್ನ ಚಿತ್ತಾನುಸಾರವಾಗಿ ಮೊದಲೇ ಸಂಕಲ್ಪಮಾಡಿದ್ದನು. ಈ ಕೃಪಾದಾನವು ಆತನ ಪ್ರಿಯನಲ್ಲಿಯೇ ನಮಗೆ ದೊರೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದೇವರು ತನ್ನ ದಯಾಪೂರ್ವಕವಾದ ಚಿತ್ತಕ್ಕನುಸಾರವಾಗಿ ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನ್ನ ಮಕ್ಕಳನ್ನಾಗಿ ಅಂಗೀಕರಿಸಲು ಪ್ರೀತಿಯಿಂದ ಮೊದಲೇ ಸಂಕಲ್ಪಮಾಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಮ್ಮ ಮೇಲಿನ ಪ್ರೀತಿಯಿಂದಾಗಿ ದೇವರು ಯೇಸುಕ್ರಿಸ್ತರ ಮೂಲಕ ನಮ್ಮನ್ನು ತಮ್ಮ ಮಕ್ಕಳನ್ನಾಗಿಸಿಕೊಳ್ಳಲು ಆಗಲೇ ನಿರ್ಧರಿಸಿದ್ದರು. ಇದು ಅವರ ಸಂಕಲ್ಪ ಹಾಗೂ ಚಿತ್ತವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಮ್ಮ ಮೇಲಿನ ಪ್ರೀತಿಯಿಂದ ಕ್ರಿಸ್ತ ಯೇಸುವಿನ ಮೂಲಕ ನಮ್ಮನ್ನು ತನ್ನ ಸ್ವಂತ ಮಕ್ಕಳನ್ನಾಗಿ ಮಾಡಿಕೊಳ್ಳಲು ಆತನು ಆಗಲೇ ನಿರ್ಧರಿಸಿದ್ದನು. ಅದು ಆತನ ಚಿತ್ತವಾಗಿತ್ತು ಮತ್ತು ಆತನಿಗೆ ಮೆಚ್ಚಿಕೆಕರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ದೇವರು ತಮ್ಮ ಚಿತ್ತದ ಸಂತೋಷಕ್ಕನುಸಾರವಾಗಿ ಕ್ರಿಸ್ತ ಯೇಸುವಿನ ಮೂಲಕ ನಮ್ಮನ್ನು ತಮಗೋಸ್ಕರ ತಮ್ಮ ಪುತ್ರರಾಗಿ ಸ್ವೀಕಾರ ಮಾಡುವಂತೆ ಮೊದಲೇ ನೇಮಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಅಮ್ಚ್ಯಾ ವರ್ತಿ ಹೊತ್ತ್ಯಾ ಪ್ರೆಮಾ ಸಾಟ್ನಿ ಕ್ರಿಸ್ತ್ ಜೆಜು ವೈನಾ ಅಮ್ಕಾ ಅಪ್ಲಿ ಸ್ವತಾಚಿ ಪೊರಾ ಕರುನ್ ಘೆವ್ಕ್ ತೆನಿ ಅದ್ದಿಚ್ ನಿರ್ದಾರ್ ಕರಲ್ಯಾನ್, ತಿ ತೆಜಿ ಇಚ್ಚ್ಯಾ ಅನಿ ಉದ್ದೆಸ್ ಹೊವ್ನ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 1:5
32 ತಿಳಿವುಗಳ ಹೋಲಿಕೆ  

ಇದಲ್ಲದೆ ಆತನಲ್ಲಿ ನಾವು ದೇವರ ಸ್ವಕೀಯ ಪ್ರಜೆಯಾದೆವು, ಬರಬೇಕಾದ ಕ್ರಿಸ್ತನನ್ನು ಎದುರುನೋಡುತ್ತಿದ್ದ ನಾವು ತನ್ನ ಮಹಿಮೆಯನ್ನು ಪ್ರಖ್ಯಾತಿಪಡಿಸಬೇಕೆಂದು ಸಮಸ್ತಕಾರ್ಯಗಳನ್ನು ತನ್ನ ಇಷ್ಟದಂತೆ ನಡಿಸುವ ದೇವರು ತನ್ನ ಸಂಕಲ್ಪದ ಮೇರೆಗೆ ನಮ್ಮನ್ನು ಆದಿಯಲ್ಲಿಯೇ ಆರಿಸಿಕೊಂಡನು.


ದೇವರ ಮಕ್ಕಳೆಂಬ ಹೆಸರನ್ನು ನಮಗೆ ಕೊಡುವದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನೆ ನೋಡಿರಿ; ನಾವು ಆತನ ಮಕ್ಕಳಾಗಿದ್ದೇವೆ. ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳುವದಿಲ್ಲ, ಅದು ಆತನನ್ನು ತಿಳಿದುಕೊಳ್ಳಲಿಲ್ಲವಲ್ಲಾ.


ಯಾರಾರು ಆತನನ್ನು ಅಂಗೀಕರಿಸಿದರೋ, ಅಂದರೆ ಆತನ ಹೆಸರಿನಲ್ಲಿ ನಂಬಿಕೆಯಿಟ್ಟರೋ, ಅವರಿಗೆ ದೇವರ ಮಕ್ಕಳಾಗುವ ಅಧಿಕಾರ ಕೊಟ್ಟನು.


ಇದು ಮಾತ್ರವಲ್ಲದೆ ಪ್ರಥಮ ಫಲವಾಗಿರುವ ಪವಿತ್ರಾತ್ಮವರವನ್ನು ಹೊಂದಿದ ನಾವಾದರೂ ದೇವಪುತ್ರರ ಪದವಿಯನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೋಡುತ್ತಾ ನಮ್ಮೊಳಗೆ ನರಳುತ್ತೇವೆ.


ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಪುತ್ರರಾಗಿದ್ದೀರಿ.


ಇದಲ್ಲದೆ - ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರಿಯರು ಆಗಿರುವಿರೆಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.


ಜಯಹೊಂದುವವನು ಇವುಗಳಿಗೆ ಬಾಧ್ಯನಾಗುವನು; ನಾನು ಅವನಿಗೆ ದೇವರಾಗಿರುವೆನು, ಅವನು ನನಗೆ ಮಗನಾಗಿರುವನು.


ಇಸ್ರಾಯೇಲ್ಯರ ಸಂಖ್ಯೆಯು ಅಳೆಯುವದಕ್ಕೂ ಲೆಕ್ಕಿಸುವದಕ್ಕೂ ಅಸಾಧ್ಯವಾದ ಸಮುದ್ರತೀರದ ಉಸುಬಿನಂತಾಗುವದು; ಆಗ ಅವರು ನನ್ನ ಪ್ರಜೆಯಲ್ಲದವರು ಎನಿಸಿಕೊಳ್ಳುವದಕ್ಕೆ ಬದಲಾಗಿ ಜೀವಸ್ವರೂಪನಾದ ದೇವರ ಮಕ್ಕಳು ಎನಿಸಿಕೊಳ್ಳುವರು.


ತಾನು ಕಾಲವು ಪರಿಪೂರ್ಣವಾದಾಗ ನಿರ್ವಹಿಸಬೇಕಾದ ಒಂದು ಕೃಪೆಯುಳ್ಳ ಸಂಕಲ್ಪವನ್ನು ಆತನು ಕ್ರಿಸ್ತನಲ್ಲಿ ಮೊದಲೇ ನಿಷ್ಕರ್ಷೆಮಾಡಿಕೊಂಡಿದ್ದನು. ಅದೇನಂದರೆ ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ಕ್ರಿಸ್ತನಲ್ಲಿ ಒಂದಾಗಿ ಕೂಡಿಸಬೇಕೆಂಬದೇ. ಕ್ರಿಸ್ತನಲ್ಲಿಯೇ ಸಮಸ್ತವು ಒಂದಾಗುವದು.


ಯೇಸು ಆ ಜನಕ್ಕೋಸ್ಕರ ಮಾತ್ರವಲ್ಲದೆ ಚದರಿರುವ ದೇವರ ಮಕ್ಕಳನ್ನು ಒಟ್ಟುಗೂಡಿಸುವದಕ್ಕೆ ಸಹ ಸಾಯುವದಕ್ಕಿದ್ದನು.


ನಾನು ಎಷ್ಟೋ ಸಂತೋಷದಿಂದ ಗಂಡು ಮಕ್ಕಳೊಳಗೆ ನಿನ್ನನ್ನೂ ಎಣಿಸಿ ನಿನಗೆ ಮನೋಹರವಾದ ದೇಶವನ್ನು ಅಂದರೆ ಸಮಸ್ತಜನಾಂಗಗಳ ಬಾಧ್ಯಗಳಲ್ಲಿ ರಮಣೀಯವಾದದ್ದನ್ನು ಕೊಡುವೆನು; ನೀನು ನನ್ನ ಅನುಸರಣೆಯನ್ನು ಬಿಟ್ಟು ಓರೆಯಾಗದೆ ನನ್ನನ್ನು ತಂದೆಯೆನ್ನುವಿ ಅಂದುಕೊಂಡೆನು.


ಆ ದಿನವನ್ನು ನಾವು ಎದುರುನೋಡುತ್ತಾ ನಿಮಗೋಸ್ಕರ ಯಾವಾಗಲೂ ಪ್ರಾರ್ಥನೆಮಾಡಿ - ನಮ್ಮ ದೇವರು ನಿಮ್ಮನ್ನು ಕರೆದದ್ದಕ್ಕೆ ತಾನೇ ನಿಮ್ಮನ್ನು ಯೋಗ್ಯರೆಂದು ಎಣಿಸಬೇಕೆಂತಲೂ ಸತ್ಕ್ರಿಯೆಗಳಲ್ಲಿ ಸಂತೋಷಿಸುವ ನಿಮ್ಮ ಸಕಲ ಆಲೋಚನೆಯನ್ನೂ ನಂಬಿಕೆಯ ಫಲವಾದ ನಿಮ್ಮ ಕೆಲಸವನ್ನೂ ಶಕ್ತಿಪೂರ್ವಕವಾಗಿ ಸಿದ್ಧಿಗೆ ತರಬೇಕೆಂತಲೂ ಬೇಡಿಕೊಳ್ಳುತ್ತೇವೆ.


ಅದೇ ಗಳಿಗೆಯಲ್ಲಿ ಆತನು ಪವಿತ್ರಾತ್ಮನ ಪ್ರೇರಣೆಯಿಂದ ಉಲ್ಲಾಸಗೊಂಡು ಹೇಳಿದ್ದೇನಂದರೆ - ತಂದೆಯೇ, ಪರಲೋಕ ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ಮಾತುಗಳನ್ನು ಮರೆಮಾಡಿ ಬಾಲಕರಿಗೆ ಪ್ರಕಟಮಾಡಿದ್ದೀ ಎಂದು ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಹೀಗೆ ಮಾಡುವದೇ ಒಳ್ಳೇದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ.


ಹೇಗಂದರೆ ಲೋಕವು ಜ್ಞಾನವೆನಿಸುವ ಮಾರ್ಗದಿಂದ ದೇವರನ್ನು ತಿಳುಕೊಳ್ಳದೆ ಹೋದದ್ದು ದೇವರ ಜ್ಞಾನದ ಸಂಕಲ್ಪವೆ; ಹೀಗಾದ ಮೇಲೆ ಹುಚ್ಚು ಮಾತು ಎಣಿಸಿಕೊಂಡಿರುವ ನಮ್ಮ ಪ್ರಸಂಗದಿಂದಲೇ ನಂಬುವವರನ್ನು ರಕ್ಷಿಸುವದು ದೇವರಿಗೆ ಒಳ್ಳೇದೆಂದು ತೋಚಿತು.


ಯೇಸು ಆಕೆಗೆ - ನನ್ನನ್ನು ಹಿಡಿಯಬೇಡ; ಯಾಕಂದರೆ ನಾನು ಇನ್ನೂ ತಂದೆಯ ಬಳಿಗೆ ಏರಿಹೋದವನಲ್ಲ. ನೀನು ನನ್ನ ಸಹೋದರರ ಬಳಿಗೆ ಹೋಗಿ - ನಾನು ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ಏರಿಹೋಗುತ್ತೇನೆ ಎಂದು ಅವರಿಗೆ ಹೇಳು ಅಂದನು.


ಭೂನಿವಾಸಿಗಳೆಲ್ಲರೂ [ಆತನ ದೃಷ್ಟಿಯಲ್ಲಿ] ಏನೂ ಅಲ್ಲದಂತಿದ್ದಾರೆ, ಪರಲೋಕಸೈನ್ಯದವರಲ್ಲಿಯೂ ಭೂಲೋಕದವರಲ್ಲಿಯೂ ತನ್ನ ಇಚ್ಫಾನುಸಾರ ನಡೆಯುತ್ತಾನೆ; ಯಾರೂ ಆತನ ಕೈಯನ್ನು ಹಿಂದಕ್ಕೆ ತಳ್ಳಲಾರರು, ನೀನು ಏನು ಮಾಡುತ್ತೀ ಎಂದು ಯಾರೂ ಕೇಳಲಾರರು.


ಹೌದು, ತಂದೆಯೇ, ಹೀಗೆ ಮಾಡುವದೇ ಒಳ್ಳೇದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ.


ನ್ಯಾಯವಿಚಾರಣೆಯಲ್ಲಿ ನಿನೆವೆ ಪಟ್ಟಣದವರು ಈ ಸಂತತಿಯವರೊಂದಿಗೆ ನಿಂತು ಇವರನ್ನು ಅಪರಾಧಿಗಳೆಂದು ಹೇಳುವರು. ಅವರು ಯೋನನು ಸಾರಿದ ವಾಕ್ಯವನ್ನು ಕೇಳಿ ದೇವರ ಕಡೆಗೆ ತಿರುಗಿಕೊಂಡರು; ಆದರೆ ಇಲ್ಲಿ ಯೋನನಿಗಿಂತಲೂ ಹೆಚ್ಚಿನವನಿದ್ದಾನೆ.


ಯಾಕಂದರೆ ದೇವರೇ ತನ್ನ ಸುಚಿತ್ತವನ್ನು ನೆರವೇರಿಸಬೇಕೆಂದು ನಿಮ್ಮಲ್ಲಿ ಉದ್ದೇಶವನ್ನೂ ಪ್ರಯತ್ನವನ್ನೂ ಉಂಟುಮಾಡುವವನಾಗಿದ್ದಾನೆ.


ದೇವರ ಚಿತ್ತದಿಂದ ಯೇಸು ಕ್ರಿಸ್ತನ ಅಪೊಸ್ತಲನಾಗುವದಕ್ಕೆ ಕರೆಯಲ್ಪಟ್ಟ ಪೌಲನೂ ಸಹೋದರನಾದ


ಆದರೆ ಆಕೆಯು ಗಂಡುಮಗನನ್ನು ಹಡೆಯುವ ತನಕ ಆಕೆಯನ್ನು ಅರಿಯಲಿಲ್ಲ. ಮಗುವಿಗೆ ಯೇಸುವೆಂದು ಹೆಸರಿಟ್ಟನು.


ಈಗತಾನೆ ನನ್ನನ್ನು - ನನ್ನ ತಂದೆ, ನನ್ನ ಯೌವನದ ಆಪ್ತನು ಎಂದು ಕರೆಯುತ್ತೀಯಲ್ಲಾ.


ಚಿಕ್ಕ ಹಿಂಡೇ, ಹೆದರಬೇಡ; ಆ ರಾಜ್ಯವನ್ನು ನಿಮಗೆ ದಯಪಾಲಿಸುವದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.


ಅಲ್ಲಿದ್ದ ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು ದೇವರ ವಾಕ್ಯವನ್ನು ಹೊಗಳಿದರು; ಮತ್ತು ನಿತ್ಯಜೀವಕ್ಕೆ ನೇವಿುಸಲ್ಪಟ್ಟವರೆಲ್ಲರು ನಂಬಿದರು.


ತಂದೆಯಾದ ದೇವರು ಆತನಲ್ಲಿ ತನ್ನ ಸರ್ವಸಂಪೂರ್ಣತೆಯು ವಾಸವಾಗಿರಬೇಕೆಂತಲೂ


ಮತ್ತು ದೇವರು ಅವರ ಕೈಯಿಂದ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ನಾನಾ ವಿಧವಾದ ಮಹತ್ಕಾರ್ಯಗಳನ್ನೂ ನಡಿಸಿ ಪವಿತ್ರಾತ್ಮವರಗಳನ್ನು ತನ್ನ ಚಿತ್ತಾನುಸಾರವಾಗಿ ಅವರಿಗೆ ಅನುಗ್ರಹಿಸಿ ಅವರ ಮಾತಿಗೆ ಸಾಕ್ಷಿಕೊಡುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು